Breaking News

ಲಿಂಗತ್ವ ಅಲ್ಪ ಸಂಖ್ಯಾತರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಿ’

ಬಳ್ಳಾರಿ: ಲಿಂಗತ್ವ ಅಲ್ಪ ಸಂಖ್ಯಾತರಿಗೆ ವಸತಿ ಸೌಲಭ್ಯ ನೀಡಬೇಕು, ಗ್ಯಾರೆಂಟಿ ಯೋಜನೆಗಳನ್ನು ಜಾರಿ ಮಾಡಬೇಕು ಎಂಬುದೂ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ ಅ.24 ರಂದು ಸ್ವಾಭಿಮಾನಿ ನಡಿಗೆ ಹೆಸರಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿರುವುದಾಗಿ ‘ಸಂಗಮ’ ಸಂಘಟನೆಯ ಬಳ್ಳಾರಿ, ವಿಜಯನಗರ ಸಂಯೋಜಕಿ ಚಾಂದಿನಿ ತಿಳಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಲಿಂಗತ್ವ ಅಲ್ಪ ಸಂಖ್ಯಾತರು ಸಮಾಜದ ಒಂದು ಭಾಗ. ಸ್ವಾಭಿಮಾನಿಗಳಾದ ನಮಗೂ ಹಕ್ಕುಗಳು ಸಿಗಬೇಕು. ಸಮಾಜದಲ್ಲಿ ನಮ್ಮನ್ನು ಹೀನವಾಗಿ …

Read More »

ದೃಶ್ಯಂ’ ಸ್ಟೈಲ್​ನಲ್ಲೇ ಗೆಳತಿಯನ್ನು ಕೊಂದು ಹೂತಿಟ್ಟ ಯೋಧ;

ಮುಂಬೈ: ಬಾಲಿವುಡ್​​​​​​ನ ದೃಶ್ಯಂ ಸಿನಿಮಾದಿಂದ ಪ್ರೇರಿತನಾಗಿ ಕೊಲೆ ಮಾಡಿರುವ ಪ್ರಕರಣವೊಂದು ಮಹಾರಾಷ್ಟ್ರ(Maharastra)ದಲ್ಲಿ ಬೆಳಕಿಗೆ ಬಂದಿದೆ. ತನ್ನ ಗೆಳತಿಯನ್ನು ಕೊಂದು ಸಮಾಧಿ ಮಾಡಿದ ನಂತರ ಆಕೆಯ ದೇಹವನ್ನು ಸಿಮೆಂಟ್‌ನಿಂದ ಮುಚ್ಚಿದ ಆರೋಪದ ಮೇಲೆ ಸೇನಾ ಯೋಧನನ್ನು ಬಂಧಿಸಲಾಗಿದೆ. ಆರೋಪಿ 33 ವರ್ಷದ ಅಜಯ್​​ ವಾಂಖೆಡೆ ಮತ್ತು ಜ್ಯೋತ್ಸ್ನಾ ಆಕ್ರೆ ಮದುವೆಯ ಪೋರ್ಟಲ್ ಮೂಲಕ ಪರಿಚಿತರಾದರು. ಅಜಯ್ ವಾಂಖೆಡೆ ನಾಗಾಲ್ಯಾಂಡ್‌ನ ನಾಗ್ಪುರದ ಕೈಲಾಶ್ ನಗರ ಪ್ರದೇಶದ ನಿವಾಸಿಯಾಗಿದ್ದಾರೆ. ಜ್ಯೋತ್ಸ್ನಾ ಅವರಿಗೆ ಈಗಾಗಲೇ ಮದುವೆಯಾಗಿ ವಿಚ್ಛೇದನ …

Read More »

ಕತ್ತು ಸೀಳಿ ಸ್ನೇಹಿತನನ್ನೇ ಹತ್ಯೆಗೈದು ಪೊಲೀಸರಿಗೆ ಕರೆ ಮಾಡಿದ

ಉಡುಪಿ: ಕ್ಷುಲ್ಲಕ ಕಾರಣಕ್ಕಾಗಿ ವ್ಯಕ್ತಿಯೋರ್ವ ತನ್ನ ಸ್ನೇಹಿತನನ್ನೆ ಕತ್ತು ಸೀಳಿ ಕೊಲೆಗೈದ ಭೀಕರ ಘಟನೆಯೊಂದು ಉಡುಪಿ ಹಳೆ ಕೆಎಸ್ ಆರ್ ಟಿಸಿ ಬಳಿಯ ಕೃಷ್ಣ ಕೃಪಾ ಬಿಲ್ಡಿಂಗ್ ನ ನೆಲ ಅಂತಸ್ತಿನ ಕೊಠಡಿಯಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಕೊರಂಗ್ರಪಾಡಿಯ ಪ್ರಶಾಂತ್ ಶೆಟ್ಟಿ (32) ಕೊಲೆಯಾದ ವ್ಯಕ್ತಿ.   ಈತನ ಸ್ನೇಹಿತ ವಿಜಯನಗರ ಜಿಲ್ಲೆಯ ಹೂವಿನಹಡಗಲಿಯ ನಿವಾಸಿ ಈರಣ್ಣ ಯಾನೆ ದಿನೇಶ್ ಎಂಬಾತ ಕೊಲೆ ಮಾಡಿದ ಆರೋಪಿ. ಕಂಠಪೂರ್ತಿ ಕುಡಿದು ಇಬ್ಬರು ಜಗಳ …

