Breaking News

ಜೂನ್ 24 ರಂದು 18ನೇ ಲೋಕಸಭೆಯ ಮೊದಲ ಅಧಿವೇಶನ ಆರಂಭ

ನವದೆಹಲಿ: 18ನೇ ಲೋಕಸಭೆಯ ಮೊದಲ ಅಧಿವೇಶನ ಸೋಮವಾರ ಆರಂಭವಾಗಲಿದೆ. ಅಧಿವೇಶನದಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರ ಪ್ರಮಾಣ ವಚನ ನಡೆಯಲಿದೆ. ಹಂಗಾಮಿ ಸ್ಪೀಕರ್ ಆಗಿ ನೇಮಕಗೊಂಡಿರುವ ಬಿಜೆಪಿಯ ಹಿರಿಯ ಸಂಸದ ಭರ್ತೃಹರಿ ಮಹತಾಬ್ ಅವರು ಹೊಸದಾಗಿ ಆಯ್ಕೆಯಾದ ಲೋಕಸಭೆ ಸಂಸದರಿಗೆ ಪ್ರಮಾಣ ವಚನ ಬೋಧಿಸಲಿದ್ದಾರೆ. ನೂತನ ಲೋಕಸಭಾ ಸ್ಪೀಕರ್ ಆಯ್ಕೆ ಇದೇ ತಿಂಗಳ 26 ರಂದು ನಡೆಯಲಿದೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಜೂನ್ 27 ರಂದು ಲೋಕಸಭೆ ಮತ್ತು ರಾಜ್ಯಸಭೆಯ ಜಂಟಿ …

Read More »

ಜ್ಞಾನವಿದ್ದವರೇ ಶ್ರೀಮಂತರು: ಸಿದ್ಧಗಂಗಾ ಶ್ರೀ

ಬೆಂಗಳೂರು: ‘ಜ್ಞಾನಕ್ಕೆ ಸಮಾನವಾದುದು ಯಾವುದೂ ಇಲ್ಲ. ಜ್ಞಾನ ಯಾರಲ್ಲಿ ಇರುತ್ತದೆಯೋ ಅವರೇ ಶ್ರೀಮಂತರು. ಶಿಕ್ಷಣದಿಂದ ಮಾತ್ರ ಶಕ್ತಿ ಬರುತ್ತದೆ’ ಎಂದು ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು. ಕರ್ನಾಟಕದ ವಿವಿಧ ಶಾಲೆಗಳ 10 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ರಕ್ಷಾ ಫೌಂಡೇಷನ್‌ ವತಿಯಿಂದ 2 ಲಕ್ಷ ನೋಟ್‌ ಬುಕ್‌ಗಳನ್ನು ವಿತರಿಸಿದ ಸಮಾರಂಭದಲ್ಲಿ ಶನಿವಾರ ಅವರು ಮಾತನಾಡಿದರು.   ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಪ್ರತಿಭಾವಂತರಾಗಿದ್ದು, ಅವರಿಗೆ ಸರಿಯಾದ ಪ್ರೋತ್ಸಾಹ ದೊರಕಿದರೆ ಸಾಧಕರಾಗಿ …

Read More »

