Breaking News

ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌

ಪಾರದರ್ಶಕ ತನಿಖೆಗಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಸಂಸದ ಗದ್ದಿಗೌಡರ್‌ ರಬಕವಿ-ಬನಹಟ್ಟಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಳಷ್ಟು ನುರಿತ, ಅನುಭವಿ ರಾಜಕಾರಣಿಯಾಗಿದ್ದು, ಹಿಂದಿನ ಪರಂಪರೆ ಅವಲೋಕಿಸಿದಾಗ ಇಂತಹ ತೀರ್ಮಾನ ಬಂದ ಸಂದರ್ಭದಲ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿ ನಿಷ್ಪಕ್ಷಪಾತ ಮತ್ತು ಪಾರದರ್ಶಕ ತನಿಖೆಗೆ ಅವಕಾಶ ನೀಡಬೇಕು ಎಂದು ಬಾಗಲಕೋಟೆ ಸಂಸದ ಪಿ.ಸಿ.ಗದ್ದಿಗೌಡರ್‌ ಹೇಳಿದರು.   ಮಂಗಳವಾರ ಬನಹಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರುದ್ಧವಿದೆ ಎಂದು ಹೇಳಿದ್ದು ಸರಿಯಲ್ಲ. ಅವರ ಆಡಳಿತದಲ್ಲಿ ಹಲವು …

Read More »

MUDA: ಸಿದ್ದರಾಮಯ್ಯ ಬೆನ್ನಿಗೆ ನಿಂತ ರಾಜ್ಯ ಕಾಂಗ್ರೆಸ್‌ ಪಡೆ, ವರದಿ ಕೇಳಿದ ಹೈಕಮಾಂಡ್‌!

ಬೆಂಗಳೂರು: ಹೈಕೋರ್ಟ್‌ ತೀರ್ಪು ಹೊರಬಿದ್ದದ್ದೇ ತಡ. ವಿಪಕ್ಷ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಸಿಎಂ ರಾಜೀನಾಮೆಗೆ ಆಗ್ರಹಿಸಿದ್ದು, ಕಾಂಗ್ರೆಸ್‌ ಶಾಸಕರು, ಸಚಿವರು ಮಾತ್ರ ಸಿಎಂ ಬೆನ್ನಿಗೆ ಇದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ. ಸಿಎಂ ರಾಜೀನಾಮೆ ಕೊಡುವ ಅಗತ್ಯವಿಲ್ಲ. ರಾಜೀನಾಮೆ ಕೇಳುವ ನೈತಿಕತೆಯೂ ಪ್ರತಿಪಕ್ಷಗಳಿ ಗಿಲ್ಲ ಎಂದು ತಿರುಗೇಟು ನೀಡಿದ್ದಾರೆ. ತೀರ್ಪು ಹೊರಬೀಳುತ್ತಿದ್ದಂತೆ ಒಬ್ಬೊಬ್ಬರಾಗಿಯೇ ಸಿಎಂ ನಿವಾಸದತ್ತ ದೌಡಾಯಿಸಿದ ಶಾಸಕ, ಸಚಿವರು ಸಿದ್ದರಾಮಯ್ಯ ಪರವಾಗಿ ತಾವೆಲ್ಲ ಇದ್ದೇವೆ ಎಂಬ ಸಂದೇಶ ನೀಡುವ ಪ್ರಯತ್ನ …

Read More »

