Breaking News

ಲಂಕಾಗೆ ಬಂದಿಳಿದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ

ಕೊಲಂಬೊ: ಶ್ರೀಲಂಕಾ ವಿರುದ್ದದ ಏಕದಿನ ಸರಣಿಗಾಗಿ ಟೀಂ ಇಂಡಿಯಾ (Team India) ನಾಯಕ ರೋಹಿತ್ ಶರ್ಮಾ (Rohit Sharma), ಹಿರಿಯ ಆಟಗಾರ ವಿರಾಟ್ ಕೊಹ್ಲಿ (Virat Kohli) ಮತ್ತು ಏಕದಿನ ಸರಣಿಗಾಗಿ ಮಾತ್ರ ಆಯ್ಕೆಯಾದ ಆಟಗಾರರು ದ್ವೀಪ ರಾಷ್ಟ್ರಕ್ಕೆ ಬಂದಿಳಿದರು.   ಭಾರತೀಯ ನಾಯಕನ ಹೊರತಾಗಿ, ಶ್ರೀಲಂಕಾ ವಿರುದ್ಧದ ಏಕದಿನ ಪಂದ್ಯಗಳಿಗೆ ಪ್ರತ್ಯೇಕವಾಗಿ ಆಯ್ಕೆಯಾದ ಆಟಗಾರರು ಭಾನುವಾರ ರಾತ್ರಿ ಶ್ರೀಲಂಕಾ ರಾಜಧಾನಿಯಲ್ಲಿರುವ ಐಟಿಸಿ ರತ್ನದೀಪ ಹೋಟೆಲ್‌ ತೆರಳಿದರು. ವಿರಾಟ್ ಕೊಹ್ಲಿ, …

Read More »

ಕಬಿನಿಗೆ ಬಾಗೀನ ಅರ್ಪಿಸಿದ ಸಿಎಂ , ಡಿಸಿಎಂ

ಮೈಸೂರು: ಬಾಗೀನ ಸಮರ್ಪಣೆ ಹಿನ್ನೆಲೆ ಕಬಿನಿ ಜಲಾಶಯ, ಕೆಆರ್​ಎಸ್​ ಜಲಾಶಯ ವಿವಿಧ ಹೂಗಳಿಂದ ಅಲಂಕಾರಗೊಂಡು ಕಂಗೊಳಿಸುತ್ತಿದ್ವು. ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿಂದು ಸಂಭ್ರಮ ಮನೆ ಮಾಡಿತ್ತು. ಕಪಿಲಾ ನದಿಗೆ ಅಡ್ಡಲಾಗಿ ಕಟ್ಟಿರುವ ಕಬಿನಿ ಜಲಾಶಯ ಪುಷ್ಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು ಎಚ್​.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯ ಭರ್ತಿಯಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸೋಮವಾರ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. …

Read More »

ವಿಕ್ಟೋರಿಯಾ ಆಸ್ಪತ್ರೆ ಡಾಕ್ಟರ್‌ಗೆ ಲೋಕಾಯುಕ್ತರಿಂದ ‘ಇಂಜೆಕ್ಷನ್’! ರೋಗಿಗಳ ಪಾಡು ನೋಡಿ ನ್ಯಾಯಮೂರ್ತಿಗಳೇ

ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬಂದ ಹಿನ್ನೆಲೆ ವಿಕ್ಟೋರಿಯಾ (Victoria) ಆಸ್ಪತ್ರೆಗೆ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಬಿ.ಎಸ್ ಪಾಟೀಲ್ (B.S Patil), ಉಪಲೋಕಾಯುಕ್ತ ನ್ಯಾಯಮೂರ್ತಿ ಫಣೀಂದ್ರ (Phaneendra) ಹಾಗೂ ಬಿ. ವೀರಪ್ಪ (B. Veerappa) ದಿಢೀರ್ ಭೇಟಿ ನೀಡಿ ಆಸ್ಪತ್ರೆಯ ಚಿಕಿತ್ಸಾ ವಿಧಾನ, ರೋಗಿಗಳಿಗೆ ವೈದ್ಯರು (Doctor) ಹೇಗೆ ಸ್ಪಂದಿಸುತ್ತಿದ್ದಾರೆ, ಮಾತ್ರೆಗಳನ್ನು ಬರೆದುಕೊಡುವ ಬಗೆ ಹೇಗೆ ಎಂಬುದನ್ನು ಪರಿಶೀಲನೆ ನಡಸಿದರು. ಬಳಿಕ ರೋಗಿಗಳ ಜೊತೆ ಚರ್ಚೆ ನಡೆಸಿ ಅವರ ಸಮಸ್ಯೆಗಳನ್ನು ಆಲಿಸಿದರು. ಸಾರ್ವಜನಿಕರಿಂದ …

