Breaking News

ರಾಜ್ಯದಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಳ – 4,125 ಕೇಸ್ ದಾಖಲು; ಆರೋಗ್ಯ ಇಲಾಖೆ ಅಲರ್ಟ್

ಬೆಂಗಳೂರು: ಡೇಂಜರ್ ಡೇಂಜರ್ H1N1 ಡೇಂಜರ್. ರಾಜ್ಯದಲ್ಲಿ H1N1  ಕೇಸ್ ಏರಿಕೆ ಆಗ್ತಿದೆ. ಈ ವರ್ಷದಲ್ಲೇ ಬರೋಬ್ಬರಿ 4,125 ಕೇಸ್ ದಾಖಲಾಗಿದೆ. ‌ಹೆಚ್1ಎನ್1 ನಿಯಂತ್ರಣಕ್ಕೆ ಮಾರ್ಗಸೂಚಿಯನ್ನ ಆರೋಗ್ಯ ಇಲಾಖೆ  ಬಿಡುಗಡೆ ಮಾಡಿದೆ. ದಿನೇ ದಿನೇ ಪ್ರಕರಣಗಳ ಸಂಖ್ಯೆ ಏರಿಕೆ ಆಗ್ತಿದ್ದು, ಜನವರಿಯಿಂದ ಆಗಸ್ಟ್ ವರೆಗೆ ಅಂದ್ರೆ 8 ತಿಂಗಳಿಗೆ 4,125 ಕೇಸ್ ದಾಖಲಾಗಿದೆ. ಇನ್ನೂ ವರ್ಷಾಂತ್ಯದ ವೇಳೆಗೆ ಎಷ್ಟು ಕೇಸ್ ದಾಖಲಾಗಬಹುದು ಅನ್ನೋದು ಆತಂಕಕ್ಕೆ ಕಾರಣವಾಗಿದೆ. ರಾಜ್ಯದ ಒಟ್ಟು ಕೇಸ್‌ಗಳಲ್ಲಿ …

Read More »

ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್

ಮಂಗಳೂರು: ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ ಎಂದು ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್  ಹೇಳಿದ್ದಾರೆ. ಪುತ್ತೂರಿನಲ್ಲಿ ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ದರ್ಬೆಯಲ್ಲಿ ನಡೆದ ಗಲಾಟೆ ವಿಚಾರವಾಗಿ, ಸಣ್ಣ ವಿಚಾರ ಮುಂದಿಟ್ಟುಕೊಂಡು ಅಂಗಡಿ ಮೇಲೆ ದಾಳಿ ಮಾಡಿದ್ದಾರೆ. ಮಹಿಳೆ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಇದು ತಾಲಿಬಾನ್ ಸಂಸ್ಕೃ=ತಿ, ತಾಲಿಬಾನ್ ಸಂಸ್ಕ್ರತಿಯ ಹೋರಾಟಗಳು ಜಾಸ್ತಿಯಾಗುತ್ತಿವೆ. ರಾಜ್ಯದಲ್ಲಿ ಕಾಂಗ್ರೆಸ್  ಆಡಳಿತ ಬಂದ ಮೇಲೆ …

Read More »

ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು: ಬೊಮ್ಮಾಯಿ

ಹಾವೇರಿ: ಶಿಗ್ಗಾವಿಯ ಹನುಮಾನ್ ದೇವಸ್ಥಾನದಲ್ಲಿ  ಅನ್ಯಕೋಮಿನ ವ್ಯಕ್ತಿ ಪ್ರಜ್ಞಾಪೂರ್ವಕವಾಗಿ ಮೂತ್ರ ವಿಸರ್ಜನೆ ಮಾಡಿದ್ದು, ಅವನು ಕೋಮು ಗಲಭೆ ಸೃಷ್ಟಿಸುವ ಕೆಲಸ ಮಾಡಿದ್ದಾನೆ. ಪೊಲೀಸರು ಅವನ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಜಿಲ್ಲೆಯಿಂದ ಗಡಿಪಾರು ಮಾಡಬೇಕು. ಈ ಹಿನ್ನೆಲೆಯಲ್ಲಿ ಶಿಗ್ಗಾವಿ ಬಂದ್‌ಗೆ ಎಲ್ಲ ಕೋಮಿನವರೂ ಬೆಂಬಲ ನೀಡಬೇಕೆಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಮನವಿ ಮಾಡಿದರು. ಆಗಸ್ಟ್ 21ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ಟ್ಯಾಕ್ಸಿ ಸ್ಟ್ಯಾಂಡ್‌ನಲ್ಲಿರುವ …

