Breaking News

ಮಾಘ ಮೇಳ 2026: ಹುಬ್ಬಳ್ಳಿ – ಪ್ರಯಾಗರಾಜ್ ನಡುವೆ ವಿಶೇಷ ರೈಲು ಸಂಚಾರ

ಹುಬ್ಬಳ್ಳಿ: ಮಾಘ ಮೇಳದ ವ್ಯವಸ್ಥೆಗೆ ಅನುಕೂಲ ಕಲ್ಪಿಸಲು ಮತ್ತು ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿರ್ವಹಿಸಲು, ನೈಋತ್ಯ ರೈಲ್ವೆಯು ಎಸ್ಎಸ್ಎಸ್​ ಹುಬ್ಬಳ್ಳಿ ಮತ್ತು ಪ್ರಯಾಗರಾಜ್​ ಜಂಕ್ಷನ್​ ನಡುವೆ ಒನ್-ವೇ ಕಾಯ್ದಿರಿಸದ ವಿಶೇಷ ಎಕ್ಸ್​ ಪ್ರೆಸ್​ ರೈಲು ಸಂಚಾರವನ್ನು ಕಾರ್ಯಾಚರಣೆ ಮಾಡಲಿದೆ. ರೈಲು ಸಂಖ್ಯೆ 07351 ಎಸ್ಎಸ್ಎಸ್ ಹುಬ್ಬಳ್ಳಿ–ಪ್ರಯಾಗರಾಜ್ ಮೀಸಲಾತಿ ಒನ್-ವೇ ಕಾಯ್ದಿರಿಸದ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 4, 2025 (ಗುರುವಾರ) ಮತ್ತು ಡಿಸೆಂಬರ್ 9, 2025 (ಮಂಗಳವಾರ) ರಂದು ಸಂಚರಿಸಲಿದೆ. …

Read More »

ಸುವರ್ಣಸೌಧಕ್ಕೆ ಇಲಾಖೆ ಸ್ಥಳಾಂತರ ಕುರಿತು ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ: ರುದ್ರಪ್ಪ ಲಮಾಣಿ

ಹಾವೇರಿ: ವಿಧಾನಸೌಧದಿಂದ ಬೆಳಗಾವಿ ಸುವರ್ಣಸೌಧಕ್ಕೆ ಯಾವ ಯಾವ ಇಲಾಖೆಗಳನ್ನು ಸ್ಥಳಾಂತರಿಸಬೇಕು ಎನ್ನುವ ಕುರಿತಂತೆ ಸರ್ಕಾರ ಇನ್ನೂ ತೀರ್ಮಾನ ಮಾಡಿಲ್ಲ ಎಂದು ವಿಧಾನಸಭೆ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ತಿಳಿಸಿದರು. ಮಂಗಳವಾರ ನಗರದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪ್ರತಿ ಬಾರಿ ಬೆಳಗಾವಿ ಅಧಿವೇಶನ ಬಂದಾಗಲೂ ಈ ಬಗ್ಗೆ ಚರ್ಚೆಯಾಗುತ್ತದೆ. ನಮ್ಮ ಸರ್ಕಾರವಿದ್ದಾಗ, ಬಿಜೆಪಿ ಸರ್ಕಾರವಿದ್ದಾಗ ಸಹ ಈ ಬಗ್ಗೆ ಚರ್ಚೆಯಾಗಿದೆ. ಕೆಲವು ಇಲಾಖೆಗಳನ್ನು ಸುವರ್ಣಸೌಧಕ್ಕೆ ವರ್ಗಾಯಿಸಲಾಗಿತ್ತು. ಆದರೆ ಇಲಾಖೆಯ ಅಧಿಕಾರಿಗಳು ವಿಧಾನಸಭೆ ಮುಖ್ಯಕಚೇರಿ …

Read More »

ಜಾನಪದ ವಿವಿ ಮೌಲ್ಯಮಾಪನ ಕುಲಸಚಿವರ ರಾಜೀನಾಮೆ ವದಂತಿಗೆ ತೆರೆ

ಹಾವೇರಿ: ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಗೊಟಗೋಡಿಯಲ್ಲಿರುವ ಜಾನಪದ ವಿಶ್ವವಿದ್ಯಾಲಯ ಈ ಬಾರಿ ಮೌಲ್ಯಮಾಪನ ಕುಲಸಚಿವ ಡಾ.ಕೆ.ಶಿವಶಂಕರ್ ರಾಜೀನಾಮೆ ಕುರಿತ ವಿಷಯಕ್ಕೆ ಸುದ್ದಿಯಲ್ಲಿದೆ. ಶಿವಶಂಕರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಕೆಲ ಮಾಧ್ಯಮಗಳಲ್ಲಿ ವರದಿಯಾಗಿತ್ತು. ನವೆಂಬರ್ 24ರಂದು ನಡೆದಿದ್ದ ವಿವಿ ಸಿಂಡಿಕೇಟ್ ಸಭೆಯಲ್ಲಿ ಸದಸ್ಯರು ಮತ್ತು ಶಿವಶಂಕರ್ ನಡುವೆ ವಾಗ್ವಾದ ನಡೆದಿತ್ತು. ವಿವಿಯ ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ ವಿರುದ್ದ ಕ್ರಮ ಕೈಗೊಳ್ಳುವಂತೆ ಸಿಂಡಿಕೇಟ್ ಸದಸ್ಯರು ಶಿವಶಂಕರ್ ಜೊತೆ ವಾಗ್ವಾದ ನಡೆಸಿದ್ದರು. ಅಲ್ಲದೇ …

