ಬೈಲಹೊಂಗಲ: ಉಪಹಾರದ ಕೈಚೀಲಕ್ಕಾಗಿ ಕೂಲಿ ಕಾರ್ಮಿಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಕಾರ್ಮಿಕನೊಬ್ಬನನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬುಡರಕಟ್ಟಿ ಗ್ರಾಮದ ರುದ್ರಪ್ಪ ಶಿವಬಸಪ್ಪ ಪಾಗಾದ(64) ಕೊಲೆಯಾದವರು. ಮಲ್ಲಪ್ಪ ಶಿವಶಂಕರ ಯರಗೊಪ್ಪ(42) ಕೊಲೆ ಆರೋಪಿ. ಮೃತ ರುದ್ರಪ್ಪ ತನ್ನ ಉಪಹಾರವಿದ್ದ ಕೈಚೀಲವನ್ನು ಗ್ರಾಮ ಪಂಚಾಯಿತಿ ಕಟ್ಟೆ ಮೇಲೆ ಇಟ್ಟು, ಇನ್ನೊಬ್ಬ ಕೂಲಿ ಕಾರ್ಮಿಕನನ್ನು ಕರೆತರಲು ಹೋಗಿದ್ದರು. ರುದ್ರಪ್ಪನ ಉಪಹಾರದ ಕೈಚೀಲವ ಆರೋಪಿ …
Read More »ಚಿಕ್ಕೋಡಿ: ನೀರಾವರಿ ಕಾಲುವೆಯಲ್ಲಿ ಹೂಳು ಭರ್ತಿ
ಚಿಕ್ಕೋಡಿ: ತಾಲ್ಲೂಕು ವ್ಯಾಪ್ತಿಯ ಕೊಟಬಾಗಿ ಏತ ನೀರಾವರಿಯ ಘಟಪ್ರಭಾ ಬಲದಂಡೆಯ 2ನೇ ಹಂತದ ವಿತರಣಾ ಕಾಲುವೆ, ಉಪ ಕಾಲುವೆಗಳಲ್ಲಿ ಹೂಳು ಭರ್ತಿಯಾಗಿ, ಗಿಡಗಂಟಿಗಳು ಬೆಳೆದಿವೆ. ಕೆಲವೊಂದು ಕಡೆಗೆ ಕಾಲುವೆಗೆ ಹಾಕಿದ ಸಿಮೆಂಟ್ ಕಿತ್ತು ಹೋಗಿದೆ. ಇನ್ನು ಕೆಲವು ಕಡೆಗೆ 10 ಅಡಿಯಷ್ಟು ಆಳದ ಕಾಲುವೆಯಲ್ಲಿ 8 ಅಡಿಯಷ್ಟು ಹೂಳು ತುಂಬಿದ್ದು, ನೀರಾವರಿ ಇಲಾಖೆಯ ನಿರ್ಲಕ್ಷ್ಯ ಹಿಡಿದ ಕೈಗನ್ನಡಿಯಾಗಿದೆ. ಕರ್ನಾಟಕ ನೀರಾವರಿ ನಿಗಮ ನಿಯಮಿತದಿಂದ ನಿರ್ವಹಣೆ ಆಗಬೇಕಿರುವ 17 ಕಿ.ಮೀ …
Read More »ಕಿತ್ತೂರಿನಲ್ಲಿ ಅತ್ಯಾಧುನಿಕ ‘ಥೀಮ್ ಪಾರ್ಕ್’
ಚನ್ನಮ್ಮನ ಕಿತ್ತೂರು: ಐತಿಹಾಸಿಕ ಚನ್ನಮ್ಮನ ಕಿತ್ತೂರಿನ ಕೋಟೆ ಆವರಣದಲ್ಲಿ ಕಿತ್ತೂರು ಸಂಸ್ಥಾನ, ರಾಣಿ ಚನ್ನಮ್ಮನ ಶೌರ್ಯ, ಸಾಹಸ, ಜೀವನ ಶೈಲಿ, ರಾಣಿ ಮತ್ತು ಸೇನಾನಿಗಳ ಹೋರಾಟದ ಕಥನವನ್ನು ಅತ್ಯಾಧುನಿಕ ತಂತ್ರಜ್ಞಾನದ ಮೂಲಕ ಬಿತ್ತರಿಸುವ ‘ಥೀಮ್ ಪಾರ್ಕ್’ ಶೀಘ್ರ ಅನುಷ್ಠಾನಗೊಳ್ಳಲಿದೆ. ಇದಕ್ಕಾಗಿ ಕೋಟೆ ಆವರಣದೊಳಗಿರುವ ಸುಮಾರು ಏಳು ಎಕರೆ ಪ್ರದೇಶವನ್ನು ಗುರುತಿಸಲಾಗಿದೆ. ‘ಈಗಿನ ಯುಗದ ಪೀಳಿಗೆ ಅರಿಯುವ ಹಾಗೆ ಆಧುನಿಕ ತಂತ್ರಜ್ಞಾನದ ಈ ‘ಥೀಮ್ ಪಾರ್ಕ್’ ಯೋಜನೆ ಜಾರಿ ದೇಶದಲ್ಲಿಯೇ ಪ್ರಥಮ ಎಂದು …
