ಬಾಗಲಕೋಟೆ: ಕೇವಲ ಪ್ರಕರಣಗಳಿವೆ ಎಂಬ ಒಂದೇ ಕಾರಣಕ್ಕೆ ರಾಜೀನಾಮೆ ಕೊಡುವುದಾದರೆ ಕೇಂದ್ರ ಮತ್ತು ವಿವಿಧ ರಾಜ್ಯಗಳ ಅರ್ಧದಷ್ಟು ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಬಿಜೆಪಿ ನಿರಂತರವಾಗಿ ಪಟ್ಟುಹಿಡಿದು ಪ್ರತಿಭಟನೆ ನಡೆಸುತ್ತಿರುವ ವಿಚಾರವಾಗಿ ಜಮಖಂಡಿಯಲ್ಲಿ ಪ್ರತಿಕ್ರಿಯಿಸಿದ ಅವರು ಈ ಪ್ರತಿಭಟನೆ ಕೇವಲ ಗದ್ದಲ ಸೃಷ್ಟಿಸುವುದಕ್ಕಷ್ಟೇ ಸೀಮಿತವಾಗಿದೆ ಎಂದು ಕಿಡಿಕಾರಿದರು. ಬಿಜೆಪಿಯವರು ಕಳೆದ ಐದು ದಿನಗಳಿಂದ ಸದನದ …
Read More »ಒಂದೇ ದಿನ 444 ಮದುವೆ! – ಗುರುವಾಯೂರು ದೇಗುಲದಲ್ಲಿ ಹೊಸ ದಾಖಲೆ
ತಿರುವನಂತಪುರಂ (ತ್ರಿಶೂರ್): ಕೇರಳದ ಪ್ರಸಿದ್ಧ ಗುರುವಾಯೂರು ದೇವಸ್ಥಾನದಲ್ಲಿ ಭಾನುವಾರ (ಇಂದು) ಒಂದೇ ದಿನ ಬರೋಬ್ಬರಿ 444 ಮದುವೆಗಳು ನಡೆದಿದೆ. ಇದು ದೇವಸ್ಥಾನದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ. ಇದಕ್ಕೂ ಮುನ್ನ 2024ರ ಸೆಪ್ಟೆಂಬರ್ 8 ರಂದು ಒಂದೇ ದಿನ 344 ಮದುವೆಗಳು ನಡೆದಿದ್ದು, ಇದುವರೆಗಿನ ದಾಖಲೆಯಾಗಿತ್ತು. ಆ ದಾಖಲೆ ಇಂದು ಮುರಿದಿದೆ. ಬೆಳಗ್ಗೆ 4 ಗಂಟೆಯಿಂದಲೇ ಮದುವೆ ಸಂಭ್ರಮ 444 ವಿವಾಹ ಮಹೋತ್ಸವದ ಹಿನ್ನೆಲೆ ದೇವಸ್ಥಾನದಲ್ಲಿ 6 ವಿವಾಹ ಮಂಟಪಗಳನ್ನ ಸಿದ್ಧಪಡಿಸಲಾಗಿತ್ತು. …
Read More »ಬಿಡದಿ ಟೌನ್‌ಶಿಪ್ ವಿರುದ್ಧ ರೈತರ ಹೋರಾಟ ತೀವ್ರ – ಆ.25ರಂದು ವಿಧಾನಸೌಧ ಚಲೋಗೆ ನಿರ್ಧಾರ
ರಾಮನಗರ: ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ನಿರಾಕರಿಸಿ ಕಳೆದ 530 ದಿನಗಳಿಂದ ನಿರಂತರ ಪ್ರತಿಭಟನೆ ನಡೆಸುತ್ತಿರುವ ರೈತರ ಹೋರಾಟ ಈಗ ಮತ್ತಷ್ಟು ತೀವ್ರಗೊಂಡಿದೆ. ಸರ್ಕಾರದ ಕಡೆಯಿಂದ ಸೂಕ್ತ ಸ್ಪಂದನೆ ಸಿಗದ ಹಿನ್ನೆಲೆ, ರಾಜ್ಯ ರೈತ ಸಂಘದ ನೇತೃತ್ವದಲ್ಲಿ ಬೃಹತ್ ವಿಧಾನಸೌಧ ಚಲೋ ಹೋರಾಟಕ್ಕೆ ರೈತರು ಸಜ್ಜಾಗಿದ್ದಾರೆ. ಈ ಬಗ್ಗೆ ರೈತ ಮುಖಂಡರು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಆಗಸ್ಟ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಿಂದ ಸಾವಿರಾರು ರೈತರು ವಿಧಾನಸೌಧ …
