ದೆಹಲಿಯಲ್ಲಿ ಪ್ರತಿಪಕ್ಷಗಳ ಸಮಾವೇಶ: ಚುನಾವಣಾ ಆಯೋಗಕ್ಕೆ INDIA ಮೈತ್ರಿಕೂಟದ ನ 5 ಬೇಡಿಕೆಗಳು ಇಂತಿವೆ…

ನವದೆಹಲಿ: ದೆಹಲಿಯ ರಾಮ್ ಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ಸಮಾವೇಶ ಇಂದು ನಡೆದಿದ್ದು, ಶಿವಸೇನೆ (ಉದ್ಧವ್ ಠಾಕ್ರೆ ಬಣ) ಆಮ್ ಆದ್ಮಿ ಪಕ್ಷ ಸೇರಿದಂತೆ ಪ್ರತಿಪಕ್ಷಗಳ ನಾಯಕರು ಒಗ್ಗಟ್ಟು ಪ್ರದರ್ಶಿಸಿದರು. ಮದ್ಯ ನೀತಿಗೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಸಿಎಂ ಕೇಜ್ರಿವಾಲ್ ಹಾಗೂ ಭೂಹಗರಣದ ಸಂಬಂಧ ಬಂಧನಕ್ಕೆ ಒಳಗಾಗಿರುವ ಜಾರ್ಖಂಡ್ ನ ಮಾಜಿ ಸಿಎಂ ಹೇಮಂತ್ ಸೊರೇನ್ ಅವರನ್ನು ಬಂಧಮುಕ್ತಗೊಳಿಸಬೇಕೆಂದು ಪ್ರತಿಪಕ್ಷಗಳು ಈ ಸಭೆಯಲ್ಲಿ ಒತ್ತಾಯಿಸಿವೆ.   ದೇಶದ …

Read More »

BJPಗೆ ಜೋಶಿ ಅನಿವಾರ್ಯವಾದರೆ ನನಗೆ ತುಳಿತಕ್ಕೊಳಗಾದ ಸಮಾಜಗಳ ಬೆನ್ನಿಗೆ ನಿಲ್ಲುವುದು ಅನಿವಾರ್ಯ

ಹುಬ್ಬಳ್ಳಿ : ಬಿಜೆಪಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಧಾರವಾಡ ಕ್ಷೇತ್ರದ ಅಭ್ಯರ್ಥಿಯಾಗಿ ಅನಿವಾರ್ಯವಾದರೆ, ನನಗೆ ಅವರಿಂದ ತುಳಿತಕ್ಕೆ ಒಳಗಾದ ಸಮಾಜಗಳ ಬೆನ್ನಿಗೆ ನಿಲ್ಲುವುದು ನನಗೆ ಅನಿವಾರ್ಯ. ನನ್ನ ನಿಲುವು ಸ್ಪಷ್ಟವಾಗಿದ್ದು, ಏಪ್ರಿಲ್ 2 ರಂದು ನಮ್ಮ ಭಕ್ತರ ಸಭೆ ನಡೆಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಬಾಲೆಹೊಸೂರು-ಶಿರಹಟ್ಟಿ ಶ್ರೀ ಫಕೀರ ದಿಂಗಾಲೇಶ್ವರ ಸ್ವಾಮಿ ಸ್ಪಷ್ಟಪಡಿಸಿದರು. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯನ್ನಾಗಿ ಜೋಶಿಯವರನ್ನು ಬದಲಿಸಬೇಕು ಎನ್ನುವ ಬೇಡಿಕೆ ಇಟ್ಟಿದ್ದೆವು. …

Read More »

ಸರ್ಕಾರಿ ಕಚೇರಿಗಳಲ್ಲಿ ರಾಜಕೀಯ ಚಟುವಟಿಕೆ: ಕಾಂಗ್ರೆಸ್ ವಿರುದ್ಧ ಬಿಜೆಪಿ ದೂರು

ಲೋಕಸಭೆ ಚುನಾವಣೆ ಘೋಷಣೆಯಾಗಿದ್ದು, ಈಗಾಗಲೇ ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಆದರೆ, ಸರ್ಕಾರಿ ಅಧಿಕಾರಿಗಳು ಚುನಾವಣಾ ನೀತಿ ಸಂಹಿತೆ ಜಾರಿ ಮಾಡದಿರುವುದು ಸ್ಪಷ್ಟವಾಗಿದೆ. ಹಲವಾರು ಆಡಳಿತ ಪಕ್ಷದ ಶಾಸಕರ ಕಚೇರಿಗಳಲ್ಲಿ ಪಕ್ಷದ ಚಟುವಟಿಕೆಗಳು ಇನ್ನೂ ನಡೆಯುತ್ತಿವೆ ಎಂದು ಚುನಾವಣಾಧಿಕಾರಿಗಳಿಗೆ ಬಿಜೆಪಿ ಮಾಹಿತಿ ನೀಡಿದೆ. “ವಿಧಾನಸೌಧ ಮತ್ತು ವಿಕಾಸಸೌಧದಲ್ಲಿರುವ ತಮ್ಮ ಕಚೇರಿಗಳಿಂದಲೇ ಸಚಿವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾರೆ. ಮಾರ್ಚ್ 25 ರಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ವಿಕಾಸ ಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿ …

