Breaking News

ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು

ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶನ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು ಬೆಳಗಾವಿಯ ರಾಜಾ…ಚವ್ಹಾಟಗಲ್ಲಿಯ ಗಣೇಶ ದರ್ಶನ ಪಡೆದ ಹೆಸ್ಕಾಂ ಅಧಿಕಾರಿಗಳು ಗಣೇಶೋತ್ಸವ ಯಶಸ್ವಿಗೆ ಸಹಕಾರ ಮಂಡಳಿದ ವತಿಯಿಂದ ಅಧಿಕಾರಿಗಳ ಸನ್ಮಾನ ಹೆಸ್ಕಾಂ ಅಧಿಕಾರಿಗಳು ಇಂದು ಬೆಳಗಾವಿಯ ರಾಜಾ ಚವ್ಹಾಟ ಗಲ್ಲಿಯ ಶ್ರೀ ಗಣೇಶನ ದರ್ಶನ ಪಡೆದುಕೊಂಡರು. ಬೆಳಗಾವಿಯ ರಾಜಾ ಚವ್ಹಾಟಗಲ್ಲಿ ಗಣಪತಿಯ ದರ್ಶನವನ್ನು ಇಂದು ಹೆಸ್ಕಾಂ ಎಇಇ ಅಶ್ವೀನ್ ಶಿಂಧೆ, ಮನೋಹರ್ ಸುತಾರ್ ಮತ್ತು ಭಜಂತ್ರಿ ಅವರು ಭೇಟಿ ನೀಡಿ ಗಣೇಶನ …

Read More »

ಪ್ರೀತಿಸಿ ಸರಳ ವಿವಾಹ, ನೇತ್ರದಾನಕ್ಕೂ ಸಹಿ ಹಾಕಿದ ನವಜೋಡಿ

ಮೈಸೂರು: ಸುಮಾರು ಹತ್ತು ವರ್ಷಗಳಿಂದ ಪ್ರೀತಿಯಲ್ಲಿ ಒಂದಾಗಿದ್ದ ನಗರದ ನಿವಾಸಿ ಚಂದನ್ ಮತ್ತು ಲಾವಣ್ಯ ಅವರ ಸರಳ ಮದುವೆ ಮೂಲಕ ಹೊಸ ಬದುಕನ್ನು ಪ್ರಾರಂಭಿಸಿದ್ದಾರೆ. ಮನೆಯವರ ಸಮ್ಮುಖದಲ್ಲಿ ದೇವಸ್ಥಾನದಲ್ಲಿ ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆ ಎಂದರೆ ಕೇವಲ ಸಂಬಂಧಿಕರು-ಸ್ನೇಹಿತರಿಗೆ ಔತಣಕೂಟ, ಆನಂದ-ಆಡಂಬರವೆಂದುಕೊಳ್ಳುವ ಅನೇಕ ಯುವ ದಂಪತಿಗಳಿಗೆ ಈ ಜೋಡಿ ನಿಜಕ್ಕೂ ಮಾದರಿಯಾಗಿದೆ. ಮಾಂಗಲ್ಯ ಧಾರಣೆ ಬಳಿಕ ನವ ದಂಪತಿ ಇಬ್ಬರೂ ಸ್ವಇಚ್ಛೆಯಿಂದಲೇ ಮೈಸೂರಿನ ಅಗರವಾಲ್ ಕಣ್ಣಿನ ಆಸ್ಪತ್ರೆಯ ವೈದ್ಯರ …

Read More »