Read More »ಮಂಡ್ಯ ಸಾಹಿತ್ಯ ಸಮ್ಮೇಳನ: ‘ದಕ್ಷಿಣ’ದ ಸಮ್ಮೇಳನಕ್ಕೆ ‘ಉತ್ತರ’ದವರ ಕೂಗು
ಬೆಳಗಾವಿ: ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ಉತ್ತರ ಕರ್ನಾಟಕದವರನ್ನೇ ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಬೇಕೆಂಬ ಕೂಗು ಸಾಮಾಜಿಕ ಜಾಲತಾಣಗಳಲ್ಲಿ ಎದ್ದಿದೆ. ಈ ಭಾಗದ ಸಾಹಿತಿಗಳು, ಕವಿಗಳು, ಲೇಖಕರು ಜಾಲತಾಣಗಳಲ್ಲಿ ಈ ಬಗ್ಗೆ ತಮ್ಮ ಅಭಿಪ್ರಾಯ ಹಂಚಿಕೊಳ್ಳುತ್ತಿದ್ದು, ‘ಉತ್ತರ ಕರ್ನಾಟಕದವರಿಗೆ ಅವಕಾಶ ನೀಡಬೇಕು’ ಎಂದು ಗಟ್ಟಿಯಾಗಿ ಧ್ವನಿ ಎತ್ತಿದ್ದಾರೆ. ಕೆಲವರು ಇಂಥವರನ್ನೇ ಆಯ್ಕೆ ಮಾಡಬೇಕೆಂದು ತಿಳಿಸಿದ್ದಾರೆ. ಈ ಕುರಿತಾಗಿ ನಡೆಯುತ್ತಿರುವ ಚರ್ಚೆಯೂ ಕಾವೇರುತ್ತಿದೆ. ‘ಈವರೆಗೆ ನಡೆದಿರುವ ಅಖಿಲ ಭಾರತ …
Read More »ಜೈ ಶ್ರೀರಾಮ್’ ಘೋಷಣೆ ಕೂಗಿದರೆ ಧಾರ್ಮಿಕ ಭಾವನೆ ಕೆರಳದು
ಬೆಂಗಳೂರು: ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವುದು ಧಾರ್ಮಿಕ ಭಾವನೆಗಳನ್ನು ಕೆರಳಿಸುತ್ತದೆ’ ಎಂಬ ವಾದ ಅರ್ಥವಾಗುತ್ತಿಲ್ಲ ಎಂದು ಹೇಳಿರುವ ಹೈಕೋರ್ಟ್, ಮಸೀದಿಯಲ್ಲಿ ಜೈ ಶ್ರೀರಾಮ್ ಘೋಷಣೆ ಕೂಗಿ ಧಾರ್ಮಿಕ ಭಾವನೆಗಳನ್ನು ಕೆರಳಿಸಿದ ಆರೋಪದಲ್ಲಿ ಇಬ್ಬರು ಯುವಕರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ರದ್ದುಪಡಿಸಿದೆ. 2023ರ ಸೆ. 24ರಂದು ರಾತ್ರಿ ಸುಮಾರು 10.50ರ ವೇಳೆಗೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ದಾಳದ ಬದ್ರಿಯಾ ಜುಮ್ಮಾ ಮಸೀದಿಯ ಆವರಣ ಪ್ರವೇಶಿಸಿ ಜೈ …
Read More »ಡಿ.16 ರಿಂದ 27ರವರೆಗೆ ಚಳಿಗಾಲದ ಅಧಿವೇಶನ ನಡೆಸುವ ಚಿಂತನೆ?
