ಬೆಂಗಳೂರು : ಹುಸಿ ಬಾಂಬ್ ಕರೆಗಳು , ಇಮೇಲ್‌ಗಳನ್ನು ಪತ್ತೆ ಹಚ್ಚುವುದು ಕಷ್ಟದ ಕೆಲಸ. ಆದರೂ ಹುಸಿ ಬಾಂಬ್ ಕರೆಗಳ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುತ್ತಿದೆ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಇಸ್ರೋಗೆ ಹುಸಿ ಬಾಂಬ್ ಬೆದರಿಕೆ ಬಂದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಆಗಾಗ ಇಂತಹ ಹುಸಿ ಬೆದರಿಕೆಗಳು ಬರುತ್ತದೆ. ವಿಮಾನ ನಿಲ್ದಾಣ ಇರಬಹುದು, ಥರ್ಮಲ್ ಪವರ್ ಪ್ಲ್ಯಾಂಟ್ ಇರಬಹುದು. ಎಚ್ಚೆತ್ತುಕೊಂಡು ಸೂಕ್ತ ಕ್ರಮ ತೆಗೆದುಕೊಂಡಿದ್ದೇವೆ ಎಂದರು. …
Read More »ರಾಮ ಮಂದಿರಕ್ಕೆ ನಾನು ಕೊಟ್ಟ ದೇಣಿಗೆ ವಾಪಸ್ ಬೇಕು, ಕೋರ್ಟಿಗೆ ಹೋಗ್ತೇನೆ – ದಿಗ್ವಿಜಯ್ ಸಿಂಗ್
ಭೋಪಾಲ್: ರಾಮ ಮಂದಿರ ನಿರ್ಮಾಣಕ್ಕಾಗಿ ನಾನು ನೀಡಿದ್ದ ದೇಣಿಗೆ ದುರುಪಯೋಗವಾಗಿದೆ ಎಂದು ಅಯೋಧ್ಯೆಯ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡುವುದಾಗಿ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಮತ್ತು ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ. ಅಲ್ಲದೇ ತಮ್ಮ ದೇಣಿಗೆಯನ್ನು ಹಿಂದಿರುಗಿಸುವಂತೆ ಒತ್ತಾಯಿಸುವುದಾಗಿಯೂ ಹೇಳಿದ್ದಾರೆ. ನಾನು ನೀಡಿದ ದೇಣಿಗೆಯನ್ನ ದುರುಪಯೋಗ ಪಡಿಸಿಕೊಳ್ಳಲಾಗಿದೆ. ಇದರ ವಿರುದ್ಧ ಅಯೋಧ್ಯೆ ಕೋರ್ಟ್‌ನಲ್ಲಿ ಮೊಕದ್ದಮೆ ಹೂಡಲು ನಿರ್ಧರಿಸಿದ್ದೇನೆ. ದೇಣಿಗೆ ನೀಡಿದ್ದ ಹಣವನ್ನ ಅವರು ಲೂಟಿ ಮಾಡಿದ್ದಾರೆ, ಆದ್ದರಿಂದ ಅದನ್ನ ನನಗೆ …
Read More »ಮಳೆಗಾಲದ ಅಧಿವೇಶನ ಮುಗಿಯೋವರೆಗೆ ಮೋದಿ ಸಂಪುಟ ಪುನಾರಚನೆ ಇಲ್ಲ?
