ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು. ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್‌ಸೆಟ್‍ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ …
Read More »ವಾಲ್ಮೀಕಿ ನಿಗಮದಲ್ಲಿ ಅಕ್ರಮ ಆಗಿದ್ದು ನಿಜ
ಬೆಂಗಳೂರು, ಜುಲೈ20: ವಾಲ್ಮೀಕಿ ನಿಗಮದಲ್ಲಿ ಯಾವುದೇ ಅಕ್ರಮ ಆಗಿಲ್ಲ ಎಂದು ನಾವು ಹೇಳುತ್ತಿಲ್ಲ. ಅಕ್ರಮ ಎಸಗಿದವರ ವಿರುದ್ಧ ಸೂಕ್ತ ಕ್ರಮ ಜರುಗಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಈ ಕುರಿತು ಶುಕ್ರವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ವಾಲ್ಮಿಕಿ ನಿಗಮದಲ್ಲಿ ನಡೆದಿರುವ ಹಣಕಾಸಿನ ಅವ್ಯವಹಾರದ ಬಗ್ಗೆ ಈಗಾಗಲೇ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಎಸ್‌ಐಟಿ ತನಿಖೆಯಲ್ಲಿ ಸರ್ಕಾರಕ್ಕೆ ಸಂಪೂರ್ಣ ಭರವಸೆಯಿದೆ. ರಾಜ್ಯ ಸರ್ಕಾರಕ್ಕೆ ಹಾಗೂ ತನಗೆ ಮಸಿ ಬಳಿಯುವ …
Read More »ಗಂಧದ ಮರ ಕಡಿದರೆ 5 ವರ್ಷ ಜೈಲು ಶಿಕ್ಷೆ
ಬೆಂಗಳೂರು : ಗಂಧದ ಮರ ಕಡಿದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ದಂಡ ವಿಧಿಸಿ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಗಂಧದ ಮರ ಕಡಿದು ಕಳುವು ಮಾಡಲು ಯತ್ನಿಸಿದ ಆರೋಪಿಗೆ 10 ಸಾವಿರ ದಂಡ ವಿಧಿಸಿದ್ದ ಹೈಕೋರ್ಟ್ ದಂಡದ ಮೊತ್ತವನ್ನು 50 ಸಾವಿರಕ್ಕೆ ಹೆಚ್ಚಿಸಿ 5 ವರ್ಷ ಶಿಕ್ಷೆ ಖಾಯಂಗೊಳಿಸಿದೆ. ಮಂಡ್ಯ ಜಿಲ್ಲೆಯ ಬಲ್ಲೇನಹಳ್ಳಿ ಗ್ರಾಮದ ದೇವಾರಾಜಾಚಾರಿ ಎಂಬುವವರಿಗೆ ಈ ಶಿಕ್ಷೆನೀಡಲಾಗಿದೆ. ಸೆಕ್ಷನ್ …
Read More »ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ 3 ಸಾವು! ಮಲಗಿದ್ದವರನ್ನ ಬಲಿಪಡೆದ ಜವರಾಯ, ಪರಿಹಾರ ಘೋಷಣೆ
ಹಾವೇರಿ: ಬಡವ ನೀ ಮಡಗಿದಂಗೆ ಇರು ಎಂಬಂತೆ ತಾವಾಯಿತು ತಮ್ಮ ಕೆಲಸವಾಯಿತು ಎನ್ನುತ್ತಿದ್ದ ಕುಟುಂಬದ ಮೇಲೆ ಜವರಾಯ ಅಟ್ಟಹಾಸ ಮೆರೆದಿದ್ದಾರೆ. ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆಯ (Rain) ಕಾರಣ ಈ ಕುಟುಂಬಸ್ಥರು ರಾತ್ರಿ ಹಾಯಾಗಿ ನಿದ್ರೆಗೆ ಜಾರಿದ್ದರು. ಆದರೆ ನಸುಕಿನಜಾವ ಮಲಗಿದ್ದವರ ಮೇಲೆ ಆ ಮನೆಯ ಮೇಲ್ಚಾವಣಿ (Roof) ಯಮಸ್ವರೂಪಿಯಾಗಿದೆ. ಏಕಾಏಕಿ ಕುಸಿದಿದ್ದರಿಂದ ಮೈಮೇಲೆ ಮಣ್ಣು ಕುಸಿದು ಮಲಗಿದ್ದ ಕುಟುಂಬ ಮೂವರ ಉಸಿರುಗಟ್ಟಿ (suffocation) ಸಾವನ್ನಪ್ಪಿದ್ದಾರೆ. ಮಳೆಯಿಂದಾದ ಈ ದುರಂತದಲ್ಲಿ …
