ನವದೆಹಲಿ/ಬೆಂಗಳೂರು, ಜೂನ್ 28: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ರಾಜ್ಯ ಸಂಸದರೊಂದಿಗೆ ನವದೆಹಲಿಯಲ್ಲಿ (Delhi) ಶುಕ್ರವಾರ ಸಭೆ ನಡೆಸಿದರು. ಸಭೆಯಲ್ಲಿ ಚರ್ಚೆಯಾದ ವಿಷಯಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸುದ್ದಿಗೋಷ್ಠಿ ನಡೆಸಿ, ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ರಾಜ್ಯಕ್ಕೆ ಬರಬೇಕಿರುವ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ರಾಜ್ಯದ ಯೋಜನೆಗಳನ್ನು ಸಂಸತ್ ಸದಸ್ಯರ ಗಮನಕ್ಕೆ ತರಲಾಗಿದೆ. ಪಕ್ಷಭೇದ ಮರೆತು ಕರ್ನಾಟಕದ ಒಳಿತಿಗಾಗಿ ನಿಲ್ಲುವ ಪ್ರಯತ್ನ ಮಾಡುತ್ತೇವೆ ಅಂತ ಹೇಳಿದ್ದಾರೆ ಎಂದು ತಿಳಿಸಿದರು. ರಾಜ್ಯದ ಯೋಜನೆಗಳನ್ನು ಜಾರಿ …
Read More »ಹಾವೇರಿ ಅಪಘಾತ, ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ
ಹಾವೇರಿ, ಜೂನ್ 28: ಬ್ಯಾಡಗಿ ತಾಲೂಕಿನ ಗುಂಡೇನಹಳ್ಳಿ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೃತಪಟ್ಟ 13 ಜನರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ತಲಾ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ದೆಹಲಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,ಮಕ್ಕಳು ಸೇರಿ 13 ಜನರು ಸಾವನ್ನಪ್ಪಿದ್ದಾರೆ. ಮೃತರ ಕುಟುಂಬಕ್ಕೆ ತಲಾ ಎರಡು ಲಕ್ಷ ನೀಡುತ್ತೇವೆ ಎಂದು ಹೇಳಿದರು. ಹಾವೇರಿ ಬಳಿ ಸಂಭವಿಸಿದ ಭೀಕರ …
Read More »ಸಿಎಂ ಬದಲಾವಣೆ ಮಾಡುವುದಾದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು;: ಶಿವಾಚಾರ್ಯ ಸ್ವಾಮೀಜಿ
