ಆಲಮಟ್ಟಿ: ಹೆಚ್.ಡಿ.ಕುಮಾರಸ್ವಾಮಿಯನ್ನು ಬಂಧಿಸೋಕೆ ನೂರು ಸಿದ್ದರಾಮಯ್ಯ ಬೇಕಾಗಿಲ್ಲ. ಒಬ್ಬ ಪೊಲೀಸ್ ಪೇದೆ ಸಾಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ನೀಡಿದರು. ಅವರು ಬುಧವಾರ ಆಲಮಟ್ಟಿ ಜಲಾಶಯದ ಬಳಿ ಕೃಷ್ಣೆಯ ಜಲಧಿಗೆ ಗಂಗಾ ಪೂಜೆ ನೆರವೇರಿಸಿದ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು. ನೂರು ಸಿದ್ದರಾಮಯ್ಯ ಬಂದರೂ ನನ್ನ ಅರೆಸ್ಟ್ ಮಾಡೋಕೆ ಆಗಲ್ಲ ಎಂದ ಕುಮಾರಸ್ವಾಮಿಯವರ ಮಾತಿನ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅವರನ್ನು ಬಂಧಿಸೋಕೆ ನಾನು ಬೇಡ. ಒಬ್ಬ …
Read More »ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ;C.M.,ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯರು ಬರಬೇಕು;H.D.K
ಬೆಂಗಳೂರು, ಆಗಸ್ಟ್ 21: ಅಗತ್ಯವಿದ್ದರೆ ಕುಮಾರಸ್ವಾಮಿಯನ್ನು ಮುಲಾಜಿಲ್ಲದೆ ಬಂಧಿಸುತ್ತೇವೆ ಎಂದು ಕೊಪ್ಪಳದಲ್ಲಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು ನೀಡಿದ್ದು, ನನಗೆ ಭಯ ಶುರುವಾಗಿದೆಯಾ? ನನ್ನ ನೋಡಿದರೆ ನಿಮಗೆ ಹಾಗೆ ಅನಿಸುತ್ತಾ? ಸಿಎಂ ಕಳೆದ ವಾರದಿಂದ ಹೇಗೆ ನಡೆದುಕೊಡಿದ್ದಾರೆ ನೋಡಿದ್ದೀರಲ್ಲಾ? ನನ್ನನ್ನು ಬಂಧಿಸಲು ನೂರು ಜನ ಸಿದ್ದರಾಮಯ್ಯಗಳು ಬರಬೇಕುಎಂದು ಸವಾಲು ಹಾಕಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ಮೈಸೂರಿನ ಮೂಡಾ ದಾಖಲೆ ಇದೆಯಲ್ಲ. ಮುಡಾ ಆಸ್ತಿಯನ್ನು …
Read More »ರಾಜ್ಯದಲ್ಲಿ 200 ಕೋಟಿ ಹೂಡಿಕೆಗೆ ‘ಬೆಸ್ಟ್’ ಒಲವು;ಎಂ.ಬಿ ಪಾಟೀಲ್
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದ್ದು ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ …
Read More »ಸಿದ್ದರಾಮಯ್ಯ ವಿರುದ್ಧದ ಪ್ರಕರಣ: ಸೆಪ್ಟೆಂಬರ್ 2ಕ್ಕೆ ವಿಚಾರಣೆ ಮುಂದೂಡಿಕೆ
ಬೆಂಗಳೂರು ಆಗಸ್ಟ್ 21: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಸಿಎಂ ವಿರುದ್ಧ ಸಲ್ಲಿಕೆಯಾಗಿದ್ದ ದೂರಿನ ವಿಚಾರಣೆಯನ್ನು ಹೈಕೋರ್ಟ್ ಸೂಚನೆ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 2ಕ್ಕೆ ಮುಂದೂಡಿದೆ. ಹೀಗಾಗಿ ಸದ್ಯಕ್ಕೆ ಬೀಸೆ ದೊಣ್ಣೆಯಿಂದ ಸಿಎಂ ಸಿದ್ದರಾಮಯ್ಯ ಅವರು ಪಾರಾದಂತಾಗಿದೆ. ದೂರಿನ ಬಗ್ಗೆ ವಿಚಾರಣೆ ಮಾಡಿದ ನ್ಯಾಯಧೀಶ ಗಜಾನನ ಭಟ್ ಅವರಿದ್ದ ಪೀಠ, ಸಾಕಷ್ಟು ವಾದ ಪ್ರತಿವಾದಗಳ ಬಳಿಕ ಆಗಸ್ಟ್ 20ಕ್ಕೆ ಆದೇಶ …
