Breaking News

ಡಿಸಿಎಂ ಡಿ.ಕೆ.ಶಿವಕುಮಾರ್​ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್​ ತಿಳಿಸಿದೆ.

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆ ವಾಪಸ್​ ಪಡೆದ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಸೂರ್ಯಕಾಂತ್ ನೇತೃತ್ವದ ಪೀಠದ ಮುಂದೆ ವಿಚಾರಣೆಗೆ ಪಟ್ಟಿ ಮಾಡಲಾಗುವುದು ಎಂದು ಸುಪ್ರೀಂಕೋರ್ಟ್​ ಸೋಮವಾರ ತಿಳಿಸಿದೆ. ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಅವರು ಕರ್ನಾಟಕ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸುಪ್ರೀಂಗೆ ಅರ್ಜಿ ಸಲ್ಲಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿ …

Read More »

ಜೈನ ಮಂದಿರಗಳ ಅರ್ಚಕರಿಗೆ ವೇತನ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಜೈನ ಮಂದಿರಗಳ ಪ್ರಧಾನ ಅರ್ಚಕರು ಹಾಗೂ ಸಹಾಯಕ ಅರ್ಚಕರುಗಳಿಗೆ ವೇತನ ನಿಗದಿ ಮಾಡಿ ರಾಜ್ಯ ಸರ್ಕಾರ ಇಂದು ಆದೇಶ ಹೊರಡಿಸಿದೆ. ರಾಜ್ಯದ 1,043 ಜೈನ ಮಂದಿರಗಳ ಪ್ರಧಾನ ಅರ್ಚಕರಿಗೆ ತಲಾ 6 ಸಾವಿರ ರೂ., ಸಹಾಯಕ ಅರ್ಚಕರುಗಳಿಗೆ 5 ಸಾವಿರ ರೂ. ವೇತನ ನಿಗದಿ ಮಾಡಿ ಆದೇಶ ಹೊರಡಿಸಲಾಗಿದೆ. ಇದೇ ಮೊದಲ ಬಾರಿಗೆ ಜೈನ ಮಂದಿರಗಳ ಅರ್ಚಕರಿಗೆ ವೇತನ ನಿಗದಿ ಸಂಬಂಧ ಬಜೆಟ್ ನಲ್ಲಿ ಘೋಷಿಸಲಾಗಿತ್ತು. ವೇತನಕ್ಕಾಗಿ ಇದುವರೆಗೂ ಜಿಲ್ಲೆಗಳಿಂದ …

Read More »

ಪಂಡಿತ್ ವೆಂಕಟೇಶ್ ಕುಮಾರ್​ಗೆ ಸಂಗೀತ ವಿದ್ವಾನ್ ಪ್ರಶಸ್ತಿ

ಮೈಸೂರು: ಮುಂದಿನ ಒಲಿಂಪಿಕ್ಸ್ ಪದಕ ವಿಜೇತರಿಗೆ ಕರ್ನಾಟಕ ಸರ್ಕಾರ 6 ಕೋಟಿ ರೂ. ನಗದು ಬಹುಮಾನ ನೀಡಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ರಾಜ್ಯ ದಸರಾ ಸಿಎಂ ಕಪ್ ಕ್ರೀಡಾಕೂಟವನ್ನು ಸೋಮವಾರ ಉದ್ಘಾಟಿಸಿ ಸಿಎಂ ಮಾತನಾಡಿದರು. ಈ ಕ್ರೀಡಾಕೂಟದಲ್ಲಿ ಒಂದು ವಿಭಾಗದಿಂದ 720 ಕ್ರೀಡಾಪಟುಗಳಂತೆ 5 ವಿಭಾಗಗಳಿಂದ ಒಟ್ಟು 3,600 ಕ್ರೀಡಾಪಟುಗಳು ಭಾಗವಹಿಸುತ್ತಿದ್ದಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ಎಲ್ಲ ಕ್ರೀಡಾಪಟುಗಳಿಗೆ ಶುಭಕೋರಿದ ಮುಖ್ಯಮಂತ್ರಿಗಳು, ಸೋಲು ಗೆಲುವುಗಳಿಗಿಂತ, …

Read More »

ಹಾಸ್ಟೆಲ್​ನಲ್ಲಿ ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ

ಬೆಳಗಾವಿ: ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಸದಾಶಿವನಗರದ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದಲ್ಲಿ ಸೋಮವಾರ ಮಧ್ಯಾಹ್ನ ನಡೆದಿದೆ. ಗೋಕಾಕ್​ ತಾಲೂಕಿನ ಘಟಪ್ರಭಾ ಗ್ರಾಮದ ಸುಮಿತ್ರಾ ಗೋಕಾಕ್​ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಘಟನಾ ಸ್ಥಳಕ್ಕೆ ಎಪಿಎಂಸಿ ಪೊಲೀಸರು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ರಾಮನಗೌಡ ಕನ್ನೋಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಬಸವರಾಜ ಕುರಿಹುಲಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಬಸವರಾಜ ಚೆನ್ನನ್ನವರ ಭೇಟಿ …

Read More »

ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್*

ತಾಯಿ ಚಾಮುಂಡಿ ಶಕ್ತಿ, ಧೈರ್ಯ, ಮಮತೆ ಹಾಗೂ ರಕ್ಷಕತ್ವದ ಸಂಕೇತ: ಬಾನು ಮುಷ್ತಾಕ್* *ದಸರೆಯು ಮಾನವ ಕುಲಕ್ಕೆ ಶಾಂತಿ ಸಹಾನುಭೂತಿ ಮತ್ತು ನ್ಯಾಯದ ದೀಪವನ್ನು ಬೆಳೆಗಿಸಲಿ: ಬಾನು ಮುಷ್ತಾಕ್* *ನಾಡಹಬ್ಬ ದಸರಾ-ಎಲ್ಲರನ್ನೂ ಒಗ್ಗೂಡಿಸುವ ಸಮನ್ವಯದ ಮೇಳ: ಬಾನು* *ದ್ವೇಷವನ್ನು ಬೆಳೆಸದೇ ಪ್ರೀತಿಯನ್ನು ಹರಡುವುದೇ ನಮ್ಮ ಸಂಸ್ಕೃತಿಯ ಗುರಿ* *ನನ್ನ ಬದುಕಿನ ದರ್ಶನ ಎಂದಿಗೂ ಜೀವಪರ* *ಅಸ್ತ್ರಗಳಿಂದಲ್ಲ, ಅಕ್ಷರಗಳಿಂದ ಬದುಕನ್ನು ಗೆಲ್ಲಬಹುದು, ಹಗೆಗಳಿಂದಲ್ಲ, ಪ್ರೀತಿಯಿಂದ ಬದುಕನ್ನು ಅರಳಿಸಬಹುದು: ಬಾನು ಮುಷ್ತಾಕ್* *ಈ …

Read More »

ಹಾವೇರಿ ಜಿಲ್ಲಾಸ್ಪತ್ರೆಯಿಂದ ಮಾತೃ ಇಲಾಖೆಗೆ ವರ್ಗಾವಣೆಗೊಂಡಿದ್ದ 13 ವೈದ್ಯರ ಆದೇಶ ರದ್ದು

ಹಾವೇರಿ: ಹಾವೇರಿ ಜಿಲ್ಲಾಸ್ಪತ್ರೆಯಿಂದ ದಿಢೀರ್​ ಮಾತೃ ಇಲಾಖೆ ಆರೋಗ್ಯ ಇಲಾಖೆಗೆ 20ಕ್ಕೂ ಅಧಿಕ ತಜ್ಞವೈದ್ಯರನ್ನು ವರ್ಗಾವಣೆ ಮಾಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬರುತ್ತಿದ್ದಂತೆ ಇಲಾಖೆ ಎಚ್ಚೆತ್ತುಗೊಂಡಿದೆ. ಹಾವೇರಿ ಜಿಲ್ಲಾಸ್ಪತ್ರೆಯ 23 ವೈದ್ಯರಲ್ಲಿ 13 ವೈದ್ಯರ ಆದೇಶ ರದ್ದು ಮಾಡಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಆದೇಶ ಹೊರಡಿಸಿದೆ. 13 ವೈದ್ಯರನ್ನು ಹಾವೇರಿ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿ ವರದಿ ಮಾಡಿಕೊಳ್ಳಲು ಸೂಚನೆ ನೀಡಿದೆ. ಇದರಿಂದಾಗಿ ಬಡವರು ನಿಟ್ಟುಸಿರು ಬಿಡುವಂತಾಗಿದೆ. ಹಾವೇರಿ …

Read More »

ಹುಬ್ಬಳ್ಳಿ ಬೇಡ ಜಂಗಮ ಸಮಾವೇಶ ಕಂಪ್ಲೀಟ್ ಫ್ಲಾಪ್: ವಚನಾನಂದ ಶ್ರೀ

ಗದಗ : ಹುಬ್ಬಳ್ಳಿಯಲ್ಲಿ ಇತ್ತೀಚೆಗೆ ನಡೆದ ಬೇಡಜಂಗಮರ ಸಮಾವೇಶವು ಸಂಪೂರ್ಣ ವಿಫಲವಾಗಿದೆ ಎಂದು ಗದಗದ ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ತೀಕ್ಷ್ಣವಾಗಿ ಟೀಕಿಸಿದ್ದಾರೆ. ಈ ಸಮಾವೇಶಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿರುವ ಶ್ರೀಗಳು, ಇದರಲ್ಲಿ ಭಾಗವಹಿಸಿದ್ದು ಕೇವಲ 7,000 ಜನರಷ್ಟೇ, ವ್ಯಾಪಕ ಪ್ರಚಾರ ಮತ್ತು ಖರ್ಚಿನ ಹೊರತಾಗಿಯೂ ಜನಸ್ಪಂದನೆ ಸಿಕ್ಕಿಲ್ಲ ಎಂದು ಕಿಚಾಯಿಸಿದ್ದಾರೆ. ನಗರದಲ್ಲಿಂದು ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವೇದಿಕೆಯ ಮೇಲೆ ಕೆಲವು ಸ್ವಾಮೀಜಿಗಳನ್ನು ಬಿಟ್ಟರೆ, …

