Breaking News

ಗೊಂದಲಕ್ಕೆ ಹೈಕಮಾಂಡ್ ಹೊಣೆಯಲ್ಲ, ಸ್ಥಳೀಯ ನಾಯಕರೇ ಬಗೆಹರಿಸಬೇಕು: ಖರ್ಗೆ

ಕಲಬುರಗಿ: ರಾಜ್ಯದಲ್ಲಿನ ನಾಯಕತ್ವ ಗೊಂದಲವನ್ನು ಸ್ಥಳೀಯ ಮಟ್ಟದಲ್ಲೇ ಬಗೆಹರಿಸಿಕೊಳ್ಳಬೇಕು. ಪ್ರತಿಯೊಂದಕ್ಕೂ ಹೈಕಮಾಂಡ್ ಹೆಸರನ್ನು ಎಳೆದು ತರುವುದು ಸರಿಯಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು. ಮುಖ್ಯಮಂತ್ರಿ ಹುದ್ದೆ ಕುರಿತ ಗೊಂದಲಗಳನ್ನು ಬಗೆಹರಿಸುವಂತೆ ಕಾಂಗ್ರೆಸ್ ಮುಖಂಡ ಸುದರ್ಶನ್ ಅವರು ಎಐಸಿಸಿ ಅಧ್ಯಕ್ಷರಿಗೆ ಪತ್ರ ಬರೆದಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಆ ಪತ್ರ ಇನ್ನೂ ನಮ್ಮ ಕೈ ಸೇರಿಲ್ಲ. ದೆಹಲಿಗೆ ಹೋದ ಬಳಿಕ ಪತ್ರದ ವಿಷಯ ತಿಳಿಯಲಿದೆ. ಯಾವ ಉದ್ದೇಶಕ್ಕೆ ಪತ್ರ ಬರೆದಿದ್ದಾರೆ, …

Read More »

ಹಾನಗಲ್​ನಲ್ಲಿ ನಡೆದಿದ್ದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಗಡಿಪಾರು ಮಾಡಲಾಗಿದೆ.

ಹಾವೇರಿ: ಹಾನಗಲ್ ಸಾಮೂಹಿಕ ಅತ್ಯಾಚಾರ ಪ್ರಕರಣದ 7 ಮಂದಿ ಆರೋಪಿಗಳನ್ನು ಹಾವೇರಿ ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ. ಆರೋಪಿಗಳನ್ನು ಯಾದಗಿರಿ ಜಿಲ್ಲೆಗೆ ಗಡಿಪಾರು ಮಾಡಿ ಸವಣೂರು ಉಪ ವಿಭಾಗಾಧಿಕಾರಿ ಶುಭಂ ಶುಕ್ಲಾ ಆದೇಶ ಹೊರಡಿಸಿದ್ದಾರೆ. ಪ್ರಕರಣದಲ್ಲಿ, ಅಪ್ತಾಬ್ ಚಂದನಕಟ್ಟಿ, ಮದರ್ ಸಾಬ್ ಮಂಡಕ್ಕಿ, ಮಹ್ಮಮದ್ ಸಾದಿಕ್ ಅಗಸಿಮನಿ, ರಿಯಾಜ್ ಸಾವಿಕೇರಿ, ಸಮಿವುಲ್ಲಾ ಲಾಲನವರ, ಶೋಯಿಬ್ ಮುಲ್ಲಾ ಹಾಗೂ ತೌಸಿಪ್ ಅಹ್ಮದ್ ಚೌಟಿ ಎಂಬವರು ಗಡಿಪಾರಾದವರು ಎಂದು ಗುರುತಿಸಲಾಗಿದೆ. ಗ್ಯಾಂಗ್ ರೇಪ್ ಆರೋಪಿಗಳನ್ನು ಗಡಿಪಾರು …

Read More »

ನನ್ನ ಮತ್ತು ಸಿದ್ದರಾಮಯ್ಯನವರ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದ ಡಿಸಿಎಂ

