ಬೆಂಗಳೂರು, ಜೂನ್.24: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಡಿಕೆ ಸುರೇಶ್ ಅವರು ತಮ್ಮ ಸೋಲಿನಿಂದ ಬೇಸರದಲ್ಲಿದ್ದಾರೆ ಎಂಬುದು ಎಲ್ಲರಿಗೂ ತಿಳಿಯುತ್ತಿದೆ. ತಮ್ಮನನ್ನು ಮತ್ತೆ ರಾಜಕೀಯಕ್ಕೆ ಕರೆತರಲು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸಾಕಷ್ಟು ಶ್ರಮ ಹಾಕುತ್ತಿದ್ದಾರೆ. ಹೀಗಾಗಿಯೇ ಚನ್ನಪಟ್ಟಣ ಉಪಚುನಾವಣೆಯಲ್ಲಿ ತಾವೇ ಕಣಕ್ಕಿಳಿಯುವ ಬಗ್ಗೆ ಮಾತನಾಡಿದ್ದಾರೆ. ಆದರೆ, ಲೋಕಸಭಾ ಚುನಾವಣಾ ಸೋಲಿನಿಂದ ಒತ್ತಡದಲ್ಲಿದ್ದ ಮಾಜಿ ಸಂಸದ ಡಿಕೆ ಸುರೇಶ್ ರಾಜಕೀಯದಿಂದ ದೂರ ಸರಿಯುವ ಬಗ್ಗೆ ಮಾತನಾಡಿ ಎಲ್ಲರಿಗೂ ಅಚ್ಚರಿ …
Read More »ಲೋಕಸಭೆಯಲ್ಲಿ ಹೆಚ್‌ಡಿಕೆ ಕನ್ನಡಲ್ಲಿ ಪ್ರಮಾಣ ವಚನ ಸ್ವೀಕಾರ
ನವದೆಹಲಿ, ಜೂ.24-ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೋಕಸಭಾ ಸದಸ್ಯರಾಗಿ ಕನ್ನಡ ಭಾಷೆಯಲ್ಲಿ ಪ್ರಮಾವಣ ವಚನ ಸ್ವೀಕರಿಸಿದರು. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಚುನಾಯಿತರಾಗಿದ್ದ ಅವರು, ಇಂದು ಲೋಕಸಭೆಯಲ್ಲಿ ದೇವರ ಹೆಸರಿನಲ್ಲಿ ಅಧಿಕಾರ ಹಾಗೂ ಗೌಪ್ಯತೆಯ ಪ್ರಮಾಣ ವಚನ ಸ್ವೀಕಾರ ಮಾಡಿದರು. ಈ ಸಂಬಂಧ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಕುಮಾರಸ್ವಾಮಿ ಅವರು, 18ನೇ ಲೋಕಸಭೆಯ ಸದಸ್ಯನಾಗಿ, ಮಂಡ್ಯ ಮಹಾಜನತೆಯ ಪ್ರತಿನಿಧಿಯಾಗಿ ಲೋಕಸಭೆಯ ಹಂಗಾಮಿ ಸಭಾಧ್ಯಕ್ಷರಾದ ಭತೃಹರಿ …
Read More »ಪ್ರಮಾಣ ವಚನ ಸ್ವೀಕರಿಸಿ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿದ ಸಿಟಿ ರವಿ, ಕಿವಿ ಹಿಂಡಿ ಅಭಿನಂದಿಸಿದ ಸಿಎಂ!
