ಚಿಕ್ಕೋಡಿ: ತಾಲ್ಲೂಕಿನ ಕಲ್ಲೋಳ ಗ್ರಾಮದ ಹೊರ ವಲಯದಲ್ಲಿ ಕೃಷ್ಣಾ ಹಾಗೂ ದೂಧಗಂಗಾ ನದಿ ದಡದ ಗ್ರಾಮಗಳಲ್ಲಿ ಮತ್ತೆ ಮೊಸಳೆ ಉಪಟಳ ಹೆಚ್ಚಾಗಿದೆ. ಪ್ರತಿ ಬಾರಿ ಮುಂಗಾರು ಮಳೆ ಆರಂಭಕ್ಕೆ ಕೃಷ್ಣಾ ನದಿ ನೀರಿನೊಂದಿಗೆ ಹರಿದುಬರುವ ಮೊಸಳೆಗಳು ಗ್ರಾಮಸ್ಥರ ನಿದ್ದೆಗೆಡಿಸಿವೆ. ಸಂಗಮ ಸ್ಥಳದಿಂದ 500 ಮೀಟರ್ ದೂರದಲ್ಲಿ ಒಂದು ಹೆಣ್ಣು ಹಾಗೂ ಒಂದು ಗಂಡು ಮೊಸಳೆ ಪತ್ತೆಯಾಗಿವೆ. ಅಲ್ಲದೇ ಏಳು ಮೊಸಳೆ ಮರಿಗಳು ಕೂಡ ಪತ್ತೆಯಾಗಿದ್ದು, ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. 5-6 …
Read More »ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಕಲ್ಲೆದ್ದ ರಸ್ತೆಯಲ್ಲೇ ಮಕ್ಕಳ ನಡಿಗೆ!
ಚನ್ನಮ್ಮನ ಕಿತ್ತೂರು: ಕಾಲು ದಾರಿ ಮೇಲೆ ಮುಷ್ಟಿಗಾತ್ರದ ಚೂಪನೆಯ ಕಲ್ಲುಗಳು ಎದ್ದು ಕುಳಿತಿವೆ. ಸ್ಮಶಾನಕ್ಕೂ ಇದೇ ದಾರಿ ಅವಲಂಬನೆ. ಮಳೆಯಾದರೆ ಸಾಕು ಮನೆಯೊಳಗೆ ನೀರು ನುಗ್ಗಿ ಬದುಕೇ ಯಾತನಾಮಯ ಆಗುತ್ತದೆ. ಇದು ತಾಲ್ಲೂಕಿನ ಉಗರಖೋಡ ಗ್ರಾಮ ಪಂಚಾಯ್ತಿ ವ್ಯಾಪ್ತಿಗೆ ಬರುವ ತಿಮ್ಮಾಪುರ ಗ್ರಾಮದ ಅಂಬೇಡ್ಕರ್ ಕಾಲೊನಿ ಮಕ್ಕಳು ಮತ್ತು ನಾಗರಿಕರ ಗೋಳು. ‘ಕಾಲೊನಿಯಿಂದ ಸುಮಾರು ಅರ್ಧ ಕಿ.ಮೀ ದೂರದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲೆಗೆ ತೆರಳಲು ಮಕ್ಕಳು ರಸ್ತೆ ಮೇಲೆ ಎದ್ದು …
Read More »ಚಿಕ್ಕೋಡಿ ಕ್ಷೇತ್ರದಲ್ಲಿ ಕಾಂಗ್ರೆಸ್ ತಳಪಾಯ ಗಟ್ಟಿ
ಹುಕ್ಕೇರಿ: ‘ಚಿಕ್ಕೋಡಿ ಲೋಕಸಭೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು 90 ಸಾವಿರಕ್ಕಿಂತ ಹೆಚ್ಚು ಮತಗಳ ಮುನ್ನಡೆಯಿಂದ ಗೆಲ್ಲಿಸಿರುವುದಕ್ಕೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕೃತಜ್ಞತೆ ಸಲ್ಲಿಸುತ್ತೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಪಟ್ಟಣಕ್ಕೆ ಭೇಟಿ ನೀಡಿದ್ದ ಅವರು ಫಲಿತಾಂಶದ ನಂತರ ಕಾರ್ಯಕರ್ತರ ಜತೆ ಚುನಾವಣೆಯ ಫಲಿತಾಂಶ ಕುರಿತು ಚರ್ಚಿಸಿ ಮಾತನಾಡಿದರು. ‘ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ತಳಪಾಯ ಗಟ್ಟಿಯಾಗಿದ್ದು, ಆ ತಳಪಾಯವು ತಾಲ್ಲೂಕು ಮತ್ತು ಜಿಲ್ಲಾ ಪಂಚಾಯ್ತಿ …
Read More »ಕುಡಿಯುವ ನೀರು ಪೂರೈಕೆಗೆ ₹8.40 ಕೋಟಿ ಮಂಜೂರು
