ಬೆಂಗಳೂರು: ಈ ಹಿಂದೆ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಕಾಲದಲ್ಲಿ 4 ಶೂಟೌಟ್ ಆಗಿತ್ತು. ಮೂರು ಜನ ಮತೃಪಟ್ಟಿದ್ದರು. 2011 ರಿಂದ 2026ರ ವರೆಗೆ 300 ಕ್ಕೂ ಹೆಚ್ಚು ಪ್ರಕರಣಗಳು ಚಾಮರಾಜನಗರ ವಿಭಾಗದಲ್ಲೇ ಆಗಿವೆ. ಸುಮಾರು 66 ಬಾರಿ ಶೂಟೌಟ್ ಪ್ರಕರಣಗಳು ಆಗಿವೆ. ಈ ರೀತಿ ಪದೇ ಪದೇ ಆಗ್ತಾ ಇರುತ್ತೆ ಎಂದು ಅರಣ್ಯ ಸಚಿವ ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದರು. ಬೆಂಗಳೂರಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚಾ.ನಗರದಲ್ಲಿ ಕಳ್ಳಬೇಟೆ …
Read More »ಶೂಟೌಟ್ ಕೇಸ್: ಮರಣೋತ್ತರ ಪರೀಕ್ಷೆ ವೇಳೆ ಇಬ್ಬರು ಮೃತರ ಬಳಿ ಪ್ರೈಮರ್ ಪತ್ತೆ – ಪ್ರಾಣಿಗಳ ಬೇಟೆಗೆ ಬಂದಿದ್ದಕ್ಕೆ ಸಾಕ್ಷ್ಯ!
ಚಾಮರಾಜನಗರ: ಕಾವೇರಿ ವನ್ಯಧಾಮದಲ್ಲಿ ಮೂವರ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಡಿಗೆ ಹೋಗಿದ್ದು ಬೇಟೆಗಾರರ ಅಥವಾ ರೈತರ ಎಂಬ ಚರ್ಚೆ ನಡೆಯುತ್ತಿದೆ. ಈ ನಡುವೆ ಮರಣೋತ್ತರ ಪರೀಕ್ಷೆ ವೇಳೆ ಮೃತರ ಒಳ ಉಡುಪಿನಲ್ಲಿ ಪ್ರೈಮರ್ ಪತ್ತೆಯಾಗಿದ್ದು, ಬೇಟೆಗಾರರು ಅನ್ನೋದು ಮುನ್ನೆಲೆಗೆ ಬಂದಿದೆ. ಜೊತೆಗೆ ಒಟ್ಟು ನಾಲ್ವರ ಪೊಲೀಸ್ ತಂಡ ಪ್ರಕರಣದ ತನಿಖೆ ಚುರುಕುಗೊಳಿಸಿದೆ. ಹನೂರು ತಾಲೂಕಿನ ಕಾವೇರಿ ವನ್ಯಧಾಮದಲ್ಲಿ ನಡೆದ ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಂಡೇಟಿಗೆ ಬಲಿಯಾದ ಅಂಥೋಣಿಸಾಮಿ, ಜಾನ್ ಪೀಟರ್ …
Read More »ಮುಂದಿನ ದಿನಗಳಲ್ಲಿ ಪಿಯು ವಿದ್ಯಾರ್ಥಿಗಳಿಗೂ ಉಚಿತ ನೋಟ್‌ಬುಕ್ – ಮಧು ಬಂಗಾರಪ್ಪ
ಶಿವಮೊಗ್ಗ: ಬಜೆಟ್‌ನಲ್ಲಿ ಪ್ರಕಟಿಸಿದಂತೆಯೇ ಪ್ರಸ್ತುತ ಶೈಕ್ಷಣಿಕ ಸಾಲಿನಿಂದ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪಠ್ಯ ಪುಸ್ತಕ ವಿತರಿಸಲಾಗಿದೆ. ಮುಂದಿನ ದಿನಗಳಲ್ಲಿ ನೋಟ್‌ಬುಕ್‌ಗಳನ್ನು ಕೂಡ ಉಚಿತವಾಗಿ ವಿತರಿಸುವ ಉದ್ದೇಶವಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ನಗರದ ಸೈನ್ಸ್ ಮೈದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ ನಂತರ ಸರ್ಕಾರಿ ಪದವಿ ಪೂರ್ವ ಕಾಲೇಜಿನ `ಕಲಾಂ …