Read More »ಯಡಿಯೂರಪ್ಪ, ಬೊಮ್ಮಾಯಿ ಕಾಲದಲ್ಲಿ ರೂ.300 ಕೋಟಿಗೂ ಹೆಚ್ಚು ಅಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು : “ಬಿಜೆಪಿಗರು ಭ್ರಷ್ಟಾಚಾರದ ಪಿತಾಮಹರು. ಯಡಿಯೂರಪ್ಪ ಅವರು ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಹಲವಾರು ನಿಗಮಗಳ ಸುಮಾರು ₹ 300 ಕೋಟಿಗೂ ಹೆಚ್ಚು ಅಕ್ರಮ ನಡೆದಿದೆ. ಇದನ್ನು ನಾವು ಸದನದ ಮೂಲಕ ಜನರಿಗೆ ತಿಳಿಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ವಿಧಾನಸೌಧದ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು “ಬಿಜೆಪಿ ಸರ್ಕಾರದ ಅವಧಿಯಲ್ಲಿ ಭೋವಿ ನಿಗಮದ ₹87 ಕೋಟಿ. ಎಪಿಎಂಸಿಯ ₹47 ಕೋಟಿ, 2019 ರಲ್ಲಿ ಅಂಗವಿಕಲ …
Read More »ಏರ್ ಲೈನ್ಸ್, ಬ್ಯಾಂಕಿಂಗ್ ಗೂ ತಟ್ಟಿದ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ!
ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ಏರ್ ಲೈನ್ಸ್, ಬ್ಯಾಂಕಿಂಗ್ ಸೇರಿದಂತೆ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ. ಹೊಸ ಕ್ರೌಡ್‌ಸ್ಟ್ರೈಕ್ (ಸೈಬರ್ ಸೆಕ್ಯುರಿಟಿ ಸಾಫ್ಟ್‌ವೇರ್ ಸಂಸ್ಥೆ) ಅಪ್‌ಡೇಟ್ ಸ್ಥಗಿತಕ್ಕೆ ಕಾರಣ ಎಂದು ಉಲ್ಲೇಖಿಸಲಾಗಿದೆ. ಏರ್ ಲೈನ್ಸ್ ಮೇಲೆ ಪರಿಣಾಮ ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ತಟ್ಟಿದ್ದು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಉಂಟಾಗಿದೆ. ಚೆಕ್ ಇನ್, ಬೋರ್ಡಿಂಗ್ ಗಳಲ್ಲಿ ವಿಳಂಬ ಉಂಟಾಗಿ, ಹಲವು …
Read More »ನಕಲಿ ಖಾತೆ ತೆರೆದು ಬ್ಯಾಂಕ್ ಗಳಲ್ಲಿ ಅವ್ಯವಹಾರ: ಮೂವರು ಆರೋಪಿಗಳು ಅರೆಸ್ಟ್
ಹುಬ್ಬಳ್ಳಿ: ವಿವಿಧ ಬ್ಯಾಂಕ್ ಗಳಲ್ಲಿ ನಕಲಿ ಖಾತೆ ತೆರೆದು ಅವ್ಯವಹಾರ ನಡೆಸುತ್ತಿದ್ದ ಮೂವರು ಆರೋಪಿಗಳನ್ನು ಹುಬ್ಬಳ್ಳಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ದೇಶದ ವಿವಿಧ ರಾಜ್ಯಗಳ ಬ್ಯಾಂಕ್ ಗಳಲ್ಲಿ ನಕಲಿ ಖಾತೆ ತೆರೆದು ಅವ್ಯವಹಾರ ನಡೆಸುತ್ತಿದ್ದರು. ಇದೀಗ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರನ್ನು ದೆಹಲಿ ಮೂಲದ ನಿಖಿಲ್ ಕುಮಾರ್ ರೌನಿ, ಸಚಿನ್ ಬೋಲಾ, ಮುಂಬೈ ಮೂಲದ ನಿಗಮ್ ಎಂದು ಗುರುತಿಸಲಾಗಿದೆ. ಬಂಧಿತ ಅರೋಪಿಗಳಲ್ಲಿ ಇಬ್ಬರು ಸಪಹ್ಟ್ ವೇರ್ ಇಂಜಿನಿಯರ್ ಗಳಾಗಿದ್ದು, …
