Breaking News

ಮಹಾರಾಷ್ಟ್ರದ ಗುಡ್ಡಾಪುರದಲ್ಲಿ ‘ಕರ್ನಾಟಕ ಭವನ’ ಲೋಕಾರ್ಪಣೆ

ಗುಡ್ಡಾಪುರ (ಮಹಾರಾಷ್ಟ್ರ): ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಗುಡ್ಡಾಪುರದಲ್ಲಿ ಕರ್ನಾಟಕ ಸರ್ಕಾರದ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯಿಂದ ₹10.96 ಕೋಟಿ ಅನುದಾನದಲ್ಲಿ ನಿರ್ಮಿಸಲಾಗಿರುವ ‘ಕರ್ನಾಟಕ ಭವನ’ವನ್ನು ಗುರುವಾರ ಲೋಕಾರ್ಪಣೆ ಮಾಡಲಾಯಿತು. ‘ಕರ್ನಾಟಕ ಭವನ’ ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವೆ ಶಶಿಕಲಾ ಜೊಲ್ಲೆ, 12ನೇ ಶತಮಾನದಲ್ಲೇ ಬಸವಣ್ಣ ಮಹಿಳೆಯರಿಗೆ ಆದ್ಯತೆ ನೀಡಿದ್ದರು. ‌ಅಕ್ಕಮಹಾದೇವಿ, ದಾನಮ್ಮ ದೇವಿ ಅವರಲ್ಲಿ ಮುಖ್ಯರಾಗಿದ್ದಾರೆ. ದಾನಮ್ಮ ದೇವಿ …

Read More »

ಕರ್ಮ, ಅಕರ್ಮ, ವಿಕರ್ಮದ ಅರಿವಿರಲಿ: ಮೋಹನ್‌ ಭಾಗವತ್‌

ಬೆಳಗಾವಿ: ‘ಕರ್ಮ, ಅಕರ್ಮ ಮತ್ತು ವಿಕರ್ಮದ ಬಗ್ಗೆ ನಾವು ಸದಾ ಜಾಗೃತರಾಗಬೇಕು. ಯಾವ ಕರ್ಮ ಮಾಡಬೇಕು ಎಂಬುದನ್ನು ಮೊದಲು ತಿಳಿದುಕೊಳ್ಳಬೇಕು’ ಎಂದು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್‌ ಭಾಗವತ್‌ ಹೇಳಿದರು. ಇಲ್ಲಿನ ಅಕಾಡೆಮಿ ಆಫ್‌ ಕಂಪೇರೆಟಿವ್‌ ಫಿಲಾಸಫಿ ಆಯಂಡ್‌ ರಿಲೀಜನ್‌ (ಎಸಿಪಿಆರ್‌)ನ ಶತಮಾನೋತ್ಸವಕ್ಕೆ ಚಾಲನೆ ಹಾಗೂ ಗುರುದೇವ ರಾನಡೆ ರಚಿಸಿದ ಪುಸ್ತಕಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಬದುಕಿನಲ್ಲಿ ಪ್ರತಿಯೊಬ್ಬರಿಗೂ ಜ್ಞಾನ ಮತ್ತು ಭಕ್ತಿ ಅಗತ್ಯ. ರಾಮ ಮತ್ತು ರಾವಣ ಇಬ್ಬರಿಗೂ …

Read More »

