Breaking News

ಕೊನೆಗೂ ಜೈಲಿನಿಂದ ಹೊರಬಿದ್ದ ಶಾಸಕ ಮುನಿರತ್ನ

ಬೆಂಗಳೂರು : ಅತ್ಯಾಚಾರ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜೈಲುಪಾಲಾಗಿದ್ದ ಶಾಸಕ ಮುನಿರತ್ನ ನಾಯ್ಡು ಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದ್ದು, ಇದೀಗ ಇಂದು ಬಿಡುಗಡೆಯಾಗಿದ್ದಾರೆ. ಮಂಗಳವಾರ ಜಾಮೀನು ಅರ್ಜಿ ತೀರ್ಪು ನೀಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮುನಿರತ್ನ ಅವರಿಗೆ ಷರತ್ತು ಬದ್ಧ ಜಾಮೀನು ನೀಡಿತ್ತು.   ಅದರಂತೆ ಇಂದು ಬೆಳಗ್ಗೆ ಪರಪ್ಪನ ಅಗ್ರಹಾರದಿಂದ ಅವರು ಬಿಡುಗಡೆಯಾದರು. ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿ ನಿಂದನೆ ಪ್ರಕರಣದಲ್ಲಿ ಜೈಲು …

Read More »

ಮಳೆ ನೀರನ್ನು ಆಕಾಶಕ್ಕೆ ಕಳಿಸೋಕಾಗಲ್ಲ, ಇದೆಲ್ಲಾ ಕಾಮನ್ ಎಂದ ಪರಂ!

ಮಳೆ ನೀರನ್ನು ಆಕಾಶಕ್ಕೆ ಕಳಿಸೋಕಾಗಲ್ಲ, ಇದೆಲ್ಲಾ ಕಾಮನ್ ಎಂದ ಪರಂ!   ಬೆಂಗಳೂರು : ಬಂಗಾಳಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರಿತ್ಯದಿಂದ ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಅದರಲ್ಲು ಬೆಂಗಳೂರಿನಲ್ಲಿ ಮಹಾಮಳೆಗೆ ಜನಜೀವನ ಅಕ್ಷರಶಃ ನಲುಗಿ ಹೋಗಿದೆ. ಈ ನಡುವೆ ಈ ಬಗ್ಗೆ ಗೃಹ ಸಚಿವ ಜಿ ಪರಮೇಶ್ವರ್ ವ್ಯಂಗ್ಯವಾಗಿ ಮಾತನಾಡಿದ್ದಾರೆ.     ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗಿದೆ, ಮಳೆ ಬಂದಾಗ ನೀರನ್ನು ವಾಪಸ್ ಆಕಾಶಕ್ಕೆ …

Read More »

ಇದೆಲ್ಲಾ ಇ.ಡಿ ಪಿತೂರಿ, ನನ್ನದೇನೂ ತಪ್ಪಿಲ್ಲ ಎಂದ ನಾಗೇಂದ್ರ.!

ಬೆಂಗಳೂರು : ವಾಲ್ಮೀಕಿ ಅಭಿವೃದ್ದಿ ಹಗರಣ ಪ್ರಕರಣಕ್ಕೆ ಸಂಬಂಧಸಿದಂತೆ ಮಾಜಿ ಸಚಿವ ನಾಗೇಂದ್ರ ಜೈಲಿನಿಂದ ಹೊರಬಂದ ಪ್ರತಿಕ್ರಿಯಿಸಿದ್ದು, ಕಾಂಗ್ರೆಸ್ ಸರ್ಕಾರ ಎಲ್ಲೆಲ್ಲಿದೆ ಆ ಸರ್ಕಾರವನ್ನ ಅಸ್ಥಿರ ಗೊಳಿಸುವ ಷಡ್ಯಂತ್ರ ಬಿಜೆಪಿ ಸರ್ಕಾರ ಮಾಡುತ್ತಿದೆ ಎಂದು ಹೇಳಿದರು.   ಈ ಬಗ್ಗೆ ಮಾತನಾಡಿದ ಅವರು, ವಾಲ್ಮೀಕಿ ಹಗರಣದಲ್ಲಿ ಏನೂ ಪಾತ್ರವಿಲ್ಲದಿದ್ದರೂ ಏಕಾಏಕಿ ಬಂಧನ ಮಾಡಿ ಮೂರು ತಿಂಗಳಿಂದ ಇಡಿ ನನಗೆ ಸಾಕಷ್ಟು ಕಿರುಕುಳ ಕೊಟ್ಟಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ …

Read More »

ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನಕ್ಕೆ ಕೆ ಮರಿಗೌಡ ರಾಜೀನಾಮೆ

ಮುಡಾ ನಿವೇಶನ ಹಂಚಿಕೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಯ ವಿರುದ್ಧ 14 ಸೈಟುಗಳ ಹಂಚಿಕೆಯ ಹಗರಣ ಆರೋಪ ರಾಜ್ಯ ರಾಜಕೀಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ಈ ಮಧ್ಯೆ ಮುಡಾ ಹಗರಣ ಅಧ್ಯಕ್ಷ ಮರಿಗೌಡ ತಲೆದಂಡ ಮಾತು ಕೇಳಿಬಂದಿತ್ತು. ಇದೀಗ ಸಿಎಂ ಸೂಚನೆಯಂತೆ ಅಧ್ಯಕ್ಷ ಸ್ಥಾನಕ್ಕೆ ಮರಿಗೌಡ ಇಂದು ರಾಜೀನಾಮೆ ನೀಡಿದ್ದಾರೆ. ಬೆಂಗಳೂರು, ಅಕ್ಟೋಬರ್ 16: ಮುಡಾ ಪ್ರಕರಣದಿಂದ ಸರ್ಕಾರ ತೀವ್ರ ಮುಜುಗರಕ್ಕೆ ಸಿಲುಕಿದೆ. ಪ್ರಕರಣದ ತನಿಖೆ ಕೂಡ ತೀವ್ರಗೊಂಡಿದೆ. …

Read More »

ಮತ್ತೊಂದು ಹೃದಯವಿದ್ರಾವಕ ಘಟನೆ: ಚರಂಡಿಗೆ ಬಿದ್ದ ಕಂದಮ್ಮ.. ದಾರುಣ ಸಾವು

ವಿಜಯಪುರ: ಚರಂಡಿಗೆ ಬಿದ್ದು ಎರಡು ವರ್ಷದ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರದ ಬಡಿಕಮಾನ್ ರಸ್ತೆಯ ಬಳಿ ಈ ದುರಂತ ಸಂಭವಿಸಿದೆ. ಯಾಸಿನ್ ಸದ್ದಾಮ್ (2) ಮೃತ ಮಗು. ಭಾರಿ ಮಳೆ ಕಾರಣಕ್ಕೆ ಚರಂಡಿ ಮೇಲಿನ ಕಲ್ಲು ತೆಗೆಯಲಾಗಿತ್ತು. ಬಳಿಕ ಪಾಲಿಕೆಯವರು ಚರಂಡಿ ಮೇಲ್ಭಾಗವನ್ನು ಮುಚ್ಚಿರಲಿಲ್ಲ. ಮಗು ಚರಂಡಿ ಬಳಿ ಹೋಗಿ ಆಕಸ್ಮಿಕವಾಗಿ ಚಂಡಿಗೆ ಬಿದ್ದು ಸಾವನ್ನಪ್ಪಿದೆ. ದುರಂತಕ್ಕೆ ಪಾಲಿಕೆ ಅಧಿಕಾರಗಳ ನಿರ್ಲಕ್ಷ್ಯವೇ ಕಾರಣ ಎಂದು ಕುಟುಂಬದವರು ಕಣ್ಣೀರಿಟ್ಟಿದ್ದಾರೆ. …

Read More »

ವಿಮಾನ ನಿಲ್ದಾಣದಲ್ಲಿ ಸರ್ವರ್ ಸಮಸ್ಯೆ: ಪ್ರಯಾಣಿಕರ ಪರದಾಟ

ದೇವನಹಳ್ಳಿ: ಇಲ್ಲಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್‌ -1ರಲ್ಲಿ ಶನಿವಾರ ಮಧ್ಯಾಹ್ನ ಇಂಡಿಗೋ ಏರ್‌ಲೈನ್ಸ್‌ ಸಂಸ್ಥೆಯ ಸರ್ವರ್‌ ಸಮಸ್ಯೆಯಿಂದಾಗಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದ ಪ್ರಯಾಣಿಕರು ಪರದಾಡಿದರು. ದೇವನಹಳ್ಳಿ ವಿಮಾನ ನಿಲ್ದಾಣದಿಂದ ದೇಶದ ವಿವಿಧ ಭಾಗಗಳಿಗೆ ತೆರಳಲು ಆಗಮಿಸಿದ್ದ ಪ್ರಯಾಣಿಕರು ಬೋರ್ಡಿಂಗ್‌ ಪಾಸ್‌ ಪಡೆಯಲು ತಾಂತ್ರಿಕ ಸಮಸ್ಯೆ ಉಂಟಾಗಿದ್ದ ಪರಿಣಾಮ ಚೆಕ್‌ ಇನ್‌ ಆಗಲು ಆಗದೇ ಗಂಟೆಗಟ್ಟಲೇ ಸರತಿ ಸಾಲಿನಲ್ಲಿ ನಿಲ್ಲುವಂತಾಗಿತ್ತು.   ತಾಂತ್ರಿಕ ಸಮಸ್ಯೆಯಿಂದಾಗಿ ಕೆಲ ವಿಮಾನಗಳ ಹಾರಾಟದ …

Read More »

