Breaking News

ಉತ್ತರ ಕರ್ನಾಟಕ ಭಾಗದ ಪ್ರಮುಖ ರೈಲು ಯೋಜನೆಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು ಎಂದು ಕೇಂದ್ರ ಸಚಿವರು ತಿಳಿಸಿದ್ದಾರೆ.

ಹುಬ್ಬಳ್ಳಿ(ಧಾರವಾಡ): ಹುಬ್ಬಳ್ಳಿ ರೈಲು ನಿಲ್ದಾಣವನ್ನು ಮೇಲ್ದರ್ಜೆಗೇರಿಸಲಾಗುವುದು. ಅದರ ಜೊತೆಗೆ ಉತ್ತರ ಕರ್ನಾಟಕ ಭಾಗದ ಪ್ರಮುಖ ರೈಲು ಯೋಜನೆಗಳಾದ ಹುಬ್ಬಳ್ಳಿ-ಅಂಕೋಲಾ, ಧಾರವಾಡ-ಬೆಳಗಾವಿ, ಗದಗ-ಯಲವಗಿ ಸೇರಿದಂತೆ ಎಲ್ಲ ಯೋಜನೆಗಳನ್ನು ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು” ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದರು. ನಗರದ ರೈಲ್ವೆ ಸೌಧದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಹುಬ್ಬಳ್ಳಿ ರೈಲ್ವೆ ನಿಲ್ದಾಣ ಅಪಗ್ರೇಡ್​​ ಮಾಡಲು ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ರೈಲ್ವೆ ಬೋರ್ಡ್​ಗೆ ಪ್ರಸ್ತಾವನೆ ಕಳುಹಿಸಿಕೊಡಲಾಗುವುದು. ಹುಬ್ಬಳ್ಳಿ – ಅಂಕೋಲಾ …

Read More »

ಬೆಳಗಾವಿಯಲ್ಲಿ ಕಲ್ಲು ತೂರಾಟ ಘಟನೆಗೆ ರಾಜ್ಯ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ: ಬಸವರಾಜ ಬೊಮ್ಮಾಯಿ

ಹಾವೇರಿ: ಬೆಳಗಾವಿಯಲ್ಲಿ ಕಲ್ಲು ತೂರಾಟ ಘಟನೆಗೆ ರಾಜ್ಯ ಪೊಲೀಸ್ ಇಲಾಖೆಯ ವೈಫಲ್ಯ ಕಾರಣ ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಅರಾಜಕತೆ, ಹಿಂಸೆ ಮಾಡಬೇಕು ಅನ್ನೋದು ಒಂದು ವರ್ಗದ ಹುನ್ನಾರ. ಅದಕ್ಕೆ ಕೆಲವು ಶಕ್ತಿಗಳು ಬೆಂಬಲ ನೀಡುತ್ತಿದ್ದಾರೆ ಎಂದು ದೂರಿದರು. ಉತ್ತರಪ್ರದೇಶ ರಾಜ್ಯದಲ್ಲಿ ಈ ರೀತಿ ಇತ್ತು. ದಾವಣಗೆರೆ ಘಟನೆ ನಡೆದ ನಂತರ ಕರ್ನಾಟಕದಲ್ಲಿ ನಿಯಂತ್ರಣ ಮಾಡಬೇಕು ಅನ್ನೋ …

Read More »

ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿದೆ: ಸಿಎಂ

ಬೆಳಗಾವಿ: ”ಎನ್​ಡಿಆರ್​ಎಫ್​ ಅನುದಾನವನ್ನು ನಾವು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿಲ್ಲ. ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿಕೊಂಡಿದೆ. ಗ್ಯಾರಂಟಿ ಯೋಜನೆಗಳು ಕರ್ನಾಟಕದಲ್ಲಿ ಯಶಸ್ವಿ ಆಗಿದ್ದರಿಂದ ಬಿಜೆಪಿಯವರಿಗೆ ತಳಮಳ ಶುರುವಾಗಿದೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು. ಪ್ರತಿಪಕ್ಷದ ನಾಯಕ ಆರ್.ಅಶೋಕ್​ ಆರೋಪಕ್ಕೆ ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸಿಎಂ ಉತ್ತರಿಸಿದ್ದಾರೆ. ”ಹರಿಯಾಣ, ದೆಹಲಿ, ರಾಜಸ್ಥಾನ, ಮಹಾರಾಷ್ಟ್ರ ರಾಜ್ಯಗಳಲ್ಲಿ ಬಿಜೆಪಿಯವರು ನಮ್ಮ ಗ್ಯಾರಂಟಿ ಯೋಜನೆಗಳನ್ನು ಅನುಕರಣೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ …

Read More »

ಕಾರ್ಯಕರ್ತರಿಗೆ ಇಂದು ಸಂಜೆ ‘ಕಾಂತಾರ’ ಪ್ರದರ್ಶನ: ಇಡೀ ಥಿಯೇಟರ್​ ಬುಕ್​ ಮಾಡಿದ ಪ್ರತಾಪ್ ಸಿಂಹ

ಮೈಸೂರು: ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ – ನಿರ್ದೇಶಕ ರಿಷಬ್​ ಶೆಟ್ಟಿ ನಟಿಸಿ, ನಿರ್ದೇಶಿಸಿರುವ ‘ಕಾಂತಾರ ಚಾಪ್ಟರ್​ 1’ ಗುರುವಾರದಂದು ವಿಶ್ವಾದ್ಯಂತ ಅದ್ಧೂರಿಯಾಗಿ ಬಹುಭಾಷೆಗಳಲ್ಲಿ ಬಿಡುಗಡೆ ಆಗಿದೆ. ಎಲ್ಲೆಡೆ ಸಿನಿಮಾ ಸದ್ದು ಜೋರಾಗಿದ್ದು, ಮಾಜಿ ಸಂಸದ ಯಶಸ್ವಿ ಸಿನಿಮಾ ವೀಕ್ಷಿಸಲು ಪ್ರೇಕ್ಷಕರನ್ನು ಆಹ್ವಾನಿಸಿದ್ದಾರೆ. ಕಾಂತಾರ ಚಾಪ್ಟರ್​ 1 ವೀಕ್ಷಿಸಲು ಟಿಕೆಟ್ ಬುಕ್ ಮಾಡಿರುವ ಮಾಜಿ ಸಂಸದ ಪ್ರತಾಪ್ ಸಿಂಹ, ಪಕ್ಷದ ಕಾರ್ಯಕರ್ತರನ್ನು ಡಿಆರ್‌ಸಿಗೆ ಆಹ್ವಾನಿಸಿದ್ದಾರೆ. ಇಂದು ಸಂಜೆಯ 4 ಗಂಟೆಯ ಶೋಗೆ …

Read More »

ಬೆಳಗಾವಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು.

ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆ ಆವರಣದಲ್ಲಿ ನಿರ್ಮಿತವಾದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ನೂತನ ಕಟ್ಟಡ ಹಾಗೂ ಅತ್ಯಾಧುನಿಕ ತಂತ್ರಜ್ಞಾನ ಉಪಕರಣಗಳನ್ನು, ಜೊತೆಗೆ ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಡಿ ನಿರ್ಮಿಸಲಾದ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ನಗರ ಸಾರಿಗೆ ಬಸ್ ನಿಲ್ದಾಣವನ್ನು ಇಂದು ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯ ಅವರೊಂದಿಗೆ ಸಚಿವ ಸತೀಶ್ ಜಾರಕಿಹೊಳಿ ಅವರು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ, ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ ಹಿರೇಬಾಗೇವಾಡಿ ಹೊಸ ಆವರಣದಲ್ಲಿ …

Read More »

ಗೋಕಾಕ ತಾಲೂಕಿನ ಕಪರಟ್ಟಿಯಲ್ಲಿ ಮನಕಲುಕುವ ಘಟನೆ: ತ್ರಿಬಲ್ ಶಾಕ್

ಗೋಕಾಕ: ತಮ್ಮನ ಸಾವಿನ ಸುದ್ದಿ ಕೇಳಿ ಅಣ್ಣನು ಸಹಿತ ಹೃದಯಾಘಾತದಿಂದ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಗೋಕಾಕ ತಾಲೂಕಿನ ಕಪರಟ್ಟಿ ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ಬೆಳಿಗ್ಗೆ ನಸುಕಿನ ಜಾವ ಸುಮಾರು 4 ಘಂಟೆಗೆ ಅನಾರೋಗ್ಯದಿಂದ 10 ನೇ ತರಗತಿಯಲ್ಲಿ ಓದುತ್ತಿದ್ದ ಸತೀಶ್ ಬಾಗನ್ನವರ (16) ಮೃತಪಟ್ಟಿದ್ದರು. ಈತನ ಆರೋಗ್ಯದಲ್ಲಿ ಏರುಪೇರು ಉಂಟಾಗಿ ಬದುಕುಳಿಯುವುದಿಲ್ಲ ಎಂದು ಇವನ ಅಣ್ಣ ಬಸವರಾಜ ಬಾಗನ್ನವರ (24) ಗೆ ತಿಳಿದಾಗ, ಇತನು ಸಹಿತ ಕುಸಿದು …

Read More »