Read More »

ಕರಾವಳಿಯಲ್ಲಿ ಜೀವ ಹಿಂಡುವ ಬಿಸಿಲಿನ ತಾಪ! ಸುಡು ಬಿಸಿಲಿನಿಂದ ಪಾರಾಗಲು ಮನೆ ಮೇಲೆ ಸ್ಪ್ರಿಂಕ್ಲರ್ ಅಳವಡಿಕೆ!

ಮಂಗಳೂರು: ಕರ್ನಾಟಕದಲ್ಲಿ (Karnataka Weather) ಕಳೆದ ಕೆಲ ವಾರಗಳಿಂದ ಒಂದೇ ಸಮನೆ ರೌದ್ರಾವತಾರ ತೋರುತ್ತಿರುವ ಬಿಸಲು ಜನರ ನೆತ್ತಿ ಸುಡುತ್ತಿದೆ. ಸುಡುವ ಬಿಸಿಲಿಗೆ ಬೆದರಿ ಜನರು ಮನೆಯಿಂದ ಹೊರ ಬರೋಕೆ ಹೆದರುತ್ತಿದ್ದು, ಹವಾಮಾನ ಇಲಾಖೆ ಕೂಡ ಬಿಸಿಲಿನಿಂದ (Temperature Rise) ಪಾರಾಗಲು ಜನರು ಎಚ್ಚರದಿಂದ ಇರುವಂತೆ ಸೂಚನೆ ನೀಡಿದೆ. ಇನ್ನು ಕಡಲ ನಗರಿ ಮಂಗಳೂರಿನಲ್ಲೂ ಬಿಸಿಲಿನ ತಾಪ ಏರಿದ್ದು, 35° ಸರಾಸರಿಯಲ್ಲಿ ಕರಾವಳಿ ಭಾಗದಲ್ಲಿ ಈ ಬಾರಿಯ ಮಾರ್ಚ್‌ನಲ್ಲಿ ತಾಪಮಾನ …

Read More »

ಕೇಂದ್ರ ಸರ್ಕಾರದಿಂದ ನ್ಯಾಯಾಂಗದ ಮೇಲೆ ಒತ್ತಡ: ಪ್ರಿಯಾಂಕಾ ಗಾಂಧಿ ಆರೋಪ

ನವದೆಹಲಿ: ಚುನಾವಣಾ ಬಾಂಡ್‌ ಯೋಜನೆಯನ್ನು ಸುಪ್ರೀಂಕೋರ್ಟ್‌ ರದ್ದುಗೊಳಿಸಿದ ಬಳಿಕ ಕೇಂದ್ರವು ನ್ಯಾಯಾಂಗದ ಮೇಲೆ ಒತ್ತಡ ಹೇರುತ್ತಿದೆ. ನ್ಯಾಯಾಂಗವು ಸ್ವತಂತ್ರ ಮತ್ತು ಬಲಿಷ್ಠವಾಗಿರುವುದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರಕ್ಕೆ ಇಷ್ಟವಿಲ್ಲವೇ ಎಂದು ಕಾಂಗ್ರೆಸ್‌ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಪ್ರಶ್ನಿಸಿದ್ದಾರೆ. ಪಟ್ಟಭದ್ರ ಹಿತಾಸಕ್ತಿ ಗುಂಪು’ ನ್ಯಾಯಾಂಗದ ಮೇಲೆ ಒತ್ತಡ ಹೇರಲು ಮತ್ತು ಅದರ ಮಾನಹಾನಿ ಮಾಡಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿ 600ಕ್ಕೂ ಹೆಚ್ಚು ವಕೀಲರು ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) …

Read More »

ʼಬಿಜೆಪಿ ಸೇರಿದರೆ, ಕೇಸ್ ಕ್ಲೋಸ್ʼ: ಸುದ್ದಿಗೋಷ್ಠಿಯಲ್ಲಿ ವಾಶಿಂಗ್‌ ಮೆಶಿನ್‌ ಪ್ರದರ್ಶಿಸಿ ಬಿಜೆಪಿಯನ್ನು ಲೇವಡಿ ಮಾಡಿದ ಕಾಂಗ್ರೆಸ್‌

