ಹಾವೇರಿ : ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಕೊಠಡಿಯಲ್ಲಿ ನೇಣಿಗೆ ಶರಣಾಗಿರುವಂತಹ ಘಟನೆಯು ಹಾವೇರಿ ಜಿಲ್ಲೆ ಬ್ಯಾಡಗಿ ಕಿತ್ತೂರು ಚೆನ್ನಮ್ಮ ವಸತಿ ಶಾಲೆಯಲ್ಲಿ ನಡೆದಿದೆ. ಘಟನೆ ಕುರಿತಂತೆ ಬ್ಯಾಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೌದು ಹಾವೇರಿ ತಾಲೂಕಿನ ಭರಡಿ ಗ್ರಾಮದ ರೇಖಾ ಗೌಡರ(15) ಆತ್ಮಹತ್ಯೆ ಮಾಡಿಕೊಂಡ ಎಸ್ಎಸ್ಎಲ್ಸಿ ವಿದ್ಯಾರ್ಥಿನಿ. ಮೃತ ರೇಖಾ ಗೌಡರ ಬೆಳಗ್ಗೆ ಗೆಳತಿಯರೊಂದಿಗೆ ತಿಂಡಿ ತಿನ್ನಲು ಹೋಗಿದ್ದಾಳೆ. ವಾಪಸ್ ಬಂದು ತನ್ನ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾಳೆ. ಆದರೆ ವಿದ್ಯಾರ್ಥಿನಿ …
Read More »ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ `ಶಾಲಾ ಬಸ್’ ಚಲಾಯಿಸಿದ ಚಾಲಕ : `FIR’ ದಾಖಲು
ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್’ ವೇನಲ್ಲಿ ರಾಂಗ್ ರೂಟ್ ನಲ್ಲಿ `ಶಾಲಾ ಬಸ್’ ಚಲಾಯಿಸಿದ ಚಾಲಕನ ವಿರುದ್ಧ ಪೊಲೀಸರು ದೂರು ದಾಖಲಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಜೀವಕ್ಕೆ ಅಪಾಯ ತಂದೊಡ್ಡಿದ್ದ ಶಾಲೆಯೊಂದರ ಚಾಲಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಚಾಲಕ ಬೆಂಗಳೂರು-ಮೈಸೂರು ಇ ರೈಲಿನ ರಾಂಗ್ ಸೈಡ್ ನಲ್ಲಿ ಬಸ್ ಚಾಲನೆ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಯಾಣಿಕರೊಬ್ಬರು ವೀಡಿಯೊವನ್ನು ಮಾಡಿ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದರು ಮತ್ತು ಅಂತಿಮವಾಗಿ ಚಾಲಕನ …
Read More »ಮಹಿಳೆಯ ಹತ್ಯೆ ಪ್ರಕರಣ. 48 ಗಂಟೆಯಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ವಿಜಯನಗರ ( ಕಾನಾಹೊಸಹಳ್ಳಿ) : ನಿರ್ಜನ ಪ್ರದೇಶದಲ್ಲಿ ಮಾನಸಿಕ ಅಸ್ವಸ್ಥ ಮಹಿಳೆಯ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ ಪ್ರಕರಣವನ್ನು 48 ಗಂಟೆಯಲ್ಲಿ ಪೊಲೀಸರು ಭೇದಿಸಿದ್ದು ಆರೋಪಿಯನ್ನು ಬಂಧಿಸಿದ್ದಾರೆ. ಕಾನಾಹೊಸಹಳ್ಳಿ ಸಮೀಪದ ತಿಪ್ಪೆಹಳ್ಳಿ ಗ್ರಾಮದಲ್ಲಿ ಕಳೆದ ಶನಿವಾರ ಚಿತ್ರದುರ್ಗ ವಿಜಯನಗರ ಗಡಿ ತಿಪ್ಪೆಹಳ್ಳಿಯ ಸಮೀಪ ಅಬ್ಬೇನಹಳ್ಳಿ ಯ ನೇತ್ರಾವತಿ ಎನ್ನುವ ಮಹಿಳೆಯನ್ನು ಅತ್ಯಾಚಾವೆಸಗಿ ಹತ್ಯೆ ಮಾಡಲಾಗಿತ್ತು ಈ ಘಟನೆಯಿಂದ ಗಡಿಗ್ರಾಮಗಧ ಜನರು ಬೆಚ್ಚಿಬಿದ್ದಿದ್ದರು ಘಟನಾ ಸ್ಥಳಕ್ಕೆ ವಿಜಯನಗರ ಪೊಲೀಸ್ ವರಿಷ್ಠಾಧಿಕಾರಿ …
Read More »ಕಿಚ್ಚನ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ : ಹೊಸ ಸಿನಿಮಾ ಘೋಷಣೆ ಮಾಡಿದ ನಟ ಸುದೀಪ್
ಬೆಂಗಳೂರು : ಹುಟ್ಟು ಹಬ್ಬದ ದಿನವೇ ನಟ ಕಿಚ್ಚ ಸುದೀಪ್ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ. ಹೌದು, ನಟ ಸುದೀಪ್ ‘ಬಿಲ್ಲಾ ರಂಗಾ ಭಾಷಾ ಸಿನಿಮಾ’ ಘೋಷಣೆ ಮಾಡಿದ್ದು, ಅಭಿಮಾನಿಗಳಲ್ಲಿ ಬಹಳ ಕುತೂಹಲ ಮೂಡಿದೆ. ಬಿಲ್ಲಾ ರಂಗ ಭಾಷಾ ಸಿನಿಮಾದ ಟೈಟಲ್ ಲೋಗೋ ಮತ್ತು ಪರಿಕಲ್ಪನೆಯ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ನಟ ಸುದೀಪ್ ಹಂಚಿಕೊಂಡಿದ್ದಾರೆ. ವಿಕ್ರಾಂತ್ ರೋಣ ನಿರ್ದೇಶಕರಿಂದ ಬಿಲ್ಲಾ ರಂಗ ಭಾಷಾ ಸಿನಿಮಾ ತಯಾರಾಗುತ್ತಿದೆ. ಒಂದಾನೊಂದು ಕಾಲದಲ್ಲಿ ಕ್ರಿ.ಶಕ 2209ರಲ್ಲಿ …
Read More »ಉತ್ತರ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರ, ಕೆಲವು ಗ್ರಾಮಗಳಿಗೆ ಜಲದಿಗ್ಬಂಧನ
ಉತ್ತರ ಕರ್ನಾಟಕ ಭಾಗದಲ್ಲಿ ಮತ್ತೆ ವರುಣನ ಆರ್ಭಟ ಜೋರಾಗಿದ್ದು, ಭಾರಿ ಮಳೆಗೆ ಜಿಲ್ಲೆಯ ಗುರುಮಟ್ಕಲ್ ತಾಲ್ಲೂಕಿನ ನಂದೆಪಲ್ಲಿ ಸೇತುವೆ ಸಂಪೂರ್ಣವಾಗಿ ಜಲಾವೃತಗೊಂಡಿದೆ. ಜಿಲ್ಲೆಯಲ್ಲಿ ಕೆಲವು ದಿನಗಳಿಂದ ವರುಣನ ಆರ್ಭಟ ಜೋರಾಗಿದ್ದು, ತೆಲಂಗಾಣಕ್ಕೆ ಸಂಪರ್ಕ ಕಲ್ಪಿಸುವ ನಂದೆಪಲ್ಲಿ ಸೇತುವೆ ಮುಳುಗಡೆಯಾಗಿದ್ದು, ಸಂಚಾರ ಸಂಪರ್ಕ ಕಡಿತಗೊಂಡು ಸಾರ್ವಜನಿಕರು ಪರದಾಡುವಂತಾಗಿದೆ. ನಿರಂತರವಾಗಿ ಮಳೆಯಾಗುತ್ತಿರುವುದರಿಂದ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಮೋಟನಹಳ್ಳಿ ಗ್ರಾಮದಲ್ಲಿ ಸುಮಾರು 15ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದ್ದು, ರಾತ್ರಿಯಿಡೀ ಜಾಗರಣೆ ಮಾಡುವಂತಾಗಿದೆ. …