ಪಟ್ಟಾಲೀಜ್ ಹೆಸರಿನಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಸಾಗಿಸುತ್ತಿರುವ ಮರಳು

ರಾಮದುರ್ಗ : ಪಟ್ಟಾಲೀಜ್ ಹೆಸರಿನಲ್ಲಿ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಮರಳು ಸಾಗಿಸುತ್ತಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆಯುತ್ತಿದೆ. ಸುಭಾಷ ಬೆಳವಲ ಎಂಬುವವರ ಹೆಸರಿನಲ್ಲಿ ಲೀಜ್ ಆಗಿದೆ ಎಂದು ತಿಳಿದು ಬಂದಿದೆ. ಆದರೆ ಈ ಲೀಜ್ ಆಗಿ ಐದು ವರ್ಷ ಕಳೆಯುತ್ತ ಬಂದಿದ್ದು, ಮಳೆಗಾಳ ಹಾಗೂ ಬೇಸಿಗೆಯಲ್ಲಿ ಮರಳು ಸಿಗದೆ ಇದ್ದ ಸಂಧರ್ಭದಲ್ಲಿ ಈ ಸುಭಾಷ ಅವರು ಆಡಿದ್ದೆ ಆಟ, ಮಾಡಿದ್ದೇ …

Read More »

ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ.

ಅಕ್ಟೋಬರ್ 4: ಬ್ರ್ಯಾಂಡ್ ಬೆಂಗಳೂರಿನ ಬನ್ನೇರುಘಟ್ಟ ರಸ್ತೆ ಈಗ ಹರಿಯುವ ನದಿಯಂತಾಗಿದೆ. ಧಾರಾಕಾರವಾಗಿ ಸುರಿದ ಮಳೆಯಿಂದ ಇಡೀ ರಸ್ತೆ ಜಲಾವೃತವಾಗಿ ವಾಹನಗಳ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಆಸ್ಪತ್ರೆಗಳು, ಟೆಕ್ ಪಾರ್ಕ್‌ಗಳು ಮತ್ತು ಮಾಲ್‌ಗಳೊಂದಿಗೆ ನಗರ ಬೆಳವಣಿಗೆಯ ಸಂಕೇತವೆಂದು ಬಿಂಬಿಸಲ್ಪಡುವ ಬನ್ನೇರುಘಟ್ಟ ರಸ್ತೆಯನ್ನು ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ. ಇಷ್ಟು ಹದಗೆಟ್ಟ ಸ್ಥಿತಿ ನಿರ್ಮಾಣವಾಗಿದ್ದರೂ ಅಧಿಕಾರಿಗಳಿಗೆ ಇದರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದಾಗಿದೆ ಎಂದು ಕರ್ನಾಟಕ ಪೋರ್ಟ್​ಫೋಲಿಯೋ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ. ವೀಡಿಯೋ ಇಲ್ಲಿದೆ.

Read More »

ದಸರಾ ದೀಪಾಲಂಕಾರದ ಅಂದ ಕಣ್ತುಂಬಿಕೊಂಡ ಸಿಎಂ: ಅಂಬಾರಿ ಬಸ್ಸಿನಲ್ಲಿ ನಗರ ಪ್ರದಕ್ಷಿಣೆ ಹಾಕಿದ ಸಿದ್ದರಾಮಯ್ಯ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಗರದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್)ದ ವತಿಯಿಂದ ಮಾಡಲಾಗಿರುವ ವಿದ್ಯುತ್ ದೀಪಾಲಂಕಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ರಾತ್ರಿ ವೀಕ್ಷಿಸಿ ಸಂತಸ ವ್ಯಕ್ತಪಡಿಸಿದರು. ಅಂಬಾರಿ ಬಸ್ಸಿನಲ್ಲಿ ನಗರ ಪ್ರದಕ್ಷಿಣೆ ಹಾಕಿದ ಸಿಎಂ ಸಿದ್ದರಾಮಯ್ಯ ನಗರದ ಪ್ರಮುಖ ಭಾಗಗಳಲ್ಲಿ ಸಂಚರಿಸುವ ಮೂಲಕ ದಸರಾ ವಿದ್ಯುತ್ ದೀಪಾಲಂಕಾರ ವೀಕ್ಷಿಸಿ, ದೀಪಾಲಂಕಾರದ ಅದ್ಭುತ ಆಕರ್ಷಣೆಗೆ ಮನಸೋತರು.ನಗರದ ರಾಮಸ್ವಾಮಿ ವೃತ್ತದಿಂದ ಆರಂಭವಾದ ಮುಖ್ಯಮಂತ್ರಿಗಳ ದೀಪಾಲಂಕಾರ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

  ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹೂಲೀಕೇರಿ ತಾಂಡಾ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »