Breaking News

ಮೂಡಲಗಿ | ಚಿರತೆ ಸುದ್ದಿ: ಆತಂಕ ಸೃಷ್ಟಿ

ಮೂಡಲಗಿ : ‘ತಾಲ್ಲೂಕಿನ ನಾಗನೂರ ಗ್ರಾಮದ ಅರಣ್ಯಸಿದ್ದೇಶ್ವರ ತೋಟದ ಸಿದ್ದಪ್ಪ ಜಾವಲಿ ಎಂಬುವವರ ಗದ್ದೆಯಲ್ಲಿ ಮಂಗಳವಾರ ಮಧ್ಯಾಹ್ನ ಚಿರತೆ ಪ್ರತ್ಯಕ್ಷವಾಗಿದೆ’ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ವೈರಲ್ ಆದ ಹಿನ್ನೆಲೆ ಸ್ಥಳಕ್ಕೆ ಧಾವಿಸಿದ ಅರಣ್ಯ ಅಧಿಕಾರಿ ಸಂಜು ಸವಸುದ್ದಿ ಪರಿಶೀಲನೆ ನಡೆಸಿ ಅದು ಚಿರತೆ ಅಲ್ಲ ಕಾಡು ಬೆಕ್ಕು ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ಮಹಾದೇವ ಸನ್ನಮುರಿ, ಸಾರ್ವಜನಿಕರ ಹಿತ ದೃಷ್ಟಿಯಿಂದ ರಾತ್ರಿ ವೇಳೆ ಒಬ್ಬೊಬ್ಬರಾಗಿ ತಿರುಗಾಡದಂತೆ ಹಾಗೂ …

Read More »

ಇಬ್ಬರು ಮಕ್ಕಳ ಕೊಂದ ತಂದೆಗೆ ಜೀವಾವಧಿ ಶಿಕ್ಷೆ

ಬೆಳಗಾವಿ: ಮೂಢನಂಬಿಕೆ ನಂಬಿ ತನ್ನ ಇಬ್ಬರು ಪುತ್ರಿಯರಿಗೆ ಫಿನಾಯಿಲ್‌ ಕುಡಿಸಿ ಕೊಂದಿದ್ದ ಅನಿಲ ಚಂದ್ರಕಾಂತ ಬಾಂದೇಕರ ಎಂಬ ಆರೋಪಿಗೆ ಇಲ್ಲಿನ ಆರನೇ ಹೆಚ್ಚುವರಿ ಜಿಲ್ಲಾ ಸೆಷೆನ್ಸ್‌ ನ್ಯಾಯಾಲಯವು ಜೀವಾವಧಿ ಶಿಕ್ಷೆ ಮತ್ತು ₹20 ಸಾವಿರ ದಂಡ ವಿಧಿಸಿ, ಮಂಗಳವಾರ ತೀರ್ಪು ಪ್ರಕಟಿಸಿದೆ. ತಾಲ್ಲೂಕಿನ ಕಂಗ್ರಾಳಿ ಕೆ.ಎಚ್ ಗ್ರಾಮದ ಅನಿಲ ಬಾಂದೇಕರ, ತನ್ನ ಮನೆ ಮಾರಾಟಕ್ಕೆ ಮುಂದಾಗಿದ್ದ. ಖರೀದಿಗೆ ಯಾರೂ ಬಾರದ್ದರಿಂದ ನೊಂದುಕೊಂಡಿದ್ದ. ತನ್ನ ಇಬ್ಬರು ಮಕ್ಕಳನ್ನು ಕೊಂದು, ತನ್ನ ರಕ್ತವನ್ನು …

Read More »

ವಾಹನ ಸವಾರರೇ ಗಮನಿಸಿ : ಇನ್ಮುಂದೆ ಈ ರೂಲ್ಸ್ ಬ್ರೇಕ್ ಮಾಡಿದ್ರೆ ʻFIRʼ ಫಿಕ್ಸ್!

ಬೆಂಗಳೂರು : ರಾಜ್ಯಾದ್ಯಂತ ರಸ್ತೆ ಅಪಘಾತಗಳನ್ನು ತಡೆಗಟ್ಟಲು ರಾಜ್ಯದ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ಮುಖ್ಯವಾಗಿ ಅಪಘಾತಕ್ಕೆ ಕಾರಣವಾಗಿರುವ ಪ್ರಖರ ಬೆಳಕು ಹೊರಹಾಕುವ (ಹೈ ಬೀಮ್ ಲೈಟ್) ಮತ್ತು ಕಣ್ಣು ಕುಕ್ಕುವ ಎಲ್​ಇಡಿ ಲೈಟ್​ ಅಳವಡಿಸಿರುವ ವಾಹನಗಳ ವಿರುದ್ಧ ಪ್ರಕರಣಗಳನ್ನು ದಾಖಲಿಸಲು ರಾಜ್ಯಾದ್ಯಂತ ವಿಶೇಷ ಕಾರ್ಯಚರಣೆ ನಡೆಸಲಾಗಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಎಲ್ಲಾ ಘಟಕಗಳಲ್ಲಿ ಸಂಭವಿಸುವ ರಸ್ತೆ ಅಪಘಾತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಹೆಚ್ಚು ಪ್ರಖರ ಬೆಳಕು ಹೊರಹಾಕುವ ಮತ್ತು …