Read More »ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ನಾಳೆ ವಿಧಾನಸೌಧ ಮುತ್ತಿಗೆ: ಆರ್. ಅಶೋಕ್
ಬೆಂಗಳೂರು: ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ನಾಳೆ ಬಿಜೆಪಿ ವತಿಯಿಂದ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತಿಳಿಸಿದ್ದಾರೆ. ಮಲ್ಲೇಶ್ವರದ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗ್ಗೆ 9:30ಕ್ಕೆ ಸ್ವಾತಂತ್ರ್ಯ ಉದ್ಯಾನದಿಂದ ಪ್ರತಿಭಟನೆ ಆರಂಭವಾಗಲಿದೆ. ಬಳಿಕ ಬಿಜೆಪಿ ಕಾರ್ಯಕರ್ತರು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ …
Read More »ಬಾಂಗ್ಲಾದೇಶದಲ್ಲಿ ನಿವೃತ್ತ ಹಿಂದೂ ಶಿಕ್ಷಕ, ಪತ್ನಿ, ಇಬ್ಬರು ಮಕ್ಕಳು ಶವವಾಗಿ ಪತ್ತೆ
ಢಾಕಾ: ಬಾಂಗ್ಲಾದೇಶದ ರಂಗ್‌ಪುರ ನಗರದಲ್ಲಿ ನಿವೃತ್ತ ಹಿಂದೂ ಶಿಕ್ಷಕರೊಬ್ಬರು , ಅವರ ಪತ್ನಿ, ಮಗಳು ಹಾಗೂ 12 ವರ್ಷದ ಪುತ್ರ ಸೇರಿದಂತೆ ಒಂದೇ ಕುಟುಂಬದ ನಾಲ್ವರು ಮನೆಯೊಳಗೆ ಶವವಾಗಿ ಪತ್ತೆಯಾಗಿದ್ದಾರೆ. ಶನಿವಾರ ತಡರಾತ್ರಿ ಈ ಘಟನೆ ಬೆಳಕಿಗೆ ಬಂದಿದ್ದು, ಕುಟುಂಬದ ಸದಸ್ಯರನ್ನು ಕತ್ತು ಹಿಸುಕಿ ಹತ್ಯೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ರಾತ್ರಿ ಸುಮಾರು 11:30ಕ್ಕೆ ನಾಲ್ವರ ಮೃತದೇಹಗಳನ್ನು ಪತ್ತೆಹಚ್ಚಲಾಗಿದೆ. ಮೃತರನ್ನು ರಂಗ್‌ಪುರ ಜಿಲ್ಲಾ ಶಾಲೆಯ ನಿವೃತ್ತ ಶಿಕ್ಷಕ 65 …
Read More »ಬಿರಿಯಾನಿ ಪಾತ್ರೆಯಲ್ಲಿತ್ತು ತುಂಡರಿಸಿದ ಮಹಿಳೆಯ ದೇಹದ ಭಾಗಗಳು – ಬೆನ್ನತ್ತಿದ ಪೊಲೀಸರಿ ಸಿಕ್ಕಿದ್ದು ಚೆನ್ನೈ ‘ಹಾರರ್ ಹೌಸ್’!