ಶಿಷ್ಟಾಚಾರ ಉಲ್ಲಂಘನೆ: ಮುಖ್ಯಶಿಕ್ಷಕ ಅಮಾನತು

ಖಾನಾಪುರ: ಸರ್ಕಾರಿ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘಿಸಿದ ಆರೋಪದಡಿ ತಾಲ್ಲೂಕಿನ ಲಿಂಗನಮಠ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆ ಮುಖ್ಯಶಿಕ್ಷಕ ಎಂ.ಎಂ ಕೋಟೂರ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಬಿಇಒ ರಾಜೇಶ್ವರಿ ಕುಡಚಿ ಶನಿವಾರ ಆದೇಶಿಸಿದ್ದಾರೆ.   ಜೂನ್‌ 19ರಂದು ಲಿಂಗನಮಠ ಸರ್ಕಾರಿ ಶಾಲೆಯಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷ ಕಾಸೀಂ ಹಟ್ಟಿಹೊಳಿ ಮತ್ತು ಎಸ್‌ಡಿಎಂಸಿ ಅಧ್ಯಕ್ಷ ಆನಂದ ಮಾಟೊಳ್ಳಿ ಅವರ ಉಪಸ್ಥಿತಿಯಲ್ಲಿ ನೂತನ ಕೊಠಡಿಗಳ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿತ್ತು. ಶಿಷ್ಟಾಚಾರ ಉಲ್ಲಂಘನೆ ಸಂಬಂಧ …

Read More »

ಖಾನಾಪುರ: ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸಾವು

ಖಾನಾಪುರ: ಪಟ್ಟಣದ ಹೊರವಲಯದ ಬೆಳಗಾವಿ ರಸ್ತೆಯ ಮರೆಮ್ಮ ದೇವಾಲಯದ ಬಳಿ ಶುಕ್ರವಾರ ರಾತ್ರಿ ಲಾರಿ ಹಿಂದಿನ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತಪಟ್ಟಿದ್ದಾರೆ. ತಾಲ್ಲೂಕಿನ ಹಲಕರ್ಣಿ ನಿವಾಸಿ ಸಂಜು ಮಲ್ಲಪ್ಪ ಸತನಾಯ್ಕ (35) ಮೃತರು. ಪಟ್ಟಣದಿಂದ ಬೆಳಗಾವಿ ಕಡೆಗೆ ಬೈಕ್‌ನಲ್ಲಿ ಹೋಗುತ್ತಿದ್ದಾಗ ಲಾರಿಯನ್ನು ಓವರ್‌ಟೇಕ್ ಮಾಡಲು ಹೀಗಿ, ಎದುರಿಗೆ ಬಂದ ಮತ್ತೊಂದು ಬೈಕ್‌ಗೆ ಡಿಕ್ಕಿ ಹೊಡೆದು, ಲಾರಿಯ ಹಿಂದಿನ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾರೆ. ಮತ್ತೊಂದು ಬೈಕ್‌ನಲ್ಲಿದ್ದ ಗಂಗವಾಳಿ ಗ್ರಾಮದ ತುಕಾರಾಮ ಸುತಾರ …

Read More »

ಮಾರಾಟಕ್ಕೆ ಇಟ್ಟಿದ್ದ ಮಗು ಸಾವು

ಬೆಳಗಾವಿ: ಮಾರಾಟಕ್ಕೆ ಒಳಗಾಗುವುದನ್ನು ತಪ್ಪಿಸಿ, ರಕ್ಷಿಸಲಾಗಿದ್ದ ಹೆಣ್ಣು ಮಗು ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಹೆಣ್ಣುಮಗು ಗುರುವಾರ (ಜೂನ್‌ 20) ಮೃತಪಟ್ಟಿದೆ. ‘ಮಗು ಎಂಟೇ ತಿಂಗಳಿಗೆ ಜನಿಸಿತ್ತು. ತೂಕ 1 ಕೆಜಿ 200 ಗ್ರಾಂ ಮಾತ್ರ ಇತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿತ್ತು. ಮಗು ಜನ್ಮತಃ ಸೆಪ್ಟಿಸಿನಿಯಾ ಎಂಬ ಕಾಯಿಲೆಗೆ ಒಳಗಾಗಿತ್ತು. ನಾವು ಸಾಕಷ್ಟು ಪ್ರಯತ್ನ ಮಾಡಿದರೂ ಮಗು ಚೇತರಿಸಿಕೊಳ್ಳಲಿಲ್ಲ’ ಎಂದು ಜಿಲ್ಲಾಸ್ಪತ್ರೆಯ ಮಕ್ಕಳ ರೋಗತಜ್ಞ ಡಾ.ಶೈಲೇಶ್‌ ಪಾಟೀಲ ತಿಳಿಸಿದರು. ಏನಿದು ಪ್ರಕರಣ: ‘ಪವಿತ್ರಾ …