Read More »

ನಟ ರಣವೀರ್ ಸಿಂಗ್ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಗೆ ದೂರು

ಬೆಂಗಳೂರು: ಕಾಂತಾರ ಸಿನಿಮಾದಲ್ಲಿನ ದೈವಕ್ಕೆ ದೆವ್ವ ಎಂದು ಕರೆಯುವ ಮೂಲಕ ವಿವಾದ ಸೃಷ್ಟಿಸಿರುವ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ವಿರುದ್ಧ ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಣವೀರ್ ಸಿಂಗ್ ಲಕ್ಷಾಂತರ ಹಿಂದೂಗಳು ಹಾಗೂ ಕರ್ನಾಟಕದ ತುಳು ಭಾಷಿಕ ಸಮುದಾಯದ ಭಾವನೆಗಳನ್ನು ತೀವ್ರವಾಗಿ ನೋಯಿಸಿದ್ದಾರೆ. ಅವರ ವಿರುದ್ಧ ಕಾನೂನು‌ ಕ್ರಮ ಜರುಗಿಸುವಂತೆ ವಕೀಲ ಪ್ರಶಾಂತ್ ಮೆಥಲ್ ಎಂಬವರು ದೂರು ನೀಡಿದ್ದಾರೆ. ದೂರಿನ ವಿವರ: ನವೆಂಬರ್ 28ರಂದು ಗೋವಾದಲ್ಲಿ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ (IFFI)ದ …

Read More »

ವಿವೇಕನಗರ ಪೊಲೀಸ್‌ ಠಾಣೆಯ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಸಸ್ಪೆಂಡ್

ಬೆಂಗಳೂರು: ಪೊಲೀಸ್ ಠಾಣೆಯಲ್ಲೇ ಯುವಕನೊಬ್ಬ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣ ಸಂಬಂಧ ವಿವೇಕನಗರ ಠಾಣೆಯ ಇನ್ಸ್​ಪೆಕ್ಟರ್ ಸೇರಿ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್‌ ಆದೇಶಿಸಿದ್ದಾರೆ. ವಿವೇಕನಗರ ಠಾಣೆ ಪಿಐ ಶಿವಕುಮಾರ್‌ ಹಾಗೂ ಮೂವರು ಸಿಬ್ಬಂದಿ ಅಮಾನತುಗೊಂಡವರು. ಗಲಾಟೆ ಸಂಬಂಧ ದರ್ಶನ್‌ ಎಂಬಾತನನ್ನು ಠಾಣೆಗೆ ಕರೆತಂದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿತ್ತು. ಗಾಯಗೊಂಡಿದ್ದ ಆತನನ್ನು ಬೆಂಗಳೂರು ಉತ್ತರ ತಾಲೂಕಿನ ಅಡಕಮಾರನಹಳ್ಳಿ ಪುನರ್ವಸತಿ ಕೇಂದ್ರದಲ್ಲಿ ಇರಿಸಲಾಗಿತ್ತು. ಆತ …

Read More »

ಜೈಲಾಧಿಕಾರಿಗಳ ಖಡಕ್ ಎಚ್ಚರಿಕೆಗೆ ಪ್ರತಿಭಟನೆ ಸ್ಥಗಿತಗೊಳಿಸಿದ ಕೈದಿಗಳು

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಬೀಡಿ ಹಾಗೂ ಸಿಗರೇಟ್ ಮಾರಾಟಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿ, ನಾಲ್ಕು ದಿನಗಳಿಂದ ಕೈದಿಗಳು ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದ್ದಾರೆ. ಪ್ರತಿಭಟನೆ ನಿಲ್ಲಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜೈಲಾಧಿಕಾರಿಗಳು ನೀಡಿದ ಎಚ್ಚರಿಕೆಯು ಕೈದಿಗಳ ಪ್ರತಿಭಟನೆ ತಣ್ಣಗಾಗುವಂತೆ ಮಾಡಿದೆ. ಜೈಲಿನ ನೂತನ ಮುಖ್ಯ ಜೈಲು ಅಧೀಕ್ಷಕರಾಗಿ ನೇಮಕಗೊಂಡಿರುವ ಐಪಿಎಸ್ ಅಧಿಕಾರಿ ಅಂಶುಕುಮಾರ್ ನೇತೃತ್ವದ ತಂಡ ನಿರಂತರ ಶೋಧ ನಡೆಸಿ, ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳಿಗೆ ಕಡಿವಾಣ ಹಾಕಿತ್ತು. ಅವ್ಯಾಹತವಾಗಿ ಬಳಕೆಯಾಗುತ್ತಿದ್ದ ಮೊಬೈಲ್​​ಗಳು, …