ಬೆಳಗಾವಿ ಉಪನ್ಯಾಸಕಿ ಜ್ಯೋತಿಗೆ ಒಲಿದು ಬಂದ ರಾಜ್ಯಮಟ್ಟದ ಅತ್ಯುತ್ತಮ ಉಪನ್ಯಾಸಕಿ ಪ್ರಶಸ್ತಿ 

ಬೆಳಗಾವಿ: ಬೆಳಗಾವಿಯ ಶಹಾಪುರದ ಚಿಂತಾಮಣರಾವ್ ಪದವಿಪೂರ್ವ ಸರ್ಕಾರಿ ಕಾಲೇಜಿನ ಕನ್ನಡ ಉಪನ್ಯಾಸಕಿ ಜ್ಯೋತಿ ಸಿ.ಎಂ. ಅವರಿಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಉತ್ತಮ ಉಪನ್ಯಾಸಕಿ ಪ್ರಶಸ್ತಿ ಪ್ರದಾನ ಮಾಡಿದರು. ಶಾಲಾ ಶಿಕ್ಷಣ ಮತ್ತು ಸಾಕ್ಷಾರತಾ ಇಲಾಖೆ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ಶುಕ್ರವಾರ ಆಯೋಜಿಸಿದ್ದ ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ನಿಮಿತ್ತ ರಾಜ್ಯಮಟ್ಟದ ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಮುಖ್ಯಮಂತ್ರಿಗಳು …

Read More »

ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ಅಸೆಂಬ್ಲಿ ವಿಸರ್ಜಿಸಿ ಚುನಾವಣೆ ಎದುರಿಸಿ: ಮಾಜಿ ಸಚಿವ ಎಸ್. ಸುರೇಶ್

ಬೆಂಗಳೂರು: 2023 ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್​​ನ ಈ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್. ಸುರೇಶ್ ಕುಮಾರ್ ಅವರು ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗೆದ್ದಾಗಲೆಲ್ಲ ಚೆನ್ನಾಗಿದೆ. ಗೆಲ್ಲದೇ ಇದ್ದಾಗ ಇವಿಎಂ ಎಂಬ ಧೋರಣೆಯು ಅತ್ಯಂತ ಹಳೆಯ …

Read More »

ನಾಳೆ ಹಿಂದೂ ಮಹಾ ಮಂಡಳ ಗಣಪತಿ ಮೆರವಣಿಗೆ: ಶಿವಮೊಗ್ಗ ನಗರ ಕೇಸರಿಮಯ

ಶಿವಮೊಗ್ಗ : ರಾಜ್ಯದಲ್ಲಿಯೇ ಹೆಸರುವಾಸಿಯಾಗಿರುವ ಶಿವಮೊಗ್ಗದ ಹಿಂದೂ ಮಹಾಮಂಡಲದ ಗಣಪತಿಯ ರಾಜಬೀದಿ ಉತ್ಸವ ನಾಳೆ ನಡೆಯಲಿದೆ. ಗಣೇಶ ಚತುರ್ಥಿ ನಂತರ 11 ದಿನಕ್ಕೆ ಬರುವ ಅನಂತ ಚತುರ್ಥಿಯಂದು ಗಣೇಶನ ರಾಜಬೀದಿ ಉತ್ಸವ ನಡೆಯುವುದು ವಾಡಿಕೆ. ಇದರಿಂದಾಗಿ ನಾಳೆಯ ರಾಜಬೀದಿ ಉತ್ಸವಕ್ಕೆ ಹಿಂದೂ ಕೇಸರಿ ಅಲಂಕಾರ ಸಮಿತಿಯವರು ಶಿವಮೊಗ್ಗ ನಗರವನ್ನು ಸಂಪೂರ್ಣ ಕೇಸರಿಮಯ ಮಾಡಿದ್ದಾರೆ. ಇದಕ್ಕೆ ಪೊಲೀಸ್ ಇಲಾಖೆಯು 1 ಸಾವಿರ ಸಿಬ್ಬಂದಿಯನ್ನ ನಿಯೋಜಿಸಿದೆ. ಸಮುದ್ರ ಮಂಥನದ ಅಲಂಕಾರ : ಹಿಂದೂ ಕೇಸರಿ ಅಲಂಕಾರ …

Read More »