Read More »IAS ಅಧಿಕಾರಿ ಐಟಿ, ಇಡಿ ಭಯದಿಂದ ಎಸ್ಕೇಪ್ ಆಗಿಲ್ಲ, ತಂದೆ ನೋಡೋಕೆ ಹೋಗಿದ್ದಾರೆ: ಪ್ರಿಯಾಂಕ್ ಖರ್ಗೆ
ಬೆಂಗಳೂರು: ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ಆಗಿಲ್ಲ. ಅವರ ತಂದೆಗೆ ಅನಾರೋಗ್ಯದ ಹಿನ್ನಲೆ ನೋಡಲು ಊರಿಗೆ ಹೋಗಿದ್ದಾರೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ ನೀಡಿದ್ದಾರೆ. ಪಶುವೈದ್ಯಧಾರಿ ಪರೀಕ್ಷೆ ಅಕ್ರಮ ಸಂಬಂಧ ಕೆಪಿಎಸ್‌ಸಿ ಕಚೇರಿ, ಸೇರಿದಂತೆ ಹಲವು ಕಡೆಗಳಲ್ಲಿ ಇ.ಡಿ. ಅಧಿಕಾರಿಗಳು ದಾಳಿ ನಡೆಸಿದ ನಂತರ ಪರೀಕ್ಷೆ ಕಂಟ್ರೋಲರ್ ಆಗಿ ಕೆಲಸ ಮಾಡಿದ್ದ ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆಯಾಗಿದ್ದಾರೆ ಅನ್ನೋ ಆರೋಪ ಕೇಳಿ ಬಂದಿತ್ತು. ಏರ್ …
Read More »30 ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಡಿಸಿ ನೋಡಿಲ್ಲ – ಕೆ.ಎಸ್ ಲತಾಕುಮಾರಿ ವಿರುದ್ಧ ಹೆಚ್.ಡಿ.ರೇವಣ್ಣ ಕೆಂಡಾಮಂಡಲ
ಹಾಸನ: ಜಿಲ್ಲಾಧಿಕಾರಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೋ ಇಲ್ಲವೊ ಗೊತ್ತಿಲ್ಲ. ನನ್ನ ಮೂವತ್ತು ವರ್ಷದ ರಾಜಕೀಯ ಜೀವನದಲ್ಲಿ ಇಂತಹ ಡಿಸಿ ನೋಡಿಲ್ಲ ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ವಿರುದ್ಧ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಕೆಂಡಾಮಂಡಲರಾಗಿದ್ದಾರೆ. ಹಾಸನದಲ್ಲಿ ಜೆಡಿಎಸ್ ಶಾಸಕರಾದ ಎ.ಮಂಜು, ಹೆಚ್.ಪಿ.ಸ್ವರೂಪ್‌ಪ್ರಕಾಶ್ ಜೊತೆ ಜಂಟಿ ಸುದ್ದಿಗೋಷ್ಠಿ ನಡೆಸಿದ ಅವರು ಡಿಸಿ ವಿರುದ್ಧ ಹರಿಹಾಯ್ದರು. ಅದು ಎಲ್ಲಿಂದ ಹಿಡಿದುಕೊಂಡು ಬಂದಿದ್ದಾರೋ ಈ ಡಿಸಿನಾ? ನಮ್ಮ ಮತದಾರರು ಹೆಚ್ಚು ಇರುವ ಕಡೆ ಗ್ರಾ.ಪಂ.ಚುನಾವಣೆಗೆ ಮೀಸಲಾತಿ …
Read More »ಬೆಂಗಳೂರಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ಹಣ ಸೀಜ್
ಬೆಂಗಳೂರು: ಅಕ್ರಮವಾಗಿ ಸಾಗಿಸುತ್ತಿದ್ದ 9 ಕೋಟಿ ರೂ. ಹಣ ಹಾಗೂ ವಾಹನವನ್ನು ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹಣ ಸಾಗಾಟದ ಬಗ್ಗೆ ಆದಾಯ ತೆರಿಗೆ ಅಧಿಕಾರಿಗಳು ಪೊಲೀಸರಿಗೆ ಖಚಿತ ಮಾಹಿತಿ ನೀಡಿದ್ದರು. ಎಲೆಕ್ಟ್ರಾನಿಕ್ ಸಿಟಿಯ ವೀರಸಂದ್ರ ಸಿಗ್ನಲ್ ಬಳಿ ವಾಹನವನ್ನು ಪೊಲೀಸರು ಅಡ್ಡಗಟ್ಟಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದೆ. ತಮಿಳುನಾಡಿನ ತೂತುಕುಡಿಯ ಸಿಂಧೂ ಜ್ಯೂವೆಲರ್ಸ್ ಮಾಲೀಕ ಸಚಿನ್ ಎಂಬಾತನಿಗೆ ಸೇರಿದ ಹಣ ಎನ್ನಲಾಗಿದೆ. ಕಾರಿನಲ್ಲಿ ಸಾಗಾಟ ಮಾಡುತ್ತಿದ್ದಾಗ ಖಚಿತ …
Read More »ನಟ, ನಿರ್ದೇಶಕ ಓಂಪ್ರಕಾಶ್ ರಾವ್ ವಿರುದ್ಧ 3.85 ಕೋಟಿ ವಂಚನೆ ಆರೋಪ – ದೂರು ದಾಖಲು
ಬೆಂಗಳೂರು: ಖ್ಯಾತ ನಿರ್ದೇಶಕ ಹಾಗೂ ನಟ ಓಂಪ್ರಕಾಶ್ ರಾವ್ ವಿರುದ್ಧ ವಂಚನೆ, ಕಿರುಕುಳ ಹಾಗೂ ಬೆದರಿಕೆ ಆರೋಪದಡಿ ದೂರು ದಾಖಲಾಗಿದೆ. ʻಫೀನಿಕ್ಸ್’ ಸಿನಿಮಾ ನಿರ್ಮಾಣಕ್ಕಾಗಿ ಹಂತ ಹಂತವಾಗಿ ಒಟ್ಟು 3 ಕೋಟಿ 85 ಲಕ್ಷ ಹಣ ಪಡೆದು, ಹಣ ವಾಪಸ್ ನೀಡದೇ ವಂಚಿಸಿದ್ದಾರೆ ಎಂದು ದೂರುದಾರರು ಆರೋಪಿಸಿದ್ದಾರೆ. ವಾಸುದೇವರೆಡ್ಡಿ, ಭಾಸ್ಕರ್ ಶೆಟ್ಟಿ, ವಸಂತಮ್ಮ ಹಾಗೂ ಜಯಲಕ್ಷ್ಮಿ ಎಂಬುವರು ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಅನ್ವಯ, ʻಫೀನಿಕ್ಸ್’ ಸಿನಿಮಾ ನಿರ್ಮಾಣದ …
Read More »500 ಕೆಪಿಎಸ್ ಶಾಲೆಗಳ ಅಭಿವೃದ್ಧಿಗೆ 1,750 ಕೋಟಿ ನೆರವು – ಎಡಿಬಿ ಜೊತೆ ಒಪ್ಪಂದಕ್ಕೆ ಸಿಎಂ ಡಿಕೆಶಿ ಸಹಿ