ಬೆಂಗಳೂರು: “ನನಗೆ ಕಾಂಗ್ರೆಸ್​ನ ಯಾವುದೇ ನಾಯಕರೊಂದಿಗೆ ಭಿನ್ನಾಭಿಪ್ರಾಯವಿಲ್ಲ. ನಾನು, ಸಿಎಂ ಒಟ್ಟಿಗೆ ಸಹೋದರರಂತೆ ಕೆಲಸ ಮಾಡುತ್ತಿಲ್ಲವೇ?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಮಾಧ್ಯಮದವರಿಗೆ ಮರುಪ್ರಶ್ನೆ ಹಾಕಿದರು. ಸದಾಶಿವನಗರದ ತಮ್ಮ ನಿವಾಸದ ಬಳಿ ಇಂದು ಮಾತನಾಡಿದ ಅವರು, ಮುಖ್ಯಮಂತ್ರಿಯವರ ಆಪ್ತ ಬಳಗದವರನ್ನು ಭೇಟಿ ಮಾಡಿರುವ ಕುರಿತ ಪ್ರಶ್ನೆಗೆ, “ಅವರಿಗೆ ಸಿಎಂ ಆಪ್ತರೇನು?. ಅವರು ನನಗೂ ಆಪ್ತರೇ. ಅವರು ಯಾರಿಗೆ ಆಪ್ತರಿಲ್ಲ ಹೇಳಿ?. ನಾನು ಸಿಎಂ ಆಪ್ತರಲ್ಲವೇ? ರಾಜಣ್ಣ ಅವರು ಜನತಾ ದಳದಲ್ಲಿದ್ದರು. ನಾನು ಕಾಂಗ್ರೆಸ್​ನವನು. …

Read More »

ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ

ಬೆಂಗಳೂರು: ಇಂದಿನಿಂದ ರಾಜ್ಯಾದ್ಯಂತ ಮೂರು ದಿನಗಳ ಕಾಲ ನಡೆಯುವ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ರಾಷ್ಟ್ರೀಯ ಲಸಿಕಾ ದಿನ(ಪಲ್ಸ್ ಪೋಲಿಯೋ) 2025ಗೆ ಸಿಎಂ ಸಿದ್ದರಾಮಯ್ಯ ಮಗುವಿಗೆ ಲಸಿಕೆ ನೀಡುವ ಮೂಲಕ ಚಾಲನೆ ಕೊಟ್ಟರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಪುಟ್ಟ ಮಕ್ಕಳಿದ್ದಲ್ಲಿ‌ ಇಂದಿನಿಂದ ಡಿಸೆಂಬರ್ 24ರ ಒಳಗಾಗಿ ತಪ್ಪದೇ ಸಮೀಪದ ಲಸಿಕಾ ಕೇಂದ್ರಕ್ಕೆ ತೆರಳಿ ಪೋಲಿಯೋ ಲಸಿಕೆ ಹಾಕಿಸಿ, ಪೋಲಿಯೋ ಮುಕ್ತ …

Read More »

ಡಿ.ಕೆ.ಶಿವಕುಮಾರ್​ ದೆಹಲಿ ಪ್ರವಾಸ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದರ ಸಚಿವ ಸತೀಶ್​ ಜಾರಕಿಹೊಳಿ

ಚಿಕ್ಕೋಡಿ: ನಮ್ಮನ್ನು ಯಾರಾದರೂ ದೆಹಲಿಗೆ ಕರೆದರೆ ನಾವು ಹೋಗುವುದಕ್ಕೆ ಸಿದ್ಧರಿದ್ದೇವೆ. ಆದರೆ ಯಾರಾದರೂ ಕರೆಯಬೇಕಲ್ಲವೇ ಎಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿಂದು ಡಿ.ಕೆ.ಶಿವಕುಮಾರ್​ ದೆಹಲಿ ಪ್ರವಾಸ ಮಾಡುತ್ತಿದ್ದಾರೆ, ತಾವೂ ಹೋಗ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮನ್ನು ಕರೆದರೆ ನಾವು ರೆಡಿ ಇದ್ದೇವೆ, ಯಾರಾದ್ರೂ ಕರೆಯಬೇಕಲ್ಲವೇ? ಎಂದು ಕೇಳಿದರು. ಇವತ್ತು ಚಿಕ್ಕೋಡಿ ನ್ಯಾಯಾಲಯದ ಕಟ್ಟಡ ಸಂಕೀರ್ಣ ಉದ್ಘಾಟನಾ ಕಾರ್ಯಕ್ರಮವಿತ್ತು. …

Read More »

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ

ಪಲ್ಸ್‌ ಪೋಲಿಯೋ ಅಭಿಯಾನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಚಾಲನೆ ಬೆಳಗಾವಿ: ರಾಜ್ಯದೆಲ್ಲೆಡೆ ಹಮ್ಮಿಕೊಂಡಿರುವ ಪಲ್ಸ್ ಪೋಲಿಯೋ ಲಸಿಕೆಯ ಅಭಿಯಾನಕ್ಕೆ ಬೆಳಗಾವಿಯ ಗೃಹ ಕಚೇರಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಅವರು ಚಾಲನೆ ನೀಡಿದರು. ನಿಮ್ಮ ಮನೆಯಲ್ಲಿ 5 ವರ್ಷದೊಳಗಿನ ಮಕ್ಕಳಿದ್ದಲ್ಲಿ, ಮರೆಯದೇ ಹತ್ತಿರದ ಲಸಿಕಾ ಕೇಂದ್ರಕ್ಕೆ ಕರೆತನ್ನಿ. ಪೋಲಿಯೋ ಮುಕ್ತ ಸಮಾಜ ನಿರ್ಮಾಣಕ್ಕೆ ಕೈ ಜೋಡಿಸಿ ಎಂದು ಸಚಿವರು ಕರೆ ನೀಡಿದರು. ಈ ವೇಳೆ …