ಚೆನ್ನೈ: ಆಗ್ರಾದಲ್ಲಿ ರೈಲಿನ ಕೆಂಪು ಸೂಟ್‌ಕೇಸ್‌ನಲ್ಲಿ ಮಹಿಳೆಯ ದೇಹದ ಭಾಗಗಳು ಪತ್ತೆಯಾದ ಪ್ರಕರಣದಲ್ಲಿ ತನಿಖೆ ತೀವ್ರಗೊಂಡಿದ್ದು, ಸಿಸಿಟಿವಿ ದೃಶ್ಯಗಳ ಆಧಾರದ ಮೇಲೆ ಪೊಲೀಸರು ಚೆನ್ನೈನ ಗುಡುವಂಚೇರಿ ಪ್ರದೇಶದಲ್ಲಿರುವ ಬಾಡಿಗೆ ಮನೆಯೊಂದನ್ನು ಪತ್ತೆಹಚ್ಚಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಇದೇ ಮನೆಯಲ್ಲಿ ಮಹಿಳೆಯನ್ನ ಹತ್ಯೆ ಮಾಡಿ ದೇಹವನ್ನು ತುಂಡುಗಳಾಗಿ ಕತ್ತರಿಸಿರುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ. ತನಿಖೆಯ ವೇಳೆ, ಓರ್ವ ಪುರುಷ ಮತ್ತು ಮಹಿಳೆ ಕೆಂಪು ಸೂಟ್‌ಕೇಸ್‌ನ್ನು ಹೊತ್ತು ಚೆನ್ನೈ ಸೆಂಟ್ರಲ್ ರೈಲು …
Read More »ಐಫೋನ್ EMI ವಿಚಾರಕ್ಕೆ ದುರಂತ – ತಾಯಿ ಕಾಲಿಗೆ ಬಿದ್ದರೂ ಕೇಳಲಿಲ್ಲ, ತಾಳಿಯನ್ನೇ ಬಿಚ್ಚಿಕೊಟ್ಟರೂ ಕರಗಲಿಲ್ಲ ಮಗ
ಮುಂಬೈ: ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದ ಕೊಹಡ್ಯಾ ಡೋಂಗರ್‌ನಲ್ಲಿ ನಡೆದ ಹೃದಯವಿದ್ರಾವಕ ಘಟನೆಯೊಂದು ಇಡೀ ಪ್ರದೇಶವನ್ನೇ ಬೆಚ್ಚಿಬೀಳಿಸಿದೆ. ಐಫೋನ್ ಖರೀದಿಯ EMI ಪಾವತಿ ವಿಚಾರವಾಗಿ ಮನೆಯಲ್ಲಿ ಉಂಟಾದ ವಿವಾದದ ಬಳಿಕ 19 ವರ್ಷದ ಯುವಕ ಆತ್ಮಹತ್ಯೆಗೆ ಮುಂದಾಗಿದ್ದಾನೆ. ಮಗನನ್ನು ರಕ್ಷಿಸಲು ತಂದೆ-ತಾಯಿ ನಡೆಸಿದ ಕೊನೇ ಹೋರಾಟ ದುರಂತದಲ್ಲಿ ಅಂತ್ಯಗೊಂಡಿದ್ದು, ಒಂದೇ ಕುಟುಂಬದ ಮೂವರು ಮೃತಪಟ್ಟಿದ್ದಾರೆ. ಈ ಘಟನೆಗೆ ಸಂಬಂಧಿಸಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಮಗನನ್ನ ಉಳಿಸಿಕೊಳ್ಳಲು ತಾಯಿ ಪಟ್ಟ ಕಷ್ಟ …
Read More »ಕುತೂಹಲ ಮೂಡಿಸಿದ ಶಿವರಾಜ್‌ಕುಮಾರ್ ನಟನೆಯ ಕೂರ್ಮಾವತಾರ್ ಟೈಟಲ್ ಟೀಸರ್
ಕರುನಾಡ ಚಕ್ರವರ್ತಿ ಡಾ.ಶಿವರಾಜ್‌ಕುಮಾರ್ ಮತ್ತೊಂದು ಬೃಹತ್ ಪ್ಯಾನ್-ಇಂಡಿಯಾ ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಶ್ರೀ ಮಹಾವಿಷ್ಣುವಿನ ಎರಡನೇ ಅವತಾರವಾದ ‘ಕೂರ್ಮಾವತಾರ’ದ ಕಥಾಹಂದರವನ್ನು ಆಧರಿಸಿ ಸಿದ್ಧವಾಗುತ್ತಿರುವ ಈ ಮಹತ್ವಾಕಾಂಕ್ಷೆಯ ಚಿತ್ರಕ್ಕೆ ‘ಕೂರ್ಮಾವತಾರ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರತಂಡ ಅಧಿಕೃತ ಟೈಟಲ್ ರಿವೀಲ್ ಟೀಸರ್ ಬಿಡುಗಡೆ ಮಾಡಿದೆ. ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಕೂರ್ಮಾವತಾರದ ಹಿನ್ನೆಲೆಯನ್ನು ಒಳಗೊಂಡ ಕಥೆಯನ್ನು ಪ್ರಧಾನವಾಗಿಟ್ಟುಕೊಂಡು ನಿರ್ಮಾಣವಾಗುತ್ತಿರುವ ಮೊದಲ ಸಿನಿಮಾ ಇದಾಗಿದ್ದು, ಈಗಾಗಲೇ ಬಿಡುಗಡೆಯಾಗಿರುವ ಟೀಸರ್ ಪ್ರೇಕ್ಷಕರಲ್ಲಿ ಮತ್ತು ಶಿವಣ್ಣನ …
Read More »ಹೊಸ ಸಿಮ್ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯ
ನವದೆಹಲಿ: ಹೊಸ ಸಿಮ್ ಕಾರ್ಡ್ ಪಡೆಯಲು ಇನ್ಮುಂದೆ ಬಯೋಮೆಟ್ರಿಕ್ ಪರಿಶೀಲನೆ ಕಡ್ಡಾಯಗೊಳಿಸಿ ಕೇಂದ್ರ ಸರ್ಕಾರ ಆದೇಶಿಸಿದೆ. ಕೇಂದ್ರದ ಆದೇಶದ ಹಿನ್ನೆಲೆ ಹೊಸ ಸಿಮ್ ಕಾರ್ಡ್ ಪಡೆಯುವ ಮುನ್ನ ಗ್ರಾಹಕರು ಬಯೋಮೆಟ್ರಿಕ್ ಪರಿಶೀಲಿಸಬೇಕು. ಗ್ರಾಹಕರ ಮಾಹಿತಿ ಅಪ್‌ಡೇಟ್ ಹಾಗೂ ಮರುಪರಿಶೀಲನೆ ಸಂದರ್ಭದಲ್ಲೂ ಬಯೋಮೆಟ್ರಿಕ್ ವೆರಿಫಿಕೇಶನ್ ಅಗತ್ಯ ಅಂತ ಸೂಚಿಸಿದೆ. ಸಿಮ್ ಕಾರ್ಡ್ ಸ್ಥಗಿತಗೊಳಿಸುವ ಪ್ರಕ್ರಿಯೆಯಲ್ಲೂ ಗುರುತು ಪರಿಶೀಲನೆ ನಿಯಮ ಅನ್ವಯವಾಗಲಿದೆ. ಸೈಬರ್ ವಂಚನೆ ಹಾಗೂ ನಕಲಿ ಸಿಮ್ ಕಾರ್ಡ್ ಕನೆಕ್ಷನ್‌ಗಳಿಗೆ ಕಡಿವಾಣ ಹಾಕಲು …
Read More »ಆಟವಾಡುತ್ತಾ ಕೀ ಆನ್ ಮಾಡಿದ ಮಗು – ಟ್ರ್ಯಾಕ್ಟರ್ ಮೈಮೇಲೆ ಹರಿದು ತಂದೆ ದಾರುಣ ಸಾವು
ಹಾಸನ: ಮೂರು ವರ್ಷದ ಮಗು ಆಟವಾಡುತ್ತಾ ಟ್ರ್ಯಾಕ್ಟರ್ ಕೀ ಆನ್ ಮಾಡಿದ ಪರಿಣಾಮ ತಂದೆಯ ಮೇಲೆ ಚಕ್ರ ಹರಿದು ದಾರುಣವಾಗಿ ಸಾವನ್ನಪ್ಪಿದ ಘಟನೆ ಹೊಳೆನರಸೀಪುರ ಪಟ್ಟಣದ ಕೋಟೆ ಒಕ್ಕಲಿಗರ ಬೀದಿಯಲ್ಲಿ ನಡೆದಿದೆ. ಯಶ್ವಂತ್ (37) ಟ್ರಾಕ್ಟರ್ ಹರಿದು ಸಾವನ್ನಪ್ಪಿದ ವ್ಯಕ್ತಿ. ಸಾರಿಗೆ ಸಂಸ್ಥೆಯ ನೌಕರರಾಗಿದ್ದ ಅವರು, ಅರಕಲಗೂಡು ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಹೊಸ ಮನೆ ಕಟ್ಟಿಸುತ್ತಿದ್ದ ಯಶ್ವಂತ್, ವರಮಹಾಲಕ್ಷ್ಮೀ ಹಬ್ಬದ ದಿನದಂದು ಆರ್‌ಸಿಸಿಗಾಗಿ ಟ್ರಾಕ್ಟರ್‌ನಲ್ಲಿ ಸೆಂಟ್ರಿಂಗ್ ಸಾಮಾಗ್ರಿಗಳನ್ನು ತರಿಸಿದ್ದರು. ಈ …
Read More »
Laxmi News 24×7