ಧಾರವಾಡ: ಇಲ್ಲಿನ ರಾಧಾಕೃಷ್ಣನಗರ ನಿವಾಸಿ, ಕೊಳಲು ವಾದಕ ವೇಣುಗೋಪಾಲ ಎಸ್.ಹೆಗಡೆ (41) ಬುಧವಾರ ನಿಧನರಾದರು. ಅವರಿಗೆ ತಾಯಿ, ಪತ್ನಿ, ಪುತ್ರ ಇದ್ದಾರೆ. ನಿತ್ಯಾನಂದ ಹಳದಿಪುರ ಅವರ ಶಿಷ್ಯರಾಗಿದ್ದ ವೇಣುಗೋಪಾಲ ಅವರು, ಕೊಳಲು ವಾದನದಲ್ಲಿ ಸಾಧನೆ ಮಾಡಿದ್ದರು. ಆಕಾಶವಾಣಿ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಂಗೀತ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದರು. ಮುಂಬೈನ ಐಟಿಸಿ ಸಂಶೋಧನಾ ಅಕಾಡೆಮಿಯ ಪ್ರಶಸ್ತಿ ಸಹಿತ ಹಲವು ಪುರಸ್ಕಾರಗಳು ಅವರಿಗೆ ಸಂದಿವೆ.
Read More »ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಸಿಇಒ ಶಿಂಧೆ ಭೇಟಿ
ಬೈಲಹೊಂಗಲ: ತಾಲ್ಲೂಕಿನ ಉಡಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಡುವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ ಭೇಟಿ ನೀಡಿ, ಪರಿಶೀಲಿಸಿದರು. ‘ಗ್ರಾಮೀಣ ಪ್ರದೇಶಗಳಲ್ಲಿ ಹಲವಾರು ಸಾಂಕ್ರಾಮಿಕ ಕಾಯಿಲೆಗಳು ಉದ್ಭವಿಸುತ್ತಿದ್ದು, ರೋಗಿಗಳ ಆರೋಗ್ಯವಂತರನ್ನಾಗಿ ಮಾಡುವಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಕೈಜೊಡಿಸಬೇಕು’ ಎಂದು ಸೂಚಿಸಿದರು. ಔಷಧಿ ಕೊಠಡಿ ನಿರ್ವಹಣೆ, ವಿತರಣೆ ಕುರಿತು ಮಾಹಿತಿ ಪಡೆದರು. ಕೆಂಗಾನೂರ ಗ್ರಾಮ ಪಂಚಾಯಿತಿಗೆ ಭೇಟಿ ನೀಡಿ ಡಿಜಿಟಲ್ ಗ್ರಂಥಾಲಯ ವೀಕ್ಷಣೆ …
Read More »ಸ್ವಾತಂತ್ರ್ಯ ದಿನ: ಪ್ರಧಾನಿಯೊಂದಿಗೆ ಭಾಗವಹಿಸಲು ವಿದ್ಯಾರ್ಥಿ ಸಾಗರ ಆಯ್ಕೆ
ಚಿಕ್ಕೋಡಿ: ತಾಲ್ಲೂಕಿನ ಕೇರೂರ ಗ್ರಾಮದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ವಿದ್ಯಾರ್ಥಿ ಸಾಗರ ಮಲ್ಲಪ್ಪ ಬೆಕ್ಕೇರಿ 77ನೇ ಸ್ವಾತಂತ್ರ್ಯ ಮಹೋತ್ಸವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಅತಿಥಿಯಾಗಿ ಭಾಗವಹಿಸಲು ಆಯ್ಕೆಯಾಗಿದ್ದಾರೆ. ಇಡೀ ರಾಜ್ಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಯ್ಕೆಯಾದ 6 ಜನ ವಿದ್ಯಾರ್ಥಿಗಳ ಪೈಕಿ ಸಾಗರ ಬೆಕ್ಕೇರಿ ಅವರು ಒಬ್ಬರಾಗಿದ್ದಾರೆ. ಆಜಾದಿ ಕಾ ಅಮೃತ ಮಹೋತ್ಸವ …