Read More »

ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ

ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ   ಬೆಳಗಾವಿ: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು …

Read More »

ಶಿಕ್ಷಣದಲ್ಲಿ ರಾಜಕೀಯ ಬೇಡ; ಶಾಸಕ ಬಾಬಾಸಾಹೇಬ್ ಪಾಟೀಲ್

ಚನ್ನಮ್ಮನ ಕಿತ್ತೂರು: ಮಕ್ಕಳ ಹಾಗೂ ಶಾಲೆಗಳ ಅಭಿವೃದ್ಧಿಗಳನ್ನು ಗಮನದಲ್ಲಿಟ್ಟುಕೊಂಡು ಪಾಲಕರು ಶ್ರಮ ವಹಿಸಬೇಕು. ಶಾಲೆಗಳ ಅಭಿವೃದ್ಧಿಯಲ್ಲಿ ಹಾಗೂ ಶಿಕ್ಷಣದಲ್ಲಿ ರಾಜಕೀಯ ಬೆರೆಸಬಾರದು ಎಂದು ಶಾಸಕ ಬಾಬಾ ಸಾಹೇಬ್ ಪಾಟೀಲ್ ಹೇಳಿದರು. ಅವರು ಕಾದ್ರೊಳ್ಳಿ ಗ್ರಾಮದಲ್ಲಿನ ಸರಕಾರಿ ಪ್ರೌಢಶಾಲೆಯಲ್ಲಿ ತಾಲೂಕ ಪಂಚಾಯಿತಿ ಹಾಗೂ ಶಿಕ್ಷಣ ಇಲಾಖೆ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ ಪಾಲಕರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪಾಲಕರು ಮಕ್ಕಳಿಗಾಗಿ ಆಸ್ತಿಯನ್ನು ಮಾಡದೆ ಉತ್ತಮ ಶಿಕ್ಷಣ ದೊರಕಿಸುವುದರ ಮೂಲಕ ಮಕ್ಕಳನ್ನು ಆಸ್ತಿಯಾಗಿ ಮಾಡಬೇಕು. ಈ …

Read More »

ರಾಜ್ಯದಲ್ಲಿ ಕೋವಿಡ್ ವೇಳೆ ಸ್ಥಗಿತಗೊಂಡಿದ್ದ ಬಸ್ ಗಳು ಶೀಘ್ರವೇ ಪುನಾರಂಭ : ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ

ಬೆಂಗಳೂರು : ಕೋವಿಡ್ ವೇಳೆ ರಾಜ್ಯಾದ್ಯಂತ 3,800 ಸರ್ಕಾರಿ ಬಸ್ ರೂಟ್ಗಳನ್ನು ಸ್ಥಗಿತಗೊಳಿಸಲಾಗಿತ್ತು. ಈ ಪೈಕಿ ಬಹುತೇಕ ಕಡೆಗೆ ರೂಟ್ ಬಸ್ಗಳ ಓಡಾಟ ಆರಂಭವಾಗದೆ ಜನರು ಪರದಾಡುವಂತಾಗಿತ್ತು. ಈಗ ಸಾರಿಗೆ ಇಲಾಖೆ ಸ್ಥಗಿತಗೊಳಿಸಿದ್ದ ಬಸ್ ರೂಟ್ಗಳ ಪುನರಾರಂಭಕ್ಕೆ ಚಿಂತನೆ ನಡೆಸಿದೆ. “ಕೋವಿಡ್ ವೇಳೆ ಸ್ಥಗಿತಗೊಳಿಸಲಾಗಿದ್ದ ಬಸ್ ಸೇವೆ ಪುನರಾರಂಭಿಸಲು ಕ್ರಮ ವಹಿಸಲಾಗುತ್ತಿದೆ. ಹಿಂದಿನ ಸರ್ಕಾರದ ಅವಧಿಯಲ್ಲಿ ನೂತನ ಬಸ್ಗಳನ್ನು ಖರೀದಿಸಿಲ್ಲ. ಇದರಿಂದ ಬಸ್ ಕೊರತೆ ಇದ್ದು, ಈಗ ಖರೀದಿಗೆ ಕ್ರಮವಹಿಸಲಾಗುತ್ತಿದೆ. …