Read More »

ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ 1.90 ಕೋಟಿ ರೂ. ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಬೆಳಗಾವಿ: ನಿಲಜಿ ಗ್ರಾಮದ ಸರ್ವತೋಮುಖ ಅಭಿವೃದ್ಧಿಗೆ ಬದ್ಧವಾಗಿದ್ದು, ಇದಕ್ಕಾಗಿ 1.90 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು. ಬೆಳಗಾವಿ ಗ್ರಾಮೀಣ ಕ್ಷೇತ್ರದ ನಿಲಜಿ ಗ್ರಾಮದ ಶ್ರೀ ಮಹಾಲಕ್ಷ್ಮಿ …

Read More »

ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು…

ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು… ಇದು ಕಳ್ಳರ ತಿರುಬೊಬ್ಬೆ ಎಂದ ಕನ್ನಡ ಹೋರಾಟಗಾರ ಅಶೋಕ್ ಚಂದರಗಿ ಕರ್ನಾಟಕಕ್ಕೆ ಪ್ರವೇಶ ನೀಡದೇ ಸಂಸತ್ ಹಕ್ಕು ಭಂಗದ ಆರೋಪ ಬೆಳಗಾವಿ ಡಿಸಿ ವಿರುದ್ಧ ಸಂಸತ್ ಸಭಾಪತಿಗಳಿಗೆ ಧೈರ್ಯಶೀಲ್ ಮಾನೆ ದೂರು ಕ್ರಮಕೈಗೊಳ್ಳಬೇಕೆಂದು ಸಭಾಪತಿಗಳಿಗೆ ಮನವಿ ‘ಬೆಳಗಾವಿಯಲ್ಲಿ ನ.1ರಂದು ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಿದ್ದ ಕರಾಳ ದಿನಾಚರಣೆಯಲ್ಲಿ ಭಾಗಿಯಾಗಲು ತೆರಳುತ್ತಿದ್ದ ನನಗೆ ಬೆಳಗಾವಿ ಪ್ರವೇಶ ನಿಷೇಧಿಸಿದ ಬೆಳಗಾವಿ ಜಿಲ್ಲಾಧಿಕಾರಿ …

Read More »

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ

ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಸಾವು – ಗ್ರಾಮದಲ್ಲಿ ಶೋಕ ಗೋಕಾಕ ತಾಲೂಕಿನ ನಂದಗಾಂವ ಸಾವಳಗಿ ಗ್ರಾಮದ ಚಂದ್ರಯ್ಯಾ ಬಸಲಿಂಗಯ್ಯಾ ಮಠಪತಿ ವಯಸ್ಸು (65) ಹೊಲದಲ್ಲಿ ಕೃಷಿ ಕೆಲಸ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್‌ಗೆ ಸಿಲುಕಿ ರೈತ ಮೃತಪಟ್ಟಿರುವ ದುರ್ಘಟನೆ ನಡೆದಿದೆ. ಟ್ರ್ಯಾಕ್ಟರ್ ಮೂಲಕ ಜಮೀನು ಹೋಲುತಿದ್ದ ಸಂದರ್ಭದಲ್ಲಿ ಅಚಾನಕ್ ಟ್ರ್ಯಾಕ್ಟರ್ ನಿಯಂತ್ರಣ ತಪ್ಪಿ ರೈತನು ಚಕ್ರದ ಕೆಳಗೆ ಸಿಲುಕಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಘಟನೆಯಿಂದ ರೈತನಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳೀಯರು ತಕ್ಷಣ …

Read More »

ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ.

ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ. ಗೋಕಾಕ : ಇಂದು ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನದ ಅಡಿ ಗೋಕಾಕ ತಾಲೂಕು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆವರಣದಲ್ಲಿ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಮಗುವಿಗೆ ಪೋಲಿಯೋ ಲಸಿಕೆ ಹಾಕುವ ಮೂಲಕ ಜಿಲ್ಲಾ ಉಸ್ತುವಾರಿ ಸಚಿವರಾದ ಸಚಿವ ಸತೀಶ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಮೋಹನ್ ಭಸ್ಮೆ, ಜಿಲ್ಲಾ …

Read More »