ಹೊಸದಿಲ್ಲಿ: ಕಾಂಗ್ರೆಸ್ ತನ್ನ ಪತ್ರಿಕಾಗೋಷ್ಠಿಯ ವೇದಿಕೆಯಲ್ಲಿ ವಾಷಿಂಗ್ ಮೆಷಿನ್ ಅನ್ನು ಪ್ರದರ್ಶಿಸಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡಿದೆ. ಬಿಜೆಪಿ ಆಟೋಮ್ಯಾಟಿಕ್‌ ವಾಷಿಂಗ್‌ ಮೆಶೀನ್ ತತ್ವದ ಮೇಲೆ ಕಾರ್ಯನಿರ್ವಹಿಸುತ್ತದೆ. “ಬಿಜೆಪಿ ಸೇರಿದರೆ, ಕೇಸ್ ಕ್ಲೋಸ್” ಕ್ಲೀನ್‌ ಚಿಟ್‌ ಪಡೆದು ಹೊರ ಬರಬಹುದು ಎಂದು ಕಾಂಗ್ರೆಸ್‌ ಲೇವಡಿ ಮಾಡಿದೆ ಭ್ರಷ್ಟಾಚಾರದ ಆರೋಪಗಳಿರುವ ವಿಪಕ್ಷ ನಾಯಕರು ಬಿಜೆಪಿಗೆ ಸೇರಿದ ಬಳಿಕ ಆರೋಪ ಮುಕ್ತರಾಗುತ್ತಿರುವ ಬಗ್ಗೆ ಕಾಂಗ್ರೆಸ್‌ ಟೀಕೆ ಮಾಡಿದೆ. ವಾಶಿಂಗ್‌ ಮೆಶೀನ್‌ ನ ಸಾಂಕೇತಿಕ ಪ್ರದರ್ಶನ …

Read More »

ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿಯಿದೆ: ಶರದ್ ಪವಾರ್

ಮುಂಬೈ: ಶಾಂತಿ ಮತ್ತು ಸಹೋದರತ್ವವನ್ನು ಖಚಿತಪಡಿಸಿಕೊಳ್ಳಲು ದೇಶದ ಸಂವಿಧಾನವನ್ನು ರಕ್ಷಿಸುವ ಅಗತ್ಯವಿದೆ ಎಂದು ಎನ್‌ಸಿಪಿ(ಎಸ್‌ಪಿ) ಮುಖ್ಯಸ್ಥ ಶರದ್‌ ಪವಾರ್ ಹೇಳಿದರು. ಇಫ್ತಾರ್ ಕೂಟದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬಿಜೆಪಿಯ ಕೆಲ ನಾಯಕರು ಸಂವಿಧಾನದ ಬದಲಾವಣೆ ಮಾಡುವ ಮಾತುಗಳನ್ನಾಡುತ್ತಿದ್ದಾರೆ.ಇಂತಹ ಹೇಳಿಕೆಗಳು ಕಳವಳಕಾರಿಯಾಗಿದೆ’ ಎಂದು ಸಂಸದ ಅನಂತಕುಮಾರ್‌ ಹೆಗಡೆ ಹೇಳಿಕೆಯನ್ನು ಉಲ್ಲೇಖಿಸಿದರು. ‘ಒಬ್ಬ ವ್ಯಕ್ತಿಯ ಹಿತಕ್ಕಾಗಿ ಇಡೀ ದೇಶದ ಪ್ರಜಾಪ್ರಭುತ್ವವನ್ನೇ ನಾಶಪಡಿಸಿದ ನೆರೆಹೊರೆಯ ಕೆಲ ದೇಶಗಳ ಸ್ಥಿತಿ ನಮ್ಮ ದೇಶಕ್ಕೆ ಎಂದಿಗೂ ಬರಬಾರದು …

Read More »