ಮುಖ್ಯಮಂತ್ರಿ ಬದಲಾವಣೆ ಕೂಗಿಗೆ ಮತ್ತೆ ರೆಕ್ಕೆಪುಕ್ಕ

ಬೆಂಗಳೂರು: ಮುಖ್ಯ ಮಂತ್ರಿ ವಿರುದ್ಧ ತನಿಖೆಗೆ ಹೈಕೋರ್ಟ್‌ ಅನುಮತಿ ನೀಡಿದ ಬೆನ್ನಲ್ಲೇ “ಸಿಎಂ ಬದಲಾವಣೆ’ ಕೂಗಿಗೆ ಈಗ ರೆಕ್ಕೆಪುಕ್ಕಗಳು ಬಂದಿದ್ದು, ಆಕಾಂಕ್ಷಿಗಳು ಈ ನಿಟ್ಟಿನಲ್ಲಿ ರಾಜಕೀಯ ತಂತ್ರಗಾರಿಕೆಗಳು ಹೆಣೆಯಲು ಆರಂಭಿಸಿದ್ದಾರೆ. ಜಮ್ಮು-ಕಾಶ್ಮೀರ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಹರಿಯಾಣ ಮತ್ತು ಮಹಾರಾಷ್ಟ್ರ ಚುನಾವಣೆ ಹೊಸ್ತಿಲಲ್ಲಿದೆ. ಅಷ್ಟೇ ಅಲ್ಲ, ಚನ್ನಪಟ್ಟಣ ಸೇರಿ ರಾಜ್ಯದಲ್ಲಿ 3 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಬೇಕಿದೆ. ರಾಷ್ಟ್ರ ಮಟ್ಟದಲ್ಲಿ ಪಕ್ಷ ಕೂಡ ಬಲಗೊಳ್ಳುತ್ತಿದೆ. ಇಂತಹ ಸಂದರ್ಭದಲ್ಲಿ ಸಿದ್ದರಾಮಯ್ಯ ವಿರುದ್ಧದ ತನಿಖೆ …

Read More »

14 ಜಿಲ್ಲಾಸ್ಪತ್ರೆಗಳಲ್ಲಿ ಸ್ಕ್ಯಾನ್ ಸೇವೆ ಸ್ಥಗಿತ

ವಿಜಯಪುರ: ರಾಜ್ಯ ಸರಕಾರ ಕಳೆದ 6 ತಿಂಗಳುಗಳ ಬಿಲ್‌ ಪಾವತಿಸದ ಹಿನ್ನೆಲೆಯಲ್ಲಿ 14 ಜಿಲ್ಲಾಸ್ಪತ್ರೆಗಳಲ್ಲಿ ನೀಡುತ್ತಿದ್ದ ಸಿಟಿ ಮತ್ತು ಎಂಆರ್‌ಐ ಸ್ಕ್ಯಾನ್ ಸೇವೆಯನ್ನು ಕೃಷ್ಣ ಡಯಾಗ್ನೊಸ್ಟಿಕ್ಸ್‌ ಲಿಮಿಟೆಡ್‌ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಮಹಾರಾಷ್ಟ್ರದ ಪುಣೆ ಮೂಲದ ಈ ಸಂಸ್ಥೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜತೆ 2017ರಲ್ಲಿ ಒಪ್ಪಂದ ಮಾಡಿಕೊಂಡಿತ್ತು. ಉಡುಪಿ, ಕೋಲಾರ, ತುಮಕೂರು, ಚಿತ್ರದುರ್ಗ, ಚಿಕ್ಕಮಗಳೂರು, ಉತ್ತರಕನ್ನಡ, ಚಾಮರಾಜನಗರ, ಕೊಡಗು, ವಿಜಯಪುರ, ಧಾರವಾಡ, ಹಾವೇರಿ, ದಾವಣಗೆರೆ, ಯಾದಗಿರಿ ಹಾಗೂ ಬಾಗಲಕೋಟೆಯ …

Read More »

8 ವರ್ಷಗಳ ದಾಂಪತ್ಯದ ಬಳಿಕ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಊರ್ಮಿಳಾ ಮಾತೋಂಡ್ಕರ್