Read More »ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ
ಕಲಬುರಗಿ: ಮೆಡಿಕಲ್ ಸೀಟು ಸಿಗದ ಕಾರಣಕ್ಕೆ ಮನನೊಂದು ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಅಫಜಲಪುರ ತಾಲೂಕಿನ ದುದ್ದಣಗಿ ಗ್ರಾಮ ಶ್ವೇತಾ ಅಪ್ಪಾಸಾಬ್ ಗುಣಾರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ನೀಟ್ ಪರೀಕ್ಷೆ ಬರೆದಿದ್ದ ಅವರು ಮೆಡಿಕಲ್ ಸೀಟು ಸಿಗುವ ನಿರೀಕ್ಷೆಯಲ್ಲಿದ್ದರು. ಆದರೆ, ವೈದ್ಯಕೀಯ ಕೋರ್ಸ್ ಸೇರಲು ಸೀಟು ಸಿಗದ ಕಾರಣ ಭಾನುವಾರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಅಫಜಲಪುರ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
Read More »1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇಂದಿನಿಂದಲೇ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ವಿತರಣೆ!
1-10ನೇ ತರಗತಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಇಂದಿನಿಂದಲೇ ವಾರದ 6 ದಿನವೂ ಮಕ್ಕಳಿಗೆ ಮೊಟ್ಟೆ ವಿತರಣೆ! ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮತ್ತು ಅನುದಾನಿತ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ಎನ್ನುವಂತೆ ಇಂದಿನಿಂದಲೇ ವಾರದಲ್ಲಿ 6 ದಿನವೂ ಮೊಟ್ಟೆ ವಿತರಣೆ ಮಾಡುವ ನಿರೀಕ್ಷೆಯಿದೆ. ಸೆಪ್ಟೆಂಬರ್ ತಿಂಗಳಿನಿಂದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ವಾರದ 6 ದಿನವೂ ಮೊಟ್ಟೆ ವಿತರಿಸಲಾಗುವುದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ …
Read More »ಗುದದ್ವಾರದಲ್ಲಿ 1.19 ಕೋಟಿ ರೂ. ಮೌಲ್ಯದ ಚಿನ್ನ ಗುಪ್ತವಾಗಿ ಸಾಗಿಸುತ್ತಿದ್ದ ಶ್ರೀಲಂಕಾ ಪ್ರಜೆ ಅರೆಸ್ಟ್
