Breaking News

ಪುನಃ ಒತ್ತುವರಿ ಮಾಡುವವರ ಸಾಮಗ್ರಿಗಳನ್ನ ಜಪ್ತಿ ಮಾಡಿ, ದುಪ್ಪಟ್ಟು ದಂಡ ವಿಧಿಸಿ: ಕೃಷ್ಣ ಬೈರೇಗೌಡ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಈವರೆಗೆ 964 ಕಿ.ಮೀ. ಪಾದಚಾರಿ ಮಾರ್ಗಗಳ ಒತ್ತುವರಿ ತೆರವುಗೊಳಿಸಲಾಗಿದ್ದು, ಬಾಕಿ ಇರುವ ಒತ್ತುವರಿಯನ್ನ ಆಗಸ್ಟ್ ತಿಂಗಳೊಳಗಾಗಿ ತೆರವುಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವರಾದ ಕೃಷ್ಣ ಬೈರೇಗೌಡ  ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಬಿಎ ವ್ಯಾಪ್ತಿಯಲ್ಲಿ ‘ಪಾದಚಾರಿ ಮಾರ್ಗಗಳ ಒತ್ತುವರಿ ತೆರವು’, ‘ತ್ಯಾಜ್ಯದಿಂದ ಸ್ವಾತಂತ್ರ್ಯ’ ಹಾಗೂ ‘ಬಿಡಾಡಿ ವಾಹನಗಳ ತೆರವು ಕಾರ್ಯಾಚರಣೆ’ ಕುರಿತು ನಡೆದ ವರ್ಚುವಲ್ ಸಭೆಯನ್ನ ಉದ್ದೇಶಿಸಿ ಇಂದು ಅವರು ಮಾತನಾಡಿದರು. ನಗರದಲ್ಲಿ ಸುಮಾರು …

Read More »

ವಿಜಯ್‌ ಸರ್ಕಾರ ಯೂಟರ್ನ್‌; CJP, ಎಡಪಕ್ಷ ಪ್ರತಿಭಟನೆಗಳಿಂದ ವಿದ್ಯಾರ್ಥಿಗಳನ್ನು ದೂರವಿಡುವ ಆದೇಶ ವಾಪಸ್‌

ಚೆನ್ನೈ: ಸಿಜೆಪಿ , ಎಡಪಂಥೀಯ ಪ್ರತಿಭಟನೆಗಳಿಂದ ವಿದ್ಯಾರ್ಥಿಗಳನ್ನು ದೂರವಿಡುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಆದೇಶವನ್ನು ತಮಿಳುನಾಡು ಸರ್ಕಾರ ರದ್ದುಗೊಳಿಸಿದೆ. ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆಗಳು, ಆಂದೋಲನಗಳಲ್ಲಿ ಭಾಗವಹಿಸುವುದನ್ನು ತಡೆಯಲು ಕ್ರಮ ಕೈಗೊಳ್ಳುವ ತನ್ನ ಹಿಂದಿನ ನಿರ್ದೇಶನವನ್ನು ಸರ್ಕಾರ ಹಿಂತೆಗೆದುಕೊಂಡಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಆಗಸ್ಟ್ 17 ರಂದು ಇಲಾಖೆ ನೀಡಿದ್ದ ಹಿಂದಿನ ನಿರ್ದೇಶನವನ್ನು ಹಿಂಪಡೆಯಲಾಗಿದೆ ಎಂದು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕಿ ಸಿಂಥಿಯಾ ಸೆಲ್ವಿ ಪಿ ತಿಳಿಸಿದ್ದಾರೆ. ತಮಿಳುನಾಡಿನಾದ್ಯಂತ …

Read More »

ದೇಹಾದ್ಯಂತ ತೀವ್ರ ಉರಿಯಿಂದ ಕೆರೆಯಲ್ಲೇ ಇರುತ್ತಿದ್ದ ಬಾಲಕ – ಅನಂತ್ ಅಂಬಾನಿ ನೆರವಿನಿಂದ ಮುಂಬೈಗೆ ಏರ್‌ಲಿಫ್ಟ್