ನವದೆಹಲಿ: ಜುಲೈ 21 ರಿಂದ ಆಗಸ್ಟ್ 21 ರ ವರೆಗೆ ನಡೆಯಲಿರುವ ಮಳೆಗಾಲದ ಸಂಸತ್ ಅಧಿವೇಶನ ಅಂತ್ಯದ ವರೆಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದಲ್ಲಿ ಸಂಪುಟ ಪುನಾರಚನೆ ಅಸಾಧ್ಯ ಎಂದು ಉನ್ನತ ಮೂಲಗಳನ್ನಾಧರಿಸಿ ಮಾಧ್ಯಮಗಳು ವರದಿ ಮಾಡಿವೆ. ಸಂಪುಟ ಪುನಾರಚನೆ ಸೇರಿದಂತೆ ಯಾವುದೇ ಕೆಲಸಗಳಿದ್ದರೂ, ಅದು ಅಧಿವೇಶನ ಮುಗಿದ ನಂತರ ಕೈಗೊಳ್ಳಲು ಪಕ್ಷ ನಿರ್ಧರಿಸಿದೆ ಎಂದು ವಿಶ್ವಾಸಾರ್ಹ ಮೂಲಗಳು ತಿಳಿಸಿವೆ. ಮುಂದಿನವಾರದಲ್ಲಿ ಪ್ರಧಾನಿ ಮೋದಿ ಒಂದು ವಾರಗಳ ಕಾಲ ವಿದೇಶಿ …
Read More »ಸಿದ್ದರಾಮಯ್ಯ ಕನಸಿನ ಕೂಸು ಜಾತಿಗಣತಿ ಜಾರಿ ಮಾಡುತ್ತೇವೆ: ಯತೀಂದ್ರ
ದಾವಣಗೆರೆ: ಸಿದ್ದರಾಮಯ್ಯನವರು ಸಿಎಂ ಆಗಿ ಇನ್ನೂ ಎರಡು ವರ್ಷ ಇರುತ್ತಾರೆ ಎಂದುಕೊಂಡಿದ್ದೆವು. ಕಾರಣಾಂತರಗಳಿಂದ ಆ ಸ್ಥಾನದಿಂದ ಇಳಿದರು. ಆದರೆ ಅವರ ಕನಸಿನ ಕೂಸು ಜಾತಿಗಣತಿ ಸ್ವೀಕರಿಸಿದ್ದೇವೆ. ಅದನ್ನು ಜಾರಿ ಮಾಡುತ್ತೇವೆ ಎಂದು ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು. ದಾವಣಗೆರೆಯಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಜಾತಿಗಣತಿ ವರದಿಯನ್ನು ಜಾರಿಗೊಳಿಸಬೇಕು ಎಂದು ಸಿದ್ದರಾಮಯ್ಯನವರು ಎಂದುಕೊಂಡಿದ್ದರು. ಅದನ್ನು ನಾವು ಜಾರಿ ಮಾಡುತ್ತೇವೆ. ಕ್ಯಾಬಿನೆಟ್ ಮುಂದೆ ಇದರ ಚರ್ಚೆ ಬರಬೇಕಿದೆ. …
Read More »ಮಡಿಕೇರಿಯಲ್ಲಿ 3 ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತ; ತಗ್ಗು ಪ್ರದೇಶಕ್ಕೆ ನುಗ್ಗಿದ ನೀರು
ಮಡಿಕೇರಿ: ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಶುಕ್ರವಾರ ಸಂಜೆ 7 ಗಂಟೆಯಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಕಳೆದ ಮೂರು ಗಂಟೆಗಳಿಗೂ ಹೆಚ್ಚು ಕಾಲ ಬಿಟ್ಟುಬಿಡದೆ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಡಿಕೇರಿ ನಗರ ಸೇರಿದಂತೆ ಸೋಮವಾರಪೇಟೆ, ವಿರಾಜಪೇಟೆ ಮತ್ತು ಮೂರ್ನಾಡು ಭಾಗಗಳಲ್ಲೂ ಉತ್ತಮ ಮಳೆಯಾಗಿದೆ. ನಿರಂತರ ಮಳೆಯಿಂದ ರಸ್ತೆಗಳು ಕೆರೆಯಂತಾಗಿವೆ. ಧಾರಾಕಾರ ಮಳೆಯಿಂದ ಹಳ್ಳ-ಕೊಳ್ಳಗಳು ಆತುಂಬಿ ಹರಿಯಲಾರಂಭಿಸಿವೆ. ಹಲವು ಕಡೆ ನೀರಿನ ಮಟ್ಟ ಏರಿಕೆಯಾಗಿದ್ದು, ಸ್ಥಳೀಯರಲ್ಲಿ …
