ಬೆಳಗಾವಿ: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಹೈಕಮಾಂಡ್ ನಿರ್ಧಾರ ಕೈಗೊಳ್ಳಬೇಕು. ಈ ವಿಷಯ ಈಗ ಬಹಳ ಚರ್ಚೆಯಲ್ಲಿದೆ ಎಂದು ಬೆಳಗಾವಿಯಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷರಾಗಲು ಸಾಕಷ್ಟು ಜನ ಆಕಾಂಕ್ಷಿಗಳಿದ್ದಾರೆ. ಈಗ ಯಾವುದೇ ಚುನಾವಣೆ ಇಲ್ಲ. ಆದರೆ ಮತಗಳನ್ನು ತಂದುಕೊಡುವ ಹಾಗೂ ಪಕ್ಷವನ್ನು ಸಂಘಟಿಸುವವರಿಗೆ ಈ ಹುದ್ದೆ ನೀಡಬೇಕು ಎಂದರು. ಕೆಪಿಸಿಸಿ ಅಧ್ಯಕ್ಷ ಹುದ್ದೆಗೆ ನಾನು ಕೇಳಿಲ್ಲ. ಅದೇನೇ ಇದ್ದರೂ ಹೈಕಮಾಂಡ್ ಮಟ್ಟದಲ್ಲಿ …
Read More »ರೈತರಿಗೆ ಹಾಲಿನ ಪ್ರೋತ್ಸಾಹಧನ ಬಿಡುಗಡೆ ಮಾಡುವಂತೆ ಒತ್ತಾಯ
ಬೆಳಗಾವಿ: ರಾಜ್ಯ ಸರ್ಕಾರ ರೈತರಿಗೆ ಶೀಘ್ರವೇ ಹಾಲಿನ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಬಿಜೆಪಿ ಪ್ರತಿಭಟನೆ ನಡೆಸಿದೆ. ಚನ್ನಮ್ನ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಹಾಲಿನ ಪ್ರೋತ್ಸಾಹ ಧನವನ್ನು ಐದರಿಂದ ಹತ್ತು ರೂಪಾಯಿಗೆ ಏರಿಕೆ ಮಾಡಬೇಕು. ಸದ್ಯ ಗ್ರಾಹಕರಿಗೆ ಏರಿಕೆ ಮಾಡಿರುವ ಹಾಲಿನ ದರ ಏರಿಕೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು. ರಾಜ್ಯ ಸರ್ಕಾರ ಹಾಲಿನ ದರವನ್ನು ಏರಿಸಿ ಜನ ವಿರೋಧಿ ನೀತಿಯನ್ನು …
Read More »ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು
ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …
Read More »ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ
ಬೈಲಹೊಂಗಲ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಯಾನಗರ ಗ್ರಾಮದ ಸಮೀಪ ಸೋಮವಾರ ನಡೆದಿದೆ. ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನುಜ್ಜುಗುಜ್ಜಾಗಿವೆ. ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು …
Read More »ರಾಜ್ಯದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿಯಾದ ಮೊದಲ ದಿನವೇ 80 ಪ್ರಕರಣಗಳು ದಾಖಲು!
