ನವದೆಹಲಿ:ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ನಂತರ ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗೆ ಅನುಕರಣೀಯ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡನೇ ಪತ್ರ ಬರೆದ ನಂತರ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಟಿಎಂಸಿ ಮುಖ್ಯಸ್ಥರಿಗೆ ತಿರುಗೇಟು ನೀಡಿದ್ದಾರೆ. ಮಹಿಳೆಯರ ವಿರುದ್ಧದ ಹಿಂಸಾಚಾರ …
Read More »ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಇಂದು ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಭವಿಷ್ಯ ನಿರ್ಧಾರ..!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ . ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಗಸ್ಟ್ 29 ರಂದು ನಡೆದಿದ್ದು, ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘ ವಾದ ಮಂಡನೆ ಮಾಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ …
Read More »ಪೋಷಕರೇ ಇತ್ತ ಗಮನಿಸಿ : ʻಅಂಚೆ ಇಲಾಖೆʼಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಸಿಗಲಿದೆ 3 ಲಕ್ಷ ರೂ.!
ನವದೆಹಲಿ: ಇಂದಿನ ಬದಲಾಗುತ್ತಿರುವ ವಾತಾವರಣದಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳ ಭವಿಷ್ಯವನ್ನು ಆರ್ಥಿಕವಾಗಿ ಸುಭದ್ರಗೊಳಿಸಲು ಬಯಸುತ್ತಾರೆ. ಸರಿಯಾದ ಸಮಯದಲ್ಲಿ ಯೋಜನೆ ಸರಿಯಾಗಿ ಮಾಡದಿದ್ದರೆ ಮತ್ತು ಮಕ್ಕಳ ಉನ್ನತ ವ್ಯಾಸಂಗ ಮತ್ತು ಮದುವೆಗೆ ಹಣವನ್ನು ಹೇಗೆ ವ್ಯವಸ್ಥೆ ಮಾಡುವುದು? ಆಗ ನೀವು ತೊಂದರೆಗೆ ಬಲಿಯಾಗಬಹುದು. ನಿಮ್ಮ ಮಗುವಿನ ಆರ್ಥಿಕ ಭವಿಷ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ನಾವು ನಿಮಗೆ ಇಲ್ಲಿ ಸಹಾಯ ಮಾಡಲಿದ್ದೇವೆ. ಮಕ್ಕಳಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಎಫ್‌ಡಿ, ಪಿಪಿಎಫ್, …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಡುಮ್ಮ – ಉರಬಿಹಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »ಮಣ್ಣಿನ ಗಣೇಶ ಮೂರ್ತಿ ವಿಸರ್ಜನೆ ಮಾಡುವ ಮುಚ್ಚಳಿಕೆ ಬರೆಸಿದ್ರೆ ಮಾತ್ರ ಪೆಂಡಾಲ್ ಗೆ ಅನುಮತಿ : ಸಚಿವ ಈಶ್ವರ್ ಖಂಡ್ರೆ