Read More »ಇಸ್ರೋ ಕೇಂದ್ರ ಕಚೇರಿಗೆ ಬಾಂಬ್ ಬೆದರಿಕೆ – ಯುಪಿ ಮೂಲದ ಆರೋಪಿ ಅರೆಸ್ಟ್
ಬೆಂಗಳೂರು: ಇಲ್ಲಿನ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ ಕೇಂದ್ರ ಕಚೇರಿಗೆ ಬಾಂಬ್ ಇಡುವುದಾಗಿ ಇ-ಮೇಲ್ ಬೆದರಿಕೆಹಾಕಿದ್ದ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಘಾಜಿಯಾಬಾದ್‌ನಲ್ಲಿ ಆರೋಪಿಯನ್ನ ಸಂಜಯನಗರ ಪೊಲೀಸರು ಬಂಧಿಸಿದ್ದಾರೆ. ಯುಪಿ ಮೂಲದ ಆರೋಪಿಯನ್ನ ಬಂಧಿಸಿ ಬೆಂಗಳೂರಿಗೆ ಕರೆ ತಂದಿದ್ದಾರೆ. ಆರೋಪಿ ಬಳಿ ಇದ್ದ ಎಲೆಕ್ಟ್ರಾನಿಕ್ ಸಾಧನಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಆರೋಪಿಯ ವಿಚಾರಣೆ ವೇಳೆ ಮಾನಸಿಕ ಅಸ್ವಸ್ಥನೆಂದು ತಿಳಿದು ಬಂದಿದೆ. ಸದ್ಯ ಆರೋಪಿಯನ್ನ ಪೊಲೀಸರು ಹೆಚ್ಚಿನ ತನಿಖೆ ಮಾಡ್ತಿದ್ದಾರೆ. …
Read More »ರಾಮ ಮಂದಿರ ಆಯ್ತು, ಈಗ ಬದರಿನಾಥ ಧಾಮದಲ್ಲೂ ದೇಣಿಗೆ ದುರುಪಯೋಗ ಆರೋಪ: ತನಿಖೆಗೆ ಆದೇಶ
ಡೆಹ್ರಾಡೂನ್: ಅಯೋಧ್ಯೆಯ ರಾಮ ಮಂದಿರದ ದೇಣಿಗೆ ದುರುಪಯೋಗ ಪ್ರಕರಣದ ಬೆನ್ನಲ್ಲೇ ಇದೀಗ ಬದರಿನಾಥ ಧಾಮದಲ್ಲೂ ಕಾಣಿಕೆ ದುರುಪಯೋಗವಾಗಿರುವ ಬಗ್ಗೆ ಗಂಭೀರ ಆರೋಪಗಳು ಕೇಳಿಬಂದಿದ್ದು, ತನಿಖೆಗೆ ಆದೇಶಿಸಲಾಗಿದೆ. ಬದರಿನಾಥ-ಕೇದರನಾಥ ದೇವಸ್ಥಾನ ಸಮಿತಿ ಅಧ್ಯಕ್ಷ ಹೇಮಂತ್ ದ್ವಿವೇದಿ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ದೇಣಿಗೆ ದುರುಪಯೋಗದ ಆರೋಪಗಳನ್ನು ದೇವಸ್ಥಾನ ಸಮಿತಿಯು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಸಮಗ್ರ ತನಿಖೆಗಾಗಿ ತನಿಖಾ ಸಮಿತಿಯೊಂದನ್ನು ರಚಿಸಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ …
Read More »ವೈದ್ಯ ವೃತ್ತಿ ಮಾನವ ಸೇವೆಯ ಶ್ರೇಷ್ಠ ಕ್ಷೇತ್ರ
