Breaking News

45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಶಿವಸೇನಾ ಶಿಂದೆ ಬಣ

ಮುಂಬೈ: ನವೆಂಬರ್ 20ರಂದು ನಡೆಯಲಿರುವ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಗೆ ಏಕನಾಥ ಶಿಂದೆ ನೇತೃತ್ವದ ಶಿವಸೇನಾ ಪಕ್ಷವು ಗುರುವಾರ ತಡರಾತ್ರಿ 45 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಏಕನಾಥ ಶಿಂದೆ ಅವರು, ಠಾಣೆಯ ಕೊಪ್ರಿ-ಪಂಚಪಖಾಡಿ ಕ್ಷೇತ್ರದಲ್ಲಿ ಕಣಕ್ಕಿಳಿಯಲಿದ್ದು, ಅರ್ಧ ಡಜನ್‌ಗೂ ಅಧಿಕ ಸಂಪುಟ ಸದಸ್ಯರು ಈ ಹಿಂದೆ ಪ್ರತಿನಿಧಿಸಿದ್ದ ಕ್ಷೇತ್ರಗಳಲ್ಲೇ ಟಿಕೆಟ್ ಪಡೆದಿದ್ದಾರೆ. 2022ರ ಜೂನ್‌ನಲ್ಲಿ ಅಂದಿನ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿರುದ್ಧ ಸಿಡಿದು ಹೊರಬಂದ ಏಕನಾಥ ಶಿಂದೆ …

Read More »

ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನ

ಬೆಳಗಾವಿ: ಕರ್ನಾಟಕ ರಾಜ್ಯೋತ್ಸ‌ವ ಹಿನ್ನೆಲೆಯಲ್ಲಿ ಕನ್ನಡ ನಾಡು‌-ನುಡಿ ಹೋರಾಟಗಾರರನ್ನು ಜಿಲ್ಲಾಡಳಿತದ ವತಿಯಿಂದ ಗುರುತಿಸಿ ಸನ್ಮಾನಿಸಲು ತೀರ್ಮಾನಿಸಲಾಗಿದ್ದು, ಬೆಳಗಾವಿ ಜಿಲ್ಲೆಯ ಅರ್ಹ ಕನ್ನಡಪರ ಹೋರಾಟಗಾರರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಅಧ್ಯಕ್ಷರು, ಕನ್ನಡ ಹೋರಾಟಗಾರರ ಸನ್ಮಾನ ಆಯ್ಕೆ ಸಮಿತಿ ಹಾಗೂ ಜಿಲ್ಲಾ‌ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದ್ದಾರೆ. ಕನ್ನಡ ನಾಡು‌‌ ನುಡಿಗಾಗಿ ಹೋರಾಡಿದ 40 ವರ್ಷ ಮೇಲ್ಪಟ್ಟವರು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಕನಿಷ್ಠ 5 ವರ್ಷಗಳ ಕಾಲ ಕನ್ನಡ‌ಪರ …

Read More »

ಆರೋಗ್ಯ ಹದಗೆಡದಂತೆ ವಾರಕ್ಕೆ ಎಷ್ಟುಬಾರಿ ಆಲ್ಕೋಹಾಲ್ ಕುಡಿಯಬಹುದು? ತಜ್ಞರು ಹೇಳುವುದೇನು?

