Breaking News

ಜತ್, ಸೊಲ್ಲಾಪುರ ಕನ್ನಡ ಶಾಲೆಗಳಿಗೆ ಅಧಿಕಾರಿಗಳ ಭೇಟಿ

ಬೆಳಗಾವಿ: ಮಹಾರಾಷ್ಟ್ರದ ಜತ್ ಮತ್ತು ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದ ಕನ್ನಡ ಮಾಧ್ಯಮ ಶಾಲೆಗಳಿಗೆ ಗಡಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕಾರ್ಯದರ್ಶಿಗಳು ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಜತ್ತ ತಾಲ್ಲೂಕಿನ ಬೋರಗಿ, ಕರಜಗಿ, ಭೇವರ್ಗಿ, ಬಾಲಗಾಂವ, ಅಂಕಲಗಿ, ಸಂಖ, ರಾವಳಗುಂಡವಾಡಿ, ಮೇಂಡಿಗೇರಿ ಗ್ರಾಮಗಳಲ್ಲಿನ ವಿವಿಧ ಕನ್ನಡ ಮಾಧ್ಯಮ ಶಾಲೆಗಳಿಗೆ ಕರ್ನಾಟಕದ ಮುಖ್ಯಮಂತ್ರಿಗಳ ಸೂಚನೆಯಂತೆ ಭೇಟಿ ನೀಡಿದರು. ಈ ಪ್ರದೇಶಗಳಲ್ಲಿನ ಕೆಲವು ಕನ್ನಡ ಶಾಲೆಗಳಲ್ಲಿ ಕನ್ನಡ ಬಾರದ ಮರಾಠಿ ಶಿಕ್ಷಕರನ್ನು ಕನ್ನಡ …

Read More »

ಬೆಳಗಾವಿ-ಕಿತ್ತೂರು-ಧಾರವಾಡ ಹೊಸ ರೈಲು ಮಾರ್ಗ ಯೋಜನೆಗೆ ಶೆಟ್ಟರ್ ಮನವಿ

ಬೆಳಗಾವಿ: ಬೆಳಗಾವಿ – ಕಿತ್ತೂರು – ಧಾರವಾಡ ಹೊಸ ರೈಲು ಮಾರ್ಗ ಯೋಜನೆ ಶೀಘ್ರವಾಗಿ ಆರಂಭಿಸುವಂತೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರಿಗೆ ಸಂಸದ ಜಗದೀಶ ಶೆಟ್ಟರ ಮನವಿ ಸಲ್ಲಿಸಿದರು. ನವದೆಹಲಿಯಲ್ಲಿ ಕೇಂದ್ರದ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿ ಮಾಡಿದ ಜಗದೀಶ್ ಶೆಟ್ಟರ್ ಬೆಳಗಾವಿ – ಕಿತ್ತೂರು – ಧಾರವಾಡ ಮಾರ್ಗಕ್ಕೆ ಹೊಸ ರೈಲು ಮಾರ್ಗ ಯೋಜನೆ ಕುರಿತು ಸುದೀರ್ಘವಾಗಿ ಚರ್ಚಿಸಿದರು. ಎರಡು ವರ್ಷಗಳ ಹಿಂದೆ ಭೂಸ್ವಾಧೀನಕ್ಕಾಗಿ …

Read More »