Read More »

ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ, ರಾಜ್ಯದ ಇತಿಹಾಸದಲ್ಲೇ ನೈಸ್ ಹಗರಣ ಬಹುದೊಡ್ಡ ಅಕ್ರಮ: ಹೆಚ್‌ಡಿಕೆ

ರಾಮನಗರ: ಮಾಡೋದೆಲ್ಲ ಅನಾಚಾರ, ಮನೆ ಮುಂದೆ ಬೃಂದಾವನ ಎಂದು ಟೀಕಿಸಿದ್ದ ಡಿ.ಕೆ. ಸುರೇಶ್  ಹಾಗೂ ಸಚಿವ ಹೆಚ್.ಸಿ. ಬಾಲಕೃಷ್ಣ ಅವರಿಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ‘ನಮ್ಮದು ಸಂಸ್ಕೃತಿಯ ಬೃಂದಾವನ, ಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ’ ಎಂದು ವ್ಯಂಗ್ಯವಾಡಿದ್ದಾರೆ. ನೈಸ್ ರಸ್ತೆ ಟೋಲ್ ವಿಚಾರವಾಗಿ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರ ನಡುವೆ ಮತ್ತೆ ವಾಕ್ಸಮರ ಶುರುವಾಗಿದೆ. ನೈಸ್ ರಸ್ತೆಯಲ್ಲಿ ಟೋಲ್ ಕಟ್ಟಬೇಡಿ ಎಂದು ಹೆಚ್‌ಡಿಕೆ ಹೇಳಿದ್ದ ಬೆನ್ನಲ್ಲೇ ಕಾಂಗ್ರೆಸ್ ನಾಯಕರು …

Read More »

ಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ

ಮಂಗಳೂರು: ಮೀನುಗಾರಿಕಾ ಬೋಟ್‌ನ ತಳಭಾಗ ಕಲ್ಲಿಗೆ ಬಡಿದು ಮುಳುಗಡೆಯಾದ ಘಟನೆ ಅಳಿವೆಬಾಗಿನಲ್ಲಿ ನಡೆದಿದೆ. ಆಯಾನ್‌ ಹೆಸರಿನ ಬೋಟ್‌ ಕಲ್ಲಿಗೆ ಬಡಿದಿದೆ. ಇದರಿಂದ ನೀರು ಒಳನುಗ್ಗಿ ಬೋಟ್‌ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ಆರು ಮಂದಿ ಮೀನುಗಾರರನ್ನು ಇತರೆ ಬೋಟ್‌ನಲ್ಲಿದ್ದ ಮೀನುಗಾರರು ರಕ್ಷಿಸಿದ್ದಾರೆ. ಆಳ ಸಮುದ್ರ ಮೀನುಗಾರಿಕೆಗೆ ಪರ್ಸಿನ್ ಬೋಟ್ ತೆರಳಿತ್ತು. ಮೀನುಗಾರಿಕೆ ಮುಗಿಸಿ ಮುಳುತ್ತಿದ್ದಾಗ ಅಳಿವೆ ಬಾಗಿಲಿನಲ್ಲಿ ಈ ದುರಂತ ನಡೆದಿದೆ. ಇಬ್ರಾಹಿಂ ಖಲೀಲ್ ಎಂಬವರಿಗೆ ಈ ಬೋಟ್ ಸೇರಿದ್ದು, ಮುಳುಗಡೆಯಿಂದಾಗಿ ಲಕ್ಷಾಂತರ ರೂ. …

Read More »

ಕೋರಮಂಗಲದಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಕಾರು

ಬೆಂಗಳೂರು: ನಗರದ ಕೋರಮಂಗಲ ವಾಟರ್ ಟ್ಯಾಂಕ್ ಜಂಕ್ಷನ್ ಬಳಿ ಚಲಿಸುತ್ತಿದ್ದ ಕಾರಿನಲ್ಲಿ  ಏಕಾಏಕಿ ಬೆಂಕಿ ಕಾಣಿಸಿಕೊಂಡು, ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾತ್ರಿ ಸುಮಾರು 11:30ರ ವೇಳೆಗೆ ಘಟನೆ ನಡೆದಿದೆ. ಕಾರು ರಸ್ತೆಯಲ್ಲಿ ಚಲಿಸುತ್ತಿದ್ದ ವೇಳೆ ಇಂಜಿನ್ ಭಾಗದಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಕೆಲವೇ ಕ್ಷಣಗಳಲ್ಲಿ ಬೆಂಕಿ ಇಡೀ ಕಾರಿಗೆ ವ್ಯಾಪಿಸಿದ್ದು, ವಾಹನ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಕಾರಿನಲ್ಲಿ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಒಳಗಿದ್ದವರು …

Read More »

ಎತ್ತಿನಭುಜ ಟ್ರೆಕ್ಕಿಂಗ್‌ ರೀ ಓಪನ್ – ರಸ್ತೆ ಮೇಲೆ ಬಿದ್ದ ರಾಶಿ ರಾಶಿ ಮರಗಳಿಂದ ಪ್ರವಾಸಿಗರ ಪರದಾಟ

ಚಿಕ್ಕಮಗಳೂರು: ಹಲವು ತಿಂಗಳುಗಳಿಂದ ನಿಲ್ಲಿಸಿದ್ದ ಎತ್ತಿನಭುಜ ಟ್ರೆಕ್ಕಿಂಗ್‌ಗೆ  ರೀ ಓಪನ್ ಆಗಿದೆ. ಹಲವು ತಿಂಗಳಿಂದ ಟ್ರಕ್ಕಿಂಗ್‌ ಬಂದ್‌ ಆಗಿದ್ದರಿಂದ ಗಾಳಿ ಮಳೆಗೆ ಬಿದ್ದ ಮರಗಳು ರಸ್ತೆ ತುಂಬೆಲ್ಲ ಹಾಗೆ ಬಿದ್ದಿವೆ. ಇದರಿಂದ ಚಾರಣಕ್ಕೆ ಬಂದ ಪ್ರವಾಸಿಗರು ಪರದಾಡಿದ್ದಾರೆ. ಆನ್‌ಲೈನ್‌ನಲ್ಲಿ ಟಿಕೆಟ್‌ ಬುಕ್‌ ಮಾಡಿಕೊಂಡು ಬಂದ ಪ್ರವಾಸಿಗರು, ಹೋಗುವ ರಸ್ತೆ ತಿಳಿಯದೆ ದಟ್ಟ ಕಾಡಿನಲ್ಲಿ ಪರದಾಡಿದ್ದಾರೆ. ಗೈಡ್‌ಗಳಿಲ್ಲದೇ ಇರುವುದರಿಂದ ಪ್ರವಾಸಿಗರು ವಾಪಸ್‌ ಆಗುತ್ತಿದ್ದಾರೆ. ಮೂಲಭೂತ ಸೌಕರ್ಯಗಳಿಲ್ಲದೇ ಅರಣ್ಯ ಇಲಾಖೆ ಟ್ರೆಕ್ಕಿಂಗ್‌ ಓಪನ್‌ …

Read More »

ಡಿಕೆಶಿ ನಿವಾಸಕ್ಕೆ ಗೌತಮ್ ಅದಾನಿ ಭೇಟಿ – ಸುರಂಗ ರಸ್ತೆ ಯೋಜನೆ ಕುರಿತು ಮಹತ್ವದ ಚರ್ಚೆ

ಬೆಂಗಳೂರು: ಸದಾಶಿವನಗರದಲ್ಲಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರ ನಿವಾಸಕ್ಕೆ ಅದಾನಿ ಸಮೂಹ ಸಂಸ್ಥೆಗಳ ಅಧ್ಯಕ್ಷ ಗೌತಮ್ ಅದಾನಿ ಭೇಟಿ ನೀಡಿ ಮಾತುಕತೆ ನಡೆಸಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಉದ್ದಿಮೆ ಅವಕಾಶಗಳ ಜತೆಗೆ, ಬಹುನಿರೀಕ್ಷಿತ ಬೆಂಗಳೂರು ಸುರಂಗ ರಸ್ತೆ ಯೋಜನೆ ಗುತ್ತಿಗೆ ಹಂಚಿಕೆಗೆ ಸಂಬಂಧಿಸಿದಂತೆ ಇಬ್ಬರ ನಡುವೆ ಮಹತ್ವದ ಚರ್ಚೆ ನಡೆದಿದೆ ಎನ್ನಲಾಗಿದೆ. ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕಾಗಿ ಹೆಬ್ಬಾಳದಿಂದ ಸಿಲ್ಕ್ ಬೋರ್ಡ್ ನಡುವೆ ಸುಮಾರು 17 ಕಿ.ಮೀ. ಉದ್ದದ …

