ಬೆಂಗಳೂರು: ಆನ್ಲೈನ್ನಲ್ಲಿ ಆರ್ಡರ್ ಮಾಡಿದ್ದ ಆಹಾರ ತಡವಾಗಿ ಬಂದಿದ್ದಕ್ಕೆ ಜೊಮ್ಯಾಟೊ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ್ದ ಇಬ್ಬರು ಕಿಡಿಗೇಡಿಗಳನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿದ್ಧಾರೆ. ಮುಬಾರಕ್ ಹಾಗೂ ಶಾರೂಕ್ ಬಂಧಿತರು. ಹಲ್ಲೆಗೊಳಗಾದ ಚಾಂದ್ ಎಂಬಾತ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡು ಆರೋಪಿಗಳನ್ನು ಬಂಧಿಸಲಾಗಿದೆ. ಆಗಿದ್ದೇನು?: ಸೆ.12ರಂದು ರಾತ್ರಿ ಬಾಪುಜಿ ನಗರದ ಬಳಿ ಆರೋಪಿಗಳು ಜ್ಯೊಮೊಟೊನಲ್ಲಿ ಬಿರಿಯಾನಿ ಆರ್ಡರ್ ಮಾಡಿದ್ದರು. ಮಳೆ ಹಿನ್ನೆಲೆಯಲ್ಲಿ ಡೆಲಿವರಿ ಬಾಯ್ ಚಾಂದ್ ತಡವಾಗಿ ಹೋಗಿದ್ದ. ಇದರಿಂದ …
Read More »ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರ ಭೇಟಿ
ಇಂದು ಬೆಂಗಳೂರಿನ ಗೃಹ ಕಚೇರಿಯಲ್ಲಿ ವಿವಿಧೆಡೆಯಿಂದ ಆಗಮಿಸಿದ್ದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರನ್ನು ಭೇಟಿ ಮಾಡಿ, ಅವರ ಅಹವಾಲುಗಳನ್ನು ಆಲಿಸಿ, ಸಮಸ್ಯೆಗಳಿಗೆ ಸೂಕ್ತ ಪರಿಹಾರಗಳನ್ನು ಸೂಚಿಸಲಾಯಿತು. ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ವಿಶ್ವಾಸ ವೈದ್ಯ ಅವರು ಉಪಸ್ಥಿತರಿದ್ದರು. #satishjarkiholi #Bengaluru #publicvisit
Read More »ಧಾರವಾಡ: ಯುಟ್ಯೂಬ್ ಸ್ಟಾರ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ: ಠಾಣೆ ಮೆಟ್ಟಿಲೇರಿದ ಪ್ರಕರಣ
ಧಾರವಾಡ: ಯುಟ್ಯೂಬ್, ಇನಸ್ಟಾಗ್ರಾಂ, ಫೇಸ್ಬುಕ್ ಸೇರಿದಂತೆ ಇತರ ಸಾಮಾಜಿಕ ಜಾಲತಾಣದಲ್ಲಿ ತಮ್ಮ ಕಾಮಿಡಿ ವೀಡಿಯೋಗಳ ಮೂಲಕವೇ ಸ್ಟಾರ್ ಎನಿಸಿಕೊಂಡಿರುವ ಧಾರವಾಡದ ಖಾಜಾ ಶಿರಹಟ್ಟಿ ಉರ್ಫ್ ಮುಕಳೆಪ್ಪನ ವಿರುದ್ಧ ಗಂಭೀರ ಆರೋಪ ಕೇಳಿ ಬಂದಿದ್ದು, ಮುಕಳೆಪ್ಪನ ವಿರುದ್ಧ ಬಜರಂಗದಳ ಕಾರ್ಯಕರ್ತರು ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ. ಹೌದು! ಮುಕಳೆಪ್ಪ ಮೂಲತಃ ಇಸ್ಲಾಂ ಧರ್ಮಕ್ಕೆ ಸೇರಿದವರಾಗಿದ್ದು, ಇವರು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನು ವಿವಾಹವಾಗಿದ್ದಾರೆ. ಈ ಬಗ್ಗೆ ಮುಂಡಗೋಡ ಸಬ್ ರಿಜಿಸ್ಟ್ರಾರ್ …