ರಾಜ್ಯದಲ್ಲಿ ಹೊಸ ಕ್ರಿಮಿನಲ್ ಕಾನೂನು ಜಾರಿಯಾದ ಮೊದಲ ದಿನವೇ 80 ಪ್ರಕರಣಗಳು ದಾಖಲು! ಬೆಂಗಳೂರು: ಮೂರು ಹೊಸ ಕ್ರಿಮಿನಲ್ ಕಾನೂನುಗಳು ಜಾರಿಗೆ ಬಂದ ನಂತರ ಕರ್ನಾಟಕ ಪೊಲೀಸರು ಸೋಮವಾರ ರಾತ್ರಿ 9.30 ರವರೆಗೆ 80 ಪ್ರಥಮ ಮಾಹಿತಿ ವರದಿಗಳನ್ನು (ಎಫ್‌ಐಆರ್) ದಾಖಲಿಸಿದ್ದಾರೆ ಎಂದು ಪೊಲೀಸ್ ಮಹಾನಿರ್ದೇಶಕರು ಮತ್ತು ಪೊಲೀಸ್ ಮಹಾನಿರ್ದೇಶಕರ (ಡಿಜಿ ಮತ್ತು ಐಜಿಪಿ) ಕಚೇರಿಯ ಹೇಳಿಕೆ ತಿಳಿಸಿದೆ. ಭಾರತೀಯ ನ್ಯಾಯ ಸಂಹಿತಾ (ಬಿಎನ್‌ಎಸ್), ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ …
Read More »ಹೃದಯಗೆದ್ದ ʻಪುನೀತ್ ರಾಜ್ ಕುಮಾರ್ ಹೃದಯ ಜ್ಯೋತಿ ಯೋಜನೆʼ : 10 ಅಮೂಲ್ಯ ಜೀವಗಳಿಗೆ ಮರುಜನ್ಮ
ಬೆಂಗಳೂರು : ಹಠಾತ್ ಹೃದಯಾಘಾತ ತಡೆಯಲು ಜಾರಿಗೆ ತಂದಿರುವ ‘ಪುನೀತ್ ರಾಜ್‌ಕುಮಾರ್ ಹೃದಯ ಜ್ಯೋತಿ ಯೋಜನೆ’ ಅಡಿ ಸುಮಾರು 11 ಸಾವಿರ ಜನರಲ್ಲಿ ಗಂಭೀರವಾಗಿರುವ ಸಮಸ್ಯೆ ಪತ್ತೆ ಮಾಡಲಾಗಿದ್ದು, ನಾಲ್ಕು ತಿಂಗಳಲ್ಲಿ ಅಮೂಲ್ಯ ಸಮಯದಲ್ಲಿ 10 ಜೀವ ರಕ್ಷಣೆ ಮಾಡಲಾಗಿದೆ. ಈ ಯೋಜನೆಯನ್ನು ಹಬ್ ಮತ್ತು ಸ್ಟೋಕ್ ಮಾದರಿಯಲ್ಲಿ ಜಾರಿಗೆ ತರಲಾಗಿದ್ದು, 71 ತಾಲೂಕು ಆಸ್ಪತ್ರೆಗಳೂ ಸೇರಿದಂತೆ ಒಟ್ಟು 86 ಸರ್ಕಾರಿ ಆಸ್ಪತ್ರೆಗಳನ್ನು ಸ್ಟೋಕ್ ಕೇಂದ್ರಗಳನ್ನಾಗಿ ಹಾಗೂ ಜಯದೇವ ಸೇರಿದಂತೆ …
Read More »LPGʼ ಸಿಲಿಂಡರ್ ಸಬ್ಸಿಡಿ ಸೌಲಭ್ಯ ಪಡೆಯುವ ಗ್ರಾಹಕರೇ ಗಮನಿಸಿ : ತಪ್ಪದೇ ʻಇ-ಕೆವೈಸಿʼ ಮಾಡಿಸಿ
ಬೆಂಗಳೂರು : ನೀವು ಗ್ಯಾಸ್ ಸಿಲಿಂಡರ್ ಹೊಂದಿರುವವರಾಗಿದ್ದರೆ ಮತ್ತು ಕೇಂದ್ರ ಸರ್ಕಾರ ನೀಡುವ ಸಬ್ಸಿಡಿಯನ್ನ ಪಡೆಯುತ್ತಿದ್ದರೆ, ಈ ಸುದ್ದಿ ನಿಮಗಾಗಿ. ವಾಸ್ತವವಾಗಿ, ನೀವು ಗ್ಯಾಸ್ ಸಿಲಿಂಡರ್ಗಳ ಮೇಲಿನ ಸಬ್ಸಿಡಿಯನ್ನ ನಿರಂತರವಾಗಿ ಪಡೆಯಲು ಬಯಸಿದರೆ, ಇದಕ್ಕಾಗಿ ನೀವು ಈಗ ಕೆವೈಸಿ ಮಾಡಬೇಕಾಗುತ್ತದೆ. ನೀವು ಗ್ಯಾಸ್ ಸಿಲಿಂಡರ್ಗೆ ಕೆವೈಸಿ ಮಾಡದಿದ್ದರೆ, ಸಬ್ಸಿಡಿ ಪಡೆಯಲು ಸಾಧ್ಯವಾಗೋದಿಲ್ಲ. ಪ್ರಸ್ತುತ, ಕೆವೈಸಿಯನ್ನ ಎರಡು ರೀತಿಯಲ್ಲಿ ಮಾಡಬಹುದು. ಗ್ಯಾಸ್ ಏಜೆನ್ಸಿ ಕಚೇರಿಗೆ ಭೇಟಿ ನೀಡುವ ಮೂಲಕ ನೀವು ವೈಸಿ …
Read More »ಡೆಂಗ್ಯೂ ಜ್ವರಕ್ಕೆ ಓರ್ವ ಯುವಕ ಬಲಿ
ಬೆಳಗಾವಿ : ಬೆಳಗಾವಿಯ ಹಿಂಡಲಗಾ ಗ್ರಾಮದ ಲಕ್ಷ್ಮೀ ನಗರದ ಯುವಕ ಪ್ರಸಾದ ಮುಚ್ಚಂಡಿಕರ (28) ಶನಿವಾರ ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದಾನೆ. ಪ್ರಸಾದ ಕಳೆದ ಕೆಲದಿನಗಳಿಂದ ಡೆಂಗ್ಯು ರೋಗಕ್ಕೆ ತುತ್ತಾಗಿದ್ದರು. ಅವರಿಗೆ ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಮೃತರು ಅಜ್ಜಿ, ತಂದೆ, ಪತ್ನಿ, ಪುತ್ರನನ್ನು ಅಗಲಿದ್ದಾರೆ.