ಬೆಂಗಳೂರು: 1.19 ಕೋಟಿ ರೂಪಾಯಿ ಮೌಲ್ಯದ ಚಿನ್ನವನ್ನು ಗುದದ್ವಾರದಲ್ಲಿಟ್ಟುಕೊಂಡು ಕಳ್ಳ ಸಾಗಣೆ ಮಾಡುತ್ತಿದ್ದ ಶ್ರೀಲಂಕಾ ಪ್ರಜೆಯನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಪೇಸ್ಟ್ ಮಾದರಿಯ ಚಿನ್ನವನ್ನು ಮಾತ್ರೆಗಳು ಹಾಗೂ ಚಿನ್ನದ ಬಿಸ್ಕತ್ ಗಳನ್ನು ಬಚ್ಚಿಟ್ಟುಕೊಂಡು ಕಳ್ಳ ಸಾಗಣೆ ಮಾಡಲಾಗುತ್ತಿತ್ತು. ಬಂಧಿತ ಶ್ರೀಲಂಕಾ ಪ್ರಜೆಯಿಂದ 1.19 ಕೋಟಿ ರೂಪಾಯಿ ಮೌಲ್ಯದ 1 ಕೆಜಿ 670 ಗ್ರಾಂ ತೂಕದ ಚಿನ್ನ ಜಪ್ತಿ ಮಾಡಲಾಗಿದೆ. ಆಗಸ್ಟ್ 31 ರಂದು ರಾತ್ರಿ ಶ್ರೀಲಂಕಾದ …
Read More »ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿಷೇಧಿಸಲು ಆಗ್ರಹ: ಅಮಿತ್ ಶಾ ಗೆ ಪತ್ರ ಬರೆದ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ
ಬೆಂಗಳೂರು: ಆನ್ಲೈನ್ ಗೇಮ್, ಬೆಟ್ಟಿಂಗ್ ಆಯಪ್ ನಿಷೇಧಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣ ಸ್ವಾಮಿ ಪತ್ರ ಬರೆದಿದ್ದಾರೆ. ಯುವಜನತೆಯನ್ನು ಹಾಳು ಮಾಡಿ ಬಡ ಕುಟುಂಬಗಳನ್ನು ಬೀದಿಗೆ ತಳ್ಳುತ್ತಿರುವ ಆನ್ಲೈನ್ ಗೇಮ್ ಮತ್ತು ಬೆಟ್ಟಿಂಗ್ ಮತ್ತಿತರ ಆಯಪ್ ಗಳನ್ನು ನಿರ್ಬಂಧಿಸಬೇಕೆಂದು ಕೋರಿದ್ದಾರೆ. ಮಕ್ಕಳು, ಯುವಜನತೆ ಆನ್ಲೈನ್ ಬೆಟ್ಟಿಂಗ್ ಆಯಪ್ ಗಳ ವ್ಯಸನಿಗಳಾಗಿ ಹಣ ಕಳೆದುಕೊಳ್ಳುತ್ತಿದ್ದಾರೆ. ಇದರಿಂದ ಅವರ ಮತ್ತು ಅವರ ಕುಟುಂಬದವರ …
Read More »ಮಾನವೀಯ ಮೌಲ್ಯಗಳೊಂದಿಗೆ ಪ್ರಾಮಾಣಿಕ ಬದುಕು ಕಟ್ಟಿಕೊಳ್ಳಿ; ಜ| ಸಂತೋಷ್ ಹೆಗ್ಡೆ
ಶಿರ್ವ: ದುರಾಸೆ ದೇಶದಲ್ಲಿ ರೋಗವಾಗಿ ಬೆಳೆಯುತ್ತಿದ್ದು, ಯುವಜನತೆ ಹೆತ್ತವರ ಸಹಕಾರದೊಂದಿಗೆ ಇದ್ದುದರಲ್ಲಿಯೇ ಸಂತಸ ಪಡುವ ಗುಣಗಳನ್ನು ಬೆಳೆಸಿಕೊಂಡಲ್ಲಿ ಭ್ರಷ್ಟಾಚಾರ ಮುಕ್ತ ಸಮಾಜ ನಿರ್ಮಾಣ ಸಾಧ್ಯ.ಮಾನವೀಯತೆ ಇದ್ದರೆ ಸಮಾಜದಲ್ಲಿ ಶಾಂತಿ ಸೌಹಾರ್ದತೆ ನೆಲೆಸುತ್ತದೆ. ಮಾನವೀಯ ಮೌಲ್ಯಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಪ್ರಾಮಾಣಿಕ ಬದುಕು ಕಟ್ಟಿಕೊಳ್ಳುವುದ ರೊಂದಿಗೆ ಸಮಾಜದ ಭಾವನೆಗಳನ್ನು ಬದಲಾಯಿಸಬಹುದು ಎಂದು ಸರ್ವೋತ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜ| ಎನ್.ಸಂತೋಷ್ ಹೆಗ್ಡೆ ಹೇಳಿದರು. ಅವರು ಸೆ.1 ರಂದು ಬಂಟಕಲ್ಲು ಶ್ರೀ ಮಧ್ವ ವಾದಿರಾಜ ತಾಂತ್ರಿಕ …
Read More »