ಸುಳ್ಳು ಅತ್ಯಾಚಾರ ಕೇಸ್ ಹಾಕಿದ್ದ 13 ಮಂದಿಗೆ ಮೂರುವರೆ ವರ್ಷ ಕಾರಾಗೃಹ ಶಿಕ್ಷೆ

ಬೆಳಗಾವಿ: ಹೆಸ್ಕಾಂ ಅಧೀಕ್ಷಕ ಅಭಿಯಂತರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿದ್ದ ಹೆಸ್ಕಾಂ ಸಹಾಯಕ ಅಭಿಯಂತೆ ಸೇರಿ ಒಟ್ಟು ಜನ ಹೆಸ್ಕಾಂನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮೂರುವರೆ ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ಹಾಗೂ ತಲಾ 86 ಸಾವಿರ ರೂ. ದಂಡ ವಿಧಿಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶೆ ಎಲ್. ವಿಜಯಲಕ್ಷ್ಮೀ ದೇವಿ ಅವರು ಗುರುವಾರ ಮಹತ್ವದ ತೀರ್ಪು ಪ್ರಕಟಿಸಿದರು. ಮೈಸೂರಿನ ಬೆಸ್ಕಾಂ ಸಹಾಯಕ ಅಭಿಯಂತೆ ಬಿ.ವಿ. …

Read More »

ಅಂಗನವಾಡಿಗಳಿಗೆ ಕಳಪೆ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಕಠಿನ ಕ್ರಮ

ಬೆಳಗಾವಿ: ಅಂಗನವಾಡಿಗಳಿಗೆ ಕಳಪೆ ಗುಣಮಟ್ಟದ ಪೂರಕ ಆಹಾರ ಉತ್ಪನ್ನಗಳು ಪೂರೈಕೆಯಾದರೆ ಸಂಬಂಧಿಸಿದ ಜಿಲ್ಲೆಯ ಉಪನಿರ್ದೇಶಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಎಚ್ಚರಿಕೆ ನೀಡಿದ್ದಾರೆ. ಬೆಳಗಾವಿ ಜಿಲ್ಲೆಯ ಯರಗಟ್ಟಿ ಗ್ರಾಮದಲ್ಲಿ ಗುರುವಾರ ಮಹಿಳಾ ಮತ್ತು ಮಕ್ಕಳ ಪೌಷ್ಠಿಕ ಆಹಾರ ತಯಾರಿಕಾ ಘಟಕಕ್ಕೆ ಭೇಟಿ ನೀಡಿ ಅವರು ಮಾತನಾಡಿದರು. ಯಾವುದೇ ಉತ್ಪನ್ನ ಕಳಪೆ ಗುಣಮಟ್ಟದ್ದಾಗಿದ್ದರೆ ಎಂಎಸ್ ಪಿಸಿಯವರೇ ನಿರ್ದಾಕ್ಷಿಣ್ಯವಾಗಿ ತಿರಸ್ಕರಿಸಬೇಕು.ಕಳಪೆ ಆಹಾರಗಳ ಪೂರೈಕೆಯನ್ನು …

Read More »

ರಕ್ಷಾ ಬಂಧನ ದಿನಾಂಕ, ಶುಭ ಸಮಯ, ಮಹತ್ವವನ್ನು ತಿಳಿಯಿರಿ

ರಕ್ಷಾ ಬಂಧನ ಸಹೋದರ ಸಹೋದರಿಯರ ನಡುವಿನ ಪ್ರೀತಿಯ ಸಂಕೇತವಾಗಿದೆ. ರಕ್ಷಾ ಬಂಧನ ಹಬ್ಬವನ್ನು ಪ್ರತಿ ವರ್ಷ ಶ್ರಾವಣ ಮಾಸದ ಹುಣ್ಣಿಮೆಯಂದು ಆಚರಿಸಲಾಗುತ್ತದೆ. ಈ ದಿನದಂದು ಸಹೋದರಿಯರು ತಮ್ಮ ಸಹೋದರನ ಕೈಗೆ ರಾಖಿ ಕಟ್ಟುತ್ತಾರೆ. ಈ ಮೂಲಕ ರಕ್ಷಣೆಯ ಭರವಸೆಯನ್ನು ಪಡೆಯುತ್ತಾರೆ. ಈ ಹಬ್ಬ ಸಹೋದರ ಸಹೋದರಿಯರ ನಡುವಿನ ಸಂಬಂಧವನ್ನು ಪ್ರತಿಬಿಂಬಿಸುತ್ತದೆ. ಈ ಹಬ್ಬ ಸಹೋದರ ಸಹೋದರಿಯರ ನಡುವಿನ ಪ್ರೀತಿ ಮತ್ತು ವಿಶ್ವಾಸವನ್ನು ಬಲಪಡಿಸುತ್ತದೆ. ಹಾಗಾದರೆ ಈ ವರ್ಷ ರಕ್ಷಾಬಂಧನ ಹಬ್ಬವನ್ನು …

