ಮೂಡಲಗಿ: ತಾಲ್ಲೂಕಿನ ನಾಗನೂರ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಸಮೀಪ ಸೋಮವಾರ ಮೂಡಲಗಿ- ಗೋಕಾಕ ರಾಜ್ಯ ಹೆದ್ದಾರಿ ಮೇಲೆ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಮೃತಪಟ್ಟಿದ್ದಾನೆ. ನಾಗನೂರಿನ ಲಕ್ಷ್ಮಣ ಕೆಂಚನವರ ಅವರ ಪುತ್ರ ವಿನಾಯಕ (8) ಅಪಘಾತಕ್ಕೆ ಬಲಿಯಾದ ಬಾಲಕ. ರಾಯಬಾಗ ತಾಲ್ಲೂಕಿನ ಆಲಕನೂರು ಗ್ರಾಮದ, ಚಾಲಕ ದೇವಪ್ಪ ಅರ್ಜುನ ಯಲ್ಲಟ್ಟಿ ಅಪಘಾತಪಡಿಸಿದ ಆರೋಪಿ. ನಾಗನೂರು ಕಡೆಯಿಂದ ಗೋಕಾಕ ಮಾರ್ಗವಾಗಿ ಕಾರ್ ವೇಗವಾಗಿ ಸಂಚರಿಸುತ್ತಿತ್ತು. ಬಾಲಕ ರಸ್ತೆಯ …
Read More »ಅಭಿವೃದ್ಧಿ ಕಾಮಗಾರಿಗಳನ್ನು ಕೈಬಿಟ್ಟಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ನಗರಸಭೆ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ರೂಪ ಅನಂತರಾಜು ಆಗ್ರಹ
ಗೌರಿಬಿದನೂರು: ದಲಿತರು ಹೆಚ್ಚಾಗಿ ವಾಸಿಸುವ ವಾರ್ಡ್‌ಗಳಲ್ಲಿ ನಡೆಸಲು ಉದ್ದೇಶಿಸಿದ್ದ ಅಭಿವೃದ್ಧಿ ಕಾಮಗಾರಿಗಳನ್ನು ಕೈಬಿಟ್ಟಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಗರಸಭೆ ಮಾಜಿ ಅಧ್ಯಕ್ಷೆ, ಹಾಲಿ ಸದಸ್ಯೆ ರೂಪ ಅನಂತರಾಜು ಆಗ್ರಹಿಸಿದ್ದಾರೆ. ‘2022ರಲ್ಲಿ ನಾನು ನಗರಸಭೆ ಅಧ್ಯಕ್ಷೆಯಾಗಿದ್ದಾಗ ಅಂದಿನ ಶಾಸಕ ಹಾಗೂ ನಗರಸಭೆ ಎಲ್ಲ ಸದಸ್ಯರೊಂದಿಗೆ ಚರ್ಚಿಸಿ ಅಮೃತ ನಗರೋತ್ಥಾನ ಯೋಜನೆಯಡಿ ₹30ಕೋಟಿ ವೆಚ್ಚದ ಕಾಮಗಾರಿಗಳ ಕ್ರಿಯಾ ಯೋಜನೆ ಸಿದ್ಧಪಡಿಸಿ ನಗರ ಯೋಜನಾ ನಿರ್ದೇಶಕರಿಗೆ ಕಳುಹಿಸಿಕೊಡಲಾಗಿತ್ತು. 18ನೇ ವಾರ್ಡ್ ನೆಹರೂ …
Read More »ತೈಲ ಬೆಲೆ ಏರಿಕೆ ಸಾಮಾನ್ಯರನ್ನು ಬಾಧಿಸದು: ಸಚಿವ ಕೆ.ಎಚ್.ಮುನಿಯಪ್ಪ
ವಿಜಯಪುರ(ದೇವನಹಳ್ಳಿ): ‘ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿಮೆ ಇದೆ. ಸ್ವಲ್ಪ ಪ್ರಮಾಣದಲ್ಲಿ ಬೆಲೆ ಏರಿಕೆ ಮಾಡಲಾಗಿದೆ. ರೈತರು ಮತ್ತು ಸಾರ್ವಜನಿಕರನ್ನು ಇದು ಬಾಧಿಸದು’ ಎಂದು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ. ಪಟ್ಟಣದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಂಧ್ರಪ್ರದೇಶ, ತೆಲಂಗಾಣ ರಾಜ್ಯಗಳಿಗಿಂತ ರಾಜ್ಯದಲ್ಲಿ ತೈಲ ಬೆಲೆ ಕಡಿಮೆ ಇದೆ. ಸಾಮಾನ್ಯ ವರ್ಗದ ಜನರನ್ನು ಗಮನದಲ್ಲಿ ಇಟ್ಟುಕೊಂಡೆ ಬೆಲೆಯನ್ನು ಸ್ವಲ್ಪ ಪ್ರಮಾಣದಲ್ಲಿ ಏರಿಕೆ ಮಾಡಲಾಗಿದೆ ಎಂದರು. ಸಾರ್ವಜನಿಕರು …
Read More »ಸ್ಮಶಾನಕ್ಕೆ ರಸ್ತೆ ಕಲ್ಪಿಸದಿದ್ದರೆ ಪ್ರತಿಭಟನೆ: ಗ್ರಾಮಸ್ಥರ ಎಚ್ಚರಿಕೆ
ವಿಜಯಪುರ(ದೇವನಹಳ್ಳಿ): ಹೋಬಳಿಯ ವೆಂಕಟಗಿರಿಕೋಟೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿಂಗವಾರ, ದೊಡ್ಡಸಾಗರಹಳ್ಳಿ ಗ್ರಾಮಗಳ ಜನರಿಗೆ ಮೀಸಲಿಟ್ಟಿರುವ ಸ್ಮಶಾನಕ್ಕೆ ರಸ್ತೆ ನಿರ್ಮಾಣ ಮಾಡಬೇಕು. ಇಲ್ಲದಿದ್ದರೆ ಪ್ರತಿಭಟನೆ ನಡೆಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ. ಸ್ಮಶಾನಕ್ಕೆ ರಸ್ತೆ ಇಲ್ಲದೆ ಇಲ್ಲಿನ ಪರದಾಡುತ್ತಿದ್ದಾರೆ. ರಸ್ತೆ ನಿರ್ಮಿಸಿಕೊಡಿ ಎಂದು ಅಧಿಕಾರಿಗಳಿಗೆ ಗಮನಕ್ಕೆ ತಂದರೂ ಪ್ರಯೋಜನವಾಗಲಿಲ್ಲ. ಇನ್ಮುಂದೆ ಯಾರಾದರೂ ಮೃತಪಟ್ಟರೆ ನೇರವಾಗಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಶವ ಇಟ್ಟು ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ. ಎರಡೂ ಗ್ರಾಮದಲ್ಲಿ ಯಾರಾದರೂ ಮೃತಪಟ್ಟರೆ, ರೈತರ …
Read More »ಬೆಲೆ ಏರಿಕೆ: ಎತ್ತಿನಗಾಡಿ, ಸೈಕಲ್‌ನಲ್ಲಿ ಪ್ರಯಾಣಿಸಿ ಪ್ರತಿಭಟನೆ
ಕೊರಟಗೆರೆ: ರಾಜ್ಯ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಮಾಡಿ ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತೆ ಮಾಡಿದೆ ಎಂದು ಆರೋಪಿಸಿ ಪಟ್ಟಣದಲ್ಲಿ ಎನ್‌ಡಿಎ ಕಾರ್ಯಕರ್ತರು ಎತ್ತಿನ ಗಾಡಿ, ಸೈಕಲ್‌ನಲ್ಲಿ ಪ್ರಯಾಣಿಸಿ ಸೋಮವಾರ ಪ್ರತಿಭಟಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ವರ್ಷಕಳೆದರೂ ಯಾವುದೇ ಅಭಿವೃದ್ಧಿ ಕಾರ್ಯ ಮಾಡಿಲ್ಲ. ಬದಲಾಗಿ ಗ್ಯಾರಂಟಿಗಳ ಗುಂಗಲ್ಲಿ ಕಾಲ ಹರಣ ಮಾಡುತ್ತಿದೆ. ಈಗ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚು ಮಾಡಿ ಜನ ಸಾಮಾನ್ಯರಿಗೆ ಬರೆ …