ಬೆಂಗಳೂರು: ಕರ್ನಾಟಕದ 500 ಕರ್ನಾಟಕ ಪಬ್ಲಿಕ್ ಸ್ಕೂಲ್‌ಗಳ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರವು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಸಹಯೋಗದೊಂದಿಗೆ 1,750 ಕೋಟಿ ರೂ. ಮೊತ್ತದ ಮಹತ್ವಾಕಾಂಕ್ಷಿ ಯೋಜನೆಯ ಒಪ್ಪಂದಕ್ಕೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ವಿಧಾನಸೌಧದಲ್ಲಿ ಶುಕ್ರವಾರ ಸಹಿ ಹಾಕಿದರು. ಈ ವೇಳೆ ಡಿಸಿಎಂ ಡಾ. ಜಿ. ಪರಮೇಶ್ವರ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಮಧು ಬಂಗಾರಪ್ಪ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಶ್ಮಿ …
Read More »ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್ ಕೊಟ್ಟು ವಿಪಕ್ಷ ಚರ್ಚೆ ಮಾಡಲಿ: ಡಿಕೆಶಿ
ಬೆಂಗಳೂರು: ವಿಧಾನ ಪರಿಷತ್ ಕಲಾಪ 5ನೇ ದಿನವೂ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಕಲಾಪ ಬಲಿಯಾಯ್ತು. ವಿಪಕ್ಷಗಳು ಹೋರಾಟ ಮುಂದುವರೆಸಿದ್ರು. ಈ ವೇಳೆ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ನಾಗೇಂದ್ರ ರಾಜೀನಾಮೆ ಬಗ್ಗೆ ನೋಟಿಸ್ ಕೊಟ್ಟು ವಿಪಕ್ಷ ಚರ್ಚೆ ಮಾಡಲಿ ಎಂದಿದ್ದಾರೆ. ಕಲಾಪ ಪ್ರಾರಂಭ ಆದ ಕೂಡಲೇ ಸಭಾಪತಿಗಳು ಪ್ರಶ್ನೋತ್ತರ ಕಲಾಪ, ಬರ ಸೇರಿ ವಿವಿಧ ವಿಷಯಗಳ ಬಗ್ಗೆ ಚರ್ಚೆ ಆಗಬೇಕು ಅವಕಾಶ ಕೊಡಿ ಅಂತ ಮನವಿ ಮಾಡಿದ್ರು. ಇದಕ್ಕೂ …
Read More »28 ಜೀವಾವಧಿ ಶಿಕ್ಷಾ ಬಂಧಿಗಳ ಅವಧಿ ಪೂರ್ವ ಬಿಡುಗಡೆಗೆ ಸಂಪುಟ ಅಸ್ತು
ಬೆಂಗಳೂರು: ರಾಜ್ಯದ ವಿವಿಧ ಕೇಂದ್ರ ಕಾರಾಗೃಹಗಳಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸನ್ನಡತೆ ಹೊಂದಿರುವ ಅರ್ಹ ಬಂಧಿಗಳ ಪೈಕಿ 28 ಮಂದಿಯನ್ನ ಅವಧಿಪೂರ್ವ ಬಿಡುಗಡೆ ಮಾಡಲು ಇಂದು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಒಟ್ಟು 45 ಪ್ರಕರಣಗಳ ಪೈಕಿ 28 ಜೀವಾವಧಿ ಶಿಕ್ಷಾ ಬಂಧಿಗಳನ್ನು ಸನ್ನಡತೆ ಆಧಾರದ ಮೇಲೆ ಅವಧಿ ಪೂರ್ವ ಬಿಡುಗಡೆ ಮಾಡಲು ಸಚಿವ ಸಂಪುಟ ಅನುಮೋದನೆ ನೀಡಿದೆ. ಇನ್ನೊಂದು ಪ್ರಕರಣವನ್ನು ಕೇಂದ್ರ ಗೃಹ ಸಚಿವಾಲಯದ ಸಹಮತಿ ಪಡೆದು …
Read More »
Laxmi News 24×7