Read More »ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದಮಂಗನ ಕಾಟ
ಕಾಗವಾಡ: ಪಟ್ಟಣದಲ್ಲಿ ಕಳೆದೆರಡು ದಿನಗಳಿಂದ ಮಂಗವೊಂದು ಸಾರ್ವನಿಕರಿಗೆ ವಿಪರೀತ ಕಾಟ ನೀಡುತ್ತಿದ್ದು, ಅದರ ಕಡಿತದಿಂದ ಹಲವರು ಗಾಯಗೊಂಡಿದ್ದಾರೆ. ಮಂಗನ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಹರಸಾಹಸಪಟ್ಟರೂ, ಫಲಕಾರಿಯಾಗಲಿಲ್ಲ. ಮಂಗನ ಕಾಟದಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆಯಾಗುತ್ತಿದ್ದು, ಕೂಡಲೇ ಅದನ್ನು ಸೆರೆಹಿಡಿಯಬೇಕೆಂದು ಸ್ಥಳೀಯರ ಆಗ್ರಹಿಸಿದರು. ರಾಯಬಾಗದಿಂದ ಮಂಗನ ಸೆರೆ ಹಿಡಿಯುವವರನ್ನು ಕರೆಸಲಾಗಿದ್ದು, ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಅಥಣಿ ಆರ್‌ಎಫ್‌ಒ ರಾಕೇಶ ಅರ್ಜುನವಾಡ ಹೇಳಿದರು.
Read More »ತರಕಾರಿ ಬೆಳೆಗಾರರಿಗೆ ಹೆಚ್ಚುವರಿ ಶುಲ್ಕ ಇಲ್ಲ: ತಹಶೀಲ್ದಾರ ಮಂಜುಳಾ
ಸಂಕೇಶ್ವರ: ಪಟ್ಟಣದ ದುರದುಂಡೀಶ್ವರ ಸಗಟು ಕಾಯಿಪಲ್ಲೆ ಮಾರುಕಟ್ಟೆಯಲ್ಲಿ ಮುಂದಿನ ಸಭೆಯವರೆಗೂ ಈಗಿರುವ ಸೇವಾ ಶುಲ್ಕವನ್ನು ರದ್ದು ಮಾಡಲಾಗಿದೆ ಎಂದು ತಹಶೀಲ್ದಾರ್ ಮಂಜುಳಾ ನಾಯಿಕ ಹೇಳಿದರು. ಪಟ್ಟಣದ ಸಗಟು ಕಾಯಿಪಲ್ಲೆ ಮಾರುಕಟ್ಟೆಯಲ್ಲಿ ಹಕ್ಕೋತ್ತಾಯಗಳನ್ನು ಈಡೇರಿಸುವಂತೆ ಆಗ್ರಹಿಸಿ ರೈತ ಮುಖಂಡರು ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ, ಮಾತನಾಡಿದ ಅವರು, ಕಾಯಿಪಲ್ಲೆ ಮಾರುಕಟ್ಟೆಯಿಂದ ಈ ಭಾಗದ ರೈತರಿಗೆ ಅನುಕೂಲವಾಗಿದ್ದು, ರೈತರು ಹಾಗೂ ಮಾರುಕಟ್ಟೆ ಸಮಿತಿಯೊಂದಿಗೆ ಶೀಘ್ರದಲ್ಲಿ ಸಭೆ ನಡೆಸಿ ಸಮಸ್ಯೆ ಬಗೆಹರಿಸಲಾಗುವುದು ಎಂದರು. …