Read More »ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಸತೀಶ್ ಜಾರಕಿಹೊಳಿ
ಹಾರೂಗೇರಿ : ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಮ್ಮ ವಿರುದ್ಧ ಸ್ವ ಪಕ್ಷದರೇ ಕೆಲಸ ಮಾಡಿದ್ದರು, ನಾನು ಮಾಜಿ ಶಾಸಕ ಶಾಮ್ ಘಾಟಗೆ ಮಾತು ಕೇಳುತ್ತೇನೆ ಎಂದು ಆರೋಪ ಮಾಡುತ್ತಾರೆ ಘಾಟಗೆ ಅಷ್ಟೇ ಅಲ್ಲ ಮನೆಯಲ್ಲಿ ನಾನು ನನ್ನ ಹೆಂಡತಿ, ಮಕ್ಕಳ ಮಾತೂ ಕೇಳಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ ವಿರುದ್ಧ ವಾಗ್ದಾಳಿ ನಡೆಸಿದರು. ಹಾರೂಗೇರಿ ಪಟ್ಟಣದಲ್ಲಿ ನೂತನ ಸಂಸದರ ಅಭಿನಂದನಾ ಸಮಾವೇಶದಲ್ಲಿ ಮಾತನಾಡಿದ ಇವರು. …
Read More »ಜಮಖಂಡಿ ತಾಲ್ಲೂಕಿಗೆ ಹಿಪ್ಪರಗಿ ಮರುಸೇರ್ಪಡೆ
ಜಮಖಂಡಿ: ರಾಜ್ಯದಲ್ಲಿ ಹೊಸ ತಾಲ್ಲೂಕುಗಳ ರಚನೆಯ ಬಳಿಕ ರಬಕವಿ-ಬನಹಟ್ಟಿ ತಾಲ್ಲೂಕಿಗೆ ಸೇರ್ಪಡೆಯಾಗಿದ್ದ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಮರುಸೇರ್ಪಡೆಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ (ಕಂದಾಯ ಇಲಾಖೆ ಭೂಮಾಪನ) ಎಸ್. ಗುರುಮೂರ್ತಿ ಅಧಿಸೂಚನೆ ಹೊರಡಿಸಿದ್ದಾರೆ. ರಬಕವಿ-ಬನಹಟ್ಟಿ ತಾಲ್ಲೂಕಿನ ಹಿಪ್ಪರಗಿ ಗ್ರಾಮವನ್ನು ಜಮಖಂಡಿ ತಾಲ್ಲೂಕಿಗೆ ಸೇರ್ಪಡೆಗೊಳಿಸಿ ಜೂನ್ 14 ರಂದು ಅಂತಿಮ ಅಧಿಸೂಚನೆ ಹೊರಡಿಸಿದ್ದು, ಜೂನ್ 24ರಂದು ರಾಜ್ಯ ಪತ್ರದಲ್ಲಿ ಪ್ರಕಟಿಸಲಾಗಿದೆ. ಅಧಿಸೂಚನೆ ಮಾಹಿತಿಯನ್ನು ಅಗತ್ಯ ಕ್ರಮದ ಸಲುವಾಗಿ ಜಿಲ್ಲಾ ಮತ್ತು ತಾಲ್ಲೂಕು …
Read More »