Read More »ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ‘ಗೈಡ್ ಲೈನ್ಸ್’ ಪ್ರಕಟ
ಬೆಂಗಳೂರು : ಮುಂಬರುವ ಗಣೇಶ ಹಬ್ಬ ಆಚರಣೆ ಸಂಬಂಧ ಶೀಘ್ರದಲ್ಲಿ ಗೈಡ್ಲೈನ್ಸ್ ಪ್ರಕಟಿಸುತ್ತೇವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ತಿಳಿಸಿದರು. ಇಂದು ಗಣೇಶ ಚತುರ್ಥಿ ಆಚರಣೆ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಬಿಬಿಎಂಪಿ ಮತ್ತು ಬೆಂಗಳೂರು ನಗರ ಪೊಲೀಸ್ ಜಂಟಿ ಸಹಯೋಗದಲ್ಲಿ ಟೌನ್ ಹಾಲ್ ನಲ್ಲಿ ನಡೆದ ಶಾಂತಿ ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಪೀಕರ್, ಪೆಂಡಾಲ್ ಮೆರವಣಿಗೆಯ ಬಗ್ಗೆ ಗೈಡ್ಲೈನ್ಸ್ ಪ್ರಕಟಿಸುತ್ತೇವೆ …
Read More »ಸಿಎಂ ಸಿದ್ಧರಾಮಯ್ಯ ಬಳಿಯೇ ‘ಮುಡಾ’ ಮೂಲ ದಾಖಲೆಗಳಿವೆ: ‘RTI ಕಾರ್ಯಕರ್ತ’ ಗಂಭೀರ ಆರೋಪ
ಬೆಂಗಳೂರು: ನಾನು ಆರ್ ಟಿ ಐ ಅಡಿಯಲ್ಲಿ ಮುಡಾಕ್ಕೆ ಮೂಲ ದಾಖಲೆಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದೆ. ಆದರೇ ನನಗೆ ನೀಡಿಲ್ಲ. ಇಂತಹ ದಾಖಲೆಗಳನ್ನು ಸಿಎಂ ಸಿದ್ಧರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ಬಳಿಯಲ್ಲೇ ಮುಡಾ ಕೇಸ್ ಗೆ ಸಂಬಂಧಿಸಿದಂತ ಮೂಲ ದಾಖಲೆಗಳು ಇರುವುದಾಗಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ …
Read More »200 ನೇ ಕಿತ್ತೂರು ವಿಜಯೋತ್ಸವಕ್ಕೆ 40 ಕೋಟಿ ರೂ.ಅನುದಾನ
ಚನ್ನಮ್ಮನ ಕಿತ್ತೂರು: 2024 ನೇ ಸಾಲಿನ ಚನ್ನಮ್ಮನ ಕಿತ್ತೂರು ವಿಜಯೋತ್ಸವವನ್ನು ಸಂಭ್ರಮದಿಂದ ಅದ್ಧೂರಿಯಾಗಿ ಆಚರಿಸುವ ನಿಟ್ಟಿನಲ್ಲಿ ಸೋಮವಾರ(ಆ19) ಬೆಂಗಳೂರಿನ ವಿಕಾಸ ಸೌಧದಲ್ಲಿ ಕಂದಾಯ ಸಚಿವ ಹಾಗೂ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಜರುಗಿತು. 200ನೇ ಕಿತ್ತೂರು ವಿಜಯೋತ್ಸವದ ಉತ್ಸವಕ್ಕೆ ಚನ್ನಮ್ಮನ ಕಿತ್ತೂರು ಕೋಟೆ ಆವರಣದಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲು 35 ಕೋಟಿ ರೂ. ಹಾಗೂ ಉತ್ಸವಕ್ಕೆ ರೂ 5 ಕೋಟಿ …
Read More »ಸಿಎಂ ಹುದ್ದೆ ಕಳೆದುಕೊಳ್ಳುತ್ತಾರೆಯೇ ಸಿದ್ದರಾಮಯ್ಯ?: ಕಾಂಗ್ರೆಸ್ ನಲ್ಲಿ ‘ಕುರ್ಚಿ’ರಾಜಕೀಯ ಆರಂಭ?
ಬೆಂಗಳೂರು: ಮುಡಾ ಹಗರಣದಲ್ಲಿ ತಮ್ಮ ವಿರುದ್ಧ ರಾಜ್ಯಪಾಲರು ಹೊರಡಿಸಿರುವ ಪ್ರಾಸಿಕ್ಯೂಷನ್ ವಿರುದ್ಧ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರಂಥ ಹಿರಿಯ ಅನುಭವಿ ನ್ಯಾಯವಾದಿಗಳು ವಾದ ಮಂಡಿಸುತ್ತಿದ್ದರೂ ಕೂಡ ಹೈಕೋರ್ಟ್‌ನಲ್ಲಿ ತಡೆಯಾಜ್ಞೆ ಪಡೆಯುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಎಫ್‌ಐಆರ್ ದಾಖಲಾದರೆ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯಲು ಸಮರ್ಥರಾಗಿರುತ್ತಾರೆಯೇ ಎಂಬ ಬಗ್ಗೆ ನಿರ್ಣಾಯಕ ಪ್ರಶ್ನೆ ಎದ್ದಿದೆ. ಈ ಬೆಳವಣಿಗೆಗೆ ಪ್ರತಿಯಾಗಿ, ಕಾಂಗ್ರೆಸ್ ಪಕ್ಷದೊಳಗೆ ಆಂತರಿಕ ಬೆಳವಣಿಗೆಗಳು ಮತ್ತೊಂದೆಡೆ ನಡೆಯುತ್ತಿದೆ. …
Read More »ಕಬ್ಬಿಣ, ಸಿಮೆಂಟ್ ಬೆಲೆಯಲ್ಲಿ ಇಳಿಕೆ!
ನವದೆಹಲಿ : ಮನೆ ಕಟ್ಟೋರಿಗೆ ಸಿಹಿಸುದ್ದಿ ಸಿಕ್ಕಿದ್ದು, ಪ್ರಸ್ತುತ, ದೇಶದಲ್ಲಿ ಸಿಮೆಂಟ್ ಮತ್ತು ಕಬ್ಬಿಣದ ಬಾರ್ ಗಳ ಬೆಲೆಗಳು ಕುಸಿಯುತ್ತಿವೆ. ಹೌದು, ದೇಶದಲ್ಲಿ ಸಿಮೆಂಟ್ ನ ಮಾರುಕಟ್ಟೆ ಬೆಲೆಯನ್ನು ಮೇಲ್ವಿಚಾರಣೆ ಮಾಡುವ ಸಂಸ್ಥೆಯಾದ ಐಸಿಆರ್ ಎ ವರದಿ ಮಾಡಿದ್ದು, ಮನೆ ನಿರ್ಮಾಣದಲ್ಲಿ ಬಳಸುವ ಸಿಮೆಂಟ್ ಹಾಗೂ ಕಬ್ಬಿಣದ ಎರಡೂ ವಸ್ತುಗಳ ಬೆಲೆಗಳು ಕುಸಿದಿವೆ. ಇತ್ತೀಚಿನ ತಿಂಗಳುಗಳಲ್ಲಿ ಅವುಗಳ ಬೆಲೆಗಳಲ್ಲಿ ದೊಡ್ಡ ಬದಲಾವಣೆ ಕಂಡುಬಂದಿದೆ. ಇಂದು ಬಾರ್ ಮತ್ತು ಸಿಮೆಂಟ್ ನ …
Read More »ಸಿಲಿಕಾನ್ ಸಿಟಿ ‘ಕ್ರೈಮ್ ಸಿಟಿ’ ಆಗ್ತಿದ್ಯಾ..?
ಬೆಂಗಳೂರು : ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಕುಟುಂಬದ ಮೇಲೆ ಬೈಕ್ ಸವಾರನೊಬ್ಬ ತಾಳ್ಮೆ ಕಳೆದುಕೊಂಡು ಅವರ ವಾಹನದ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ವ್ಯಕ್ತಿಯ ಕೋಪಕ್ಕೆ ಬೆಚ್ಚಿಬಿದ್ದ ಸವಾರರು ಕಾರಿನ ಒಳಭಾಗದಿಂದ ಇಡೀ ಘಟನೆಯ ವೀಡಿಯೊವನ್ನು ರೆಕಾರ್ಡ್ ಮಾಡಿದರು ಮತ್ತು ನಂತರ ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡರು, ಇದು ನೆಟ್ಟಿಗರಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಯಿತು. ದಾಳಿಕೋರನು ಕಾರಿನ ಗ್ಲಾಸ್ ಬಡಿದು ಚಾಲಕನಿಗೆ ಕೂಗಾಡಿ ರಂಪಾಟ ನಡೆಸಿದ್ದಾನೆ. …
Read More »