Read More »ಬೀದಿನಾಯಿ ದಾಳಿ: ಮಹಿಳೆ ಸಾವು
ಗುಬ್ಬಿ: ಬೀದಿನಾಯಿ ದಾಳಿಗೆ ತಾಲ್ಲೂಕಿನ ಕಡಬ ಹೋಬಳಿ, ಕಲ್ಲೂರು ಗ್ರಾಮದ (65) ವೃದ್ಧೆ ಗಂಗಮ್ಮ ಭಾನುವಾರ ತಡರಾತ್ರಿ ಮೃತಪಟ್ಟಿದ್ದಾರೆ. ಗ್ರಾಮದಲ್ಲಿ ಕಳೆದ 20 ದಿನಗಳ ಹಿಂದೆ ಗ್ರಾಮದ ನಾಲ್ವರಿಗೆ ಬೀದಿ ನಾಯಿಯೊಂದು ತೀವ್ರವಾಗಿ ಕಡಿದು ಹಲ್ಲೆ ಮಾಡಿತ್ತು. ಎಲ್ಲರನ್ನೂ ತಕ್ಷಣ ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಗಂಗಮ್ಮ ಅವರನ್ನು ಹೊರತುಪಡಿಸಿ ಉಳಿದ ಎಲ್ಲರೂ ಚೇತರಿಸಿಕೊಂಡಿದ್ದರು. ಗಂಗಮ್ಮ ಅವರು ತೀವ್ರ ಅಸ್ವಸ್ಥರಾಗಿದ್ದರಿಂದ ತುಮಕೂರು ನಂತರ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆಕೊಡಿಸಿದರೂ ನಿಧನರಾಗಿದ್ದರೆ. ಗ್ರಾಮದಲ್ಲಿ ಬೀದಿನಾಯಿ …
Read More »ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಜು.15 ರಿಂದ ಆರಂಭ
ಬೆಂಗಳೂರು: ಕರ್ನಾಟಕ ವಿಧಾನ ಮಂಡಲದ ಮಳೆಗಾಲದ ಅಧಿವೇಶನ ಜುಲೈ 15 ರಿಂದ ನಡೆಯುವ ಸಾಧ್ಯತೆಗಳಿವೆ. ಜುಲೈ 15 ರಿಂದ 10 ದಿನ ಅಧಿವೇಶನ ನಡೆಸಲು ವಿಧಾನಸಭಾಧ್ಯಕ್ಷರ ಕಚೇರಿಯಲ್ಲಿ ಪೂರ್ವ ಸಿದ್ಧತೆಗಳು ನಡೆಯುತ್ತಿವೆ. ಕೆಂಗಲ್ ಗೇಟ್ ನಿಂದ ವಿಧಾನಸಭೆ ಸಭಾಂಗಣ ಪ್ರವೇಶಿಸುವ ಮುಖ್ಯ ದ್ವಾರವನ್ನು ರೋಜ್ ವುಡ್‌ನಿಂದ ನಿರ್ಮಿಸಲಾಗಿದ್ದು, ಅಧಿವೇಶನದ ವೇಳೆಯಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ದ್ವಾರವನ್ನು ಉದ್ಘಾಟಿಸಲಿದ್ದಾರೆ. ಉತ್ತಮ ವಾತಾವರಣಕ್ಕೆ ಒತ್ತು ಈ ಬಾರಿ ವಿಧಾನಸಭೆ ಅಧಿವೇಶನ ನಡೆಯುವ ಹಾಗೂ ವಿಧಾನಸೌಧದ …
Read More »ಕಲ್ಲಿದ್ದಲು ಆಮದು ಶೇ 13.2ರಷ್ಟು ಹೆಚ್ಚಳ