ಚಿಕ್ಕೋಡಿ, ಜೂನ್ 28: ಡಿಸಿಎಂ ಡಿಕೆ ಶಿವಕುಮಾರ್ಗೆ ಮುಖ್ಯಮಂತ್ರಿ ಹುದ್ದೆ ಬಿಟ್ಟುಕೊಡುವಂತೆ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರಶ್ರೀ ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡಿದ ಬೆನ್ನಲ್ಲೇ ಇದೀಗ ವಿವಿಧ ಸಮುದಾಯಗಳ ಸ್ವಾಮೀಜಿಗಳು ಆ ಬಗ್ಗೆ ಹೇಳಿಕೆಗಳನ್ನು ನೀಡಲು ಆರಂಭಿಸಿದ್ದಾರೆ. ಇದೀಗ, ಪಂಚ ಪೀಠದಿಂದ ಲಿಂಗಾಯತ ಮುಖ್ಯಮಂತ್ರಿಗೆ ಬೇಡಿಕೆ ವ್ಯಕ್ತವಾಗಿದೆ. ಮುಖ್ಯಮಂತ್ರಿ ಬದಲಾವಣೆ ಮಾಡುವುದೇ ಆದರೆ ವೀರಶೈವ ಲಿಂಗಾಯತರಿಗೆ ಆದ್ಯತೆ ನೀಡಬೇಕು ಎಂದು ಶ್ರೀಶೈಲ ಜಗದ್ಗುರು ಡಾ. ಚನ್ನಸಿದ್ದರಾಮ ಪಂಡಿತರಾದ್ಯ ಶಿವಾಚಾರ್ಯ ಸ್ವಾಮೀಜಿ …
Read More »ದೊಡ್ಮನೆ ಕುಟುಂಬದ ಕುಡಿ ಧನ್ಯಾ ರಾಮ್ಕುಮಾರ್ ಹೊಸ ಸಿನಿಮಾ ಅನೌನ್ಸ್; ಪೃಥ್ವಿ ಅಂಬಾರ್ಗೆ ಜೋಡಿ
ನಿನ್ನ ಸನಿಹಕೆ’ ಚಿತ್ರದ ಮೂಲಕ ಬಣ್ಣದ ಲೋಕಕ್ಕೆ ಧನ್ಯಾ ರಾಮ್ಕುಮಾರ್ ಕಾಲಿಟ್ಟರು. ಆ ಬಳಿಕ ‘ಹೈಡ್ ಆ್ಯಂಡ್ ಸೀಕ್’ ಸಿನಿಮಾದಲ್ಲಿ ನಟಿಸಿದರು. ಈ ವರ್ಷ ಬಿಡುಗಡೆ ಆದ ‘ದಿ ಜಡ್ಜ್ಮೆಂಟ್’ ಚಿತ್ರದಲ್ಲೂ ಅವರು ನಟಿಸಿದ್ದಾರೆ. ಈಗ ಪೃಥ್ವಿ ಅಂಬಾರ್ ನಟನೆಯ ‘ಚೌಕಿದಾರ್’ ಸಿನಿಮಾದಲ್ಲಿ ಧನ್ಯರಾಮ್ ಕುಮಾರ್ ನಾಯಕಿ ಆಗಿ ಬಣ್ಣ ಹಚ್ಚುತ್ತಿದ್ದಾರೆ. ನಟಿ ಧನ್ಯಾ ರಾಮ್ಕುಮಾರ್ ಅವರು ಇತ್ತೀಚೆಗೆ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ. ಹೊಸ ಹೊಸ ಸಿನಿಮಾಗಳನ್ನು ಒಪ್ಪಿಕೊಂಡು …
Read More »ಪಾರಿವಾಳಗಳ ಹಿಕ್ಕೆಯಿಂದ ಮೈಸೂರು ಅರಮನೆಗೆ ಕಂಟಕ:
ಮೈಸೂರು, ಜೂನ್ 28: ಸಾಂಸ್ಕೃತಿಕ ನಗರಿ ಮೈಸೂರು (Mysore) ಅರಮನೆಗೆ (Mysore Palace) ಹೆಸರುವಾಸಿ. ವಿಶ್ವವಿಖ್ಯಾತ ಮೈಸೂರು ಅರಮನೆಗೆ ಪಾರಿವಾಳಗಳ (Pigeon) ಹಿಕ್ಕೆಯಿಂದ ಕಂಟಕ ಎದುರಾಗಿದೆ. ಪಾರಿವಾಳಗಳು ಹಾಕುವ ಹಿಕ್ಕೆಯಲ್ಲಿ, ಯೂರಿಕ್ ಆ್ಯಸಿಡ್ (Uric Acid) ಇರುತ್ತದೆ. ಯೂರಿಕ್ ಆಸ್ಯಡಿನಿಂದ ಕೂಡಿರುವ ಈ ಹಿಕ್ಕೆಗಳು ಪಾರಂಪರಿಕ ಕಟ್ಟಡಗಳ ಮೇಲೆ ಬೀಳುವುದರಿಂದ, ಕಟ್ಟಡಗಳು ವಿರೂಪಗೊಳ್ಳುತ್ತವೆ ಎಂದು ಇತಿಹಾಸ ತಜ್ಞ ಪ್ರೋ. ರಂಗರಾಜು ಹೇಳಿದ್ದಾರೆ. ಪ್ರೋ. ರಂಗರಾಜು, ಈ ಹಿಕ್ಕೆಗಳನ್ನು ತಾಮ್ರ ಅಥವಾ ಸ್ಟೀಲ್ …
Read More »ಸೋನು ಗೌಡಗೆ ದರ್ಶನ್ ಅಭಿಮಾನಿಗಳಿಂದ ಕಿರುಕುಳ, ಅಳಲು ತೋಡಿಕೊಂಡ ನಟಿ