Read More »

ಚಾಮರಾಜನಗರ ಎನ್‌ಕೌಂಟರ್ ಕೇಸ್ – ಸೋಮವಾರ ಸರ್ಕಾರಕ್ಕೆ ವರದಿ ಸಲ್ಲಿಕೆ ಸಾಧ್ಯತೆ

ಚಾಮರಾಜನಗರ: ಹನೂರಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್ ಸಂಬಂಧ ನಾಳೆ (ಸೋಮವಾರ) ತನಿಖಾ ತಂಡ ಸರ್ಕಾರಕ್ಕೆ ವರದಿ ಸಲ್ಲಿಸುವ ಸಾಧ್ಯತೆಯಿದೆ. ತನಿಖಾಧಿಕಾರಿ ದಿನೇಶ್ ಕುಮಾರ್ ಮೀನಾ ಸರ್ಕಾರಕ್ಕೆ ವಿಸ್ತೃತ ವರದಿ ಸಲ್ಲಿಸಲಿದ್ದಾರೆ. ತನಿಖೆಯಲ್ಲಿ ಅರಣ್ಯ ಸಿಬ್ಬಂದಿ, ಅರಣ್ಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಕಣರದ ಪ್ರಮುಖ ಸಾಕ್ಷಿ ಮಹಿಮಾ ದಾಸ್ ಹೇಳಿಕೆ ದಾಖಲಿಸಿಕೊಳ್ಳಲಾಗಿದೆ. ಅಂದು ಘಟನೆ ಹೇಗಾಯ್ತು? ಏನಾಯ್ತು? ಅನ್ನೋ ಕಂಪ್ಲೀಟ್ ವರದಿ ತಯಾರಿಸಲಾಗಿದ್ದು ಬಹುತೇಕ ನಾಳೆ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ. ಇತ್ತ …

Read More »

ರಕ್ಷಣಾ ಸಚಿವಾಲಯದ ಮೂರು ತಿಂಗಳ ಗರ್ಭಿಣಿ ಅಧಿಕಾರಿ ನಿಗೂಢ ಸಾವು

ನವದೆಹಲಿ: ರಕ್ಷಣಾ ಸಚಿವಾಲಯದಲ್ಲಿ ಸಹಾಯಕ ವಿಭಾಗಾಧಿಕಾರಿಯಾಗಿದ್ದ ಮೂರು ತಿಂಗಳ ಗರ್ಭಿಣಿಯೊಬ್ಬರು ದೆಹಲಿಯದ್ವಾರಕಾದಲ್ಲಿರುವ ತಮ್ಮ ನಿವಾಸದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ನಾಜಿಯಾ ಖಾನಂ (30) ಮೃತಪಟ್ಟಿದ್ದು, ಈ ಸಾವಿಗೆ ಪತಿ ಹಾಗೂ ಅತ್ತೆ-ಮಾವನ ನಿರಂತರ ದೈಹಿಕ ಮತ್ತು ಮಾನಸಿಕ ಕಿರುಕುಳವೇ ಕಾರಣ ಎಂದು ಮೃತಳ ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ. ನಾಜಿಯಾ ಖಾನಂಅವರಿಗೆ ಕಳೆದ ಏಪ್ರಿಲ್ 11 ರಂದು ಅಜ್ಮ್ ಅಲಿ ಖಾನ್ ಎಂಬಾತನೊಂದಿಗೆ ವಿವಾಹವಾಗಿತ್ತು. ಮದುವೆಯಾದ ಕೆಲವೇ ದಿನಗಳಲ್ಲಿ ಪತಿ ಅಜ್ಮ್ …

Read More »