Read More »

ಆಡಳಿತದಲ್ಲಿ ಪಾರದರ್ಶಕತೆ ಕೊರತೆ: ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ದೇಶಪಾಂಡೆ ಬೇಸರ

ಬೆಳಗಾವಿ: ‘ಸರ್ಕಾರಿ ಯೋಜನೆಗಳ ಪ್ರಯೋಜನ ದೊರೆಯಬೇಕಾದರೆ ಆಡಳಿತದಲ್ಲಿ ಸುಧಾರಣೆ ಅತ್ಯಗತ್ಯ. ಇತ್ತೀಚೆಗೆ ಆಡಳಿತದಲ್ಲಿ ಸಾಕಷ್ಟು ಸುಧಾರಣೆಯಾಗಿದ್ದರೂ‌ ಪಾರದರ್ಶಕತೆ ಕೊರತೆ ಎದ್ದು ಕಾಣುತ್ತಿದೆ. ಇದನ್ನು ನಿವಾರಿಸಬೇಕಿದೆ’ ಎಂದು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ ಬೇಸರ ವ್ಯಕ್ತಪಡಿಸಿದರು. ಆಡಳಿತ ಸುಧಾರಣೆಗೆ ಸಂಬಂಧಿಸಿದಂತೆ ಸುವರ್ಣ ವಿಧಾನಸೌಧದಲ್ಲಿ ಶುಕ್ರವಾರ ನಡೆದ ಎಲ್ಲ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ನಾಗರಿಕರಿಗೆ ಉತ್ತಮ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಡಳಿತ ಸುಧಾರಣೆ ಪ್ರಕ್ರಿಯೆಯು …

Read More »

ಜಿಯೋ ಆಯ್ತು ಈಗ ಏರ್ಟೆಲ್ ನಿಂದಲೂ ದರ ಏರಿಕೆ!

ನವದೆಹಲಿ: ರಿಲಯನ್ಸ್ ಜಿಯೋ ತನ್ನ ಪ್ರಿಪೇಯ್ಡ್ ರೀಚಾರ್ಜ್ ಮತ್ತು ಪೋಸ್ಟ್ ಪೇಡ್ ಪ್ಲಾನ್ ಗಳ ದರ ಏರಿಕೆ ಮಾಡಿದ ಬೆನ್ನಲ್ಲೇ, ಇನ್ನೊಂದು ಪ್ರಮುಖ ಕಂಪೆನಿ ಭಾರ್ತಿ ಏರ್ಟೆಲ್ ಸಹ ತನ್ನ ಮೊಬೈಲ್ ರೀಚಾರ್ಜ್, ಪ್ಲಾನ್ ಗಳ ದರಗಳನ್ನು ಏರಿಕೆ ಮಾಡಿದೆ. ಈ ದರಗಳು ಜುಲೈ 3ರಿಂದ ಜಾರಿಗೆ ಬರಲಿವೆ. 179 ರೂ. ಗಳಿಗೆ 28 ದಿನ ವ್ಯಾಲಿಡಿಟಿ 2ಜಿಬಿ ಡಾಟಾ, ಅನಿಯಮಿತ ಕರೆ ಇದ್ದ ಪ್ಲಾನ್ 199 ರೂ.ಗಳಿಗೆ ಏರಿಕೆಯಾಗಿದೆ. …

Read More »