Read More »

ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ : ಸಿಎಂ

ಮೈಸೂರು : ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ರಾಜ್ಯ ಸಮೃದ್ಧಿಯಿಂದ ಕೂಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅವರು ಮೈಸೂರು ಜಿಲ್ಲೆಯ ಎಚ್ ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಿಸಿ ಮಾತನಾಡಿದರು. ನಾಡಿನಲ್ಲಿ ಉತ್ತಮ ಮಳೆಯಾಗುತ್ತಿದ್ದು ಕರ್ನಾಟಕ ರಾಜ್ಯವು ಸಮೃದ್ಧಿಯಿಂದ ಕೂಡಿದೆ. ರಾಜ್ಯದಲ್ಲಿ ಎಲ್ಲಾ ಜಲಾಶಯಗಳು ಸಹ ಭರ್ತಿಯಾಗಿವೆ. ಕೆ ಆರ್ ಎಸ್, ಕಬಿನಿ, ಹಾರಂಗಿ, ಹೇಮಾವತಿ ಡ್ಯಾಮಗಳು ಭರ್ತಿಯಾಗಿವೆ. ತಮಿಳುನಾಡು ನಮಗೂ ನೀರಿನ ಸಮಸ್ಯೆ ಬಂದಿತ್ತು. …

Read More »

ಶಸ್ತ್ರಚಿಕಿತ್ಸೆಗಾಗಿ ರೋಗಿಗಳಿಂದ ಲಂಚಕ್ಕೆ ಬೇಡಿಕೆ

ಚಿತ್ರದುರ್ಗ: ಶಸ್ತ್ರ ಚಿಕಿತ್ಸೆಗಾಗಿ ಚಿತ್ರದುರ್ಗದ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಂತ ರೋಗಿಯೊಬ್ಬರಿಗೆ ಜನರಲ್ ಸರ್ಜನ್ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಕೂಡ ಆಗಿತ್ತು. ಈ ಹಿನ್ನಲೆಯಲ್ಲಿ ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಜನರಲ್ ಸರ್ಜನ್ ಡಾ.ಸಾಲಿ ಮಂಜಪ್ಪ ಅವರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಚಂದ್ರಶೇಖರ್ ಬಿನ್ ಕೃಷ್ಣಪ್ಪ ರವರು ಜಿಲ್ಲಾ ಆಸ್ಪತ್ರೆ, ಚಿತ್ರದುರ್ಗ …

Read More »

BJP ಕರ್ನಾಟಕ ‘ಭ್ರಷ್ಟ ರಾಜ್ಯ’ ಎಂದು ಬಿಂಬಿಸಲು ಮುಂದಾಗಿದೆ: ನಿರ್ಮಲಾ ವಿರುದ್ಧ ಸಿಎಂ ಕಿಡಿ

ಮೈಸೂರು: ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ‘ಅನ್ಯಾಯ’ ಎಸಗಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ನಮ್ಮ ವಿರುದ್ಧ “ಸುಳ್ಳು” ಆರೋಪಗಳನ್ನು ಮಾಡುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸೋಮವಾರ ಕಿಡಿ ಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಅನುದಾನ ಹಂಚಿಕೆ ಕುರಿತು ಸಾಕಷ್ಟು ತಪ್ಪು ಮಾಹಿತಿಗಳನ್ನು ಹರಡಲಾಗುತ್ತಿದೆ ಎಂದು ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿರುವ ಕುರಿತು ಪ್ರತಿಕ್ರಿಯಿಸಿದರು. ‘ಕಾಂಗ್ರೆಸ್ ಆಡಳಿತವಿರುವ ಕರ್ನಾಟಕವನ್ನು ‘ಭ್ರಷ್ಟ ರಾಜ್ಯ’ ಎಂದು …

Read More »

ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ನೆರೆ ಪರಿಹಾರಕ್ಕೆ 777 ಕೋಟಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ. ನೀರು ಬೆಳೆಯ ಮೇಲೆ ನುಗ್ಗಿದ ಪರಿಣಾಮ, ಬೆಳೆಹಾನಿ ಕೂಡ ಆಗಿದೆ. ಈ ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರದಿಂದ …

Read More »