Read More »

ಸಿದ್ದರಾಮಯ್ಯ ರಾಜೀನಾಮೆ ನೀಡಿ ಚುನಾವಣೆ ಎದುರಿಸಲಿ: ಯತ್ನಾಳ್

ವಿಜಯಪುರ: ರಾಜ್ಯದಲ್ಲಿ ಸಿದ್ಧರಾಮಯ್ಯ ಸರ್ಕಾರ ಬ್ರಿಟೀಷ್ ಮಾದರಿಯಲ್ಲಿ ತೆರಿಗೆ ಹೇರುತ್ತಿದೆ. ಬ್ರಿಟೀಷರು ಉಪ್ಪಿನ ಮೇಲೆ ತರಿಗೆ ಹೇರಿದಂತೆ ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ತೆರಿಗೆ ವಿಧಿಸುತ್ತಿದೆ. ಆಡಳಿತ ವೈಪಲ್ಯದ ಕಾರಣ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸಿದ್ಧರಾಮಯ್ಯ ಚುನಾವಣೆ ಎದುರಿಸಬೇಕು ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದರು. ಶನಿವಾರ ರಾಜ್ಯ ಸರ್ಕಾರದ ಇಂಧನ ದರ ಏರಿಕೆ ವಿರೋಧಿಸಿ ಬಿಜೆಪಿ ನಗರದ ಹೊರ ವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ-50 …

Read More »

ಜೂ. 27 ನೂತನ ಸಂಸದರಿಗೆ ಸಿಎಂ ಔತಣಕೂಟ: ರಾಜ್ಯದ ಪರ ಧ್ವನಿ ಎತ್ತಲು ಮನವಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಜೂನ್ 27 ರಂದು ರಾಜ್ಯದ ಸಂಸದರ ಸಭೆ ಕರೆದಿದ್ದಾರೆ. ಜೂನ್ 27ರಂದು ದೆಹಲಿಗೆ ತೆರಳಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹೊಸದಾಗಿ ಆಯ್ಕೆಯಾದ ರಾಜ್ಯದ ಸಂಸದರಿಗೆ ಔತಣಕೂಟ ಆಯೋಜಿಸಿದ್ದಾರೆ. ಜೂನ್ 27ರಂದು ಸಂಜೆ ಔತಣಕೂಟ ಆಯೋಜಿಸಿದ್ದು, ರಾಜ್ಯದ ಪರ ಧ್ವನಿ ಎತ್ತುವಂತೆ ಸಂಸದರಿಗೆ ಮುಖ್ಯಮಂತ್ರಿಗಳು ಮನವಿ ಮಾಡಲಿದ್ದಾರೆ. ಕೇಂದ್ರದಿಂದ ರಾಜ್ಯಕ್ಕೆ ಆಗಬೇಕಾದ ಕೆಲಸಗಳ ಅಹವಾಲು ಪಟ್ಟಿಯನ್ನು ಸಲ್ಲಿಸಲಿದ್ದಾರೆ. ರಾಜ್ಯದ ಸಂಸದರು ಮತ್ತು ಕೇಂದ್ರ ಸಚಿವರಿಗೆ ರಾಜ್ಯ ಸರ್ಕಾರದ ವತಿಯಿಂದ ಪಟ್ಟಿ …

Read More »