ಆಧುನಿಕ ಯುಗದಲ್ಲಿ ಮದ್ಯ ಸೇವನೆ (Alcohol) ಎಂಬುದು ಲೈಫ್‌ಸ್ಟೈಲ್‌ನ ಭಾಗವಾಗಿ ಮಾರ್ಪಡುತ್ತಿದೆ. ಔತಣ ಕೂಟ (Dinner), ಆಫೀಸ್ ಪಾರ್ಟಿ, ಕುಟುಂಬ ಸಮಾರಂಭಗಳಲ್ಲಿ (Family Function) ಕೂಡ ಆಲ್ಕೋಹಾಲ್ ಇದ್ದೇ ಇರುತ್ತದೆ. ಮದ್ಯ ಸೇವನೆಯು ಅನಾರೋಗ್ಯಕರ ಪದ್ಧತಿಯಾಗಿದ್ದರೂ ಇದು ಆಧುನಿಕ ಜೀವನ ಶೈಲಿಯ (Lifestyle) ಒಂದು ಭಾಗ ಎಂದೆನಿಸಿದೆ. ಮದ್ಯ ಸೇವಿಸಿಲ್ಲ ಎಂದಾದರೆ ಅವರು ಇನ್ನು ಹಳೆ ಕಾಲದವರು ಮಾಡರ್ನ್ ಅಲ್ಲ ಎಂಬ ಮಾತುಗಳು ಕೇಳಿಬರುತ್ತವೆ. ಒಟ್ಟಿನಲ್ಲಿ ಆಲ್ಕೋಹಾಲ್ ನಿಮ್ಮ ದೇಹಕ್ಕೆ ಒಳ್ಳೆಯದಲ್ಲ …

Read More »

ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದರೆ ನ್ಯಾಯಾಧೀಶರು ಹೇಳಿದ್ದೇನು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಗೆ ಆಪರೇಷನ್ ಮಾಡಿಸಬೇಕು, ಜಾಮೀನು ಕೊಡಿ ಎಂದು ಅವರ ಪರ ವಕೀಲರು ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ. ಇದಕ್ಕೆ ನ್ಯಾಯಾಧೀಶರ ಪ್ರತಿಕ್ರಿಯೆ ಏನಿತ್ತು ಇಲ್ಲಿದೆ ವಿವರ. ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಈಗ ಬಳ್ಳಾರಿಯ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಅವರಿಗೆ ಬೆನ್ನು ನೋವು ತೀವ್ರವಾಗಿದ್ದು ದೈನಂದಿನ ಕೆಲಸ ಮಾಡಲೂ ಸಮಸ್ಯೆಯಾಗುತ್ತಿದೆ. ಈ ನಡುವೆ ಅವರಿಗೆ ಜೈಲಿನಲ್ಲೇ ವೈದ್ಯರ …

Read More »

ಕಬ್ಬಿನ ದರ ನಿಗದಿಯಲ್ಲಿ ಅನ್ಯಾಯ: ಆರೋಪ

ಮುಂಡರಗಿ: ಕಬ್ಬಿನ ದರ ನಿಗದಿಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳುವ ಉದ್ದೇಶದಿಂದ ತಾಲ್ಲೂಕಿನ ವಿವಿಧ ರೈತ ಸಂಘಟನೆಗಳ ಮುಖಂಡರು ಸೋಮವಾರ ಪಟ್ಟಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು. ಸಭೆಯ ನಂತರ ತಹಶೀಲ್ದಾರ್ ಕಚೇರಿಗೆ ತೆರಳಿ ಈ ಕುರಿತು ತಹಶೀಲ್ದಾರ್ ಎರ್ರಿಸ್ವಾಮಿ ಪಿ.ಎಸ್. ಅವರಿಗೆ ಮನವಿ ಸಲ್ಲಿಸಿದರು. ತಾಲ್ಲೂಕಿನ ಗಂಗಾಪುರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಜಯನಗರ ಶುಗರ್ಸ್ ಸಕ್ಕರೆ ಕಾರ್ಖಾನೆಯವರು ಕಡಿಮೆ ಬೆಲೆಗೆ ರೈತರಿಂದ ಕಬ್ಬು ಖರೀದಿಸುತ್ತಿದ್ದು, ದರ ನಿಗದಿಯಲ್ಲಿ …

Read More »

