ಬೈಲಹೊಂಗಲ: ಮನೆಯಲ್ಲಿ ನೀರು ಕಾಯಿಸಲು ವಾಟರ್ ಹೀಟರ್ ನ ಸ್ವಿಚ್ ಒತ್ತಿದಾಗ ವಿದ್ಯುತ್ ತಗುಲಿ ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ ಸಮೀಪದ ಹೊಸೂರ ಗ್ರಾಮದಲ್ಲಿ ಅ.15ರ ಮಂಗಳವಾರ ನಡೆದಿದೆ. ರೇಖಾ ರುದ್ರಪ್ಪ ಹುಡೇದ (52) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಮೃತರು ಪತಿ, ಮೂವರು ಪುತ್ರಿಯರು, ಪುತ್ರನನ್ನು ಅಗಲಿದ್ದಾರೆ. ಈ ಕುರಿತು ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ
ಬೆಳಗಾವಿ: ಬೆಳಗಾವಿ ಮತ್ತು ಬೆಂಗಳೂರು ಮಧ್ಯೆ ದಿನನಿತ್ಯ ಸಂಚರಿಸುವ ಇಂಡಿಗೋ ವಿಮಾನವನ್ನು ದಿನಾಂಕ 27 ರಿಂದ ಸ್ಥಗಿತಗೊಳಿಸಲಾಗುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬುಧವಾರ ನವದೆಹಲಿಯಲ್ಲಿ ಕೇಂದ್ರ ವಿಮಾನಯಾನ ಸಚಿವರಾದ ಕೆ. ಆರ್ ನಾಯ್ಡು ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬೆಳಗಾವಿ ಬೆಂಗಳೂರು ಬೆಳಗಾವಿ ಮಧ್ಯೆ ದಿನನಿತ್ಯ ಬೆಳಿಗ್ಗೆ ಸಂಚರಿಸುವ ಇಂಡಿಗೋ ಸಂಸ್ಥೆ ವಿಮಾನಯಾನ ಸೇವೆಯನ್ನು ರದ್ದು ಮಾಡಬಾರದು. ಇದರಿಂದ ಪ್ರಯಾಣಿಕರಿಗೆ ಬಹಳ ತೊಂದರೆಯಾಗಲಿದೆ ಎಂದರು. ಬೆಳಗಾವಿ …
Read More »ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ
ಬೆಳಗಾವಿ: ಕಿತ್ತೂರು ಉತ್ಸವ ಹಾಗೂ ಚನ್ನಮ್ಮನ ವಿಜಯೋತ್ಸವದ 200 ವರ್ಷಾಚರಣೆ ಹಿನ್ನೆಲೆಯಲ್ಲಿ ಇದೇ ಪ್ರಥಮ ಬಾರಿಗೆ ಬೆಳಗಾವಿ ನಗರದಲ್ಲೂ ರಸಮಂಜರಿ ಹಾಗೂ ನೃತ್ಯ ಕಾರ್ಯಕ್ರಮಗಳ ಆಯೋಜನೆ ಮಾಡಲಾಗುತ್ತಿದೆ ಎಂದು ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಹೇಳಿದರು. ರಾಷ್ಟ್ರೀಯ ಖ್ಯಾತಿಯ ಗಾಯಕರಾದ ಕುನಾಲ್ ಗಾಂಜಾವಾಲಾ ಅವರು ಕಿತ್ತೂರು ಉತ್ಸವದ ಮುನ್ಬಾ ದಿನವಾದ ಅ.22 ರಂದು ಸಂಜೆ 4 ಗಂಟೆಗೆ ಬೆಳಗಾವಿಯ ಜಿಲ್ಲಾ ಕ್ರೀಡಾಂಗಣದಲ್ಲಿ ರಸಮಂಜರಿ ನಡೆಸಿಕೊಡಲಿದ್ದಾರೆ ಎಂದು ಮಾಹಿತಿ ನೀಡಿದರು. …
Read More »9ರಿಂದ 20ರ ವರೆಗೆ ಚಳಿಗಾಲ ಅಧಿವೇಶನ?