ಚಿಕ್ಕೋಡಿ: ‘ತಾಲ್ಲೂಕಿನ ನವಲಿಹಾಳ, ಸಂಕನವಾಡಿ ಹಾಗೂ ತಪಕರವಾಡಿ ಗ್ರಾಮಗಳ ಕುಡಿಯುವ ನೀರಿನ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರದಿಂದ ₹8.40 ಕೋಟಿ ಅನುದಾನ ಮಂಜೂರು ಮಾಡಿಸಿಕೊಂಡು ಬರಲಾಗಿದ್ದು, ಗ್ರಾಮಸ್ಥರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದು ದೆಹಲಿ ವಿಶೇಷ ಪ್ರತಿನಿಧಿ ಪ್ರಕಾಶ ಹುಕ್ಕೇರಿ ಹೇಳಿದರು. ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಯೋಜನೆಗೆ ಸಂಬಂಧಿಸಿದ ಆದೇಶ ಪ್ರತಿ ವಿತರಿಸಿ ಮಾತನಾಡಿದ ಅವರು, ‘ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಈ ಗ್ರಾಮಗಳಿಗೆ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರಯತ್ನ …
Read More »ಬೈಕ್ ಡಿಕ್ಕಿ: ಸವಾರ ಸಾವು
ಹಂದಿಗುಂದ: ಸಮೀಪದ ಪಾಲಬಾವಿಯಲ್ಲಿ ಸೋಮವಾರ ರಾತ್ರಿ ಬೈಕುಗಳು ಪರಸ್ಪರ ಡಿಕ್ಕಿಯಾದ ಪರಿಣಾಮ ಸ್ಥಳದಲ್ಲಿಯೇ ಒಬ್ಬ ಮೃತಪಟ್ಟಿದ್ದಾನೆ. ಸುಲ್ತಾನಪುರ ಗ್ರಾಮದ ರಾಘವೇಂದ್ರ ರಾಮಪ್ಪ ಹಾದಿಮನಿ (28) ಮೃತ ವ್ಯಕ್ತಿ. ಹಾರೂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲಬಾವಿ ಗ್ರಾಮದಲ್ಲಿ ಸೋಮವಾರ ರಾತ್ರಿ 8 ಗಂಟೆಗೆ ಅಪಘಾತ ನಡೆದಿದೆ. ಹಿಂಬದಿಯ ಸವಾರ ಸೌರಭ ತುಕಾರಾಮ ಮಾದರ ಅವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಹಾರೂಗೇರಿ ಪಟ್ಟಣದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾರೂಗೇರಿ ಸಿಪಿಐ ರವಿಚಂದ್ರನ ಬಡಪಕೀರಪ್ಪನವರ, ಪಿಎಸ್‌ಐ …
Read More »ಕೋರ್ಟ್‌ನಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರಣಾಧೀನ ಕೈದಿ: ಥಳಿತ
ಬೆಳಗಾವಿ: ವಿಚಾರಣೆಗಾಗಿ ಕರೆತಂದಿದ್ದ ಕೈದಿಯೊಬ್ಬ ಬೆಳಗಾವಿ ನ್ಯಾಯಾಲಯ ಆವರಣದಲ್ಲಿ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಪರ ಘೋಷಣೆ ಕೂಗಿದ್ದರಿಂದ ವಕೀಲರು ಹಾಗೂ ಜನರು ಥಳಿಸಿದ್ದಾರೆ. ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಹಿಂಡಲಗಾ ಕೇಂದ್ರ ಕಾರಾಗೃಹದಲ್ಲಿದ್ದ ಕೈದಿ ಜಯೇಶ್ ಪೂಜಾರಿ ಎಂಬಾತನನ್ನು ವಿಚಾರಣೆಗಾಗಿ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಆಗ, ‘ನ್ಯಾಯಾಲಯದಲ್ಲಿ ನನ್ನ ಅಹವಾಲು ಸ್ವೀಕರಿಸುತ್ತಿಲ್ಲ’ ಎಂದು ಪಾಕಿಸ್ತಾನ ಪರ ಘೋಷಣೆ ಕೂಗಿದ್ದಾನೆ. ಆಗ ವಕೀಲರು ಮತ್ತು ಜನರು ಹೊಡೆಯುತ್ತಿದ್ದಂತೆ, ಕೈದಿಯನ್ನು ರಕ್ಷಿಸಿದ ಪೊಲೀಸರು ಎಪಿಎಂಸಿ ಠಾಣೆಗೆ …
Read More »ಪೋಕ್ಸೋ ಪ್ರಕರಣ : ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಲೈಂಗಿಕ ದೌರ್ಜನ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಂತ್ರಸ್ತೆಯ ಸಹೋದರ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದು ಯಡಿಯೂರಪ್ಪ ಅವರನ್ನು ಬಂಧಿಸುವಂತೆ ನಿರ್ದೇಶನ ಕೋರಿ ಹೈಕೋರ್ಟಿಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಹೌದು ಬಿಎಸ್ ಯಡಿಯೂರಪ್ಪ ಬಂಧಿಸುವಂತೆ ನಿರ್ದೇಶನ ಕೋರಿ ಸಂತ್ರಸಸ್ತೆಯ ಸಹೋದರ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಪೋಕ್ಸೋ ಕೇಸ್ ಸಂತ್ರಸ್ತೆಯ ಸಹೋದರನಿಂದ ಇದೀಗ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಲೈಂಗಿಕ ದೌರ್ಜನ್ಯ …
Read More »ನಟ ವಿನೋದ್ ರಾಜ್ ಆಸ್ಪತ್ರೆಗೆ ದಾಖಲು
ಬೆಂಗಳೂರು: ಸ್ಯಾಂಡಲ್ ವುಡ್ ನಟ ವಿನೋದ್ ರಾಜ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕರುಳಿನ ಸಮಸ್ಯೆ ಹಿನ್ನೆಲೆಯಲ್ಲಿ ವಿನೋದ್ ರಾಜ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಕೆಲ ವರ್ಷಗಳ ಹಿಂದೆ ಹಾರ್ಟ್ ಆಪರೆಷನ್ ಗೆ ಒಳಗಾಗಿದ್ದರು. ಈ ವೇಳೆ ಹಾರ್ಟ್ ಗೆ ಸ್ಟಂತ್ ಅಳವಡಿಸಲಾಗಿತ್ತು. ಈಗ ಅದೇ ಸ್ಟಂಟ್ ನಿಂದಾಗಿ ಕರುಳಿನ ಸಮಸ್ಯೆ ಎದುರಾಗಿದೆ ಎಂದು ತಿಳಿದುಬಂದಿದೆ. ವಿನೋದ್ ರಾಜ್ ಶಸ್ತ್ರಚಿಕಿತ್ಸೆಗೆ …
Read More »ಚನ್ನಪಟ್ಟಣದಿಂದ ನನ್ನ ಸ್ಪರ್ಧೆ ಇಲ್ಲ: ಡಿ.ಕೆ. ಸುರೇಶ್
ಚನ್ನಪಟ್ಟಣ: ಲೋಕಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರು ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಜಯಗಳಿಸಿದ್ದರಿಂದ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ. ಹೀಗಾಗಿ ಇಲ್ಲಿ ತೆರವಾಗುವ ಜಾಗಕ್ಕೆ ಅಚ್ಚರಿಯ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತಿಸಿದೆ. ಮಾಜಿ ಸಂಸದ ಡಿ.ಕೆ. ಸುರೇಶ್ ಅವರೇ ಸ್ಪರ್ಧೆ ಮಾಡಬೇಕು ಎಂಬ ಒತ್ತಾಯ ಕೇಳಿಬಂದಾಗ, ಸುರೇಶ್ ಈ ಹೇಳಿಕೆಯನ್ನು ನೀಡಿದರು. ತಾಲೂಕಿನ ಕೆಂಗಲ್ ಬಳಿಯ ತಿಮ್ಮಮ್ಮ ದಾಸೇಗೌಡ ಕಲ್ಯಾಣ ಮಂಟಪದಲ್ಲಿ ಮಂಗಳವಾರ ತಾಲೂಕು …
Read More »ಗ್ಯಾರಂಟಿಗಳು ನಿಲ್ಲಲ್ಲ: ಅಶೋಕ್‌ಗೆ ಸಿಎಂ ತಿರುಗೇಟು
ಬೆಂಗಳೂರು: ವಿಪಕ್ಷ ನಾಯಕ ಆರ್. ಅಶೋಕ್ ವಿರುದ್ಧ ಮತ್ತೆ ವ್ಯಂಗ್ಯಾಸ್ತ್ರ ಪ್ರಯೋಗ ಮಾಡಿರುವ ಸಿಎಂ ಸಿದ್ದರಾಮಯ್ಯ, ಅಶೋಕ್ ಆಗಾಗ ತಮ್ಮ ಅಜ್ಞಾನ ಪ್ರದರ್ಶನ ಮಾಡುತ್ತ ರಾಜ್ಯದ ಜನರಿಗೆ ಮನೋರಂಜನೆ ನೀಡುತ್ತಿರುತ್ತಾರೆ. ಗ್ಯಾರಂಟಿಗಳು ಕಾಂಗ್ರೆಸ್‌ಗೆ ಮತ ತಂದು ಕೊಟ್ಟಿಲ್ಲ ಎನ್ನುವುದು ಅವರ ಇತ್ತೀಚಿನ ಸಂಶೋಧನೆ ಎಂದು ಟೀಕಿಸಿದ್ದಾರೆ. ಜತೆಗೆ ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತವೆ ಎಂದು ದೃಢವಾಗಿ ಹೇಳುವ ಮೂಲಕ ಎಲ್ಲ ಗೊಂದಲಗಳಿಗೆ ಅವರು ತೆರೆ ಎಳೆದಿದ್ದಾರೆ. ಸಾಲ ಮಾಡಿ ಸಂಬಳ ಕೊಡುವ …
Read More »