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ  ಇಕ್ಬಾಲ್ ಶೇಖ್ ವಿಚಿತ್ರ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ದೇಹದಾದ್ಯಂತ ತೀವ್ರ ಉರಿ ಕಾಣಿಸಿಕೊಳ್ಳುವ ಕಾರಣ ಗಂಟೆಗಟ್ಟಲೆ ಕೆರೆಯ ನೀರಿನಲ್ಲಿ ಮುಳುಗಿ ಇರುತ್ತಿದ್ದ. ಈ ಪ್ರಕರಣದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬಳಿಕ ಉದ್ಯಮಿ ಅನಂತ್ ಅಂಬಾನಿ  ಈತನ ನೆರವಿಗೆ ಬಂದಿದ್ದು, ಇದೀಗ ಇಕ್ಬಾಲ್‌ನನ್ನು ಚಿಕಿತ್ಸೆಗಾಗಿ ಮುಂಬೈಗೆ ಏರ್‌ಲಿಫ್ಟ್ ಮಾಡಲಾಗಿದೆ. ಅನಂತ್ ಅಂಬಾನಿ ಅವರು ಇಕ್ಬಾಲ್‌ನ ಪೋಷಕರು ಸಾಮಾಜಿಕ ಜಾಲತಾಣದಲ್ಲಿ ಸಹಾಯ ಕೋರಿ ಮಾಡಿದ್ದ …

Read More »

ಇನ್ಮುಂದೆ ಒಬ್ಬ ವ್ಯಕ್ತಿ ಹೆಸರಿಗೆ ಗರಿಷ್ಠ 9 ಸಿಮ್ – ರಿಯಲ್ ಟೈಮ್ ವೆರಿಫಿಕೇಷನ್ ಕಡ್ಡಾಯ

ನವದೆಹಲಿ: ಅಹಮದಾಬಾದ್‌ನಲ್ಲಿ ನಡೆದ 1.5 ಕೋಟಿ ರೂ. ಮೊತ್ತದ ‘ಬಾಸ್ ಸ್ಕ್ಯಾಮ್’  ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಾರೀ ಸೈಬರ್ ಅಪರಾಧ ಜಾಲವೊಂದು ಪತ್ತೆಯಾಗಿದೆ. ಸೈಬರ್ ಅಪರಾಧಗಳಿಗೆ ಬಳಸಲಾಗುತ್ತಿದ್ದ ಸುಮಾರು 4,500 ಸಿಮ್ ಕಾರ್ಡ್‌ಗಳನ್ನ  ಪೊಲೀಸರು ಪತ್ತೆಹಚ್ಚಿದ್ದು, ಈ ಜಾಲಕ್ಕೆ ಚೀನಾ ಮತ್ತು ಪಾಕಿಸ್ತಾನದೊಂದಿಗೆ ಸಂಪರ್ಕವಿರುವ ಶಂಕೆ ವ್ಯಕ್ತವಾಗಿದೆ. ಈ ಬೆನ್ನಲ್ಲೇ ದೇಶದಾದ್ಯಂತ ಸಿಮ್‌ ಕಾರ್ಡ್‌ಗಳನ್ನು ಖರೀದಿಸುವ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ಮತ್ತಷ್ಟು ಬಿಗಿಗೊಳಿಸಿದೆ. ಹೌದು. …

Read More »

ಆಸ್ತಿ ವಿಚಾರಕ್ಕೆ ಪತಿ, ಪತ್ನಿ ನಡುವೆ ಜಗಳ – ಕೋಪಕ್ಕೆ ತನ್ನಿಬ್ಬರು ಮಕ್ಕಳನ್ನ ಕಾಲುವೆಗೆ ಎಸೆದು, ಪೊಲೀಸರಿಗೆ ಶರಣಾದ ತಂದೆ