ತಿರುಪತಿ ದೇವಸ್ಥಾನದವರು ಕೇವಲ ಹಣ ಮಾಡುತ್ತಾರೆ: ಮಹಾಂತಶೆಟ್ಟರ

ಲಕ್ಷ್ಮೇಶ್ವರ: ‘ತಿರುಪತಿ ದೇವಸ್ಥಾನದವರು ಕೇವಲ ಹಣ ಮಾಡುತ್ತಾರೆ. ತಿರುಪತಿ ದೇವಸ್ಥಾನದಲ್ಲಿ ಕೋಟ್ಯಂತರ ಹಣ ಸಂಗ್ರಹವಾಗುತ್ತದೆ. ಆದರೆ ಅದರಿಂದ ಬಡ ಜನತೆಗೆ ಯಾವುದೇ ಉಪಯೋಗ ಆಗುತ್ತಿಲ್ಲ. ಆದರೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯವರು ಮಾತ್ರ ಹಣವನ್ನು ಬಡವರ ಆರ್ಥಿಕ ಪ್ರಗತಿಗಾಗಿ ಬಳಕೆ ಮಾಡುತ್ತಾರೆ’ ಎಂದು ಮಾಜಿ ಶಾಸಕ ಜಿ.ಎಂ.ಮಹಾಂತಶೆಟ್ಟರ ಹೇಳಿದರು.   ಇಲ್ಲಿನ ರಂಭಾಪುರಿ ಸಮುದಾಯ ಭವನದಲ್ಲಿ ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿ.ಸಿ.ಟ್ರಸ್ಟ್‌ನ ಶಿರಹಟ್ಟಿ, ಲಕ್ಷ್ಮೇಶ್ವರ ತಾಲ್ಲೂಕುಮಟ್ಟದ ಪ್ರಗತಿಬಂಧು ಸ್ವ …

Read More »

ಭಾರಿ ಮಳೆ ನೆಲಕ್ಕುರುಳಿದ ಭತ್ತದ ಪೈರು

ಮುಂಡರಗಿ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮಂಗಳವಾರ ಬೆಳಗಿನ ಜಾವ ಭಾರಿ ಮಳೆ ಸುರಿದಿದ್ದು, ಮಳೆ ಹಾಗೂ ಗಾಳಿಯ ರಭಸಕ್ಕೆ ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಕೊಯ್ಲಿಗೆ ಬಂದಿದ್ದ ಪೈರು ನೆಲಕಚ್ಚಿದೆ. ಭಾರಿ ಗಾಳಿ ಬೀಸಿದ್ದರಿಂದ ತಾಲ್ಲೂಕಿನ ಹೆಸರೂರು, ಕಕ್ಕೂರು, ಕೊರ್ಲಹಳ್ಳಿ, ಗಂಗಾಪುರ, ಶೀರನಹಳ್ಳಿ, ಶಿಂಗಟಾಲೂರ, ಹಮ್ಮಿಗಿ, ಬಿದರಳ್ಳಿ ಮೊದಲಾದ ನದಿ ದಂಡೆಗಳ ಗ್ರಾಮಗಳಲ್ಲಿ ಕೊಯ್ಲಿಗೆ ಬಂದಿದ್ದ ಭತ್ತದ ಪೈರು ನೆಲಕ್ಕುರುಳಿದೆ.   ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಅಪಾರ ಪ್ರಮಾಣದ ಮೆಕ್ಕೆಜೋಳ …

Read More »

ಸಿದ್ಧಲಿಂಗ ಸ್ವಾಮಿಜಿ ಎರಡನೇ ಬಸವಣ್ಣ

ಡಂಬಳ: ಶಿಕ್ಷಣ ಸಂಸ್ಥೆ ಮಠದ ಅಭಿವೃದ್ಧಿ ಸೇರಿದಂತೆ ಸಮಾನತೆಗಾಗಿ ನಿರಂತರವಾಗಿ ಶ್ರಮಿಸಿದರು. ಅವರ ಅಸಂಖ್ಯ ಸಾಮಾಜಿಕ ಸೇವೆಯನ್ನು ಗುರುತಿಸಿ ರಾಷ್ಟ್ರೀಯ ಕೋಮಸೌಹಾರ್ದ ಪ್ರಶಸ್ತಿ ಸೇರಿದಂತೆ ಹಲವು ಗೌರವ ಲಿಂ.ತೋಂಟದ ಸಿದ್ಧಲಿಂಗ ಸ್ವಾಮೀಜಿಗೆ ಸಲ್ಲುತ್ತದೆ ಎಂದು ತೋಂಟದ ಸಿದ್ಧರಾಮ ಸ್ವಾಮೀಜಿ ಅಭಿಪ್ರಾಯಪಟ್ಟರು.   ಡಂಬಳ ಗ್ರಾಮದ ಹಜರತ್ ಜಮಾಲ ಶಾ ವಲಿ ಶರಣರ ದರ್ಗಾದ ಆವರಣದಲ್ಲಿ ಅಂಜುಮನ್ ಇಸ್ಲಾಂ ಕಮಿಟಿ ಮತ್ತು ದರ್ಗಾ ಸಮಿತಿ ಆಯೋಜಿಸಿದ್ದ ಲಿಂ.ತೋಂಟದ ಸಿದ್ಧಲಿಂಗ ಸ್ವಾಮೀಜಿಯ 6ನೇ …

