ಬೆಂಗಳೂರು: ಜೆಡಿಎಸ್ ಮುಖಂಡ ಅಂದಾನಪ್ಪ ಮನೆಯಲ್ಲಿ ವಾಚ್‌ಮ್ಯಾನ್ ಕೆಲಸ ಮಾಡುತ್ತಿದ್ದ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಲಗ್ಗೆರೆಯಲ್ಲಿ ನಡೆದಿದೆ. ನಾಗರಾಜ್ (65) ಮೃತ ವಾಚ್‌ಮ್ಯಾನ್. ಹಾಸನ ಜಿಲ್ಲೆಯ ಅರಸೀಕೆರೆಯ ನಾಗರಾಜ್ ಲಗ್ಗೆರೆ ಬಳಿಯಿರುವ ಅಂದಾನಪ್ಪ ಮನೆಯಲ್ಲಿ ಕಳೆದ ನಾಲ್ಕೈದು ವರ್ಷಗಳಿಂದ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಇದ್ದಕ್ಕಿದ್ದಂತೆ ಅಂದಾನಪ್ಪ ಬಿಲ್ಡಿಂಗ್‌ನ ಸ್ಟಾರ್ ಫ್ರೂಟ್ ಮರಕ್ಕೆ ಶಾಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ರಾಜಗೋಪಾಲನಗರ ಪೊಲೀಸರು ಭೇಟಿ ನೀಡಿ …
Read More »ಆನೇಕಲ್ ರಸ್ತೆ ಬದಿಯ ಪೊದೆಯಲ್ಲಿ ಶವ ಪತ್ತೆ – ಕ್ಷುಲ್ಲಕ ಕಾರಣಕ್ಕೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ
ಬೆಂಗಳೂರು: ಆನೇಕಲ್ ರಸ್ತೆ ಬದಿಯ ಪೊದೆಯಲ್ಲಿ ಪತ್ತೆಯಾಗಿದ್ದ ಶವ ಪ್ರಕರಣಕ್ಕೆ ಸಂಬಧಿಸಿದಂತೆ ಪೊಲೀಸರು ಕೊಲೆಯಾದ ಯುವಕನ ಗುರುತು ಪತ್ತೆಹಚ್ಚಿದ್ದಾರೆ. ಆನೇಕಲ್ ತಾಲೂಕಿನ ರಾಮಕೃಷ್ಣಪುರ ರಸ್ತೆ ಬದಿ ಯುವಕನ ಶವ ಪತ್ತೆಯಾಗಿತ್ತು. ಈ ಶವ ಸುಭಾಷ್ ಎಂಬ ಯುವಕನದ್ದು ಎನ್ನಲಾಗಿದೆ. ಸುಭಾಷ್ ಆನೇಕಲ್ ತಾಲೂಕಿನ ಕರ್ಪೂರು ಗ್ರಾಮದ ನಿವಾಸಿಯಾಗಿದ್ದ. ಡಕಾಯಿತಿ, ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಈತ, ಗ್ಯಾಂಗ್ ಕಟ್ಟಿಕೊಂಡು ಆಟೋದಲ್ಲಿ ಓಡಾಡುತ್ತಿದ್ದ. ಸುಭಾಷ್ ಹಾಗೂ ಅವನ ಗ್ಯಾಂಗ್ 23ರಂದು ರಾತ್ರಿ ಆಟೋದಲ್ಲಿ …
Read More »ದರ್ಶನ್‌ಗೆ ಸಂಕಷ್ಟ – ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ. ಪ್ರದೂಷ್ ಮಾಫಿ ಸಾಕ್ಷಿ ತಡೆಯಲು ದರ್ಶನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಮಾಫಿ ಸಾಕ್ಷಿ ದಾಖಲಿಸಲು 59ನೇ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ದರ್ಶನ್‌ಗೆ ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿ ಹೇಳಿಕೆ ದಿನಾಂಕ ನಿಗದಿ ಬೆನ್ನಲ್ಲೇ, ಹೈಕೋರ್ಟ್ ಆದೇಶದ ವಿರುದ್ಧ …
Read More »ದಸರಾ, ದೀಪಾವಳಿಗೆ ಸಕ್ಕರೆ ಬೆಲೆ ಕೈಗೆಟುಕುವ ದರದಲ್ಲಿಡಲು ಸರ್ಕಾರ ಬದ್ಧ: ಭಾರತದ ಸಕ್ಕರೆ ಉತ್ಪಾದಕರ ಅಸೋಸಿಯೇಷನ್