ಯಾದಗಿರಿ: ಆಸ್ತಿ ವಿಚಾರಕ್ಕೆ ಪತಿ, ಪತ್ನಿ ನಡುವೆ ನಡೆದ ಗಲಾಟೆ ತಾರಕಕ್ಕೇರಿ ತನ್ನಿಬ್ಬರು ಮಕ್ಕಳನ್ನ ಕಾಲುವೆಗೆ ಎಸೆದು ತಂದೆ ಕೊಲೆ ಮಾಡಿರುವ ಘಟನೆ ಯಾದಗಿರಿ  ಜಿಲ್ಲೆಯ ಶಹಾಪುರ  ತಾಲೂಕಿನ ಗೋಗಿ ಗ್ರಾಮದ ಹೊರಭಾಗದಲ್ಲಿ ನಡೆದಿದೆ. ಕಕ್ಕಸಗೇರಾ ಗ್ರಾಮದ ಆರೋಪಿ ತಂದೆ ಶಾಂತಪ್ಪ ತನ್ನ ಇಬ್ಬರು ಮಕ್ಕಳಾದ ಸಾನ್ವಿ(9) ಹಾಗೂ ಸೃಜನ್‌ನನ್ನು (2) ಕೊಲೆ ಮಾಡಿದ್ದಾನೆ. ಮೂವರು ಮಕ್ಕಳನ್ನು ಕೊಲೆ ಮಾಡಲೆಂದು ಆರೋಪಿ ತಂದೆ ಕಾಲುವೆಗೆ ಕರೆದೊಯ್ದಿದ್ದ. ಆದರೆ ಈ ವೇಳೆ …

Read More »

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ: ಈಶ್ವರ ಖಂಡ್ರೆ ಮನವಿ

ಬೆಂಗಳೂರು: ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅಭಿಮನ್ಯು  ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ ಪಾಲ್ಗೊಳ್ಳಲು ಅವಕಾಶ ನೀಡಿ ರಾಜೋಚಿತ ಬೀಳ್ಕೊಡುಗೆ ನೀಡುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ  ಮನವಿ ಮಾಡಿದ್ದಾರೆ. ಈ ಸಂಬಂಧ ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಪತ್ರ ಬರೆದಿರುವ ಅವರು, ದಸರಾ ಮಹೋತ್ಸವದಲ್ಲಿ ನಾಡದೇವಿ ಚಾಮುಂಡೇಶ್ವರಿ ವಿರಾಜಮಾನಳಾದ 750 ಕೆ.ಜಿ. ತೂಕದ ಚಿನ್ನದಂಬಾರಿ ಹೊತ್ತು ಗಜಗಾಂಭೀರ್ಯದಿಂದ …

Read More »

ಕೃಷಿ ಸಚಿವ ನರೇಂದ್ರಸ್ವಾಮಿ ಮನವಿಗೆ ಕೇಂದ್ರ ಸ್ಪಂದನೆ

ನವದೆಹಲಿ: ಕೃಷಿ ಸಚಿವ ನರೇಂದ್ರಸ್ವಾಮಿ ಅವರಿಂದು  ಕೇಂದ್ರ ಕೃಷಿ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್  ಅವರನ್ನು ಭೇಟಿಯಾದರು. ಈ ವೇಳೆ ಸಲ್ಲಿಸಿದ ಮನವಿಗೆ ಕೇಂದ್ರ ಸಚಿವರು ಸ್ಪಂದಿಸಿದ್ದು, ಸೆಪ್ಟೆಂಬರ್ ಮೊದಲ ವಾರದಲ್ಲಿ ರಾಜ್ಯಕ್ಕೆ ಬಂದು ಯಾವುದಾದರೊಂದು ಬರಪೀಡಿತ ಜಿಲ್ಲೆಗೆ ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ. ನರೇಂದ್ರಸ್ವಾಮಿ ಅವರು ದೆಹಲಿಗೆ ತೆರಳಿ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ಬರದ ಹಿನ್ನೆಲೆ …

Read More »