Read More »ಸುಪ್ರೀಂ ತೀರ್ಪಿನಿಂದ ನಮ್ಮ ಸರ್ಕಾರದ ನಿಲುವಿಗೆ ಮನ್ನಣೆ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಈ ವರ್ಷ ಮೈಸೂರು ದಸರಾ ಉತ್ಸವ ಉದ್ಘಾಟಿಸಲು ಕನ್ನಡ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿರ್ಧಾರದ ವಿರುದ್ಧ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಹಿಷ್ಣುತೆ ಹಾಗೂ ಸಹಬಾಳ್ವೆಯ ಮಹತ್ವದ ಪರವಾಗಿ ಮಾತನಾಡಿ, ವೈವಿಧ್ಯತೆಯಲ್ಲಿ ಏಕತೆಗಾಗಿ ಶ್ರಮಿಸುವಂತೆ ಕರೆ ನೀಡಿದ್ದಾರೆ. 2024ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಸಾಮಾಜಿಕ ನ್ಯಾಯ ಪತ್ರಿಕೋದ್ಯಮ ಪ್ರಶಸ್ತಿ ಮತ್ತು 2017 ರಿಂದ …
Read More »ಸಾಮಾಜಿಕ, ಶೈಕ್ಷಣಿಕ ಗಣತಿ ಪ್ರಶ್ನಿಸಿ ಅರ್ಜಿ: ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್
ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಸಮೀಕ್ಷೆಗೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳಿಗೆ ಸಂಬಂಧಿಸಿದಂತೆ ಕೇಂದ್ರ, ರಾಜ್ಯ ಸರ್ಕಾರಗಳಿಗೆ ಹೈಕೋರ್ಟ್ ನೋಟಿಸ್ ಜಾರಿಗೊಳಿಸಿದೆ. ಸಮೀಕ್ಷೆಗಾಗಿ 2025ರ ಆಗಸ್ಟ್ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ ಎನ್ ಸುಬ್ಬಾರೆಡ್ಡಿ ಮತ್ತಿತರರು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ …
Read More »ಹೆಬ್ಬಾವುಗಳ ಬಾಯಿಗೆ ಗಮ್ ಟೇಪ್ ಹಾಕಿ ಹಿಂಸೆ ನೀಡುತ್ತಿರುವುದು
ಶಿವಮೊಗ್ಗ: ಹೆಬ್ಬಾವುಗಳ ಬಾಯಿಗೆ ಗಮ್ ಟೇಪ್ ಹಾಕಿ ಚಿತ್ರಹಿಂಸೆ ನೀಡಿರುವ ಘಟನೆ ಜಿಲ್ಲೆಯ ಮಳಲಿಕೊಪ್ಪದಲ್ಲಿ ನಡೆದಿದೆ. ಇಲ್ಲಿನ ಇರ್ಫಾನ್ ಹಾಗೂ ಇತರ ಯುವಕರ ಗುಂಪು ಹೆಬ್ಬಾವುಗಳನ್ನು ಹಿಡಿದು ಅವುಗಳನ್ನು ಚೀಲದಲ್ಲಿ ಹಾಕಿಕೊಂಡು ಬಂದು ರಸ್ತೆಯಲ್ಲಿ ಬಾಲ ಹಿಡಿದು ಎಳೆದಾಡಿದ್ದಾರೆ ಹಾಗೂ ಅವುಗಳ ಬಾಯಿಗೆ ಪ್ಲಾಸ್ಟಿಕ್ ಗಮ್ ಟೇಪ್ ಹಾಕುವ ಮೂಲಕ ಅವುಗಳಿಗೆ ಹಿಂಸೆ ನೀಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಉಂಬ್ಳಬೈಲು …
Read More »ಸುಸಜ್ಜಿತ ಆಸ್ಪತ್ರೆಗಾಗಿ ದಶಕಗಳ ಹೋರಾಟ: ಚಿಕಿತ್ಸೆಗಾಗಿ ಹಳೇ ದಾವಣಗೆರೆ ಭಾಗದ ಜನರ ಪರದಾಟ
ದಾವಣಗೆರೆ: ಹಳೇ ದಾವಣಗೆರೆ ಭಾಗದಲ್ಲಿ ಹೆಚ್ಚು ಅಲ್ಪಸಂಖ್ಯಾತ ಕುಟುಂಬಗಳು ವಾಸಿಸುತ್ತಿವೆ. ಕೂಲಿ ಕಾರ್ಮಿಕರು, ಮಂಡಕ್ಕಿ ಭಟ್ಟಿ ಕಾರ್ಮಿಕರು, ಕಟ್ಟಡ ಕಾರ್ಮಿರು ಸೇರಿ ಬರೋಬ್ಬರಿ 80 ಸಾವಿರ ಜನಸಂಖ್ಯೆ ಇದೆ. ಆದರೆ, ಇಲ್ಲಿ ಸುಸಜ್ಜಿತ ಆಸ್ಪತ್ರೆ ಇಲ್ಲ. ಇದಕ್ಕಾಗಿ ಜನ ದಶಕಗಳಿಂದ ಹೋರಾಟ ಮಾಡ್ತಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿ ಎದುರಾದರೆ ಇಲ್ಲಿಯ ಜನ ಚಿಕಿತ್ಸೆಗಾಗಿ ಪರದಾಡುತ್ತಿದ್ದಾರೆ. ಚಿಕಿತ್ಸೆಗಾಗಿ ಇಲ್ಲಿನ ಜನ ರೈಲ್ವೆ ಹಳಿ ದಾಟಿ ಸಿಜಿ ಆಸ್ಪತ್ರೆ ಸೇರಿದಂತೆ ಇತರ ಖಾಸಗಿ ಆಸ್ಪತ್ರೆಗೆ …
Read More »ಸಿಪಿಐ ಬಿ ಆರ್ ಗಡ್ಡೇಕರ್ ಮತ್ತು ತಂಡ ಧಾರವಾಡದ ಸಮೀರ್ ಲಾಟ್ಮಣವರ್ ಅವರನ್ನು ಗಾಂಜಾ ಮಾರಾಟ ಮಾಡಿದ್ದಕ್ಕಾಗಿ ಬಂಧಿಸಿದ 5 ವರ್ಷ ಜೈಲು ಶಿಕ್ಷೆ ಮತ್ತು ₹50,000 ದಂಡ
ಬೆಳಗಾವಿ ಸಿಇಎನ್ ಅಪರಾಧ ಪೊಲೀಸ್ ಸಿಪಿಐ ಬಿ ಆರ್ ಗಡ್ಡೇಕರ್ ಮತ್ತು ತಂಡ ಧಾರವಾಡದ ಸಮೀರ್ ಲಾಟ್ಮಣವರ್ ಅವರನ್ನು ಗಾಂಜಾ ಮಾರಾಟ ಮಾಡಿದ್ದಕ್ಕಾಗಿ ಬಂಧಿಸಿದರು. 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಅವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು ₹50,000 ದಂಡ ವಿಧಿಸಿತು. `1Q43 ಇದು ಇತಿಹಾಸದಲ್ಲಿ ಮೊದಲ ಎನ್‌ಡಿಪಿಎಸ್ ಶಿಕ್ಷೆ ಪ್ರಕರಣವಾಗಿದೆ.
Read More »ಸರ್ಕಾರದ ಜನಪರ ವಿಚಾರಗಳನ್ನು ಜನರಿಗೆ ತಿಳಿಸಲು ಪ್ರಯತ್ನಿಸಿ- ಮಾಧ್ಯಮದವರಿಗೆ ಸಿಎಂ ಸಲಹೆ*
* *ದುರ್ಬಲ ವರ್ಗದವರ ಅಭಿವೃದ್ಧಿಯೇ ನಿಜವಾದ ಅಭಿವೃದ್ಧಿ* *ಸಾಮಾಜಿಕ ನ್ಯಾಯದ ಬಗ್ಗೆ ಮಾಧ್ಯಮಗಳು ಜನರಲ್ಲಿ ಜಾಗೃತಿ ಮೂಡಿಸಲಿ- ಮುಖ್ಯಮಂತ್ರಿ ಸಿದ್ದರಾಮಯ್ಯ* ಬೆಂಗಳೂರು, ಸೆಪ್ಟೆಂಬರ್ 19: ಸಮಾಜದಲ್ಲಿನ ಅಸಮಾನತೆಗೆ ಕಾರಣಗಳು ಹಾಗೂ ಸಾಮಾಜಿಕ ನ್ಯಾಯದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕಾರ್ಯದಲ್ಲಿ ಮಾಧ್ಯಮಗಳು ತೊಡಗಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದರು. ಅವರು ಇಂದು ಬೆಂಗಳೂರಿನ ವಾರ್ತಾ ಸೌಧದ ಸುಲೋಚನಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ 2024 ನೇ ಕ್ಯಾಲೆಂಡರ್ ವರ್ಷದ ವಡ್ಡರ್ಸೆ ರಘುರಾಮ ಶೆಟ್ಟಿ …
Read More »ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ
ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ಭಾಗಿಯಾದ ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ವೀರಶೈವ ಲಿಂಗಾಯತ್ ಏಕತಾ ಸಮಾವೇಶ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜನೆಎಂ.ಎಲ್.ಸಿ ಚನ್ನರಾಜ್ಹಟ್ಟಿಹೊಳಿ ಭಾಗಿವಿವಿಧ ವಿಷಯಗಳ ಕುರಿತು ಚರ್ಚೆ ಹುಬ್ಬಳ್ಳಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ವತಿಯಿಂದ ಆಯೋಜಿಸಲಾಗಿದ್ದ ವೀರಶೈವ ಲಿಂಗಾಯತ್ ಏಕತಾ ಸಮಾವೇಶದಲ್ಲಿ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾಗಿಯಾದರು. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ …
Read More »
Laxmi News 24×7