ಬೆಳಗಾವಿ: ಈ ಬಾರಿಯ ಚಳಿಗಾಲ ಅಧಿವೇಶನವನ್ನು ಡಿ. 9ರಿಂದ 20ರ ವರೆಗೆ ಸುವರ್ಣ ವಿಧಾನಸೌಧದಲ್ಲಿ ನಡೆಸುವುದು ಸೂಕ್ತ ಎಂಬ ನಿರ್ಧಾರಕ್ಕೆ ಬಂದಿದ್ದೇವೆ. ಸಚಿವ ಸಂಪುಟದಲ್ಲಿ ಅಂತಿಮ ದಿನಾಂಕ ಪ್ರಕಟವಾಗಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದಿನಾಂಕ ಘೋಷಿಸಲಿದ್ದಾರೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ಚಳಿಗಾಲ ಅಧಿ ವೇಶನ ಹಿನ್ನೆಲೆಯಲ್ಲಿ ಶುಕ್ರವಾರ ಸುವರ್ಣ ವಿಧಾನಸೌಧ ಪರಿಶೀಲನೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದಾಜು ದಿನಾಂಕದಂತೆ ಅಧಿಕಾರಿಗಳು …
Read More »ಯತ್ನಾಳ್ ವಿರುದ್ಧ ಕೇಸ್ ದಾಖಲು
ವಿಜಯಪುರ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಮಾಡಿದ ಆರೋಪದಡಿ ವಿಜಯಪುರ ನಗರ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಹಾಗೂ ಇತರರ ವಿರುದ್ಧ ನಗರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಹಾನಗರ ಪಾಲಿಕೆ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಈ ಪ್ರಕರಣ ದಾಖಲಾಗಿದೆ. …
Read More »3 ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್’ಗೆ ಗೆಲುವು: ಡಿಕೆ.ಶಿವಕುಮಾರ್ ವಿಶ್ವಾಸ
ಬೆಂಗಳೂರು: ಉಪಚುನಾವಣೆ ಸೇರಿದಂತೆ ಎಲ್ಲಾ ಚುನಾವಣೆಗಳಿಗೂ ಕಾಂಗ್ರೆಸ್ ಸಿದ್ಧವಿದ್ದು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವ ಸಾಧಿಸುವ ವಿಶ್ವಾಸವಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದರು. ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವಿ ಕ್ಷೇತ್ರಗಳಿಗೆ ಚುನಾವಣಾ ಆಯೋಗ ಉಪಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆಗೆ ಈಗಾಗಲೇ ಸಿದ್ಥತೆ ಆರಂಭಿಸಿದ್ದು, ಗೆಲ್ಲುವ ವಿಶ್ವಾಸವಿದೆ ಎಂದು ಹೇಳಿದರು. ಇದೇ ವೇಳೆ ಚನ್ನಪಟ್ಟಣ ವಿಧಾನಸಭಾ …
Read More »ನ.13ರಂದು ಉಪ ಚುನಾವಣೆ: ಮೂವರು ಘಟಾನುಘಟಿಗಳಿಗೆ ಸತ್ವಪರೀಕ್ಷೆ
ಬೆಂಗಳೂರು: ಚನ್ನಪಟ್ಟಣ, ಸಂಡೂರು ಮತ್ತು ಶಿಗ್ಗಾಂವ್ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ 13 ರಂದು ಉಪಚುನಾವಣೆ ನಡೆಸುವುದಾಗಿ ಭಾರತೀಯ ಚುನಾವಣಾ ಆಯೋಗ (ಇಸಿಐ) ಮಂಗಳವಾರ ಪ್ರಕಟಿಸಿದೆ. ಚುನಾವಣಾ ಫಲಿತಾಂಶವು ನವೆಂಬರ್ 23 ರಂದು ಪ್ರಕಟವಾಗಲಿದೆ. ಉಪಚುನಾವಣೆಗಳ ಫಲಿತಾಂಶವು ವಿಧಾನಸಭೆಯಲ್ಲಿನ ಸಮೀಕರಣಗಳನ್ನು ಬದಲಾಯಿಸುವುದಿಲ್ಲ ಅಥವಾ ಸರ್ಕಾರದ ಮೇಲೆ ನೇರ ಪ್ರಭಾವ ಬೀರುವುದಿಲ್ಲ, ಆದರೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮೂರು ಪಕ್ಷಗಳ ಪ್ರಮುಖ ನಾಯಕರಿಗೆ ಈ ಸ್ಥಾನಗಳನ್ನು ಗೆಲ್ಲುವುದು …
Read More »ಕೊನೆಗೂ ಜೈಲಿನಿಂದ ಹೊರಬಿದ್ದ ಶಾಸಕ ಮುನಿರತ್ನ
ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುಪಾಲಾಗಿದ್ದ ಶಾಸಕ ಮುನಿರತ್ನ ನಾಯ್ಡು ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದೀಗ ಇಂದು ಬಿಡುಗಡೆಯಾಗಿದ್ದಾರೆ. ಮಂಗಳವಾರ ಜಾಮೀನು ಅರ್ಜಿ ತೀರ್ಪು ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಅದರಂತೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಅವರು ಬಿಡುಗಡೆಯಾದರು. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು …
Read More »ಮಳೆ ನೀರನ್ನು ಆಕಾಶಕ್ಕೆ ಕಳಿಸೋಕಾಗಲ್ಲ, ಇದೆಲ್ಲಾ ಕಾಮನ್ ಎಂದ ಪರಂ!
ಮಳೆ ನೀರನ್ನು ಆಕಾಶಕ್ಕೆ ಕಳಿಸೋಕಾಗಲ್ಲ, ಇದೆಲ್ಲಾ ಕಾಮನ್ ಎಂದ ಪರಂ! ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಅದರಲ್ಲು ಬೆಂಗಳೂರಿನಲ್ಲಿ ಮಹಾಮಳೆಗೆ ಜನಜೀವನ ಅಕ್ಷರಶಃ ನಲುಗಿ ಹೋಗಿದೆ. ಈ ನಡುವೆ ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ, ಮಳೆ ಬಂದಾಗ ನೀರನ್ನು ವಾಪಸ್ ಆಕಾಶಕ್ಕೆ …
Read More »ಇದೆಲ್ಲಾ ಇ.ಡಿ ಪಿತೂರಿ, ನನ್ನದೇನೂ ತಪ್ಪಿಲ್ಲ ಎಂದ ನಾಗೇಂದ್ರ.!
ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ಹಗರಣ ಪ್ರಕರಣಕ್ಕೆ ಸಂಬಂಧಸಿದಂತೆ ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಹೊರಬಂದ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿದೆ ಆ ಸರ್ಕಾರವನ್ನ ಅಸ್ಥಿರ ಗೊಳಿಸುವ ಷಡ್ಯಂತ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು. ಈ ಬಗ್ಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣದಲ್ಲಿ ಏನೂ ಪಾತ್ರವಿಲ್ಲದಿದ್ದರೂ ಏಕಾಏಕಿ ಬಂಧನ ಮಾಡಿ ಮೂರು ತಿಂಗಳಿಂದ ಇಡಿ ನನಗೆ ಸಾಕಷ್ಟು ಕಿರುಕುಳ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ …
Read More »
Laxmi News 24×7