ಟ್ರಾಫಿಕ್ ನಿಯಮ ಉಲ್ಲಂಘಿಸಿದ ಸಂಬಂಧ ಸಿಎಂ ಕಾರಿನ ಮೇಲೆ ದಾಖಲಾದ ಪ್ರಕರಣ ಸಂಬಂಧ ದಂಡ ಪಾವತಿ

ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದ ವಾಹನ ಸವಾರರಿಗೆ ಶೇ.50 ರಷ್ಟು ದಂಡ ಪಾವತಿಗೆ ಸರ್ಕಾರ ರಿಯಾಯಿತಿ ನೀಡಿದ ಹಿನ್ನೆಲೆಯಲ್ಲಿ ಸವಾರರು ದಂಡ ಕಟ್ಟುವಲ್ಲಿ ನಿರತರಾಗಿದ್ದಾರೆ. ಇದುವರೆಗೂ 40 ಕೋಟಿಗಿಂತ ಹೆಚ್ಚು ದಂಡ ಪಾವತಿಸಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಕಾರಿನ ಮೇಲಿನ ಪ್ರಕರಣಗಳ ಸಂಬಂಧ ಕೂಡ ದಂಡ ಪಾವತಿಯಾಗಿದೆ. ಸಿಎಂ ಕಾರಿನ ಮೇಲೆ 7 ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಳಸುವ ಇನೋವಾ-ಕ್ರಿಸ್ಟಾ ಕಾರು 2024ರಿಂದ ಈವರೆಗೂ ಏಳು ಸಂಚಾರ ನಿಯಮಗಳ ಉಲ್ಲಂಘಿಸಿವೆ. …

Read More »

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ

ಗೋಕಾಕ ನಗರದಲ್ಲಿ ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಗೋಕಾಕ : ನಗರದ ಲಕ್ಷ್ಮೀ ಟಾಕೀಸ್ ಎದುರು ನೂತನವಾಗಿ ಆರಂಭಗೊಂಡ ಕುಂದಾಪುರ ಕೆಫೆಯನ್ನು ವಿಧಾನ ಪರಿಷತ್ ಸದಸ್ಯ ಲಖನ ಜಾರಕಿಹೊಳಿ ಅವರು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಆಪ್ತ ಸಹಾಯಕರಾದ ಸದಾನಂದ ಕಲಾಲ, ಮಾಲೀಕರಾದ ಮೋಹನ್ ಶೆಟ್ಟಿ, ರಮೇಶ್ ಶೆಟ್ಟಿ, ಸಂತೋಷ್ ಶೆಟ್ಟಿ, ಅರುಣ ಶೆಟ್ಟಿ, ಜಾದವ್ ಹಾಗೂ ಶೆಟ್ಟಿ ಕುಟುಂಬಸ್ಥರು ಉಪಸ್ಥಿತರಿದ್ದರು

Read More »

*ನಾಳೆ ವಿಜಯಪುರ ಜಿಲ್ಲೆಗೆ ನಾಡದೊರೆ: ಹಲವು ಸಮಸ್ಯೆಗಳಿಗೆ ನೀಡುವವರೇ ಪರಿಹಾರ?*

 ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಉತ್ತರ ಕರ್ನಾಟಕದ ಜೀವನಾಡಿಯಾಗಿರುವ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿಯಾಗಿದೆ. ಜಲಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಾಳೆ ಬಾಗಿನ ಅರ್ಪಿಸಲಿದ್ದಾರೆ. ಈ ಮಧ್ಯೆ, ಹಲವಾರು ಸಂಘಟನೆಗಳು ವಿವಿಧ ವಿಷಯಗಳ ಕುರಿತು ಮನವಿ ಸಲ್ಲಿಸಲು ಸಿಎಂ ಅವರನ್ನು ಭೇಟಿ ಮಾಡಲು ಸಿದ್ಧತೆ ನಡೆಸುತ್ತಿವೆ. ಈ ಕುರಿತುವಿಜಯಪುರ ಜಿಲ್ಲೆಯ ನಿಡಗುಂದಿ ತಾಲ್ಲೂಕಿನ ಆಲಮಟ್ಟಿ ಜಲಾಶಯದ ಒಳಹರಿವು ಸ್ಥಿರವಾಗಿ ಮುಂದುವರೆದಿದೆ. ಇದರಿಂದಾಗಿ ಆಲಮಟ್ಟಿ ಜಲಾಶಯ ಭರ್ತಿಯಾಗಿದೆ. …