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳಿಸಿದ್ದ ಎಂಬ ಕಾರಣಕ್ಕೆ ಈಗ ಆತನ ಕೊಲೆಯೇ ಆಗಿದೆ. ಕೊಲೆ ಪ್ರಕರಣದಲ್ಲಿ ದರ್ಶನ್ ಮತ್ತು ಅವರ ಸಹಚರರಲು ಆರೋಪಿಗಳಾಗಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ ಈಗ ಅದೇ ದರ್ಶನ್ರ ಅಭಿಮಾನಿಗಳು ಕೆಲವು ನಟಿಯರಿಗೆ ಅವಾಚ್ಯವಾಗಿ ಬೈದು ಸಂದೇಶಗಳನ್ನು ಮಾಡುತ್ತಿದ್ದಾರೆ. ಈ ಬಗ್ಗೆ ನಟಿ, ಸೋಷಿಯಲ್ ಮೀಡಿಯಾ ಸೆಲೆಬ್ರಿಟಿ ಸೋನು ಗೌಡ ಮಾತನಾಡಿದ್ದಾರೆ. ಕೆಲವು ದಿನಗಳ ಹಿಂದಷ್ಟೆ ವಿಡಿಯೋ ಒಂದರಲ್ಲಿ, ರೇಣುಕಾ ಸ್ವಾಮಿಯದ್ದು ಎನ್ನಲಾಗುತ್ತಿರುವ ಖಾತೆಯಿಂದ ನನಗೂ …
Read More »ಸಾರಿಗೆ ನಿಗಮಗಳ ನಿವೃತ್ತ ನೌಕರರಿಗೆ ಗುಡ್ ನ್ಯೂಸ್: ವೇತನ ಹೆಚ್ಚಿಸಿ ಆದೇಶ
ಬೆಂಗಳೂರು, ಜೂನ್ 28: ಸಾರಿಗೆ ನಿಗಮಗಳ ನಿವೃತ್ತಿಯಾಗಿರುವ ನೌಕರರಿಗೆ ರಾಜ್ಯ ಸರ್ಕಾರ ಶುಭ ಸುದ್ದಿ ನೀಡಿದೆ. ಕಾರ್ಮಿಕ ಸಂಘಟನೆಗಳ ಮನವಿಯ ಬೆನ್ನಲ್ಲೇ, ನಿವೃತ್ತಿಯಾದ ನೌಕರರಿಗೂ ವೇತನ ಪರಿಷ್ಕರಿಸಿ ಆದೇಶ ಹೊರಡಿಸಿದೆ. ಪರಿಣಾಮವಾಗಿ 2023ರ ಮಾರ್ಚ್ನಲ್ಲಿ ನಿವೃತ್ತಿಯಾದ ನೌಕರರಿಗೆ ಶೇ 15 ರಷ್ಟು ಹೆಚ್ಚುವರಿ ವೇತನ ಸಿಗಲಿದೆ. 2023 ರ ಮಾರ್ಚ್ನಲ್ಲಿ ನಿವೃತ್ತಿ ಹೊಂದಿದ ಅಧಿಕಾರಿ ಮತ್ತು ನೌಕರರಿಗೆ 2019 ರ ಡಿಸೆಂಬರ್ 31 ರಂದು ಅವರು ಪಡೆಯುತ್ತಿದ್ದ ಮೂಲವೇತನವನ್ನು ಪರಿಗಣಿಸಿ ಶೇ …
Read More »ಶ್ರೀಗಳು ಹೇಳಿದ ಮಾತ್ರಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಲ್ಲ, ಶಿವಶಂಕರಪ್ಪ
ದಾವಣಗೆರೆ: ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಚಂದ್ರಶೇಖರ ಶ್ರೀಗಳು ಸಿದ್ದರಾಮಯ್ಯ ಅವರು ಡಿಕೆ ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕು ಅಂತ ಹೇಳಿ ರಾಜ್ಯ ರಾಜಕೀಯ ವಲಯದಲ್ಲಿ ಕೋಲಾಹಲ ಸೃಷ್ಟಿಸಿದ್ದಾರೆ. ದಾವಣಗೆರೆಯಲ್ಲಿ ಇಂದು ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪನವರಿಗೆ ಶ್ರೀಗಳು ಆಡಿರುವ ಮಾತಿನ ಬಗ್ಗೆ ಹೇಳಿದಾಗ, ಅವರು ಸುಮಾರು 15-20 ಸಲ ಹೈಕಮಾಂಡ್ ಪದ ಬಳಸಿದರು. ಶ್ರೀಗಳು ಹೇಳಿದ್ದಾರೆಂಬ ಕಾರಣಕ್ಕೆ ಮುಖ್ಯಮಂತ್ರಿಯವರನ್ನು ಬದಲಾಯಿಸಲಾಗುತ್ತದೆಯೇ? ಹೈಕಮಾಂಡ್ ಗೆ ಯಾವಾಗ ಏನು ಮಾಡಬೇಕು ಅಂತ …
Read More »ಬೆಂಗಳೂರು ಅಪರಾಧ ಸುದ್ದಿ; ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿದ ತಾತ, ಕೇಸ್ ಬೀಳುತ್ತಿದ್ದಂತೆ ಪರಾರಿ,
ಬೆಂಗಳೂರು: ಕಾಮಾತುರಣಂ ನ ಭಯ ನ ಲಜ್ಜಾ ಎಂಬ ನಾಣ್ಣುಡಿ ಪದೇ ಪದೇ ನಿಜವಾಗುವೌಂತಹ ಘಟನೆಗಳು ಸಂಭವಿಸುತ್ತಿದ್ದು, ಕಸಿವಿಸಿಯನ್ನುಂಟು ಮಾಡುತ್ತಿವೆ. ಬೆಂಗಲೂರಿನ ಹುಳಿಮಾವು ಪ್ರದೇಶದಲ್ಲಿ ತಾತನೇ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವ ಹೀನಕೃತ್ಯ ನಡೆದಿದೆ. ಹೆತ್ತ ತಾಯಿ ಕೆಲಸಕ್ಕೆ ಹೋಗಿದ್ದಗ ತಾತ ತನ್ನ 6 ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರ ಎಸಗಿರುವುದು ಬೆಳಕಿಗೆ ಬಂದಿದೆ. ಅಜ್ಜ ಈ ಕೃತ್ಯ ಗೊತ್ತಾಗುತ್ತಿದ್ದಂತೆ ಅಜ್ಜ ಮೊಮ್ಮಗಳ ಪೋಷಕರಿಗೆ ಮನೆಯನ್ನು ನಿಮ್ಮ ಹೆಸರಿಗೆ ಮನೆ …
Read More »ಪೋಕ್ಸೋ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ಜಾರ್ಜ್‌ಶೀಟ್
ಬೆಂಗಳೂರು(ಜೂ.28): ಅಪ್ರಾಪ್ತ ಬಾಲಕಿ ಮೇಲಿನ ಲೈಂಗಿಕ ಕಿರುಕುಳ (ಪೋಕ್ಸೋ) ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಅವರ ಮೂವರು ಬೆಂಬಲಿಗರ ವಿರುದ್ಧ ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಸಿಐಡಿ ಅಧಿಕಾರಿಗಳು ಗುರುವಾರ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ಬಾಲಕಿ ಮೇಲೆ ಲೈಂಗಿಕ ಕಿರುಕುಳ, ಕೃತ್ಯ ಬೆಳಕಿಗೆ ಬಾರದಂತೆ ಸಾಕ್ಷ್ಯ ನಾಶ ಹಾಗೂ ಸಂತ್ರಸ್ತೆಗೆ ಹಣದ ಆಮಿಷವೊಡ್ಡಿದ್ದ ಆರೋಪಗಳು ಸಾಬೀತಾಗಿವೆ ಎಂದು ಸಿಐಡಿ ಉಲ್ಲೇಖಿಸಿದೆ. ಅದೇ ರೀತಿ ಯಡಿಯೂರಪ್ಪ …
Read More »