Read More »

ಜಾತಿ ಗಣತಿಯಲ್ಲಿ ಪೆನ್ನಿನಿಂದ ಬರೆಯಿರಿ, ಹಗರಣ ತಡೆಯಿರಿ

ಗದಗ: ” ರಾಜ್ಯಾದ್ಯಂತ ಆರಂಭವಾಗುತ್ತಿರುವ ಜಾತಿ ಗಣತಿ ಪ್ರಕ್ರಿಯೆಯಲ್ಲಿ ಸರ್ಕಾರಿ ಸಿಬ್ಬಂದಿಗಳು ಹಗರಣ ನಡೆಸಬಹುದು” ಎಂದು ಮಾಜಿ ಸಚಿವ ಸಿ. ಸಿ. ಪಾಟೀಲ್​ ಶಂಕೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ಭಾನುವಾರ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರದ ಮೇಲಿನ ನಂಬಿಕೆ ಕಳೆದುಕೊಂಡಿದ್ದು, ಗಣತಿ ಸಂದರ್ಭದಲ್ಲಿ ವೀರಶೈವ-ಲಿಂಗಾಯತ ಸಮುದಾಯಗಳನ್ನು ಒಡೆಯುವ ಉದ್ದೇಶವೇ ಇದೆ. ಸಮುದಾಯದವರು ಎಚ್ಚರಿಕೆ ವಹಿಸಿ. ಗಣತಿ ಸಿಬ್ಬಂದಿಗಳಿಗೆ ಪೆನ್ಸಿಲ್ ಬಳಸದಂತೆ ಮತ್ತು ಪೆನ್ನಿನಿಂದ ಬರೆಯುವಂತೆ ಒತ್ತಾಯಿಸಿ ಎಂದು ಕರೆ ನೀಡಿದ್ದಾರೆ. ಈ ಸರ್ಕಾರ …

Read More »

ಪಂಚಮಸಾಲಿ ಪೀಠದಿಂದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ಶಾಸಕ ವಿಜಯಾನಂದ ಕಾಶಪ್ಪನವರ್

ಪಂಚಮಸಾಲಿ ಪೀಠದಿಂದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ: ಶಾಸಕ ವಿಜಯಾನಂದ ಕಾಶಪ್ಪನವರ್ ಬಾಗಲಕೋಟೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಪಂಚಮಸಾಲಿ ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಪಂಚಮಸಾಲಿ ಪೀಠದ ಟ್ರಸ್ಟ್​ ಅಧ್ಯಕ್ಷರಾಗಿರುವ ಶಾಸಕ ವಿಜಯಾನಂದ ಕಾಶಪ್ಪನವರ್​ ಭಾನುವಾರ ತಿಳಿಸಿದ್ದಾರೆ. ಕೂಡಲಸಂಗಮದಲ್ಲಿ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಎಲ್ಲ ಧರ್ಮದರ್ಶಿಗಳು, ಸಮುದಾಯದವರು ಸೇರಿ ಒಂದು ತತ್ವ ಆದರ್ಶದ ಮೇಲೆ ಈ ಪೀಠವನ್ನು ಕಟ್ಟಲಾಗಿತ್ತು. …

Read More »

ಭಾನುವಾರ ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಆನೆಗಳ ತಾಲೀಮಿಗೆ ಬ್ರೇಕ್

ಮೈಸೂರು: ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯ ತಾಲೀಮಿಗೆ ಭಾನುವಾರ ವಿರಾಮ ನೀಡಲಾಯಿತು. ಇದರಿಂದ ಮಾವುತರು ಹಾಗೂ ಕಾವಾಡಿಗಳು ವಿಶ್ರಾಂತಿಯಲ್ಲಿದ್ದರು. ತಾಲೀಮಿಗೆ ವಿರಾಮ ಹಿನ್ನೆಲೆಯಲ್ಲಿ ಕ್ಯಾಪ್ಟನ್ ಅಭಿಮನ್ಯು, ಭೀಮ, ಏಕಲವ್ಯ, ಪ್ರಶಾಂತ, ಲಕ್ಷ್ಮಿ, ಕಂಜನ್, ಧನಂಜಯ, ಮಹೇಂದ್ರ, ಕಾವೇರಿ, ಹೇಮಾವತಿ, ರೂಪ, ಶ್ರೀಕಂಠ, ಸುಗ್ರೀವ ಗೋಪಿ ಆನೆಗಳಿಗೆ ನೆತ್ತಿಗೆ ಎಣ್ಣೆ ಹಾಕಿ, ಸ್ನಾನ ಮಾಡಿಸಲಾಯಿತು. ತಾಲೀಮಿನ ಭಾಗವಾಗಿ ಎಲ್ಲಾ ಆನೆಗಳನ್ನು ನಿತ್ಯ ಅರಮನೆಯಿಂದ ಬನ್ನಿಮಂಟಪದವರಗೆ ಕರೆದುಕೊಂಡು ಹೋಗಿ ವಾಪಸ್ …

Read More »