Read More »

ತಾಯಿ ಪಿಂಚಣಿ ಹಣಕ್ಕಾಗಿ ಸಹೋದರರ ಜಗಳ; ಅಣ್ಣನ ಕೊಲೆಯಲ್ಲಿ ಅಂತ್ಯ

ಚಿಕ್ಕಬಳ್ಳಾಪುರ: ವೃದ್ಧ ತಾಯಿಗೆ ಬರುತ್ತಿದ್ದ ಪಿಂಚಣಿ ಹಣ ಹಂಚಿಕೆ ವಿಚಾರಕ್ಕೆ ಮೂವರು ಸಹೋದರರ ನಡುವೆ ಜಗಳವಾಗಿದ್ದು, ವಿಕೋಪಕ್ಕೆ ತಿರುಗಿ ಅಣ್ಣನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಗೌರಿಬಿದನೂರಿನಲ್ಲಿ ನಡೆದಿದೆ. ನರಸಿಂಹಮೂರ್ತಿ (45) ಕೊಲೆಯಾದ ಸಹೋದರ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಮೇಳ್ಯ ಗ್ರಾಮದಲ್ಲಿ ಘಟನೆ ನಡೆದಿದ್ದು, ಕೊಲೆ ಆರೋಪಿಗಳಾದ ರಾಮಾಂಜಿ (39) ಮತ್ತು ಗಂಗಾಧರಪ್ಪ (39) ಎಂಬವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಗೌರಿಬಿದನೂರು ಠಾಣೆ ಪೊಲೀಸರು ಮಾಹಿತಿ ನೀಡಿದ್ದಾರೆ. ಕೊಲೆಯಾದ …

Read More »

ಮಳೆ ಅಬ್ಬರಕ್ಕೆ ನಲುಗಿದ ಅನ್ನದಾತ

ಹಾವೇರಿ: ಭಾರಿ ಮಳೆಯಿಂದ ಜಿಲ್ಲೆಯ ಹಲವೆಡೆ ಬೆಳೆಗಳೆಲ್ಲ ರೋಗಕ್ಕೆ ತುತ್ತಾಗಿದ್ದು, ಬೇಸತ್ತ ರೈತನೋರ್ವ ಹತ್ತಿ ಬೆಳೆಯನ್ನು ಟ್ರ್ಯಾಕ್ಟರ್ ರೂಟರ್​​​ ಹೊಡೆದು ನಾಶ ಮಾಡಿದ್ದಾರೆ. ಈ ವರುಷ ಉತ್ತಮ ಮುಂಗಾರು ಪೂರ್ವ ಮಳೆ ಆಗಿರುವ ಹಿನ್ನೆಲೆಯಲ್ಲಿ, ರೈತರು ಹೆಚ್ಚಿನ ಬೆಳೆ ಬಿತ್ತನೆ ಮಾಡಿದ್ದರು. ಆದರೆ ಅಧಿಕ ಪ್ರಮಾಣದಲ್ಲಿ ಮಳೆ ಸುರಿದಿದ್ದರಿಂದ ಬೆಳೆಗಳು ನಾಶವಾಗಿವೆ. ಗೋವಿನಜೋಳ, ಹತ್ತಿ, ಸೋಯಾಬಿನ್​, ಶೇಂಗಾ ಬೆಳೆಗಳಿಗೆ ಹಲವು ರೋಗಗಳು ಕಾಣಿಸಿಕೊಂಡಿವೆ. ಕೆಂಪುರೋಗ, ಬೂದಿರೋಗ ಸೇರಿದಂತೆ ಹಲವು ರೋಗಗಳಿಂದ ಬೆಳೆಗಳು …

Read More »