Breaking News

ಗಂಡ ಬಿಟ್ಟಿ ಮಹಿಳೆಗೆ ಬಾಳು ಕೊಡ್ತೀನಿ ಎಂದು ಕಾರು ಚಾಲಕನಿಂದ ಮೋಸ

ಬೆಂಗಳೂರು, : ಗಂಡನನ್ನು ಬಿಟ್ಟು ಬಾಳು ಕಟ್ಟಿಕೊಂಡಿದ್ದ ಮಹಿಳೆಗೆ ಕಾರು ಚಾಲಕನೋರ್ವ ಬಾಳು ಕೊಡ್ತೀನಿ ಎಂದು ನಂಬಿಸಿ ಮೋಸ (Cheating) ಮಾಡಿರುವ ಘಟನೆ ಬೆಂಗಳೂರಿನಲ್ಲಿ (Bengaluru) ನಡೆಸಿದೆ. ಕ್ಯಾಬ್ ಚಾಲಕ ಪ್ರಜ್ವಲ್ ಎಂಬಾತ ವಿವಾಹಿತ ಮಹಿಳೆಗೆ ಬಾಳು ಕೊಡ್ತೀನಿ ಎಂದು ನಂಬಿಸಿ ಆಕೆಯ ಜೊತೆ ಕೆಲ ದಿನಗಳ ಕಾಲ ಒಟ್ಟಿಗೆ ಜೀವನ ನಡೆಸಿ ಆಕೆಯನ್ನು ಬಳಸಿಕೊಂಡು ಇದೀಗ ಬೋರಾದ್ಳು ಎಂದು ಬಿಟ್ಟು ಹೋಗಿದ್ದಾನೆ. ಘಟನೆ ಸಂಬಂಧ ಮಹಿಳೆ ಕೆಂಗೇರಿ ಪೊಲೀಸ್ ಠಾಣೆಯಲ್ಲಿ …

Read More »

ಯಶ್ ಕಾರಿನ ಸಂಖ್ಯೆ ವೈರಲ್ ಕರ್ನಾಟಕಕ್ಕೆ ನಾನೇ ನಂಬರ್ 1 ಬಾಸ್’ ಎಂಬ ರೀತಿಯಲ್ಲಿ ಆ ನಂಬರ್ ಪ್ಲೇಟ್

ಹೀರೋಗಳ ಕಾರು ಎಷ್ಟು ಗಮನ ಸೆಳೆಯುತ್ತದೆಯೋ ಅವರ ಕಾರಿನ ನಂಬರ್​ಪ್ಲೇಟ್ ಕೂಡ ಗಮನ ಸೆಳೆಯುತ್ತವೆ. ಈಗ ಯಶ್ ಅವರ ಕಾರಿನ ಸಂಖ್ಯೆ ವೈರಲ್ ಆಗುತ್ತಿದೆ. ‘ಕರ್ನಾಟಕಕ್ಕೆ ನಾನೇ ನಂಬರ್ 1 ಬಾಸ್’ ಎಂಬ ರೀತಿಯಲ್ಲಿ ಆ ನಂಬರ್ ಪ್ಲೇಟ್ ಇದೆ. ಈ ಮಾತನ್ನು ಅನೇಕರು ಒಪ್ಪಿದ್ದಾರೆ. ಸದ್ಯ ನಂಬರ್​ಪ್ಲೇಟ್ ವೈರಲ್ ಆಗುತ್ತಿದೆ. ಬಾಸ್ ಯಾರು ಎನ್ನುವ ಬಗ್ಗೆ ಚರ್ಚೆ ಮೊದಲಿನಿಂದಲೂ ಇದೆ. ದರ್ಶನ್ ಅಭಿಮಾನಿಗಳು ತಮ್ಮ ಹೀರೋ ಬಾಸ್ ಎನ್ನುತ್ತಾರೆ. …

Read More »