ಬೆಳಗಾವಿ | ಬೋಟ್‌ ಪಲ್ಟಿ: ತಪ್ಪಿದ ಅನಾಹುತ

ಬೆಳಗಾವಿ: ರಾಯಬಾಗ ತಾಲ್ಲೂಕಿನ ಕುಡಚಿ ಪಟ್ಟಣದ ಬಳಿ ಗುರುವಾರ, ಎನ್‌ಡಿಆರ್‌ಎಫ್‌ ತಂಡ ಬೋಟ್‌ ಕೃಷ್ಣಾ ನದಿ ಸೆಳವಿಗೆ ಸಿಕ್ಕು ಪಲ್ಟಿಯಾಯಿತು. ಎಲ್ಲ ಸಿಬ್ಬಂದಿ ಲೈಫ್‌ ಜಾಕೆಟ್‌ ಧರಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾದರು. ಇಲ್ಲಿರುವ ಜಾಕ್ವೆಲ್‌ ಕೃಷ್ಣಾ ನದಿ ನೀರಿನಲ್ಲಿ ಮುಳುಗಿದೆ. ಇದರಿಂದ ಪಟ್ಟಣಕ್ಕೆ ನೀರು ಸರಬರಾಜು ಸ್ಥಗಿತಗೊಂಡಿದೆ. ಈ ಜ್ವಾಕ್ವೆಲ್‌ ದುರಸ್ತಿಗೆ ವಾಟರ್ ಮ್ಯಾನ್, ಲೈನ್ ಮ್ಯಾನ್ ಹಾಗೂ ಎನ್‌ಡಿಆರ್‌ಎಫ್‌ ತಂಡದವರು ಬೋಟ್‌ ಮೂಲಕ ತೆರಳಿದ್ದರು. ನೀರಿನ ರಭಸಕ್ಕೆ ಬೋಟ್‌ ನಿಯಂತ್ರಣ …

Read More »

ಪ್ಯಾರಿಸ್‌ ಒಲಿಂಪಕ್ಸ್‌ನಲ್ಲಿ ಕಂಚು ಗೆದ್ದ ಸ್ವಪ್ನಿಲ್‌ ಹುಟ್ಟೂರಲ್ಲಿ ಸಂಭ್ರಮ

ನಿಪ್ಪಾಣಿ: ತಾಲ್ಲೂಕಿನ ಗಡಿಗೆ ಹೊಂದಿಕೊಂಡಿರುವ ಮಹಾರಾಷ್ಟ್ರದ ಕಾಂಬಳವಾಡಿ ಗ್ರಾಮದ ಸ್ವಪ್ನಿಲ್‌ ಕುಸಾಳೆ ಅವರು ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ 50 ಮೀಟರ್‌ ರೈಫಲ್‌-3 ಪೋಜಿಶನ್‌ನಲ್ಲಿ ಕಂಚಿನ ಪದಕ ಗೆದ್ದ ಹಿನ್ನೆಲೆಯಲ್ಲಿ ಸಂಭ್ರಮ ಮೂಡಿದೆ. ಕೊಲ್ಹಾಪುರ ಜಿಲ್ಲೆಯ ರಾಧಾನಗರಿ ತಾಲ್ಲೂಕಿನ ಚಿಕ್ಕ ಹಳ್ಳಿಯಲ್ಲಿ ಹುಟ್ಟಿ ಬೆಳೆದ ಸ್ವಪ್ನಿಲ್‌ ಅವರು ಊರಿಗೆ ವಿಶ್ವ ಮಟ್ಟದಲ್ಲಿ ಕೀರ್ತಿ ತಂದಿದ್ದಾರೆ. ‘ಪ್ರಜಾವಾಣಿ’ ಜತೆಗೆ ಸಂತಸ ಹಂಚಿಕೊಂಡ ಸ್ವಪ್ನಿಲ್‌ ಅವರ ತಂದೆ, ಶಿಕ್ಷಕ ಸುರೇಶ ಕುಸಾಳೆ, ‘ನಾಸಿಕ್‌ನ ಭೋಸ್ಲಾ ಸೈನಿಕ …

Read More »

ಬಂತು ನೋಡಿ ‘BSNL 5 G ಸಿಮ್’ ; ಅನ್ ಬಾಕ್ಸಿಂಗ್ ವಿಡಿಯೋ ವೈರಲ್

ಜಿಯೋ ಹಾಗೂ ಏರ್ ಟೆಲ್ ಗೆ ಟಕ್ಕರ್ ನೀಡಲು ಭಾರತ್ ಸಂಚಾರ್ ನಿಗಮ್ ಲಿಮಿಟೆಡ್ (ಬಿಎಸ್‌ಎನ್‌ಎಲ್) ಮುನ್ನುಗ್ಗುತ್ತಿದೆ.ಮುಂಬರುವ ವರ್ಷಗಳಲ್ಲಿ ರಾಷ್ಟ್ರವ್ಯಾಪಿ 5 ಜ ವಿಸ್ತರಿಸಲು ಬಿಎಸ್ ಎನ್ ಸಜ್ಜಾಗಿದೆ. ಇದರ ನಡುವೆ 5 ಜಿ ಸಿಮ್ ಅನ್ ಬಾಕ್ಸಿಂಗ್ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.   ವರದಿಯ ಪ್ರಕಾರ, ದೇಶೀಯ ಟೆಲಿಕಾಂ ಕಂಪನಿಗಳ ಗುಂಪು ಬಿಎಸ್‌ಎನ್‌ಎಲ್ ಇನ್ಫ್ರಾವನ್ನು ಬಳಸಿಕೊಂಡು ಸಾರ್ವಜನಿಕ ಬಳಕೆಗಾಗಿ 5 ಜಿ ಪ್ರಯೋಗಗಳನ್ನು ನೀಡಲು ಸಿದ್ಧವಾಗಿದೆ. …