ಹಿಂಡಲಗಾ ಜೈಲಿನ ಮೇಲೆ ಪೊಲೀಸರಿಂದ ದಾಳಿ

ಬೆಳಗಾವಿ: ಇಲ್ಲಿನ ಹಿಂಡಲಗಾ ಕೇಂದ್ರ ಕಾರಾಗೃಹದ ಮೇಲೆ ನಗರ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ನಡೆಸಿದರು. ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ ತಡೆಗಟ್ಟುವ ಸಲುವಾಗಿ ನಗರ ಪೊಲೀಸ್ ಉಪ ಆಯುಕ್ತ (ಕಾನೂನು ಮತ್ತು ಸುವ್ಯವಸ್ಥೆ) ರೋಹನ್ ಜಗದೀಶ್ ನೇತೃತ್ವದಲ್ಲಿ ಪೊಲೀಸರಿಂದ ದಾಳಿ ನಡೆಯಿತು ಒಂದು ಗಂಟೆಗೂ ಹೆಚ್ಚು ಸಮಯ ಕಾರಾಗೃಹದಲ್ಲಿ ತಪಾಸಣೆ ಮಾಡಲಾಯಿತು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರೋಹನ್ ಜಗದೀಶ, ‘ಐವರು ಸಹಾಯಕ ಪೊಲೀಸ್ ಆಯುಕ್ತರು ಹಾಗೂ ಸಿಬ್ಬಂದಿ ಸೇರಿಕೊಂಡು ದಾಳಿ ಮಾಡಿದ್ದೇವೆ. …

Read More »

ಪಕ್ಷಾಂತರಿಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ: ಸಿರಿಗೆರೆ ಶ್ರೀ

ಚಿತ್ರದುರ್ಗ: ಪಕ್ಷಾಂತರಗಳಿಗೆ ಕಡಿವಾಣ ಹಾಕದಿದ್ದರೆ ರಾಜಕೀಯ ಶುದ್ಧೀಕರಣ ಅಸಾಧ್ಯ. ಕಾರ್ಯಕರ್ತರ ಅಸಮಾಧಾನ ಹೆಚ್ಚಾಗುತ್ತದೆ ಎಂದು ಸಿರಿಗೆರೆ ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೋವಿಂದ ಕಾರಜೋಳ ತಮ್ಮನ್ನು ಭೇಟಿಯಾದ ಸಂದರ್ಭದಲ್ಲಿ ಸದ್ಧರ್ಮ ನ್ಯಾಯ ಪೀಠದಲ್ಲಿ ಮಾತನಾಡಿದ ಶ್ರೀಗಳು, ಪಕ್ಷಾಂತರಗಳಿಗೆ ಕಡಿವಾಣ ಬೀಳದೆ ರಾಜಕೀಯ ಶುದ್ಧೀಕರಣ ಮರೀಚಿಕೆಯಾಗಿದೆ ಎಂದು ಹೇಳಿದ್ದಾರೆ. ರಾಜಕೀಯ ಶುದ್ಧೀಕರಣ ಇಂದಿನ ಅಗತ್ಯವಾಗಿದೆ. ಇದಕ್ಕೆ ಬದ್ಧವಾಗಿರಲು ರಾಜಕಾರಣಿಗಳು ಮುಂದಾಗಬೇಕು. ಪಕ್ಷಾಂತರ ನಿಷೇಧ …

Read More »

BJP ಅಭ್ಯರ್ಥಿ ನರೇಂದ್ರ ಮೋದಿ ಎಂದು ಮತ ಹಾಕಿ: ಜಗದೀಶ ಶೆಟ್ಟರ್

ಬೆನಕಟ್ಟಿ: ನಮ್ಮ ದೇಶದ ಭದ್ರತೆಗೆ ಮತ್ತೊಮ್ಮೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ನಾಯಕತ್ವ ಅವಶ್ಯಕತೆ ಇದೆ ಎಂದು ಮಾಜಿ ಮುಖ್ಯಮಂತ್ರಿ ಬೆಳಗಾವಿ ಕ್ಷೇತ್ರದ ಬಿಜೆಪಿ ಲೋಕಸಭಾ ಅಭ್ಯರ್ಥಿ,ಮಾಜಿ ಸಿಎಂ ಜಗದೀಶ ಶೆಟ್ಟರ್ ಹೇಳಿದರು. ಶುಕ್ರವಾರ ಬೆನಕಟ್ಟಿ ಗ್ರಾಮದಲ್ಲಿ ಶ್ರೀ ದುರ್ಗಾದೇವಿ ದರ್ಶನವನ್ನು ಪಡೆದು ಸ್ಥಳೀಯ ಬಿಜೆಪಿ ಮುಖಂಡರ ಭೇಟಿ ಮಾಡಿ ಮಾತನಾಡಿದರು, ನರೇಂದ್ರ ಮೋದಿಯವರ ನಾಯಕತ್ವದ ಆಡಳಿತವನ್ನು ನೋಡಿದ ಪಾಕಿಸ್ಥಾನ ದೇಶದಲ್ಲಿ ನಮ್ಮ ಆರ್ಥಿಕ ವ್ಯವಸ್ಥೆಯು ಸುಧಾರಣೆಯಾಗಲು ಭಾರತದ ಮೋದಿಯಂತ ನಾಯಕತ್ವ …

Read More »