ಪಿಯುಸಿ ಪಾಸಾದ ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ ಶಿಪ್

ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇರಬೇಕಾದ ಅರ್ಹತೆ ಏನು? ಅರ್ಜಿ ಸಲ್ಲಿಕೆ ಹೇಗೆ? ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ. ಅರ್ಜಿ ಸಲ್ಲಿಸಲು ಅರ್ಹತೆ ಏನಿರಬೇಕು?: * ಪರಿಶಿಷ್ಟ ಜಾತಿ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಹಾಗೂ ಪರಿಶಿಷ್ಟ ಪಂಗಡ ವರ್ಗಕ್ಕೆ ಸೇರಿದಂತಹ ವಿದ್ಯಾರ್ಥಿಗಳು ಅರ್ಹರು. * ಮೊದಲನೆಯ ಪ್ರಯತ್ನದಲ್ಲಿಯೆ ಪ್ರಥಮ ದರ್ಜೆಯಲ್ಲಿ ಪಾಸ್ ಆಗಿರುವ ಅಭ್ಯರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ …

Read More »

ಅಬಕಾರಿ ನೀತಿ ಪ್ರಕರಣ: ಕೇಜ್ರಿವಾಲ್ ಸೇರಿ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಿದ CBI

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದ ತನಿಖೆಯನ್ನು ಪೂರ್ಣಗೊಳಿಸಿರುವ ಸಿಬಿಐ ಅಧಿಕಾರಿಗಳು, ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಹಾಗೂ ಎಎಪಿ ಶಾಸಕ ದುರ್ಗೇಶ್ ಪಾಠಕ್ ಸೇರಿದಂತೆ ಐವರ ವಿರುದ್ಧ ಅಂತಿಮ ದೋಷಾರೋಪ ಪಟ್ಟಿಯನ್ನು ಸೋಮವಾರ ಸಲ್ಲಿಸಿದ್ದಾರೆ. ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ತೆಲಂಗಾಣದ ವಿಧಾನ ಪರಿಷತ್ ಸದಸ್ಯೆ ಕೆ. ಕವಿತಾ ಹಾಗೂ 15 ಮಂದಿ ಇತರರ ವಿರುದ್ಧ ಸಿಬಿಐ ಅಧಿಕಾರಿಗಳು ಈ ಹಿಂದೆ ಒಂದು ಮುಖ್ಯ ದೋಷಾರೋಪ …

Read More »

ಬೆಳಗಾವಿ: 41 ಸೇತುವೆಗಳು ಮುಳುಗಡೆ

ಬೆಳಗಾವಿ/ರಾಯಚೂರು: ರಾಜ್ಯದ ವಿವಿಧೆಡೆ ಭಾನುವಾರ ಮಳೆಯ ಅಬ್ಬರ ಕಡಿಮೆಯಾಗಿದೆ. ಆದರೆ ಮಹಾರಾಷ್ಟ್ರದ ಪಶ್ಚಿಮಘಟ್ಟ ಹಾಗೂ ಜಲಾನಯನ ಪ್ರದೇಶಗಳಲ್ಲಿ ಮಳೆ ಮುಂದುವರಿದಿದ್ದು, ಕೃಷ್ಣಾ ನದಿಯಲ್ಲಿ ಒಳಹರಿವು ಹೆಚ್ಚಿದೆ. ಬೆಳಗಾವಿ ಜಿಲ್ಲೆಯಲ್ಲಿ 41 ಸೇತುವೆಗಳು ಮುಳುಗಡೆಯಾಗಿವೆ. ರಾಯಚೂರು ಜಿಲ್ಲೆಯಲ್ಲಿ ಕೃಷ್ಣಾ ಹಾಗೂ ತುಂಗಭದ್ರಾ ನದಿಗಳು ತುಂಬಿ ಹರಿಯುತ್ತಿವೆ. ಕೃಷ್ಣಾ ಪ್ರವಾಹದಲ್ಲಿ ಎರಡು ಸೇತುವೆಗಳು, ಒಂದು ಬ್ಯಾರೇಜ್‌ ಮುಳುಗಡೆಯಾಗಿದೆ. ಎಲೆಬಿಚ್ಚಾಲಿ ಗ್ರಾಮದಲ್ಲಿರುವ ರಾಯರ ಏಕಶಿಲಾ ವೃಂದಾವನ ಹಾಗೂ ಜಪದ ಕಟ್ಟೆ ತುಂಗಭದ್ರಾ ನದಿ ನೀರಿನಿಂದ ಜಲಾವೃತವಾಗಿವೆ. …

Read More »