IND vs SA: ಬಾರ್ಬಡೋಸ್‌ನಲ್ಲಿ ಫೈನಲ್‌ ಮೇಲೂ ಮಳೆಯ ನೆರಳು

IND vs SA Final, Barbados Weather Update: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಅಂತಿಮ ಪಂದ್ಯ ಬಾರ್ಬಡೋಸ್‌ನ ಬ್ರಿಡ್ಜ್‌ಟೌನ್‌ನಲ್ಲಿ ನಡೆಯಲಿದೆ. ಅದೇ ಹೊತ್ತಿಗೆ ಈ ಪಂದ್ಯದ ಮೇಲೂ ಮಳೆಯ ಛಾಯೆ ಆವರಿಸಿದೆ. weather.com ಪ್ರಕಾರ, ಜೂನ್ 29 ರಂದು ಬಾರ್ಬಡೋಸ್‌ನಲ್ಲಿ ಬೀರುಗಾಳಿ ಮತ್ತು ಭಾರೀ ಮಳೆ ನಿರೀಕ್ಷಿಸಲಾಗಿದೆ. ಪಂದ್ಯದ ವೇಳೆ ಮಳೆ ಬೀಳುವ ಸಾಧ್ಯತೆ ಶೇ.70ರಷ್ಟಿದೆ. ಹೀಗಾಗಿ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವುದು ಖಚಿತವಾಗಿದೆ. ಭಾರತ ಮತ್ತು ದಕ್ಷಿಣ …

Read More »

ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ

ಅಶ್ಲೀಲ ದೃಶ್ಯ ಹಂಚಿಕೆ ಆರೋಪ: ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಆದೇಶ ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ ರಿಲೀಫ್ ಸಿಕ್ಕಿದೆ   ಬೆಂಗಳೂರು, ಜೂನ್​ 28: ಅಶ್ಲೀಲ ದೃಶ್ಯ ಹಂಚಿಕೆ ಆರೋಪದಲ್ಲಿ ಮಾಜಿ ಶಾಸಕ ಪ್ರೀತಮ್ ಗೌಡ ಬಂಧಿಸದಂತೆ ಹೈಕೋರ್ಟ್ ಶುಕ್ರವಾರ ಆದೇಶ ಹೊರಡಿಸಿದೆ. ಆ ಮೂಲಕ ಅವರಿಗೆ ಬಂಧನದಿಂದ ಬಿಗ್​ …

Read More »

ತಾಯಿಯ ಎದೆ ಹಾಲನ್ನು ಹೆಚ್ಚಿಸಲು ಈ ಗಿಡಮೂಲಿಕೆ ಬಳಸಿ

ಭೂಮಿಯ ಮೇಲೆ ಹಲವಾರು ರೀತಿಯ ಔಷಧೀಯ ಗಿಡಗಳಿವೆ. ಇದರಿಂದಾಗಿ ಅವುಗಳನ್ನು ವಿವಿಧ ಔಷಧಿಗಳು ಮತ್ತು ಪರಿಹಾರ ಕ್ರಮಗಳಲ್ಲಿ ಬಳಕೆ ಮಾಡುತ್ತಾರೆ. ಆಯುರ್ವೇದದ ಪ್ರಕಾರ, ಕೆಲವು ಗಿಡಮೂಲಿಕೆಗಳು ದೇಹದ ಪ್ರಮುಖ ಕಾಯಿಲೆಗಳನ್ನು ಗುಣಪಡಿಸುವ ಸಾಮರ್ಥ್ಯ ಹೊಂದಿವೆ. ಅಂತಹ ಔಷಧೀಯ ಗುಣಗಳನ್ನು ಹೊಂದಿರುವ ‘ಶತಾವರಿ’ ಎಂಬ ಶಕ್ತಿಶಾಲಿ ಗಿಡಮೂಲಿಕೆ ಬಗ್ಗೆ ಕೇಳಿದ್ದೀರಾ? ಇದರಿಂದ ಉಪಯೋಗವೇನು? ಯಾವೆಲ್ಲಾ ಕಾಯಿಲೆಗಳನ್ನು ಗುಣಪಡಿಸಬಹುದು ಎಂಬುದರ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಳ್ಳಿ. ತಾಯಿಯ ಎದೆ ಹಾಲನ್ನು ಹೆಚ್ಚಿಸುತ್ತದೆ ಸಾಮಾನ್ಯವಾಗಿ ಹೆರಿಗೆ …

Read More »