Read More »ಬೆಂಗಳೂರು-ಮಂಗಳೂರು ನಡುವೆ ಹೆಚ್ಚುವರಿ ವಿಶೇಷ ರೈಲು ಸಂಚಾರ
ಬೆಂಗಳೂರು: ಗುಡ್ಡ ಕುಸಿತದಿಂದಾಗಿ ಬೆಂಗಳೂರು-ಮಂಗಳೂರು ಸಂಪರ್ಕಿಸುವ ಎರಡು ಮುಖ್ಯ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗಿರುವ ಹಿನ್ನಲೆ, ಜನರ ಅನುಕೂಲಕ್ಕಾಗಿ ಎರಡು ಹೆಚ್ಚುವರಿ ವಿಶೇಷ ರೈಲು ಸಂಚಾರ ಆರಂಭಿಸಲು ನೈಋತ್ಯ ರೈಲ್ವೆ ಮುಂದಾಗಿದೆ. ರೈಲು ಸಂಖ್ಯೆ 06547 ಜುಲೈ 19 ರಂದು ರಾತ್ರಿ 11 ಗಂಟೆಗೆ ಕೆಎಸ್‌ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 11:40 ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ. ಈ ರೈಲು ಬೆಂಗಳೂರು ಕಂಟೋನ್ಮೆಂಟ್, ಎಸ್‌ಎಂವಿಟಿ ಬೆಂಗಳೂರು, ಚಿಕ್ಕಬಾಣಾವರ, ನೆಲಮಂಗಲ, …
Read More »ಅನ್ಮೋದ್ ಘಾಟ್‍ನಲ್ಲಿ ಭಾರಿ ಭೂಕುಸಿತ
ಪಣಜಿ: ಕಳೆದ ಕೆಲ ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಗೆ ಕಾರವಾರದಂತೆಯೇ ಗೋವಾದಲ್ಲಿಯೂ ಭೂಕುಸಿತ ಉಂಟಾಗಿರುವ ಬಗ್ಗೆ ವರದಿಯಾಗಿದೆ. ದೂಧ್ ಸಾಗರ ದೇವಸ್ಥಾನದ ಸಮೀಪವಿರುವ ಅನ್ಮೋದ್ ಘಾಟ್‍ನಲ್ಲಿ ಭಾರಿ ಪ್ರಮಾಣದಲ್ಲಿ ಭೂಕುಸಿತವುಂಟಾಗಿದೆ. ಇಡೀ ರಸ್ತೆಯಲ್ಲಿ ಮಣ್ಣು ಹರಡಿರುವುದರಿಂದ ಈ ರಸ್ತೆಯಲ್ಲಿ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅನಮೋಡ ಘಾಟ್ ರಸ್ತೆಯು ಗೋವಾ ಮತ್ತು ಬೆಳಗಾವಿ ಸಂಪರ್ಕಿಸುವ ಪ್ರಮುಖ ರಸ್ತೆಯಾಗಿದೆ. ಪಶ್ಚಿಮಘಟ್ಟದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಹಲವೆಡೆ ಭೂಕುಸಿತ ಉಂಟಾಗುತ್ತಿದೆ. ಸದ್ಯ ಅನ್ಮೋದ್ ಘಾಟ್ ರಸ್ತೆಯಲ್ಲಿ …
Read More »ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕ: ಲಕ್ಷ್ಮೀ ಹೆಬ್ಬಾಳಕರ್
ಬೆಂಗಳೂರು, ಜುಲೈ 19: ಶೀಘ್ರವೇ ಅಂಗನವಾಡಿ ಶಿಕ್ಷಕಿಯರ ನೇಮಕಾತಿ ಪ್ರತಿಕ್ರಿಯೆ ನಡೆಯಲಿದೆ. ಈಗಾಗಲೇ ಆನ್‌ಲೈನ್ ಮೂಲಕ ಅರ್ಜಿ ಕರೆದಿದ್ದು, ಜಿಲ್ಲಾಧಿಕಾರಿಗಳ, ಜಿಲ್ಲಾ ಪಂಚಾಯಿತಿಯ ಮುಖ್ಯಕಾರ್ಯನಿರ್ವಹಣಾಧಿಕಾರಿ (ಸಿಇಒ) ಒಳಗೊಂಡ ಜಿಲ್ಲಾ ಮಟ್ಟದ ಸಮಿತಿಯಲ್ಲಿ ನೇಮಕಾತಿ ನಡೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನ ಪರಿಷತ್ ಕಲಾಪದಲ್ಲಿ ಶುಕ್ರವಾರ ನಡೆದ ಪ್ರಶ್ನೋತ್ತರ ವೇಳೆ ಸದಸ್ಯ ಕೆ.ಅಬ್ದುಲ್ ಜಬ್ಬರ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅದಷ್ಟು …
Read More »