ಬೆಳಗಾವಿ : ವೈದ್ಯ ವೃತ್ತಿಯು ಕೇವಲ ಉದ್ಯೋಗವಲ್ಲ. ಮಾನವ ಸೇವೆಯ ಶ್ರೇಷ್ಠ ಕ್ಷೇತ್ರ. ಹೀಗಾಗಿ, ಓದುವ ವಿದ್ಯಾರ್ಥಿಗಳು ಉತ್ತಮ ಆರೋಗ್ಯ ಕಾಪಾಡಿಕೊಂಡು ಸಮಾಜಮುಖಿ ಚಿಂತನೆ ಬೆಳೆಸಿಕೊಳ್ಳಬೇಕು ಎಂದು ನವಜೀವನ ಫೌಂಡೇಶನ್ ಮತ್ತು ಆಸ್ಪತ್ರೆಯ ಎಂಡಿ ಡಾ.ಸತೀಶ ಚೌಲಿಗರ ಹೇಳಿದರು. ಗುರುದೇವ ಜಂಬಗಿ ಪಿಯು ವಿಜ್ಞಾನ ಕಾಲೇಜಿಯಲ್ಲಿ ಬುಧವಾರ ಜರುಗಿದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, ಸಮಾಜದ ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಅಮೂಲ್ಯ ಸೇವೆಯನ್ನು ಸ್ಮರಿಸಿದರು. ಡಾ. ಸರ್ಫರಾಜ ಪಟೇಲ ಮಾತನಾಡಿ, …
Read More »ಬರಗಾಲ ಭೀತಿಯಲ್ಲಿರುವ ರೈತರ ಹಿತರಕ್ಷಣೆಗೆ ಕವಟಗಿಮಠ ಆಗ್ರಹ
ಬೆಳಗಾವಿ: ಮುಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಿಂದಾಗಿ ಬರಗಾಲ ಭೀತಿಯಲ್ಲಿರುವ ಬೆಳಗಾವಿ ಜಿಲ್ಲೆಯಲ್ಲಿ ಹತ್ತಾರು ಸಮಸ್ಯೆಗಳು ಉದ್ಬವಿಸಿದ್ದು, ರೈತರು, ಕೂಲಿ ಕಾರ್ಮಿಕರನ್ನು ರಕ್ಷಿಸುವ ನಿಟ್ಟಿನಲ್ಲಿ ವಿಶೇಷ ಯೋಜನೆ ರೂಪಿಸಬೇಕು ಎಂದು ಒತ್ತಾಯಿಸಿ ಬುಧವಾರ ಬೆಳಗಾವಿಗೆ ಭೇಟಿ ನೀಡಿದ್ದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರನ್ನು ಭೇಟಿ ಮಾಡಿದ ವಿಧಾನಪರಿಷತ್ ಮಾಜಿ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಮನವಿ ಸಲ್ಲಿಸಿದರು. ಈಗಾಗಲೇ ಮಳೆಯ ಅಭಾವದಿಂದಾಗಿ ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ, ಕಬ್ಬು ಬೆಳೆಗೆ ಗೊಣ್ಣೆಹುಳು …
Read More »ಜು.10ರಿಂದ ಬೆಳಗಾವಿಯಲ್ಲಿ ಆರ್‌ಎಸ್‌ಎಸ್ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ
ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಬೆಳಗಾವಿಯಲ್ಲಿ ಜು.10ರಿಂದ 12ರವರೆಗೆ ನಡೆಯಲಿದೆ. ಈ ಸಭೆಯಲ್ಲಿ ದೇಶವ್ಯಾಪ್ತಿಯ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಪ್ರಚಾರಕರು ಹಾಗೂ ಸಹ ಕ್ಷೇತ್ರ ಪ್ರಚಾರಕರು ಹಾಗೂ ಸಂಘದ ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳು, 46 ಪ್ರಾಂತಗಳ ಕಾರ್ಯಕರ್ತರು ಜತೆಗೆ ಸಂಘಪ್ರೇರಿತ 32 ಸಂಘಟನೆಗಳ ಅಖಿಲ ಭಾರತೀಯ ಸಂಘಟನಾ ಮಂತ್ರಿಗಳು ಪಾಲ್ಗೊಳ್ಳಲಿದ್ದಾರೆ ಎಂದು ಅಖಿಲ ಭಾರತೀಯ ಪ್ರಚಾರ ಪ್ರಮುಖ …
Read More »
Laxmi News 24×7