ನವದೆಹಲಿ: ದಸರಾ, ದೀಪಾವಳಿ ವೇಳೆ ಸಕ್ಕರೆ ಬೆಲೆ ಕೈಗೆಟಕುವ ದರದಲ್ಲಿಡಲು ಸರ್ಕಾರ ಬದ್ಧವಾಗಿದೆ ಎಂದು ಭಾರತದ ಸಕ್ಕರೆ ಉತ್ಪಾದಕರ ಅಸೋಸಿಯೇಷನ್ ತಿಳಿಸಿದೆ. ಹಬ್ಬದ ಅವಧಿಯಲ್ಲಿ ಗ್ರಾಹಕರಿಗೆ ಸಕ್ಕರೆಯು ಸಮಂಜಸವಾದ ದರದಲ್ಲಿ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ಸಕ್ಕರೆ ಉದ್ಯಮವು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ ಎಂದು ಅಸೋಸಿಯೇಷನ್ ಮಹಾನಿರ್ದೇಶಕ ದೀಪಕ್ ಬಲ್ಲಾನಿ ತಿಳಿಸಿದ್ದಾರೆ. ಶೀಘ್ರದಲ್ಲೇ ದಸರಾ, ದೀಪಾವಳಿ ಸೇರಿದಂತೆ ಹಲವು ಹಬ್ಬಗಳು ಬರಲಿವೆ. ಹೀಗಾಗಿ, ಸಕ್ಕರೆಯು ಕೈಗೆಟುಕುವ ದರದಲ್ಲಿ ಲಭ್ಯವಿರುವುದನ್ನು ನಾವು ಖಚಿತಪಡಿಸಿಕೊಳ್ಳಬೇಕು. …
Read More »ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳಿಂದ ದಸರಾ ಉದ್ಘಾಟನೆ
ಬೆಂಗಳೂರು: ನಾಡಿನ ಸಾಂಸ್ಕೃತಿಕ ಹೆಮ್ಮೆಯ ಪ್ರತೀಕವಾದ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಉದ್ಘಾಟಿಸಲಿದ್ದಾರೆ. ವಿಧಾನಸೌಧದಲ್ಲಿ ಈ ವಿಚಾರವನ್ನು ಅಧಿಕೃತವಾಗಿ ಸಿಎಂ ಡಿಕೆ ಶಿವಕುಮಾರ್ ಪ್ರಕಟಿಸಿದರು. ಅಕ್ಟೋಬರ್ 11 ರಿಂದ ಅಕ್ಟೋಬರ್ 21 ರವರೆಗೆ ಒಟ್ಟು 11 ದಿನಗಳ ಕಾಲ ಅತ್ಯಂತ ವೈಭವದಿಂದ ದಸರಾ ನಡೆಯಲಿದೆ. ಅ. 11 ಭಾನುವಾರ ಚಾಮುಂಡಿ ಬೆಟ್ಟದಲ್ಲಿ ಶ್ರೀ ಚಾಮುಂಡೇಶ್ವರಿ ದೇವಿಗೆ …
Read More »ಡೀಸೆಲ್ ಬೆಲೆ ಏರಿಕೆಯಿಂದ ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ
ಬೆಂಗಳೂರು: ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರೆ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಗುರುವಾರ ಬರ ಪರಿಸ್ಥಿತಿ ಬಗ್ಗೆ ನಡೆದ ಚರ್ಚೆಯ ವೇಳೆ ಹೇಳಿಕೆ ನೀಡಿದ ಅವರು, ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ …
Read More »ಸೌಜನ್ಯ ಕೊಲೆ ಕೇಸ್ – ಶಶಿಕುಮಾರ್ ನೇತೃತ್ವದಲ್ಲಿ ಎಸ್‌ಐಟಿ ರಚನೆ
ಬೆಂಗಳೂರು: ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಬಹುಚರ್ಚಿತ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಸುಪ್ರೀಂ ಕೋರ್ಟ್ ನೀಡಿದ ಮಹತ್ವದ ನಿರ್ದೇಶನದ ಮೇರೆಗೆ ಪ್ರಕರಣದ ಮರುತನಿಖೆಗಾಗಿ ಹಿರಿಯ ಪೊಲೀಸ್ ಅಧಿಕಾರಿಗಳನ್ನೊಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಐಜಿಪಿ ಎನ್. ಶಶಿಕುಮಾರ್ ಅವರ ನೇತೃತ್ವದಲ್ಲಿ ಈ ವಿಶೇಷ ತನಿಖಾ ದಳ ಕಾರ್ಯನಿರ್ವಹಿಸಲಿದ್ದು, ತಂಡದಲ್ಲಿ …