Read More »

ಸಿಎಂ ಯೋಗಿ ಸರ್ಕಾರದ ಬುಲ್ಡೋಜರ್‌ ಕ್ರಮಕ್ಕೆ ಸುಪ್ರೀಂ ತಡೆ, ನಾಳೆ ವಿಚಾರಣೆ

ನವದೆಹಲಿ: ಕೋಮು ಘರ್ಷಣೆಗೆ ಸಂಬಂಧಿಸಿದಂತೆ ಆರೋಪಿಗಳ ಮನೆಗಳನ್ನು ಜೆಸಿಬಿ ಮೂಲಕ(Bulldozer Action) ಧ್ವಂಸಗೊಳಿಸುವ ನಿರ್ಧಾರದ ಕುರಿತಂತೆ ಉತ್ತರಪ್ರದೇಶದ ಯೋಗಿ ಆದಿತ್ಯನಾಥ್‌ ನೇತೃತ್ವದ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್‌(Supreme court) ಮಂಗಳವಾರ (ಅ.22) ಪರೋಕ್ಷ ಎಚ್ಚರಿಕೆಯ ಸಂದೇಶ ನೀಡಿದೆ.   ಆರೋಪಿಯ ಮನೆಯನ್ನು ಒಡೆಯುವ ನೋಟಿಸ್‌ ಅನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಇದು ರಾಜ್ಯ ಸರ್ಕಾರದ ಆಯ್ಕೆಗೆ ಬಿಟ್ಟ ವಿಚಾರವಾಗಿದೆ. ಒಂದು ವೇಳೆ ನ್ಯಾಯಾಲಯದ ನಿರ್ದೇಶನವನ್ನು ಉಲ್ಲಂಘಿಸಲು ಬಯಸುವುದಾದರೆ ಆಯ್ಕೆ …

Read More »

ಪೈಂಟಿಂಗ್‌ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವು; ಕೊಲೆ ಆರೋಪ

ಬೀದರ್: ಮನೆಗೆ ಪೈಂಟಿಂಗ್ ಮಾಡುವಾಗ ಮೂರನೇ ಮಹಡಿಯಿಂದ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ಇಲ್ಲಿನ ವಿದ್ಯಾನಗರ ಬಡಾವಣೆಯಲ್ಲಿ ಮಂಗಳವಾರ (ಅ.22) ನಡೆದಿದೆ. ಮೃತ ಯುವಕನನ್ನು ಬೀದರ ತಾಲೂಕಿನ ಮಂದಕನಹಳ್ಳಿ ಗ್ರಾಮದ ಇಮಾವೇಲ್ (24 ವ) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಬ್ರೀಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಗಾಂಧಿ ಗಂಜ್ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಯುವಕ ಮೂರನೇ ಮಹಡಿಗೆ ಹೋಗುವುದಿಲ್ಲ ಎಂದು ಹೇಳಿದ್ದರೂ ಕೂಡ ಒತ್ತಾಯ …

Read More »

ರಾಷ್ಟ್ರ ಮಟ್ಟದ ಟೆನಿಸ್ ಕ್ರಿಕೆಟ್ ನಲ್ಲಿ ಕಂಚಿನ ಪದಕ ಪಡೆದ ಆಶಾ ಮಂಗೋಜಿ

ರಾಷ್ಟ್ರ ಮಟ್ಟದ ಟೆನಿಸ್ ಕ್ರಿಕೆಟ್ ನಲ್ಲಿ ಕಂಚಿನ ಪದಕ ಪಡೆದ ಆಶಾ ಮಂಗೋಜಿ ಅಂಕಲಗಿ. ೨೧- ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಢಾಲಪುರ ನಲ್ಲಿ ಇತ್ತೀಚೆಗೆ ಜರುಗಿದ ಪ್ರಥಮ ಮಹಿಳಾ ರಾಷ್ಟ್ರೀಯ ಟಿ- ೧೦ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ಪ್ರತಿನಿಧಿಸಿ ಪಾಲ್ಗೊಂಡಿದ್ದ ಸಮೀಪದ ಈರನಟ್ಟಿ ಗ್ರಾಮದ ಆಶಾ ಬಸಪ್ಪಾ ಮಂಗೋಜಿ ತೃತೀಯ ಸ್ಥಾನಗಿಟ್ಟಿಸಿ, ಕಂಚಿನ ಪದಕ ಪಡೆದುಕೊಂಡು, ರಾಜ್ಯ, ಜಿಲ್ಲೆ ಸೇರಿದಂತೆ ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ. ಇವಳ …

Read More »