ಧಾರವಾಡ ಕೆಐಎಡಿಬಿ ಅಕ್ರಮ ಪ್ರಕರಣ; ಸಿಐಡಿ ತನಿಖೆ ಬೆನ್ನಲ್ಲೇ ಎಂಟ್ರಿ ಕೊಟ್ಟ ಇಡಿ

ಧಾರವಾಡ, : ಧಾರವಾಡ ಕೆಐಎಡಿಬಿ(KIADB) ಕಚೇರಿ ಅಂದರೆ ಅಲ್ಲಿ ಅಕ್ರಮಗಳದ್ದೇ ಪಾರುಪತ್ಯ. ಕಳೆದ ವರ್ಷ ಇಲಾಖೆಯ ವಿಶೇಷ ಭೂ ಸ್ವಾಧೀನ ಅಧಿಕಾರಿಯಾಗಿದ್ದ ವ್ಹಿ. ಡಿ. ಸಜ್ಜನ್ ತಮ್ಮ ನಿವೃತ್ತಿಯ ಕೊನೆಯ ದಿನವೇ 30 ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಿರುವುದು ಬೆಳಕಿಗೆ ‌ಬಂದಿತ್ತು. ಅದಕ್ಕೂ ಮುನ್ನ 20 ಕೋಟಿ ರೂ. ಡಬಲ್ ಪೇಮೆಂಟ್ ಹಗರಣವೂ ನಡೆದು, ಅದರಲ್ಲಿ ಸಜ್ಜನ್ ಮೊದಲನೇ ಆರೋಪಿ ಆಗಿ, ಜೈಲು ಕೂಡ ಕಂಡು ಬಂದಿದ್ದರು. ಡಬಲ್ …

Read More »

ಕಾರ್ಖಾನೆ ಆಡಳಿತ ಮಂಡಳಿಯಿಂದ ಮೃತ ಕಾರ್ಮಿಕ ಕುಟುಂಬಕ್ಕೆ 18 ಲಕ್ಷ ರೂ ಪರಿಹಾರ

ಬೆಳಗಾವಿ, ಆಗಸ್ಟ್​​ 09: ಕಾರ್ಖಾನೆಯಲ್ಲಿ ಅಗ್ನಿ ದುರಂತದಲ್ಲಿ (Fire Tragedy) ಮೃತಪಟ್ಟ ಕಾರ್ಮಿಕ ಯಲ್ಲಪ್ಪ ಕುಟುಂಬಕ್ಕೆ ಕಾರ್ಖಾನೆ ಆಡಳಿತ ಮಂಡಳಿಯಿಂದ ಒಟ್ಟು 18 ಲಕ್ಷ ರೂ. ಪರಿಹಾರ ನೀಡಲಾಗಿದೆ. ಆ.6ರಂದು ಜಿಲ್ಲೆಯ ನಾವಗೆ ಬಳಿಯ ಸ್ನೇಹಂ ಟೇಪಿಂಗ್ ಕಾರ್ಖಾನೆಯಲ್ಲಿ ನಡೆದಿದ್ದ ದುರ್ಘಟಯಲ್ಲಿ ಲಿಫ್ಟ್‌ನಲ್ಲಿ ಕಾರ್ಮಿಕ ಯಲ್ಲಪ್ಪ‌ ಗುಂಡ್ಯಾಗೋಳ ಸಜೀವದಹನವಾಗಿದ್ದ. ಸರ್ಕಾರ‌ ಹಾಗೂ ಜಿಲ್ಲಾಡಳಿತಕ್ಕೂ ಮೊದಲು ಕಾರ್ಖಾನೆ ಆಡಳಿತ ಮಂಡಳಿ 18 ಲಕ್ಷ ರೂ. ಪರಿಹಾರ ನೀಡಿದೆ. ಮುಂಚೆ 10 ಲಕ್ಷ ರೂ. ಪರಿಹಾರ ಬೇಡ …

Read More »

ಹಳ್ಳಹಿಡಿದ ಜಲ ಜೀವನ್​ ಯೋಜನೆ: ನೀರು ಬರುವ ಮೊದಲೇ ತುಕ್ಕು ಹಿಡಿದ ಪೈಪ್​ಗಳು

ಗದಗ, ಆಗಸ್ಟ್​ 09: ಕೇಂದ್ರ ಸರ್ಕಾರ ಪ್ರತಿ ಗ್ರಾಮಗಳ ಮನೆ ಮನೆಗೆ ಕುಡಿಯುವ ನೀರು (water) ಪೂರೈಕೆ ಮಾಡುವ ಉದ್ದೇಶದಿಂದ ಜಲ ಜೀವನ ಮಷಿನ್ ಯೋಜನೆ (Jal Jeevan Yojana) ಜಾರಿ ಮಾಡಿದೆ. ಇದು ಪ್ರಧಾನಿ ನರೇಂದ್ರ ಮೋದಿ ಅವ್ರ ಮಹತ್ವಾಕಾಂಕ್ಷಿ ಯೋಜನೆ. ಇದು ಗದಗ ಜಿಲ್ಲೆಯಲ್ಲಿ ಸಂಪೂರ್ಣ ಹಳ್ಳಹಿಡಿದಿದೆ. ರಾಜ್ಯದ ಪ್ರತಿಯೊಂದು ಮನೆಗೆ ಕುಡಿಯವ ನೀರು ಸಿಗಲಿ ಅಂತ ಕೇಂದ್ರ ಸರ್ಕಾರ ಕೋಟಿ ಕೋಟಿ ಅನುದಾನ ನೀಡಿದೆ. ಆದ್ರೆ, ಕಾಮಗಾರಿ ಮುಗಿದು ಮೂರ್ನಾಲ್ಕು ವರ್ಷಗಳು ಕಳೆದ್ರೂ …