Read More »

BJP-JDS’ ಪಾದಯಾತ್ರೆಗೆ ಸರ್ಕಾರದಿಂದ ಅನುಮತಿ:ಗೃಹ ಸಚಿವ

ಬೆಂಗಳೂರು : ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮುಡಾ ಹಗರಣ ಸಂಬಂಧ ಹಮ್ಮಿಕೊಂಡಿರುವ ಪಾದಯಾತ್ರೆಗೆ ಅನುಮತಿ ನೀಡಲು ಕೊನೆಗೂ ಕರ್ನಾಟಕ ಕಾಂಗ್ರೆಸ್ ಸರ್ಕಾರ ನಿರ್ಧರಿಸಿದೆ. ಹೌದು ಈ ಮೊದಲು ಯಾವುದೇ ಕಾರಣಕ್ಕೂ ಪಾದಯಾತ್ರೆಗೆ ಅನುಮತಿ ನೀಡಲ್ಲ ಎಂದಿದ್ದ ಗೃಹ ಸಚಿವರು ಇದೀಗ ಉಲ್ಟಾ ಹೊಡೆದಿದ್ದಾರೆ. ಬಿಜೆಪಿ ಜೆಡಿಎಸ್ ಪಾದಯಾತ್ರೆಗೆ ಅನುಮತಿ ನೀಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸರ್ಕಾರ ಇದೀಗ ಯೂಟರ್ನ್ ಹೊಡೆದಿದೆ.ಈ ಕುರಿತು ಗೃಹ ಸಚಿವ ಪರಮೇಶ್ವರ್ ಬೆಂಗಳೂರಿನಲ್ಲಿ …

Read More »

ಉಕ್ಕಿ ಹರಿಯುತ್ತಿರುವ ತುಂಗಭದ್ರಾ: ವಿಠಲಾಪುರದಲ್ಲಿ 16 ಮನೆಗಳು ಜಲಾವೃತ, ಕಾಳಜಿ ಕೇಂದ್ರ ಆರಂಭ

ಗದಗ: ತುಂಗಭದ್ರಾ ನದಿಯ ಪ್ರವಾಹದಿಂದ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮಕ್ಕೆ ನೀರು ನುಗ್ಗಿದ್ದು, ತಗ್ಗು ಪ್ರದೇಶದಲ್ಲಿರುವ 16 ಮನೆಗಳು ಜಲಾವೃತಗೊಂಡಿವೆ. ವಿಠಲಾಪುರ ಗ್ರಾಮದ 40 ಜನರನ್ನು ಸ್ಥಳೀಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಸ್ಥಳಾಂತರಿಸಿ ಕಾಳಜಿ ಕೇಂದ್ರವನ್ನು ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಅವರು ತಿಳಿಸಿದ್ದಾರೆ.

Read More »

108 ಆಂಬುಲೆನ್ಸ್ ಸಿಬ್ಬಂದಿಗಳ ಬೇಜವಾಬ್ದಾರಿತನ! ಮಾನವಿಯತೆ ಮೆರೆದ ಕಂದಾಯ ಇಲಾಖೆ ಅಧಿಕಾರಿ

ತೀರ್ಥಹಳ್ಳಿ : ಜೀವ ಉಳಿಸಲು ವೈದ್ಯರು ಎಷ್ಟು ಮುಖ್ಯವೋ ನಮ್ಮನ್ನು ಆಸ್ಪತ್ರೆಗೆ ಕರೆದೊಯ್ಯಲು ಇರುವ ಆಂಬುಲೆನ್ಸ್ ವಾಹನ ಕೂಡ ಅಷ್ಟೇ ಮುಖ್ಯ. ಆದರೆ ಬೆಂಗಳೂರು 108 ಸಿಬ್ಬಂದಿಗಳ ಬೇಜವಾಬ್ದಾರಿತನಕ್ಕೆ ಆಕ್ರೋಶ ವ್ಯಕ್ತವಾದ ಘಟನೆ ಗುರುವಾರ(ಆ.01) ಸಂಜೆ ನಡೆದಿದೆ. ಪುಷ್ಯ ಮಳೆ ಅಬ್ಬರಕ್ಕೆ ತಾಲೂಕಿನಾದ್ಯಂತ ಅತೀ ಹೆಚ್ಚು ಮಳೆಯಾಗುತ್ತಿರುವುದರಿಂದ ಪ್ರವಾಹ ಬಂದ ಹಿನ್ನಲೆಯಲ್ಲಿ ಕುರುವಳ್ಳಿಯ ಜಯಚಾಮರಾಜೇಂದ್ರ ತುಂಗಾ ಸೇತುವೆ ಪಕ್ಕ ವಾಸಿಸುವ ಟೆಂಟ್ ತುಂಗಾ ಕಾಲೋನಿ ನಿವಾಸಿಗಳನ್ನು ಪಟ್ಟಣದ ಕೆ ಟಿ ಕೆ …

Read More »

ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ

ರೈಲಿಗೆ ತಲೆಕೊಟ್ಟು ಅಣ್ಣ ತಂಗಿ ಆತ್ಮಹತ್ಯೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದಲ್ಲಿ ರೈಲ್ವೆ ಹಳಿಗೆ ಅಣ್ಣ ತಂಗಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ (ಆ.02)ಬೆಳಗ್ಗೆ ನಡೆದಿದೆ. ಶಿಡ್ಲಘಟ್ಟ ಟೌನ್ ನ ಪ್ರೇಮನಗರದ ನಿವಾಸಿಗಳಾದ ಶಿಲ್ಪ ಅಲಿಯಾಸ್ ನವ್ಯ (23) ಹಾಗೂ ಪ್ರಭು (20) ಎನ್ನಲಾಗಿದ್ದು ಬಲಜಿಗ ಜನಾಂಗದವರು ಎನ್ನಲಾಗಿದ್ದು, ಬೆಂಗಳೂರಿನಿಂದ ಚಿಕ್ಕಬಳ್ಳಾಪುರ, ಶಿಡ್ಲಘಟ್ಟ ಮಾರ್ಗವಾಗಿ ಕೋಲಾರಕ್ಕೆ ತೆರಳುವ ರೈಲಿಗೆ ರಾತ್ರಿ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುತ್ತಾರೆ. ಈ ಬಗ್ಗೆ ಪೊಲೀಸ್ …

Read More »

ಮಾಂಸಾಹಾರಸೇವನೆ ಮಾಡಿದ್ದ ಒಂದೇ ಕುಟುಂಬದ ನಾಲ್ವರ ಸಾವು

ರಾಯಚೂರು: ವಿಷಾಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ದುರ್ಮರಣಕ್ಕೀಡಾದ ಘಟನೆ ಸಿರವಾರ ತಾಲ್ಲೂಕಿನ ಕಲ್ಲೂರು ಗ್ರಾಮದಲ್ಲಿ ಶುಕ್ರವಾರ(ಆ.02) ನಡೆದಿದೆ. ಗ್ರಾಮದ ನಿವಾಸಿಗಳಾದ ಭೀಮಣ್ಣ ಬಾಗ್ಲಿ (70), ಈರಮ್ಮ ಬಾಗ್ಲಿ (62), ಮಲ್ಲೇಶ (21), ಪಾರ್ವತಿ(19) ಎಂದು ಗುರುತಿಸಲಾಗಿದೆ. ಇನ್ನೊಬ್ಬ ಯುವತಿ ಮಲ್ಲಮ್ಮ ಸ್ಥಿತಿಯೂ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬುಧವಾರ ಮನೆಯಲ್ಲಿ ಕುಟುಂದ ಎಲ್ಲ ಸದಸ್ಯರು ಮಾಂಸಾಹಾರ ಸೇವನೆ ಮಾಡಿದ್ದಾರೆ. ಆರೋಗ್ಯದ ಮೇಲೆ ಪರಿಣಾಮ ಬೀರಿದ ಹಿನ್ನೆಲೆಯಲ್ಲಿ ಸಂಬಂಧಿಗಳು ರಾಯಚೂರು …

Read More »