ಬೆಂಗಳೂರು: ಬರುವ ಡಿಸೆಂಬರ್‌ನಲ್ಲಿ ನಡೆಯಬೇಕಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮತ್ತು ಕಾಂಗ್ರೆಸ್ ಅಧಿವೇಶನ ಹಾಗೂ ಚಳಿಗಾಲದ ಅಧಿವೇಶನಗಳ ದಿನಾಂಕಗಳು ಪರಸ್ಪರ ಒಂದಕ್ಕೊಂದು ಅಡ್ಡಿಯಾಗುವ ಸಾಧ್ಯತೆ ಇದ್ದು, ಚಳಿಗಾಲದ ಅಧಿವೇಶನದ ದಿನಾಂಕ ನಿಗದಿ ಈಗ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ರಾಜ್ಯದಲ್ಲಿ ಪ್ರಸ್ತುತ ಅಕ್ಟೋಬರ್-ನವೆಂಬರ್ ತಿಂಗಳಿಡೀ ಉಪಚುನಾವಣೆಯ ಕಾವು ಏರಲಿದ್ದು, ಡಿಸೆಂಬರ್ 20 ರಿಂದ 22 ರವರೆಗೆ ಮಂಡ್ಯದಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ಡಿ.26 ಮತ್ತು 27 …
Read More »ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡಿದರೆ ಉದ್ಯೋಗಾವಕಾಶ’
ಬೆಳಗಾವಿ: ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ತರಬೇತಿ ಪಡೆಯುವ ಮೂಲಕ ಕೌಶಲ್ಯಾಧಾರಿತ ಉದ್ಯೋಗಾವಕಾಶಗಳು ದೊರಕುವಂತೆ ಮಾಡಬಹುದು. ಈ ಸಂಬಂಧ ಜಿಲ್ಲೆಯ ದೊಡ್ಡ ಕೈಗಾರಿಕೆಗಳೊಂದಿಗೆ ಸಭೆ ನಡೆಸಿ ಬೇಡಿಕೆಗಳ ಪಟ್ಟಿ ರಚಿಸಬೇಕು. ಭವಿಷ್ಯದ ಕೌಶಲ್ಯಗಳಿಗೆ ಒತ್ತು ನೀಡುವ ಮೂಲಕ ಜಾಗತಿಕ ಉದ್ಯೋಗ ಮಾರುಕಟ್ಟೆಯಲ್ಲಿ ಹೆಚ್ಚಿನ ಉದ್ಯೋಗಗಳು ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗೆ ದೊರಕಲಿವೆ ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ| ಇ.ವಿ ರಮಣರೆಡ್ಡಿ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಕರ್ನಾಟಕ ಕೌಶಲ್ಯ …
Read More »ನಾನೂ ಸೀನಿಯರ್ ಲೀಡರ್, ರಾಜ್ಯಕ್ಕೆ ದಲಿತ ಸಿಎಂ ಪ್ರಸ್ತಾವ ಬಂದರೆ ಮುಂಚೂಣಿಯಲ್ಲಿರುವೆ
ಸಂಸತ್ತಿಗೆ ಕರ್ನಾಟಕ ಕಾಂಗ್ರೆಸ್‌ನಿಂದ ಗೆದ್ದ ಹಿರಿಯರ ಪೈಕಿ ಜಾಫರ್ ಶರೀಫ್, ಶಂಕರಾನಂದ ಅವರನ್ನು ಬಿಟ್ಟರೆ ಬಿಟ್ಟರೆ ನಾನೇ ಅತೀ ಹೆಚ್ಚು ಬಾರಿ ಗೆದ್ದವನು. ನನಗೆ ಹಿರಿತನ ಇದ್ದೇ ಇದೆ. ರಾಜ್ಯದ ಒಟ್ಟಾರೆ ಜನಸಂಖ್ಯೆಯ ಶೇ.25ರಷ್ಟು ಎಸ್‌ಸಿ, ಎಸ್‌ಟಿಗಳಿದ್ದರೂ ಹಿರಿಯರಾದ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಯಾರಿಗೂ ಈವರೆಗೆ “ದಲಿತ ಸಿಎಂ’ ಆಗುವ ಅವಕಾಶ ಸಿಕ್ಕಿಲ್ಲ. ಸುಮಾರು 25 ವರ್ಷಗಳಿಂದ ಈ ಕೂಗು ಇದೆ. ಇವಿಷ್ಟೂ ರಾಜ್ಯ ಕಾಂಗ್ರೆಸ್‌ನ ಹಿರಿಯ ಮುಖಂಡ, ಎಡಗೈ …
Read More »ಜೈಲಿನಿಂದ ಮೊಬೈಲ್ ಬಳಸಿ ಪತ್ನಿಗೆ ಬೆದರಿಕೆ ಹಾಕಿದ ಕೈದಿ!