ಬೆಂಗಳೂರು : ಗಣೇಶ ಪರಿಸರ ಮತ್ತು ಪ್ರಕೃತಿಯಿಂದಲೇ ಹುಟ್ಟಿದ ದೇವರಾಗಿದ್ದು, ಗಣಪತಿಯ ಪೂಜಿಸುವ ನಾವು ಪ್ರಕೃತಿ, ಪರಿಸರವನ್ನೂ ಉಳಿಸಬೇಕು, ಈ ಬಾರಿ ಬಣ್ಣ ರಹಿತ ಮಣ್ಣಿನ ವಿನಾಯಕ ಮೂರ್ತಿಯನ್ನು ಮಾತ್ರ ಪೂಜಿಸಿ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ನಾಡಿನ ಜನತೆಗೆ ಮನವಿ ಮಾಡಿದ್ದಾರೆ. ಸಂದೇಶದಲ್ಲಿ ಅವರು, ಈ ವರ್ಷ ದೇಶಾದ್ಯಂತ ಸುರಿದ ಧಾರಾಕಾರ ಮಳೆಯಿಂದ ಹಲವು ಕಡೆ ಭೂ ಕುಸಿತ ಉಂಟಾಗಿ …
Read More »ಹಿರೇಬಾಗೇವಾಡಿ: ಕುಡಿಯುವ ನೀರಿನ ಕಾಮಗಾರಿಗೆ ಚಾಲನೆ
ಹಿರೇಬಾಗೇವಾಡಿ: ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವ ಹಿನ್ನೆಲೆಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿಯಲ್ಲಿ ಕುಡಿಯುವ ನೀರಿನ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಶುಕ್ರವಾರ ಭೂಮಿಪೂಜೆ ನೆರವೇರಿಸಿದರು. ಆನಂತರ ಮಾತನಾಡಿದ ಅವರು, ಹಿರೇಬಾಗೇವಾಡಿ ಅತ್ಯಂತ ಪ್ರಮುಖವಾದ ಗ್ರಾಮವಾಗಿದ್ದು, ಗ್ರಾಮಕ್ಕೆ ಹಲವಾರು ಅಭಿವೃದ್ಧಿ ಯೋಜನೆಗಳನ್ನು ತರಲಾಗಿದೆ. ಮುಂಬರುವ ದಿನಗಳಲ್ಲಿ ಮುರಾರ್ಜಿ ವಸತಿ ಶಾಲೆ ಸೇರಿದಂತೆ ಅನೇಕ ಯೋಜನೆಗಳನ್ನು ಆರಂಭಿಸಲಾಗುವುದು. ಗ್ರಾಮದ ಸಮಗ್ರ ಅಭಿವೃದ್ಧಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಕಾರ್ಯೋನ್ಮುಖರಾಗಿದ್ದು …
Read More »ಸಿಇಟಿ, ನೀಟ್ ಅಭ್ಯರ್ಥಿಗಳಿಗೆ ಮುಖ್ಯ ಮಾಹಿತಿ: ಇಂದಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭ
ಬೆಂಗಳೂರು: ಸಿಇಟಿ, ನೀಟ್ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ(ಕೆಇಎ) ವತಿಯಿಂದ ಶುಕ್ರವಾರ ಪ್ರಕಟಿಸಲಾಗಿದೆ. ಆಗಸ್ಟ್ 31 ರಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿವೆ. ವೈದ್ಯಕೀಯ, ದಂತ ವೈದ್ಯಕೀಯ, ಆಯುಷ್, ಇಂಜಿನಿಯರಿಂಗ್, ವಾಸ್ತುಶಿಲ್ಪ ಶಾಸ್ತ್ರ, ಕೃಷಿ ವಿಜ್ಞಾನ, ಪಶು ವೈದ್ಯಕೀಯ, ಬಿ ಫಾರ್ಮಾ, ಬಿಎಸ್ಸಿ ನರ್ಸಿಂಗ್, ಯೋಗ ಮತ್ತು ನ್ಯಾಚುರೋಪತಿ ಇತರೆ ಕೋರ್ಸುಗಳ ಅಭ್ಯರ್ಥಿಗಳು ಪೋಷಕರೊಂದಿಗೆ ಚರ್ಚಿಸಿ ವಿವರಗಳನ್ನು ಅರ್ಥೈಸಿಕೊಂಡು ನಾಲ್ಕು ಚಾಯ್ಸ್ ಗಳಲ್ಲಿ ಸೂಕ್ತವಾದ ಕಾಲೇಜು …
Read More »‘ನನ್ನನ್ನು ಕ್ಷಮಿಸು ಅಮ್ಮ, ನಾನು ನಿನ್ನನ್ನು ಕೊಲ್ಲುತ್ತಿದ್ದೇನೆ’ : ಹತ್ತ ತಾಯಿಯ ಹತ್ಯೆ ಮಾಡಿ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ ಪಾಪಿ ಮಗ!