ಪರಿಶಿಷ್ಟರ ಮೀಸಲಾತಿ: ಕೇಂದ್ರಕ್ಕೆ ಪತ್ರ ಬರೆಯುವಂತೆ ಸಿಎಂ ಸಿದ್ದರಾಮಯ್ಯಗೆ ಶಾಸಕರ ಒತ್ತಾಯ

ತುಮಕೂರು: ಗೃಹ ಸಚಿವ ಡಾ.ಜಿ.ಪರಮೇಶ್ವರ್ ನೇತೃತ್ವದಲ್ಲಿ ಸೋಮವಾರ ನಡೆದ ಪರಿಶಿಷ್ಟ ಜಾತಿ (ಎಸ್‌ಸಿ) ಶಾಸಕರ ಸಭೆಯಲ್ಲಿ ಜಾತಿ ಗಣತಿಗೆ ಯಾವ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು ಎಂಬುದರ ಬಗ್ಗೆ ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸೂಚಿಸಲು ನಿರ್ಧರಿಸಲಾಯಿತು. ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಅನುಷ್ಠಾನಗೊಳಿಸುವಾಗ ಜಾತಿ ಗಣತಿಯ ದತ್ತಾಂಶವನ್ನು ಗಣನೆಗೆ ತೆಗೆದುಕೊಳ್ಳಬೇಕು. ಒಳ ಮೀಸಲಾತಿ ಜಾರಿಗೊಳಿಸಲು ರಾಜ್ಯಗಳಿಗೆ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ಆಗಸ್ಟ್ 1 ರಂದು …

Read More »

ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವು; ಓರ್ವನಿಗೆ ಗಾಯ

ಗದಗ: ಗದಗ ನಗರದಲ್ಲಿ ಮಣ್ಣು ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ. ನಜೀರ್ ಸಾಬ್ ಬೈಲಹುಲಿ(44) ಮೃತಪಟ್ಟ ಕಾರ್ಮಿಕ. ನಗರಸಭೆ ವಾಟರ್ ಮ್ಯಾನ್ ಮಂಜುನಾಥ್ ಪಲ್ಲೇದ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳು ಮಂಜುನಾಥ್ ಅವರನ್ನು ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ನಗರದ ಟಿಪ್ಪುಸುಲ್ತಾನ್ ಸರ್ಕಲ್ ನಲ್ಲಿ ನಿನ್ನೆ ಸಂಜೆ ಘಟನೆ ನಡೆದಿದೆ. ಗ್ಯಾಸ್ ಪೈಪ್ ಲೈನ್ ಕಂಪನಿಯ ಜೆಸಿಬಿ ಸಿಬ್ಬಂದಿ ಎಡವಟ್ಟು ಮಾಡಿದ್ದರಿಂದ ಮಣ್ಣು ಕುಸಿದಿದೆ ಎಂದು ಆರೋಪಿಸಲಾಗಿದೆ. ನನ್ನ ಗಂಡನ …

Read More »

2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ GSDP ಶೇ.10.2 ದಾಖಲು!

ಬೆಂಗಳೂರು: 2023-24ನೇ ಹಣಕಾಸು ವರ್ಷದಲ್ಲಿ ಕರ್ನಾಟಕದ ಜಿಎಸ್ ಡಿಪಿ ಶೇ.10.2 ರಷ್ಟು ಪ್ರಗತಿ ದಾಖಲಿಸಿದೆ ಎಂದು ರಾಜ್ಯ ಸರ್ಕಾರ ಸೋಮವಾರ ತಿಳಿಸಿದೆ. ಕೇಂದ್ರ ಸಾಂಖ್ಯಿಕ ಮತ್ತು ಯೋಜನಾ ಅನುಷ್ಠಾನ ಸಚಿವಾಲಯದ ಅಂಕಿ ಅಂಶಗಳ ಪ್ರಕಾರ ಈ ಅವಧಿಯಲ್ಲಿ ದೇಶದ ಸರಾಸರಿ ಜಿಎಸ್‌ಡಿಪಿ ಶೇ.8.2 ಆಗಿದೆ.   ನ್ಯಾಷನಲ್‌ ಸ್ಟಾಟಿಸ್ಟಿಕಲ್‌ ಎಸ್ಟಿಮೇಟ್‌ (ಎನ್‌ಎಸ್‌ಸಿ) ಆರಂಭದಲ್ಲಿ ಶೇ. 4ರಷ್ಟು ಕರ್ನಾಟಕದ ಜಿಎಸ್‌ಡಿಪಿ ಅಭಿವೃದ್ಧಿ ದರವನ್ನು ಅಂದಾಜಿಸಿತ್ತು. ಆದರೆ ಹಣಕಾಸು ವರ್ಷದ ಅಂತ್ಯಕ್ಕೆ ರಾಜ್ಯದ ಅಭಿವೃದ್ದಿ …

Read More »

ನೇರ ನಗದು ಹಣದ ಬದಲಿಗೆ ಆಹಾರ ಕಿಟ್‌ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ

ಬೆಂಗಳೂರು: ಡಿಬಿಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ‌ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು‌. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ DBT ನೀಡುತ್ತಿರುವುದನ್ನು ಮುಂದುವರೆಸಲಾಗುತ್ತದೆ. ಪಡಿತರ ಚೀಟಿ ಪರಿಷ್ಕರಣೆ …

Read More »