ಶಿವಮೊಗ್ಗ:ಜೈಲಿನಲ್ಲಿ ಈಗಲೂ ಮೊಬೈಲ್ ಸಿಗುತ್ತದೆ ಎಂಬ ಆರೋಪಗಳಿಗೆ ಮತ್ತೊಂದು ಪ್ರಕರಣ ಪುಷ್ಠಿ ನೀಡಿದ್ದು, ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಿಂದ ತನ್ನ ಪತಿ ಕರೆ ಮಾಡಿ ಜೀವ ಬೆದರಿಕೆ ಒಡ್ಡುತ್ತಿದ್ದು ಹಣಕ್ಕೆ ಒತ್ತಾಯಿಸುತ್ತಿದ್ದಾನೆ ಎಂದು ಆರೋಪಿಸಿ ಮಹಿಳೆ ದೂರು ನೀಡಿದ್ದಾರೆ. ತುಂಗಾ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಚಿತ್ರದುರ್ಗ ಜೈಲಿನಿಂದ ಶಿವಮೊಗ್ಗ ಜಿಲ್ಲೆಗೆ ವರ್ಗಾವಣೆಯಾಗಿರುವ ಕೈದಿ ನಾಗರಾಜ ತನ್ನ ಪತ್ನಿಗೆ ಜೈಲಿನಿಂದಲೇ ಕರೆ ಮಾಡುತ್ತಿದ್ದಾನೆ ಎಂದು ಆರೋಪಿಸಲಾಗಿದೆ. 2024ರ ಮಾರ್ಚ್ ತಿಂಗಳಿಂದ ಹಲವು …
Read More »ಅ.20ರಂದು ಬ್ರಿಗೇಡ್ ಹೆಸರು ಘೋಷಣೆ
ಶಿವಮೊಗ್ಗ: ಹುಬ್ಬಳಿಯಲ್ಲಿ ನಡೆದ ಸಭೆಯ ತೀರ್ಮಾನದಂತೆ ಅ.20ರಂದು ಬಾಗಲಕೋಟೆಯಲ್ಲಿ ಉತ್ತರ ಕರ್ನಾಟಕದ ಪ್ರಮುಖ ಕಾರ್ಯಕರ್ತರ ಸಮಾವೇಶ ನಡೆಯಲಿದೆ. ಅಲ್ಲಿ ಬ್ರಿಗೇಡ್‌ಗೆ ನಾಮಕರಣ, ಮುಂದಿನ ಕಾರ್ಯಕ್ರಮಗಳ ಬಗ್ಗೆ ಘೋಷಣೆ ಮಾಡಲಾಗುವುದು ಎಂದು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಹಿಂದುಳಿದ ವರ್ಗ ದಲಿತ ವರ್ಗದ ಜತೆಗೆ ಎಲ್ಲಾ ಸಮುದಾಯದ ದೊಡ್ಡ ಸಂಘಟನೆ ಮಾಡಬೇಕು ಎಂದು ಅನೇಕ ಸಾಧು ಸಂತರ ಅಪೇಕ್ಷೆ ಇದೆ. ಇದಕ್ಕಾಗಿ ಹುಬ್ಬಳ್ಳಿಯಲ್ಲಿ ಒಂದು …
Read More »