ಮುಂಬಯಿ: ಕೆಲ ಕಾಲದಿಂದ ಸಿನಿ ರಂಗದಿಂದ ದೂರವಾಗಿರುವ ಬಾಲಿವುಡ್ ಖ್ಯಾತ ನಟಿ ಊರ್ಮಿಳಾ ಮಾತೋಂಡ್ಕರ್(Urmila Matondkar )ಮದುವೆಯಾದ 8 ವರ್ಷಗಳ ಬಳಿಕ ಪತಿ ಮೊಹ್ಸಿನ್ ಅಖ್ತರ್ ಮಿರ್‌ ಅವರಿಂದ ವಿಚ್ಛೇದನಕ್ಕೆ(Divorce) ಅರ್ಜಿ ಸಲ್ಲಿಸುವ ಸುದ್ದಿ ಹೊರ ಬಿದ್ದಿದೆ.   ಅಂತರ್ ಧರ್ಮೀಯ ವಿವಾಹವಾಗಿದ್ದ ನಟಿಯ ವೈಯಕ್ತಿಕ ಜೀವನದ ಸುದ್ದಿ ಮುಖ್ಯಾಂಶವಾಗಿ ಬಾಲಿವುಡ್ ವಲಯದಲ್ಲಿ ಹರಿದಾಡುತ್ತಿದೆ. ರಂಗೀಲಾ, ಜುದಾಯಿ ಮತ್ತು ದೀವಾನೆ ಮುಂತಾದ ಹಿಟ್ ಚಿತ್ರಗಳ ಮೂಲಕ ಜನ ಮನ ಗೆದ್ದಿದ್ದ 50 ರ …

Read More »

ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿದ ರೈತ

ಧಾರವಾಡ: ಕಬ್ಬಿನ ರಸ ಕಾಮಾಲೆ ರೋಗಕ್ಕೆ ರಾಮಬಾಣ. ಆದರೆ ವರ್ಷವಿಡೀ ಕಬ್ಬಿನ ಹಾಲು ಸಿಗುವುದು ಕಷ್ಟ. ಆದರೆ ಇದೀಗ ರೈತರೊಬ್ಬರು ತಮ್ಮ ಸಂಬಂಧಿಗೆ ಕಾಮಾಲೆ ರೋಗಕ್ಕೆ ಕಬ್ಬಿನ ಹಾಲು ಸಿಗದೇ ನಿಧನರಾಗಿದ್ದನ್ನೇ ಸವಾಲಾಗಿ ಸ್ವೀಕರಿಸಿ ವರ್ಷವಿಡೀ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರಜ್ಞಾನ ಶೋಧಿಸಿ ಸೈ ಎನಿಸಿಕೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕೆರವಾಡ ಗ್ರಾಮದ ಆರ್‌.ಐ. ಪಾಟೀಲ ಎಂಬ ರೈತರು ವರ್ಷಪೂರ್ತಿ ಕಬ್ಬಿನ ಹಾಲು ಕೆಡದಂತೆ ಇಡುವ ತಂತ್ರ ಶೋಧಿಸಿ, …

Read More »

ಮೌಲ್ಯಮಾಪನ ಬಹಿಷ್ಕರಿಸಿ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಪ್ರತಿಭಟನೆ

ಬೆಳಗಾವಿ: ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ವಿಷಯವನ್ನು ನಿಯಮ ಬಾಹಿರವಾಗಿ ಕಡಿಮೆ ಮಾಡಿರುವ ವಿಷಯಕ್ಕೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ ಸದಸ್ಯರಿಂದ ಮೌಲ್ಯಮಾಪನ ಬಹಿಷ್ಕರಿಸಿ ಪ್ರತಿಭಟನೆ. ಮೊದಲಿನಿಂದಲೂ ವಾಣಿಜ್ಯಶಾಸ್ತ್ರದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಅಧ್ಯಯನ ವಿಷಯವಾಗಿ ಹೇಳಲಾಗಿದೆ.   ಅರ್ಥಶಾಸ್ತ್ರ ವಿಷಯವು ವಾಣಿಜ್ಯ ವಿಭಾಗದ ತಾಯಿಬೇರು ಇದ್ದಂತೆ ಆದರೆ ವಾಣಿಜ್ಯಶಾಸ್ತ್ರ ವಿಭಾಗದ ಕೆಲವರ ಕುತಂತ್ರದಿಂದ ಅಕ್ರಮವಾಗಿ ಅರ್ಥಶಾಸ್ತ್ರ ಶೀರ್ಷಿಕೆ ಬದಲಾವಣೆ ಮಾಡಲಾಗಿದೆ. ಅರ್ಥಶಾಸ್ತ್ರ ಅನುದಾನಿತ ಹಾಗೂ ಅತಿಥಿ ಉಪನ್ಯಾಸಕರಿಗೆ …

Read More »