Read More »

ಮದುವಣಗಿತ್ತಿಯಂತೆ ಸಿದ್ಧಗೊಂಡ ಪಟ್ಟಣ:

ಕಿತ್ತೂರು (ಬೆಳಗಾವಿ ಜಿಲ್ಲೆ): ‘ಕಿತ್ತೂರ‌ ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮ ಅದ್ಧೂರಿ ಆಚರಣೆಗೆ ಸರ್ವ ಸಿದ್ಧತೆ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾಧಿಕಾರಿ‌ ಮೊಹಮ್ಮದ್ ರೋಷನ್ ತಿಳಿಸಿದರು. ಕಿತ್ತೂರಿನಲ್ಲಿ ಮಂಗಳವಾರ ಉತ್ಸವದ ಪೂರ್ವಸಿದ್ಧತೆಗಳನ್ನು ಪರಿಶೀಲಿಸಿ ಅವರು ಮಾತನಾಡಿದರು.   ‘ಚನ್ನಮ್ಮನ‌ ವಿಜಯೋತ್ಸವದ 200ನೇ ವರ್ಷದ ವರ್ಷಾಚರಣೆ ಹಾಗೂ ಕಿತ್ತೂರು ರಾಣಿ ಚನ್ನಮ್ಮನ ಉತ್ಸವವನ್ನು ಅದ್ಧೂರಿ ಹಾಗೂ ಅರ್ಥಪೂರ್ಣ ಆಚರಣೆಗೆ ಅನೇಕ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ’ ಎಂದು ತಿಳಿಸಿದರು. ‘ಅಕ್ಟೋಬರ್ 23, 24 ಮತ್ತು …

Read More »

ಕೆರೆಯಂತಾದ ಎಲೆಕ್ಟ್ರಾನಿಕ್‌ಸಿಟಿ

ಆನೇಕಲ್ : ತಾಲ್ಲೂಕಿನ ವಿವಿಧೆಡೆ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೀರಿನ ಹರಿವು ಹೆಚ್ಚಾಗಿ ಬೆಂಗಳೂರಿನ ಐಟಿ ಹಬ್‌ ಎಲೆಕ್ಟ್ರಾನಿಕ್‌ಸಿಟಿ ಮತ್ತು ವೀರಸಂದ್ರ ರಸ್ತೆಗಳು ಕೆರೆಯಂತಾಗಿವೆ. ರಸ್ತೆಗಳು ಸಂಪೂರ್ಣ ಜಲಾವೃತ್ತಗೊಂಡಿದೆ. ಇದರಿಂದಾಗಿ ದ್ವಿಚಕ್ರ ವಾಹನಗಳ ಸವಾರರು ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು.   ಸೋಮವಾರ ಸಂಜೆ ಪ್ರಾರಂಭವಾದ ಮಳೆ ಮಂಗಳವಾರ ಬೆಳಗ್ಗೆ ಸ್ವಲ್ಪ ಬಿಡುವು ನೀಡಿತ್ತು. ಮಂಗಳವಾರ ಮಧ್ಯಾಹ್ನ 12ಕ್ಕೆ ಪ್ರಾರಂಭವಾದ ಮಳೆ ಸಂಜೆ 7ಗಂಟೆವರೆಗೂ ನಿರಂತರವಾಗಿ ಸುರಿಯುತ್ತಲೇ ಇತ್ತು. …

Read More »