Read More »

ಪಂಚಾಯಿತಿ ನೌಕರರಿಗೆʼ ಗುಡ್‌ ನ್ಯೂಸ್‌

ಬೆಂಗಳೂರು : ರಾಜ್ಯದ ಪಂಚಾಯಿತಿ ನೌಖರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.   ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘವು ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ …

Read More »

ಕೃಷ್ಣಾ ನದಿಗೆ ಬಾಗಿನ ಬಿಡಲು ಹೋದವ ಮುಳುಗಿ ಸಾವು

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಇಂಗಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕೃಷ್ಣಾ ನದಿ ತುಂಬಿರುವ ಕಾರಣ ಮಧ್ಯಾಹ್ನ ಪೂಜೆ ಸಲ್ಲಿಸಿ ಬಾಗಿನ ಬಿಡಲು ಹೋದಾಗ, ರೋಹನ್ ಪಾಟೀಲ್ (35) ನದಿಯಲ್ಲಿ ಮುಳುಗಿ ಸಾವನ್ನಪ್ಪಿದರು. ನದಿಯ ಮಧ್ಯದಲ್ಲಿ ಹೋಗುತ್ತಿದ್ದಾಗ ಪಿಟ್ಸ್ ಬಂದು ಮುಳುಗುತ್ತಿದ್ದ ರೋಹನ್ ನನ್ನು ನಾಲ್ಕೈದು ಜನರಿಂದ ಬದುಕಿಸಲು ಪ್ರಯತ್ನಿಸಲಾಯಿತಾದರೂ ಫಲಕಾರಿಯಾಗಿಲ್ಲ. ಸ್ಥಳೀಯ ಯುವಕರು ಈ ದೃಶ್ಯವನ್ನು ತಮ್ಮ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ. ರೋಹನ್ ನಿಶ್ಚಿತಾರ್ಥದ ಎಂಟು ದಿನಗಳ …

Read More »

ಕಾಲುವೆಯಲ್ಲಿ ಬಿದ್ದ ಕುರಿಮರಿ ರಕ್ಷಿಸಲು ಹೋಗಿದ್ದ ಯುವಕ ನೀರುಪಾಲು

ಮುದ್ದೇಬಿಹಾಳ: ಕಾಲುವೆಯಲ್ಲಿ ಬಿದ್ದ ಕುರಿ ಮರಿ ರಕ್ಷಿಸಲು ಹೋಗಿದ್ದ ಯುವಕನೊಬ್ಬ ನೀರು ಪಾಲಾಗಿರುವ ಘಟನೆ ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕು ಗಡಿ ಭಾಗದಲ್ಲಿರುವ ನಾರಾಯಣಪುರ ಎಡದಂಡೆ ಕಾಲುವೆಯಲ್ಲಿ ಮಂಗಳವಾರ ಸಂಜೆ ನಡೆದಿದೆ. ನೀರು ಪಾಲಾದವನನ್ನು ಕಾಲುವೆ ಸಮೀಪ ಇರುವ ನಾಗಬೇನಾಳ ಗ್ರಾಮದ ಮಂಜುನಾಥ ಮಾದರ (28) ಎಂದು ಗುರುತಿಸಲಾಗಿದೆ. ನಾರಾಯಣಪುರ ಚೆಕ್ ಪೋಸ್ಟ್ ಹತ್ತಿರ ಇರುವ ಈ ಕಾಲುವೆ ಬಳಿ ಕುರಿಗಳನ್ನು ಮೇಯಿಸಲು ಮಂಜುನಾಥ ಹೋಗಿದ್ದ. ಒಂದು ಕುರಿ ಮರಿ ಕಾಲುವೆಯಲ್ಲಿ …

Read More »

ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್‌

ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಮಂಡಿಸಿದ ಬಜೆಟ್‌ ಹೊಸದಿಲ್ಲಿ: ಈ ಬಾರಿಯ ಕೇಂದ್ರ ಬಜೆಟ್‌ “ಕಾಪಿಕ್ಯಾಟ್‌’ ಬಜೆಟ್‌ ಆಗಿದ್ದು, ಇದು ಅಭಿವೃದ್ಧಿಗೆ ಪೂರಕವಲ್ಲದ ಬಜೆಟ್‌ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಮೋದಿ ಸರ್ಕಾರವನ್ನು ಉಳಿಸಿಕೊಳ್ಳುವ ಸಲುವಾಗಿ ಈ ಬಜೆಟ್‌ ಮಂಡನೆಯಾಗಿದೆ ಎಂದಿದ್ದಾರೆ. ಈ ಬಗ್ಗೆ ತಮ್ಮ ಟ್ವೀಟರ್‌ ಖಾತೆಯಲ್ಲಿ ಬರೆ ದು ಕೊಂಡಿ ರುವ ಖರ್ಗೆ, “ಮೋದಿ ಸರ್ಕಾರದ “ಕಾಪಿಕ್ಯಾಟ್‌ ಬಜೆಟ್‌’ಗೆ ಸರಿಯಾಗಿ ಕಾಂಗ್ರೆಸ್‌ನ ನ್ಯಾಯಪತ್ರವನ್ನು ನಕಲು ಮಾಡಲೂ ಬಂದಿಲ್ಲ. ತಮ್ಮ ಮಿತ್ರ …