ಐದೇ ದಿನದಲ್ಲಿ 9 ಮಂದಿಗೆ ತಲಾ 20 ವರ್ಷ ಶಿಕ್ಷೆ; ನ್ಯಾಯಾಧೀಶರ ಮಹತ್ವದ ತೀರ್ಪು

ಬೆಳಗಾವಿ: ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರತ್ಯೇಕ ನಾಲ್ಕು ಪ್ರಕರಣಗಳಲ್ಲಿ ಕೇವಲ ಐದು ದಿನಗಳಲ್ಲಿ 9 ಜನ ಆರೋಪಿಗಳಿಗೆ ತಲಾ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸುವ ಮೂಲಕ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ವಿಶೇಷ ಶೀಘ್ರಗತಿ ಫೋಕ್ಸೋ ನ್ಯಾಯಾಲಯದ ನ್ಯಾಯಾಧೀಶರು ಮಹತ್ವದ ತೀರ್ಪು ನೀಡುವ ಮೂಲಕ ಸಮಾಜದಕ್ಕೆ ಉತ್ತಮ ಸಂದೇಶ ನೀಡಿದ್ದಾರೆ.   ಬಾಲಕಿಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಗಳ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಸಿ.ಎಂ. …

Read More »

ಕೇಂದ್ರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರಬೇಕು: ಕಂಗನಾ ರನೌತ್

ನವದೆಹಲಿ: ಕೇಂದ್ರ ಸರ್ಕಾರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮತ್ತೆ ಜಾರಿಗೆ ತರುವಂತೆ ಒತ್ತಾಯಿಸುವ ಮೂಲಕ ಬಾಲಿವುಡ್‌ ನಟಿ, ಲೋಕಸಭೆ ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಮತ್ತೊಂದು ಸುತ್ತಿನ ವಿವಾದಕ್ಕೆ ಅಡಿಯಿಟ್ಟಂತೆ ಕಾಣುತ್ತಿದೆ. ಕೇಂದ್ರದ ಕೃಷಿ ಕಾನೂನುಗಳ ಕುರಿತು ಕಂಗನಾ ರನೌತ್ ಮಾತನಾಡಿರುವ ವಿಡಿಯೊವೊಂದು ‘ಎಕ್ಸ್‌’ನಲ್ಲಿ ಹರಿದಾಡುತ್ತಿದೆ. ಆದರೆ, ಇದು ಯಾವಾಗ ಮಾತನಾಡಿರುವ ವಿಡಿಯೊ ಎಂಬುದು ಸ್ಪಷ್ಟವಾಗಿಲ್ಲ. ‘ಕೇಂದ್ರ ಸರ್ಕಾರ ಹಿಂಪಡೆದಿರುವ ಕೃಷಿ ಕಾನೂನುಗಳನ್ನು ಮರಳಿ ಜಾರಿಗೆ ತರಬೇಕು. ನನ್ನ ಹೇಳಿಕೆ …

Read More »

ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ?

ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಸೇರಿದಂತೆ ವಿವಿಧ ಸಾರಿಗೆ ನಿಗಮಗಳು ರಾಜ್ಯಾದ್ಯಂತ ಜನರಿಗೆ ಪ್ರಯಾಣ ಸೇವೆ ಕಲ್ಪಿಸುತ್ತಿವೆ. ಒಂದು ದಿನ ಬಸ್‌ಗಳ ಸಂಚಾರದಲ್ಲಿ ವ್ಯತ್ಯಯವಾದರೂ ಪ್ರಯಾಣಿಕರ ಪರದಾಟ ನೋಡಲಾಗುವುದಿಲ್ಲ. ಆದರೆ, ಸಾರಿಗೆ ನೌಕಕರು ಇನ್ನೇನು ಕೆಲವೇ ದಿನಗಳಲ್ಲಿ ಬಸ್‌ ಸಂಚಾರ ನಿಲ್ಲಿಸಿ, ರಾಜ್ಯಾದ್ಯಂತ ಮುಷ್ಕರಕ್ಕೆ ಕರೆ ನೀಡಲಿದ್ದಾರೆ ಎಂದು ವರದಿಯಾಗಿದೆ.   ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ಹಾಗೂ ವಿವಿಧ ಸಾರಿಗೆ ನೌಕರರ …

Read More »