ಬೀದರ್‌ನಲ್ಲಿ ಮಾಯವಾದ ವರುಣ ದೇವ – 57 ಕೆರೆಗಳು ಖಾಲಿ, ಹನಿ ನೀರಿಗೆ ಹಾಹಾಕಾರ

ಬೀದರ್: ಮುಂಗಾರು ಮಳೆ ಕೈಕೊಟ್ಟ ಪರಿಣಾಮ ಬೀದರ್‌ ಜಿಲ್ಲೆಯ ಕೆರೆ-ಕಟ್ಟೆಗಳು ಬರಿದಾಗುತ್ತಿವೆ. ಇದರ ಪರಿಣಾಮ ಈಗಾಗಲೇ ಕೃಷಿ ಚಟುವಟಿಕೆಗಳ ಮೇಲೆ ಗೋಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರು, ಅಂತರ್ಜಲ ಮಟ್ಟ ಹಾಗೂ ಗ್ರಾಮೀಣ ಜೀವನೋಪಾಯದ ಮೇಲೂ ಗಂಭೀರ ಪರಿಣಾಮ ಬೀರುವ ಆತಂಕ ಎದುರಾಗಿದೆ. ಸಣ್ಣ ನೀರಾವರಿ ಇಲಾಖೆ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಜಿಲ್ಲೆಯಲ್ಲಿ ಒಟ್ಟು 125 ಕೆರೆಗಳಿದ್ದು, 2,958 ಎಂಸಿಎಫ್‌ಟಿ ನೀರಿನ ಸಾಮರ್ಥ್ಯ‌ ಹೊಂದಿವೆ. ಒಟ್ಟಾರೆ 21 …

Read More »

ಚಾಮರಾಜನಗರ ಎನ್‌ಕೌಂಟರ್ | ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟ 4ನೇ ಆರೋಪಿ ಮಹಿಮಾ ದಾಸ್

ಚಾಮರಾಜನಗರ: ಶೂಟೌಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತ ಮೂವರ ಜೊತೆಗಿದ್ದು, ಬಳಿಕ ಪರಾರಿಯಾಗಿದ್ದ ಮಹಿಮಾ ದಾಸ್ ಇದೀಗ ಅಜ್ಞಾತ ಸ್ಥಳದಿಂದ ವಿಡಿಯೋ ಹರಿಬಿಟ್ಟಿದ್ದಾನೆ. ಶೂಟೌಟ್ ನಡೆದ ವೇಳೆ ಸತ್ತ ಮೂವರ ಜೊತೆ ತೆರಳಿದ್ದ ಮಹಿಮಾ ದಾಸ್ ಎಸ್ಕೇಪ್ ಆಗಿದ್ದ. ನಂತರ ಮೈಸೂರಿನ  ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಸಚಿವ ಪುಟ್ಟರಂಗಶೆಟ್ಟಿ ಕೂಡ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದ್ದರು. ಆದರೆ ಅದಾದ ಬಳಿಕ ಮಹಿಮಾದಾಸ್ ಮತ್ತೆ ನಾಪತ್ತೆಯಾಗಿದ್ದ. ಇದೀಗ ತಾನಿರುವ ಅಜ್ಞಾತ ಸ್ಥಳದಿಂದ ವಿಡಿಯೋ …

Read More »

ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹ ಧನಕ್ಕೆ 20 ಸಾವಿರ ರೂ. ಲಂಚ; ಲೋಕಾಯುಕ್ತ ಬಲೆಗೆ ಅಧಿಕಾರಿ

ಹಾವೇರಿ: ಮೊಬೈಲ್ ಕ್ಯಾಂಟೀನ್‌ಗೆ  ಪ್ರೋತ್ಸಾಹ ಧನ ಬಿಡುಗಡೆ ಮಾಡಲು 20 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಹಾವೇರಿ ನಗರದ ಜಿಲ್ಲಾಕ್ರೀಡಾಂಗಣದ ಬಳಿಯ ರಸ್ತೆಯಲ್ಲಿ ಹಣ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ಅಧಿಕಾರಿಗಳು ಟ್ರ್ಯಾಪ್ ಮಾಡಿದ್ದಾರೆ. ಮಲಕಸಾಬ್ ನದಾಫ್ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ. ಪ್ರವಾಸೋದ್ಯಮ ಇಲಾಖೆಯ ಜಿಲ್ಲಾ ಸಮಾಲೋಚಕರಾಗಿ ಕೆಲಸ ಮಾಡುತ್ತಿದ್ದ. ಮೊಬೈಲ್ ಕ್ಯಾಂಟೀನ್ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಸಲ್ಲಿಸಿದ್ದ ರವಿಚಂದ್ರ …

Read More »