Read More »

ಹಿರಣ್ಯಕೇಶಿ ನದಿಯ ಸೇತುವೆಯಲ್ಲಿ ಸವಾರರ ಹುಚ್ಚಾಟ

ಸಂಕೇಶ್ವರ: ಸಮೀಪದ ಹಿರಣ್ಯಕೇಶಿ ನದಿಯ ಸೇತುವೆ ಮೇಲೆ ನೀರು ರಭಸದಿಂದ ಹರಿಯುತ್ತಿದ್ದರೂ ವಾಹನ ಸವಾರರು ಪ್ರಾಣಾಪಾಯವನ್ನೂ ಲೆಕ್ಕಿಸದೇ ನದಿ ನೀರಿನಲ್ಲಿಯೇ ವಾಹನ ಚಲಾಯಿಸಿಕೊಂಡು ಹೋದ ಘಟನೆ ನಡೆದಿದೆ. ಕರ್ನಾಟಕ-ಮಹಾರಾಷ್ಟ್ರ ಸಂಪರ್ಕಿಸುವ ರಸ್ತೆಗೆ ಅಡ್ಡಲಾಗಿ ಹಾದು ಹೋಗಿರುವ ಹಿರಣ್ಯಕೇಶಿ ನದಿ ಸೇತುವೆ ಜಲಾವೃತವಾಗಿದ್ದು, ಸುರಕ್ಷತೆ ದೃಷ್ಟಿಯಿಂದ ಸಂಚಾರ ನಿರ್ಬಂಧಿಸಿ ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೂ ಕೂಡಾ ವಾಹನ ಸವಾರರು ಜೀವದ ಹಂಗು ತೊರೆದು ವಾಹನ ಚಲಾಯಿಸಿ ಹುಚ್ಚಾಟ ಮೆರೆದಿದ್ದಾರೆ.

Read More »

ರೈತರೇ ಗಮನಿಸಿ : ಬೆಳೆ ವಿಮೆ ಲಾಭ ಪಡೆಯಲು ತಪ್ಪದೇ ಈ ಕೆಲಸ ಮಾಡಿಕೊಳ್ಳಿ

ಬಳ್ಳಾರಿ : ರೈತರು ಬೆಳೆ ವಿಮೆ ಯೋಜನೆಯಡಿ ತಮ್ಮ ಬೆಳೆಗಳನ್ನು ನೋಂದಾಯಿಸಿಕೊಂಡು ಯೋಜನೆಯ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ. ಪ್ರಸ್ತಕ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ಬೆಳೆ ವಿಮೆಗೆ ನೋಂದಾಯಿಸಲು ಬೆಳೆ ಸಾಲ ಪಡೆದ ಹಾಗೂ ಬೆಳೆ ಸಾಲ ಪಡೆಯದ ರೈತರು ತಮ್ಮ ಬೆಳೆಗಳಿಗೆ ಬ್ಯಾಂಕುಗಳಲ್ಲಿ ವಿಮೆ ಮಾಡಿಸಿಕೊಳ್ಳಬೇಕು. ಮುಸುಕಿನ ಜೋಳ, ಜೋಳ, …

Read More »

ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ಮಹತ್ವದ ಕ್ರಮ

ಬೆಂಗಳೂರು : ರಾಜ್ಯದಲ್ಲಿ ನಕಲಿ ವೈದ್ಯರ ಹಾವಳಿ ತಡೆಗೆ ರಾಜ್ಯ ಸರ್ಕಾರವು ಮಹತ್ವದ ಕ್ರಮ ಕೈಗೊಂಡಿದ್ದು, ನಕಲಿ ವೈದ್ಯರೆಂದು ಕಂಡುಬಂದರೆ ₹25 ಲಕ್ಷದವರೆಗೆ ದಂಡ ವಿಧಿಸಲಾಗುವುದು ಎಂದು ಸಚಿವ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ. ವಿಧಾನ ಮಂಡಲ ಕಲಾಪದಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವ ದಿನೇಶ್‌ ಗುಂಡೂರಾವ್‌, ರಾಜ್ಯದಲ್ಲಿ ನಕಲಿ ವೈದ್ಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದ್ದು, ಕನಿಷ್ಠ 3 ವರ್ಷ ಜೈಲು ಶಿಕ್ಷೆಯಾಗುವಂತೆ ಕ್ರಿಮಿನಲ್‌ ಕೇಸ್‌ ದಾಖಲಿಸಲಾಗುತ್ತಿದೆ. ನಕಲಿ …

Read More »