Read More »ಜಮೀನಿಗೆ ಹಾನಿ: ಎಂಜಿನಿಯರ್ ಪರಿಶೀಲನೆ
ಹಿರೇಬಾಗೇವಾಡಿ: ಇಲ್ಲಿನ ಮಲ್ಲಪ್ಪನಗುಡ್ಡದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ನೂತನ ಕಟ್ಟಡಗಳು ನಿರ್ಮಾಣಗೊಳ್ಳುತ್ತಿರುವ ಸ್ಥಳಕ್ಕೆ ಆರೋಗ್ಯ ಮತ್ತು ಕುಟುಂಬ ಇಲಾಖೆಯ ಸಹಾಯಕ ಎಂಜಿನಿಯರ್ ಅರುಣ ಕುಮಾರ ಅವರು ಗುರುವಾರ ಭೇಟಿ ನೀಡಿ, ಪರಿಶೀಲಿಸಿದರು. ಕಟ್ಟಡ ಕಾಮಗಾರಿಯಿಂದ ಜಮೀನುಗಳಿಗೆ ನೀರು ನುಗ್ಗದಂತೆ ಕ್ರಮ ವಹಿಸಬೇಕೆಂದು ಆಗ್ರಹಿಸಿ ರೈತರು ಈಚೆಗೆ ಕುಲಪತಿಗೆ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಭೇಟಿ ನೀಡಿದ ಅರುಣ ಕುಮಾರ ಅವರು, ರಸ್ತೆ ನಿರ್ಮಾಣ, ಅಂತರ್ಜಲ, ಜಮೀನುಗಳಿಗೆ ಉಂಟಾಗುವ ಹಾನಿ ತಡೆ …
Read More »ಎನ್ಎಸ್ಎಫ್ ಕಚೇರಿಯಲ್ಲಿ ನಾಗಪ್ಪ ( ನಾಗ ದೇವತೆ) ನಿಗೆ ಹಾಲೇರೆದ ಶಾಸಕ ಬಾಲಚಂದ್ರ ಜಾರಕಿಹೊಳಿ
ಶ್ರಾವಣ ಮಾಸದಲ್ಲಿ ಆರಂಭವಾಗುವ ನಾಗರ ಪಂಚಮಿ ಎಲ್ಲ ಹಬ್ಬ-ಹರಿ ದಿನಗಳಿಗೆ ಮುನ್ನುಡಿ- ಬಾಲಚಂದ್ರ ಜಾರಕಿಹೊಳಿ ಗೋಕಾಕ- ಹೆಚ್ಚಾಗಿ ಹೆಣ್ಣು ಮಕ್ಕಳ ಹಬ್ಬವಾಗಿರುವ ನಾಗರ ಪಂಚಮಿ ಹಬ್ಬದ ಹಿಂದಿನ ದಿನ ಸಹೋದರಿಯರು ನಾಗ ದೇವತೆಗೆ ಪ್ರಾರ್ಥಿಸಿಕೊಂಡು ತಮ್ಮ ಸಹೋದರರಿಗೆ ರಕ್ಷಣೆ ಸಿಗಲೆಂದು ಹರಕೆ ಹೊರುವ ಪ್ರತೀತಿ ಇಂದಿಗೂ ಪ್ರಸ್ತುತವಿದೆ ಎಂದು ಅರಭಾವಿ ಶಾಸಕ, ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಹೇಳಿದರು. ಗುರುವಾರ ಸಂಜೆ ತಮ್ಮ ಗೃಹ ಕಚೇರಿಯಲ್ಲಿ ನಾಗರ ಪಂಚಮಿ ನಿಮಿತ್ತ …
Read More »ಬಾಕಿ ಹಣ ಬಿಡುಗಡೆಗೆ ಆಗ್ರಹಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ
ಕಲಬುರಗಿ: ಜಿಲ್ಲೆಯಲ್ಲಿರುವ ರೇಣುಕಾ ಶುಗರ್ಸ್ ಸಕ್ಕರೆ ಕಾರ್ಖಾನೆ ಹಾಗೂ ಕೆಪಿಆರ್ ಚಿಣಮಗೇರಾ ಸಕ್ಕರೆ ಕಾರ್ಖಾಬೆ ಸೇರಿದಂತೆ ವಿವಿಧ ಸಕ್ಕರೆ ಕಾರ್ಖಾನೆಗಳು ಬಾಕಿ ಉಳಿಸಿಕೊಂಡ ರೈತರ ಕಬ್ಬಿನ ಬಾಕಿ ಬಿಲ್ ಕೂಡಲೇ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಗುರುವಾರ ಜಿಲ್ಲಾಧಿಕಾರಿ ಕಚೇರಿ ಎದುರು ರಸ್ತೆ ಸಂಚಾರ ತಡೆದು ಪ್ರತಿಭಟನೆ ನಡೆಸಲಾಯಿತು. ನಗರದ ಸರ್ದಾರ್ ವಲ್ಲಭ್ ಭಾಯಿ ಪಟೇಲ್ ವೃತ್ತದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ …
Read More »ಮುಂದುವರಿದ ತನಿಖೆ, ಮಹತ್ವದ ಮಾಹಿತಿ ಪಡೆದ ಸಿಐಡಿ
ಯಾದಗಿರಿ: ನಗರ ಠಾಣೆ ಪಿಎಸ್‌ಐ ಪರಶುರಾಮ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಸಿಐಡಿ ತಂಡವು ನಗರದ ಡಿವೈಎಸ್‌ಪಿ ಕಚೇರಿಗೆ ಆಗಮಿಸಿ ಪರಶುರಾಮ್ ಅವರ ತಂದೆ ಜನಕಮುನಿ, ಸಹೋದರ ಹಣಮಂತ, ಮಾವ ವೆಂಕಟಸ್ವಾಮಿ ಅವರಿಂದ ಹೇಳಿಕೆ ಪಡೆಯಿತು. ನಂತರ ಪೊಲೀಸ್ ಇಲಾಖೆಯ ವಸತಿ ಗೃಹದಲ್ಲಿರುವ ಮೃತ ಪರಶುರಾಮ್ ಅವರ ಮನೆಗೆ ತೆರಳಿದರು. ಸ್ಥಳ ಮಹಜರು ನಡೆಸಿದರು. ಸ್ಥಳ ಮಹಜರು ನಡೆಸಿ ಮೃತ ಪಿಎಸ್‌ಐ ಪರಶುರಾಮ್ ಕುಟುಂಬಸ್ಥರಿಂದ ಸಿಐಡಿ ತಂಡ ಮಾಹಿತಿ ಪಡೆದರು. ಅಲ್ಲದೇ …
Read More »ಟ್ರ್ಯಾಕ್ಟರ್ ಟ್ರೈಲರ್ ಕಳ್ಳನ ಬಂಧನ: ನಾಲ್ಕು ಟ್ರ್ಯಾಕ್ಟರ್ ಟ್ರೈಲರ್ ವಶ
ಬೈಲಹೊಂಗಲ: ಟ್ರ್ಯಾಕ್ಟರ್ ಟ್ರೈಲರ್ ಕಳವು ಮಾಡಿ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿ ₹5 ಲಕ್ಷ ಮೌಲ್ಯದ ನಾಲ್ಕು ಟ್ರ್ಯಾಕ್ಟರ್ ಟ್ರೈಲರ್ ಮತ್ತು ಕೃತ್ಯಕ್ಕೆ ಬಳಸಿದ ಒಂದು ಟ್ರ್ಯಾಕ್ಟರ್ ಎಂಜಿನ್‌ನ್ನು ಗುರುವಾರ ಪೊಲೀಸರು ಜಪ್ತಿ ಪಡಿಸಿಕೊಂಡಿದ್ದಾರೆ. ಸವದತ್ತಿ ತಾಲ್ಲೂಕಿನ ಮರಕುಂಬಿ ಗ್ರಾಮದ ಅಡಿವೆಪ್ಪ ನಾಗಪ್ಪ ಕಳಸನ್ನವರ (34) ಬಂಧಿತ ಆರೋಪಿ. ಈತ ತಾಲ್ಲೂಕಿನ ಸಾಣಿಕೊಪ್ಪ ಗ್ರಾಮದ ಹದ್ದಿಯಲ್ಲಿ ಟ್ರ್ಯಾಕ್ಟರ್ ಟ್ರೈಲರ್ ಕಳುವು ಮಾಡಿದ್ದ. ಈ ಕುರಿತು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. …
Read More »