Read More »

ಕಬ್ಬಿನ ಟ್ರ್ಯಾಕ್ಟರ್​​ಗೆ ಕಾರು ಡಿಕ್ಕಿ, ಸ್ಥಳದಲ್ಲೇ ನಾಲ್ವರ ದುರ್ಮರಣ

ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20) ಹಾಗೂ ಪ್ರಜ್ವಲ್ (17) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಸಿದ್ದಾಪುರ ಗ್ರಾಮದ ನಿವಾಸಿಗಳೆಂದು ತಿಳಿದುಬಂದಿದೆ. ಸಿದ್ದಾಪುರ ಬಳಿರುವ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಸುವ ಟ್ರ್ಯಾಕ್ಟರ​ನ್ನು ಬಿಜಾಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿ …

Read More »

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ,

ಶೃಂಗೇರಿ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರ ಭೇಟಿ, ಜನ ಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದ್ರು ಸರಳತೆ ಸಾಹುಕಾರ. ಚಿಕ್ಕಮಗಳೂರು: 14ನೇ ಶತಮಾನದಲ್ಲಿ ನಿರ್ಮಿಸಲಾದ, ಹೊಯ್ಸಳ ಮತ್ತು ದ್ರಾವಿಡ ವಾಸ್ತುಶಿಲ್ಪ ಶೈಲಿಗಳ ಸಂಯೋಜನೆಯ ಅತ್ಯದ್ಭುತ ಶೃಂಗೇರಿಯ ವಿದ್ಯಾಶಂಕರ ದೇವಾಲಯಕ್ಕೆ ಉದ್ಯಮಿ ಸಂತೋಷ್ ಜಾರಕಿಹೊಳಿ ಅವರು ಭೇಟಿ ನೀಡಿ, ದೇವರ ಆಶೀರ್ವಾದ ಪಡೆದರು. ನಂತರ ಜನಸಾಮಾನ್ಯರಂತೆ ಪ್ರಸಾದ್ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸ್ನೇಹಿತರಾರ ಪ್ರಶಾಂತ್ ಜೋರಾಪುರ, ಚಂದ್ರಶೇಖರ ರೆಡ್ಡಿ ಅವರು ಜೊತೆ …

Read More »

ಸುಳಗಾ ಗ್ರಾಮದಲ್ಲಿ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ

ಸುಳಗಾ ಗ್ರಾಮದಲ್ಲಿ ರಸ್ತೆಗಳ ನಿರ್ಮಾಣಕ್ಕೆ ಭೂಮಿ ಪೂಜೆ ಬೆಳಗಾವಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳಗಾ(ಯು) ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ಯುವ ಕಾಂಗ್ರೆಸ್ ಮುಖಂಡ ಮೃಣಾಲ ಹೆಬ್ಬಾಳಕರ್ ಸೋಮವಾರ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸೇರಿ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಪ್ರಯತ್ನದ ಫಲವಾಗಿ ಮಂಜೂರಾಗಿರುವ ಸುಮಾರು 50 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಗಳ ನಿರ್ಮಾಣ ಮಾಡಲಾಗುತ್ತಿದ್ದು, ನಿಗದಿತ ಸಮಯದಲ್ಲಿ ರಸ್ತೆ ಕಾಮಗಾರಿ ಪೂರ್ಣಗೊಳಿಸುವಂತೆ ಹಾಗೂ …

Read More »

ಶಾಸಕ ಆಸಿಫ್ ಸೇಠ್ ಅವರಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗೆ ಚಾಲನೆ!

ಶಾಸಕ ಆಸಿಫ್ ಸೇಠ್ ಅವರಿಂದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗೆ ಚಾಲನೆ! 2025–26ನೇ ಸಾಲಿನ ಬೆಳಗಾವಿ ನಗರ ವಲಯದ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧೆಗಳ ಕಾರ್ಯಕ್ರಮವು ನಗರದ ಕ್ಯಾಂಪ್ ಪ್ರದೇಶದಲ್ಲಿರುವ ಮರಾಠಿ ವಿದ್ಯಾ ನಿಕೇತನ ಶಾಲೆಯಲ್ಲಿ ನಡೆಯಿತು. ಈ ಕಾರ್ಯಕ್ರಮಕ್ಕೆ ಶಾಸಕ ಆಸಿಫ್ ಸೇಠ್ ಅವರು ಚಾಲನೆ ನೀಡಿದರು. ಈ ಕಾರ್ಯಕ್ರಮದಲ್ಲಿ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿ, ಕಲೆ, ಸಂಸ್ಕೃತಿ, ಸಾಹಿತ್ಯ, ಸಂಗೀತ, ನೃತ್ಯ …

Read More »