ಇನ್ನೂ ಬಾರದ ಕಿತ್ತೂರಿನ ಐತಿಹಾಸಿಕ ದಾಖಲೆಗಳು: ಇಚ್ಚಾಶಕ್ತಿ ತೋರದ ಜನಪ್ರತಿನಿಧಿಗಳು

 ಕಿತ್ತೂರು: ಕಿತ್ತೂರು ಉತ್ಸವ ಈಗ ದ್ವಿಶತಮಾನೋತ್ಸವ ಸಂಭ್ರಮದಲ್ಲಿದೆ. ಆದರೆ, ಕಿತ್ತೂರು ಸಂಸ್ಥಾನದ ನೈಜ ಇತಿಹಾಸದ ಬಗ್ಗೆ ಇಂದಿಗೂ ಸ್ಪಷ್ಟತೆ ಇಲ್ಲ. ಅದರ ಕುರಿತು ಅಧ್ಯಯನ ಕೈಗೊಳ್ಳಲು ಮಹಾರಾಷ್ಟ್ರದ ಮುಂಬೈ ಮತ್ತು ಪುಣೆಯ ಪತ್ರಾಗಾರ ಇಲಾಖೆಯಲ್ಲಿನ ಕೆಲವು ದಾಖಲೆಗಳನ್ನು ತರಲಾಗಿದೆ. ಆದರೆ, ಇನ್ನೂ ಅಧಿಕ ಪ್ರಮಾಣದಲ್ಲಿ ಅಲ್ಲಿರುವ ದಾಖಲೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ. ‘ಪ್ರತಿವರ್ಷ ಉತ್ಸವ ಬಂದಾಗ, ಈ ವಿಷಯ ಮುನ್ನೆಲೆಗೆ ಬರುತ್ತದೆ. ‘ಲಂಡನ್‌ ಮತ್ತು …

Read More »

ಉದ್ಯೋಗ ಖಾತರಿ ರಥಕ್ಕೆ ಚಾಲನೆ

ಹುಕ್ಕೇರಿ: ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲು ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ತಾಲ್ಲೂಕು ಪಂಚಾಯ್ತಿ ಇಒ ಟಿ.ಆರ್. ಮಲ್ಲಾಡದ ಚಾಲನೆ ನೀಡಿದರು. ಮಂಗಳವಾರ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನರೇಗಾ ಯೋಜನೆಯಡಿಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳನ್ನು ಬೆಳಯಲು ಈ ಯೋಜನಯಡಿಯಲ್ಲಿ ಅವಕಾಶವಿದೆ. ಗ್ರಾಮ ಪಂಚಾಯ್ತಿಗಳಿಂದ ವೈಯಕ್ತಿಕ ಕಾಮಗಾರಿ ಕೈಕೊಳ್ಳಲು …

Read More »

ಕೆಎಚ್‌ಡಿಸಿ ಅವ್ಯವಹಾರ ತನಿಖೆ ನಡೆಸಿ: ಶಿವಲಿಂಗ ಟಿರಕಿ

ಗೋಕಾಕ: ಹಿಂದಿನ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ (ಕೆಎಚ್‌ಡಿಸಿ)ದಲ್ಲಿ ನೂರಾರು ಕೋಟಿ ಅವ್ಯವಹಾರ ನಡೆದಿದ್ದು, ಇದರ ಸಂಪೂರ್ಣ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ ನೇಕಾರ ಸೇವಾ ಸಂಘದ ರಾಜ್ಯ ಅಧ್ಯಕ್ಷ ಶಿವಲಿಂಗ ಟಿರಕಿ ಆಗ್ರಹಿಸಿದರು. ನೇಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬನಹಟ್ಟಿಯಿಂದ ಹುಬ್ಬಳ್ಳಿವರೆಗೆ ಹಮ್ಮಿಕೊಂಡ ಸ್ವಾಭಿಮಾನಿ ನೇಕಾರರ ಪಾದಯಾತ್ರೆಯ ನೇತ್ರತ್ವ ವಹಿಸಿ, ಇಲ್ಲಿನ ತಹಶೀಲ್ದಾರ್‌ ಕಚೇರಿಗೆ ಸೋಮವಾರ ಮನವಿ …

Read More »

ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿ ಆರಂಭ

ಖಾನಾಪುರ: ಪಟ್ಟಣ ಹೊರವಲಯದ ಶಾಂತಿನಿಕೇತನ ಪಿಯು ಕಾಲೇಜಿನ ಆವರಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಮಂಗಳವಾರ ಆಯೋಜಿಸಿದ್ದ ಪದವಿ ಪೂರ್ವ ಕಾಲೇಜುಗಳ ರಾಜ್ಯಮಟ್ಟದ ಕುಸ್ತಿ ಪಂದ್ಯಾವಳಿಗೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಚಾಲನೆ ನೀಡಿದರು. ಆನಂತರ ಮಾತನಾಡಿದ ಅವರು, ‘ಈ ಭಾಗದ ಗ್ರಾಮೀಣ ಕ್ರೀಡೆಯಾದ ಕುಸ್ತಿಗೆ ಪ್ರೋತ್ಸಾಹ ನೀಡಲು ಬದ್ಧವಾಗಿದ್ದೇನೆ’ ಎಂದರು.   ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, ‘ಶಾಂತಿನಿಕೇತನ ಕಾಲೇಜು ಹಾಗೂ ತೋಪಿನಕಟ್ಟಿ …

Read More »