Read More »

ಆಲಮಟ್ಟಿ ಡ್ಯಾಂ ಭರ್ತಿಗೆ ಕಲವೇ ಅಡಿ ಬಾಕಿ,

ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿದೆ ಕೊಯ್ನಾ ಜಲಾಶಯದಿಂದ ಅಪಾರ ಪ್ರಮಾಣದಲ್ಲಿ ನೀರು ಹೊರಬಿಡಲಾಗುತ್ತಿದೆ. ಇದರಿಂದ ಆಲಮಟ್ಟಿ ಜಲಾಶಯಾಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಹಾಗಾದರೆ ಆಲಮಟ್ಟಿ ಜಲಾಶಯದಲ್ಲಿ ಇಂದಿನ ನೀರಿನ ಮಟ್ಟ ಎಷ್ಟಿದೆ ಎಂಬ ಮಾಹಿತಿ ಇಲ್ಲಿದೆ.

Read More »

ಇಬ್ಬರ ಮನೆಯಲ್ಲಿ ಪ್ರೀತಿಗೆ ವಿರೋಧ ನೇಣು ಬಿಗಿದುಕೊಂಡು ಆತ್ಮಹತ್ಯೆ

ಬಾಗಲಕೋಟೆ : ಮನೆಯಲ್ಲಿ ಇಬ್ಬರ ಪ್ರೀತಿಗೆ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಮನನೊಂದು ಯುವಕ ಮತ್ತು ಯುವತಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಂದಗಾಂವ್ ಗ್ರಾಮದಲ್ಲಿ ನಡೆದಿದೆ.‌ ರಬಕವಿ – ಬನಹಟ್ಟಿ ತಾಲೂಕಿನ ನಂದಗಾಂವ ಗ್ರಾಮದ ಸಚಿನ್ ಭೀಮಪ್ಪ ದಳವಾಯಿ ( 22 ) ಹಾಗೂ ಪ್ರೀಯಾ ಮಲ್ಲಪ್ಪ ಮಡಿವಾಳ ( 19 ) ನಾಗರಪಂಚಮಿ ದಿನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಯುವಕ ಹಾಗೂ ಯುವತಿ …

Read More »

ಕೊಳಲು ವಾದಕ ವೇಣುಗೋಪಾಲ ಹೆಗಡೆ ನಿಧನ

ಧಾರವಾಡ: ಇಲ್ಲಿನ ರಾಧಾಕೃಷ್ಣನಗರ‌ ನಿವಾಸಿ, ಕೊಳಲು ವಾದಕ ವೇಣುಗೋಪಾಲ ಎಸ್‌.ಹೆಗಡೆ (41) ಬುಧವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ. ನಿತ್ಯಾನಂದ ಹಳದಿಪುರ ಅವರ ಶಿಷ್ಯರಾಗಿದ್ದ ವೇಣುಗೋಪಾಲ ಅವರು, ಕೊಳಲು ವಾದನದಲ್ಲಿ ಸಾಧನೆ ಮಾಡಿದ್ದರು. ಆಕಾಶವಾಣಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಮುಂಬೈನ ಐಟಿಸಿ ಸಂಶೋಧನಾ ಅಕಾಡೆಮಿಯ ಪ್ರಶಸ್ತಿ ಸಹಿತ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ.

Read More »

ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಇಒ ಶಿಂಧೆ ಭೇಟಿ

ಬೈಲಹೊಂಗಲ: ತಾಲ್ಲೂಕಿನ ಉಡಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್‌ ಶಿಂಧೆ  ಭೇಟಿ ನೀಡಿ, ಪರಿಶೀಲಿಸಿದರು. ‘ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಸಾಂಕ್ರಾಮಿಕ ಕಾಯಿಲೆಗಳು ಉದ್ಭವಿಸುತ್ತಿದ್ದು, ರೋಗಿಗಳ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೈಜೊಡಿಸಬೇಕು’ ಎಂದು ಸೂಚಿಸಿದರು. ಔಷಧಿ ಕೊಠಡಿ ನಿರ್ವಹಣೆ, ವಿತರಣೆ ಕುರಿತು ಮಾಹಿತಿ ಪಡೆದರು. ಕೆಂಗಾನೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಡಿಜಿಟಲ್‌ ಗ್ರಂಥಾಲಯ ವೀಕ್ಷಣೆ …

Read More »

ಸ್ವಾತಂತ್ರ್ಯ ದಿನ: ಪ್ರಧಾನಿಯೊಂದಿಗೆ ಭಾಗವಹಿಸಲು ವಿದ್ಯಾರ್ಥಿ ಸಾಗರ ಆಯ್ಕೆ

ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ 77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳ ಪೈಕಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ …

Read More »