ಬೆಂಗಳೂರು: ಕರ್ನಾಟಕದ ವಿಧಾನ ಪರಿಷತ್‌ಗೆ ನೂತನವಾಗಿ (Member Of Legislative Assembly) ಆಯ್ಕೆಯಾಗಿ ವಿಧಾನ ಪರಿಷತ್ ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭ ಇಂದು ವಿಧಾನಸೌಧಧ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಿತು. ವಿಧಾನ ಪರಿಷತ್ ನೂತನ ಸದಸ್ಯರ ಪ್ರಮಾಣ ವಚನ ಸ್ವೀಕಾರ (MLA Oath Ceremony) ವೇಳೆ ಅನೇಕ ಸದಸ್ಯರು ಪಕ್ಷಾತೀತವಾಗಿ ಸಿಎಂ ಸಿದ್ದರಾಮಯ್ಯ (Siddaramaiah) ಕಾಲು ಮುಟ್ಟಿ ಆಶೀರ್ವಾದ ಪಡೆದರು. ನೂತನ ಪರಿಷತ್ ಸದಸ್ಯರಿಗೆ ಸಭಾಪತಿ ಬಸವರಾಜ್ ಹೊರಟ್ಟಿ ಪ್ರಮಾಣ …
Read More »ದರ್ಶನ್ ನೋಡಲು ಪರಪ್ಪನ ಅಗ್ರಹಾರ ಜೈಲಿಗೆ ಬಂದ ನಟ ವಿನೋದ್ ಪ್ರಭಾಕರ್
ಬೆಂಗಳೂರು : ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ನೋಡಲು ನಟ ವಿನೋದ್ ಪ್ರಭಾಕರ್ ಗೆಳಯರೊಂದಗಿಗೆ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ ಹಲವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಹಾಕಲಾಗಿದ್ದು, ನಟ ದರ್ಶನ್ ನೋಡಲು ನಟ, ಗೆಳೆಯ ವಿನೋದ್ ಪ್ರಭಾಕರ್ ಮತ್ತು ಸ್ನೇಹಿತರು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಆಗಮಿಸಿದ್ದಾರೆ. ನಟ ದರ್ಶನ್, ಪವಿತ್ರಾಗೌಡ ಸೇರಿದಂತೆ …
Read More »ಯುವತಿಯಿಂದ 18 ಲಕ್ಷ ರೂ. ಪಡೆದು ವಂಚಿಸಿದ ಕಾನ್ಸ್‌ಟೇಬಲ್
ಮುಂಡಗೋಡ : ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಯುವತಿಯೊಬ್ಬಳಿಗೆ ನಂಬಿಸಿ, ಮೋಸದಿಂದ 18 ಲಕ್ಷ ರೂಪಾಯಿ ಪಡೆದುಕೊಂಡು ವಂಚಿಸಿದ ಆರೋಪದ ಮೇಲೆ ಮುಂಡಗೋಡ ಪೊಲೀಸ್ ಠಾಣೆಯ ಕಾನ್ಸ್‌ಟೇಬಲ್ ಗಿರೀಶ ಎಸ್.ಎಮ್ ಎಂಬಾತನ ಮೇಲೆ ಭಾನುವಾರ ರಾತ್ರಿ ಪ್ರಕರಣ ದಾಖಲಾಗಿದೆ. ಕಾನ್ಸ್ಟೇಬಲ್ ಗಿರೀಶ್ ಎಂಬಾತನು ಮನೆ ಕಟ್ಟಲು ಹಣದ ಅವಶ್ಯಕತೆಯಿದೆ ಎಂದು ಹಾಸನ ಮೂಲದ ಯುವತಿಯ ನಂಬಿಸಿ 2018ರ ಏಪ್ರಿಲ್ 27 ರಿಂದ 2023ರ ಆಗಸ್ಟ್ 23ರವರೆಗೆ ಆನ್ ಲೈನ್ …
Read More »ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ
ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತ್ಯು.. ಆಸ್ಪತ್ರೆ ಮುಂದೆ ಕುಟುಂಬಸ್ಥರ ಪ್ರತಿಭಟನೆ ಬಾಗಲಕೋಟೆ: ಹೆಣ್ಣು ಮಗುವಿಗೆ ಜನ್ಮ ನೀಡಿದ ಬೆನ್ನಲ್ಲೇ ಮಹಿಳೆ ಮೃತಪಟ್ಟ ಘಟನೆ ಬಾಗಲಕೋಟೆಯ ಬೀಳಗಿ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಮೃತ ಮಹಿಳೆಯನ್ನು ಜಾನಮಟ್ಟಿ ಲಮಾಣಿ ತಾಂಡಾ 1 ಗ್ರಾಮದ ಲಕ್ಷ್ಮೀ ಅಪ್ಪಾಲಾಲ ಲಮಾಣಿ (28) ಎನ್ನಲಾಗಿದೆ. ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೀಳಗಿ ಪಟ್ಟಣದಲ್ಲಿರುವ ಬಸವ ಪಾಲಿ ಕ್ಲಿನಿಕ್ ಖಾಸಗಿ ಆಸ್ಪತ್ರೆ ದಾಖಲಿಸಿದ್ದಾರೆ, ಅದರಂತೆ ಬೆಳಿಗ್ಗೆ …
Read More »ಜುಲೈ 1 ರಿಂದ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆ ಏರಿಕೆ ಘೋಷಿಸಿದ ಹೀರೋ ಮೋಟೊಕಾರ್ಪ್
ನವದೆಹಲಿ:ದೇಶದ ಪ್ರಮುಖ ದ್ವಿಚಕ್ರ ವಾಹನ ತಯಾರಕರಲ್ಲಿ ಒಬ್ಬರಾದ ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ತನ್ನ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ. ಈ ಮಾಹಿತಿಯನ್ನು ಕಂಪನಿಯು ಸೋಮವಾರ ವಿನಿಮಯ ಕೇಂದ್ರಕ್ಕೆ ಸಲ್ಲಿಸಿದ ಫೈಲಿಂಗ್ ನಲ್ಲಿ ತಿಳಿಸಿದೆ . ಹೀರೋ ಮೋಟೊಕಾರ್ಪ್ ಜುಲೈ 1, 2024 ರಿಂದ ಜಾರಿಗೆ ಬರುವಂತೆ ಆಯ್ದ ಮೋಟಾರ್ ಸೈಕಲ್ ಗಳು ಮತ್ತು ಸ್ಕೂಟರ್ ಗಳ ಎಕ್ಸ್ ಶೋರೂಂ ಬೆಲೆಗಳಲ್ಲಿ ಮೇಲ್ಮುಖ …
Read More »ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ B.S.Y.