ನವದೆಹಲಿ : ಗುಜರಾತ್‌ನಲ್ಲಿ 21 ವರ್ಷದ ಯುವಕನೊಬ್ಬ ತನ್ನ ತಾಯಿಯನ್ನು ಕೊಂದು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಕ್ಷಮಿಸಿ ಅಮ್ಮ, ನಾನು ನಿನ್ನನ್ನು ಕೊಂದಿದ್ದೇನೆ, ಐ ಮಿಸ್ ಯೂ ಎಂದು ಬರೆದುಕೊಂಡಿದ್ದಾನೆ. ಪ್ರಕರಣದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿ ನೀಲೇಶ್ ಗೋಸಾಯಿಯನ್ನು ಬಂಧಿಸಿದ್ದಾರೆ. ಆರೋಪಿ ನೀಲೇಶ್ ತನ್ನ ತಾಯಿಯೊಂದಿಗೆ ವಾಸವಾಗಿದ್ದ. ಇಬ್ಬರ ನಡುವೆ ಆಗಾಗ ಜಗಳ, ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ಪ್ರಾಥಮಿಕ ವಿಚಾರಣೆಯ ವೇಳೆ ಆರೋಪಿ ಪೊಲೀಸರಿಗೆ ಚಾಕುವಿನಿಂದ …
Read More »CM’ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದ್ದ RTI ಕಾರ್ಯಕರ್ತ `ಸ್ನೇಹಮಯಿ ಕೃಷ್ಣ’ ಗಡಿಪಾರಿಗೆ ಮನವಿ!
ಮೈಸೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿದ್ದ ಆರ್.ಟಿ.ಐ. ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರ ವಿರುದ್ಧ ಮೈಸೂರು ಪೊಲೀಸ್ ಆಯುಕ್ತರಿಗೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ದೂರು ನೀಡಿದ್ದಾರೆ. ಸ್ನೇಹಮಯಿ ಕೃಷ್ಣ ಅವರನ್ನು ಗಡಿಪಾರು ಮಾಡಬೇಕು. ಸ್ನೇಹಮಯಿ ಕೃಷ್ಣ ವಿರುದ್ಧ 17 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ರಾಜ್ಯದ ಹಲವೆಡೆ ಅವರ ವಿರುದ್ಧ ಪ್ರಕರಣ ದಾಖಲಾಗಿವೆ. ಆಸ್ತಿ ವಿಚಾರದಲ್ಲಿ ಹಸ್ತಕ್ಷೇಪ ಮಾಡಿ ಭೂಮಿ ವಶಪಡಿಸಿಕೊಳ್ಳುವುದು, ನನ್ನನ್ನು ಸೇರಿದಂತೆ ನಗರದ ಗಣ್ಯರನ್ನು …
Read More »ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನ ಕ್ಯಾಂಟೀನ್ ಬಂದ್..!
ಬಳ್ಳಾರಿ : ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಳ್ಳಾರಿ ಜೈಲಿಗೆ ಶಿಫ್ಟ್ ಆಗಿದ್ದಾರೆ. ಈ ಹಿನ್ನೆಲೆ ಇಂದಿನಿಂದ ಬಳ್ಳಾರಿ ಸೆಂಟ್ರಲ್ ಜೈಲಿನಲ್ಲಿರುವ ಕ್ಯಾಂಟೀನ್ ಬಂದ್ ಆಗಲಿದೆ ಎಂದು ತಿಳಿದು ಬಂದಿದೆ. ಕ್ಯಾಂಟೀನ್ ನಲ್ಲಿ ಯಾವ ವಸ್ತುಗಳು ಕೂಡ ಇಂದಿನಿಂದ ಸಿಗೋಲ್ಲ. ನಟ ದರ್ಶನ್ ಗೆ ಪರಪ್ಪನ ಅಗ್ರಹಾರದಲ್ಲಿ ರಾಜಾತಿಥ್ಯ ನೀಡಿರುವ ಹಿನ್ನೆಲೆ ಬಳ್ಳಾರಿ ಜೈಲಿನಲ್ಲಿ ಬಿಗಿ ಬಂದೋಬಸ್ತ್ ಮಾಡಲಾಗಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲ್ ನಲ್ಲಿ ದರ್ಬಾರ್ …
Read More »