Read More »ತಮಿಳುನಾಡಿಗೆ ಕಾವೇರಿ ನೀರು ಬಿಡುವ ಆದೇಶ ಒಪ್ಪಲು ಸಾಧ್ಯವಿಲ್ಲ: ಚೆಲುವರಾಯಸ್ವಾಮಿ
ಬೆಂಗಳೂರು: ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 4 ಸಾವಿರ ಕ್ಯೂಸೆಕ್ ನೀರು ನೀಡಲು ಹೇಳಿರುವುದನ್ನು ಕರ್ನಾಟಕ ಒಪ್ಪಲು ಸಾಧ್ಯವೇ ಇಲ್ಲ ಎಂದು ಜಲ ಸಂಪನ್ಮೂಲ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸಹ ಇದೇ ಆದೇಶವನ್ನು ಎತ್ತಿಹಿಡಿದಿರುವುದು ರಾಜ್ಯದ ಪ್ರಸ್ತುತ ವಾಸ್ತವಿಕ ಪರಿಸ್ಥಿತಿಗೆ (ಮಳೆಯ ಕೊರತೆ) ವಿರುದ್ಧವಾಗಿದೆ. ಈಗ ನಮ್ಮಲ್ಲಿ ನೀರಿನ ಪ್ರಮಾಣ ಇನ್ನಷ್ಟು ಕಡಿಮೆಯಾಗಿದೆ. ಈಗ ನಾಲ್ಕು ಸಾವಿರ ಕ್ಯೂಸೆಕ್ ನೀರು ನೀಡಿ …
Read More »ಹೆಸರು ಇಲ್ಲದಿದ್ದಲ್ಲಿ, ಅರ್ಹ ಮತದಾರರು ಹೆಸರು ಸೇರ್ಪಡೆಗಾಗಿ ನಮೂನೆ-6 ಸಲ್ಲಿಸಿ: ಮಹೇಶ್ವರ್ ರಾವ್
ಬೆಂಗಳೂರು: ಜಿಬಿಎ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ರ ಕಾರ್ಯ ನಡೆಯುತ್ತಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಹೆಸರು ಇಲ್ಲದಿದ್ದಲ್ಲಿ, ಅರ್ಹ ಮತದಾರರು ಹೆಸರು ಸೇರ್ಪಡೆಗಾಗಿ ನಮೂನೆ-6 ಅನ್ನು ಸಲ್ಲಿಸುವಂತೆ ಬೆಂಗಳೂರು ನಗರ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಮನವಿ ಮಾಡಿದರು. ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ-2026ಕ್ಕೆ ಸಂಬಂಧಿಸಿದ ಹಕ್ಕು ಮತ್ತು ಆಕ್ಷೇಪಣೆಗಳ ಕುರಿತು ಜಿಬಿಎ ಕೇಂದ್ರ …
Read More »ದರ್ಶನ್‌ಗೆ ಸಂಕಷ್ಟ – ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಸೆ.28ಕ್ಕೆ ಕೋರ್ಟ್ ದಿನಾಂಕ ನಿಗದಿ ಮಾಡಿದೆ. ಪ್ರದೂಷ್ ಮಾಫಿ ಸಾಕ್ಷಿ ತಡೆಯಲು ದರ್ಶನ್ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ, ಮಾಫಿ ಸಾಕ್ಷಿ ದಾಖಲಿಸಲು 59ನೇ ಸೆಷನ್ಸ್ ಕೋರ್ಟ್ ಆದೇಶ ನೀಡಿದೆ. ಕೋರ್ಟ್ ಆದೇಶದ ಬೆನ್ನಲ್ಲೇ ದರ್ಶನ್‌ಗೆ ಸಂಕಷ್ಟ ಎದುರಾಗಿದೆ. ಮಾಫಿ ಸಾಕ್ಷಿ ಹೇಳಿಕೆ ದಿನಾಂಕ ನಿಗದಿ ಬೆನ್ನಲ್ಲೇ, ಹೈಕೋರ್ಟ್ ಆದೇಶದ ವಿರುದ್ಧ …
Read More »
Laxmi News 24×7