ಬೆಳ್ತಂಗಡಿ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರು ರವಿವಾರ ಸಂಜೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಅವರು ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ ಸಿಂಹ ನಾಯಕ್, ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಸಹಿತ ಪ್ರಮುಖರು ಜತೆಗಿದ್ದರು. ಬಳಿಕ ಕ್ಷೇತ್ರದ ಶ್ರೀ ಸನ್ನಿಧಿ ಅತಿಥಿಗೃಹದಲ್ಲಿ ತಂಗಿದ ಯಡಿಯೂ ರಪ್ಪ ಅವರು ಸೋಮವಾರ ಬೆಳಗ್ಗೆ 6.30ಕ್ಕೆ …
Read More »ಕೈ, ಬಿಜೆಪಿ ಟಿಕೆಟ್ ಈ ವಾರವೇ ಅಂತಿಮ?
ಬೆಂಗಳೂರು: ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರ ಹಾಗೂ ಸ್ಥಳೀಯ ಸಂಸ್ಥೆಯಿಂದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ನಡೆಯಬೇಕಿರುವ ಉಪ ಚುನಾ ವಣೆಗಳಿಗೆ ಬಿಜೆಪಿ-ಜೆಡಿಎಸ್ ಹಾಗೂ ಕಾಂಗ್ರೆಸ್ ತಾಲೀಮು ಆರಂಭಿಸಿವೆ. ಈಗಾಗಲೇ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಗಾಗಿ ಉಸ್ತುವಾರಿ ಸಮಿತಿಗಳನ್ನು ರಚಿಸಿ ಕಾಂಗ್ರೆಸ್ ಒಂದು ಹೆಜ್ಜೆ ಮುಂದೆ ಹೋಗಿದ್ದು, ಮಿತ್ರಪಕ್ಷಗಳಾದ ಬಿಜೆಪಿ-ಜೆಡಿಎಸ್ ಇನ್ನಷ್ಟೇ ತಾಲೀಮು ಆರಂಭಿಸಬೇಕಿದೆ. 2 ದಿನಗಳಲ್ಲಿ ಹೊಸದಿಲ್ಲಿಗೆ ತೆರಳುವುದಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದರೆ, ರಾಜ್ಯ …
Read More »CID; ಒಂದೇ ತಂಡದಿಂದ ಅಣ್ಣ-ತಮ್ಮನ ವಿಚಾರಣೆ
ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಸಿಐಡಿ ಎಡಿಜಿಪಿ ಬಿ.ಕೆ. ಸಿಂಗ್ ನೇತೃತ್ವದಲ್ಲೇ ಸೂರಜ್ ರೇವಣ್ಣ ವಿರುದ್ಧ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲಿದ್ದಾರೆ. ಅಂದರೆ ಅಣ್ಣ-ತಮ್ಮನ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ಒಂದೇ ತಂಡ ತನಿಖೆ ನಡೆಸಲಿದೆ. ಈಗಾಗಲೇ ಪ್ರಜ್ವಲ್ ವಿರುದ್ಧ ಬಿ.ಕೆ. ಸಿಂಗ್ ಮುಖ್ಯಸ್ಥರಾಗಿದ್ದು, ಐಪಿಎಸ್ ಅಧಿಕಾರಿಗಳಾದ ಸುಮನ್ ಡಿ. …
Read More »