ನವದೆಹಲಿ: ಏಪ್ರಿಲ್ ತಿಂಗಳಲ್ಲಿ 2.61 ಕೋಟಿ ಟನ್ ಕಲ್ಲಿದ್ದಲು ದೇಶಕ್ಕೆ ಆಮದಾಗಿದೆ ಎಂದು ಇ-ವಾಣಿಜ್ಯ ಸಂಸ್ಥೆ ಎಂ-ಜಂಕ್ಷನ್ ಸರ್ವಿಸಸ್ ಲಿಮಿಟೆಡ್ ತಿಳಿಸಿದೆ. ಹಿಂದಿನ ವರ್ಷದ ಇದೇ ಅವಧಿಯಲ್ಲಿ 2.30 ಕೋಟಿ ಟನ್ ಕಲ್ಲಿದ್ದಲು ಆಮದಾಗಿತ್ತು. ಈ ಆಮದಿಗೆ ಹೋಲಿಸಿದರೆ ಶೇ 13.2ರಷ್ಟು ಏರಿಕೆಯಾಗಿದೆ. ಕೋಕಿಂಗ್ ಅಲ್ಲದ (ಉಷ್ಣ ವಿದ್ಯುತ್ ಸ್ಥಾವರದಲ್ಲಿ ಬಳಸುವ ಕಲ್ಲಿದ್ದಲು) ಕಲ್ಲಿದ್ದಲು 1.74 ಕೋಟಿ ಟನ್ ಮತ್ತು 49.7 ಲಕ್ಷ ಟನ್ ಕೋಕಿಂಗ್ (ಉತ್ತಮ ಗುಣಮಟ್ಟ) ಕಲ್ಲಿದ್ದಲು …
Read More »ಪಂಪ್ ಹೌಸ್ ಬಳಿ ಅಕ್ರಮವಾಗಿ ಕಟ್ಟಿಹಾಕಿದ್ದ 22 ಜಾನುವಾರುಗಳ ರಕ್ಷಣೆ
ದಾಂಡೇಲಿ: ಅಕ್ರಮವಾಗಿ ಕಟ್ಟಿಟ್ಟಿದ್ದ 22 ಜಾನುವಾರುಗಳನ್ನು ಹಿಂದೂಪರ ಸಂಘಟನೆಗಳ ಆಗ್ರಹ ಹಾಗೂ ಪೋಲಿಸರ ಸಹಕಾರದಿಂದ ರಕ್ಷಣೆ ಮಾಡಿದ ಘಟನೆ ನಗರದ 3ನಂ ಗೇಟ್ ವ್ಯಾಪ್ತಿಯ ಪಂಪ್ ಹೌಸ್ ಹತ್ತಿರ ಭಾನುವಾರ ರಾತ್ರಿ ನಡೆದಿದೆ. ಬಕ್ರೀದ್ ಹಬ್ಬದ ನಿಮಿತ್ತ ಕುರ್ಬಾನಿಗಾಗಿ ಎಂದು ಅನುಮಾನಿಸಿ ಅನಧಿಕೃತವಾಗಿ ಗೋವುಗಳನ್ನು ಹಾಗೂ ಸಣ್ಣ ಕರುಗಳನ್ನು 3ನಂ ಗೇಟ್ ವ್ಯಾಪ್ತಿಯ ಪಂಪ್ ಹೌಸ್ ಹತ್ತಿರ ಖಾಲಿ ಜಾಗದಲ್ಲಿ ಕಟ್ಟಿ ಇಟ್ಟಿರಬಹುದೆಂದು ಹಿಂದೂಪರ ಸಂಘಟನೆಯವರು ಪೋಲಿಸರಿಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ …
Read More »ಸರ್ಕಾರ ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ.: ಬಿ.ಸಿ.ಪಾಟೀಲ್ ಆಕ್ರೋಶ
ಹಾವೇರಿ: ರಾಜ್ಯ ಸರಕಾರ ಬೆಲೆ ಏರಿಕೆ ಮಾಡಿದ್ದು ದೊಡ್ಡ ಆಘಾತವಾಗಿದೆ. ನೇರವಾಗಿ ರಾಬರಿ ಮತ್ತು ಡಕಾಯತಿ ಇದು. ಜನರನ್ನು ನೇರವಾಗಿ ಸುಲಿಗೆ ಮಾಡುತ್ತಿದೆ. ಸಾರ್ವಜನಿಕರ ಜೇಬಿಗೆ ಸರಕಾರ ಕತ್ತರಿ ಹಾಕಿದೆ. ಗ್ಯಾರಂಟಿ ಕೊಟ್ಟರೂ ಜನರು ಕೈ ಹಿಡಿಯಲಿಲ್ಲ ಎಂದು ಹತಾಶರಾಗಿದ್ದಾರೆ ಎಂದು ಮಾಜಿ ಸಚಿವ ಬಿ.ಸಿ.ಪಾಟೀಲ ಹರಿಹಾಯ್ದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,187 ಕೋಟಿ ಭ್ರಷ್ಟಾಚಾರ ಮಾಡಿ ಆಂಧ್ರ ಪ್ರದೇಶದ ಚುನಾವಣೆಗೆ ಬಳಸಿದ್ದಾರೆ. ಈ ಹಗರಣದಲ್ಲಿ ಮುಖ್ಯಮಂತ್ರಿಗಳ ಕೈವಾಡವಿದೆ. ನಾಗೇಂದ್ರ ಅವರ …
Read More »