Breaking News

ಕಾಳಮ್ಮವಾಡಿ ಡ್ಯಾಂನಲ್ಲಿ ಹೆಚ್ಚಿದ ಸೋರಿಕೆ

ಬೆಳಗಾವಿ: ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಜೀವಜಲ ಒದಗಿಸುವ ಮಹಾರಾಷ್ಟ್ರದ ಕೊಲ್ಲಾಪುರ ಜಿಲ್ಲೆಯಲ್ಲಿರುವ ಕಾಳಮ್ಮವಾಡಿ ಜಲಾಶಯದಲ್ಲಿ ಕಳೆದ ಏಳೆಂಟು ವರ್ಷಗಳಿಂದ ನೀರು ಸೋರಿಕೆ ಆಗುತ್ತಿದ್ದು, ಅಲ್ಲಿನ ಸರ್ಕಾರ ಮಾತ್ರ ಕಣ್ಮುಚ್ಚಿ ಕುಳಿತಿದೆ. ಒಂದು ವೇಳೆ ಜಲಾಶಯ ಆಸುಪಾಸು ಪ್ರಬಲ ತೀವ್ರತೆಯ ಭೂಕಂಪ ಸಂಭವಿಸಿದರೆ ಜಲಾಶಯದಲ್ಲಿ ಬಿರುಕು ಉಂಟಾಗುವ ಸಾಧ್ಯತೆ ಇದೆ. ಕೊಲ್ಲಾಪುರದಲ್ಲಿ ದೂಧಗಂಗಾ ನದಿಗೆ ಕರ್ನಾಟಕ ಹಾಗೂ ಮಹಾರಾಷ್ಟ್ರದ ಒಪ್ಪಂದದಿಂದ ಕಾಳಮ್ಮವಾಡಿ ಜಲಾಶಯ ನಿರ್ಮಿಸಲಾಗಿದೆ. ಮಹಾರಾಷ್ಟ್ರ ಶೇ.80ರಷ್ಟು ಅನುದಾನ ಒದಗಿಸಿದ್ದರೆ, ಕರ್ನಾಟಕ ಶೇ.15ರಷ್ಟು …

Read More »

ಕೌಟುಂಬಿಕ ಗಲಾಟೆಯಲ್ಲಿ ಓರ್ವನ ಕಿವಿ ಕತ್ತರಿಸಿದ ದುರುಳರು

ಚಿಕ್ಕೋಡಿ: ಕೌಟುಂಬಿಕ ಕಲಹದ ಹಿನ್ನೆಲೆ ಎರಡು ಕುಟುಂಬಗಳ ಮಧ್ಯೆ ಮಾರಾಮಾರಿ ನಡೆದ ಘಟನೆಯಲ್ಲಿ ವ್ಯಕ್ತಿಯೋರ್ವನ ಕಿವಿ ಕತ್ತರಿಸಿದ ಘಟನೆ ಚಿಕ್ಕೋಡಿ ತಾಲೂಕಿನ ಜನವಾಡ ಗ್ರಾಮದಲ್ಲಿ ನಡೆದಿದೆ. ಕೌಟುಂಬಿಕ ಕಲಹ ಹಿನ್ನೆಲೆ ಜನವಾಡ ಗ್ರಾಮದ ಸಿದ್ದು ಪೂಜಾರಿಗೆ ಆತನ ಪತ್ನಿಯ ಕುಟುಂಬಸ್ಥರು ಮಾರಣಾಂತಿಕ ಹಲ್ಲೆ ನಡೆಸಿದ್ದರು. ಹಲ್ಲೆಯಲ್ಲಿ ಸಿದ್ದು ಪೂಜಾರಿ ಕಿವಿ ತುಂಡಾಗಿತ್ತು. ಜತೆಗೆ ತಲೆ ಹಾಗೂ ಬೆನ್ನಿಗೆ ಗಂಭೀರ ಗಾಯವಾಗಿತ್ತು. ಗಾಯಗೊಂಡ ತಂದೆಯನ್ನು ಕೂಡಲೇ ಬೈಕ್ ಮೇಲೆ ಕೂರಿಸಿಕೊಂಡ ಮಗ ಮಾಳು …

Read More »

ಶಾಲೆಗಳಲ್ಲಿ ಕ್ಷೀರಭಾಗ್ಯ ಯೋಜನೆ ಆರಂಭಿಸಲು ಮಾರ್ಗಸೂಚಿ

ಬೆಂಗಳೂರು, ಜೂನ್ 02: 2024-25ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳು ಆರಂಭವಾಗಿವೆ. ಶಾಲೆಗಳು ಬಾಗಿಲು ತೆರೆದಿದ್ದು, ಮಕ್ಕಳು ಆಗಮಿಸುತ್ತಿದ್ದಾರೆ. ಶಾಲೆಗಳಲ್ಲಿ ‘ಕ್ಷೀರಭಾಗ್ಯ ಯೋಜನೆ’ ಆರಂಭಿಸುವ ಕುರಿತು ಶಾಲೆಗಳಿಗೆ, ಮುಖ್ಯ ಶಿಕ್ಷಕರಿಗೆ ಹಲವು ಸೂಚನೆಗಳನ್ನು ನೀಡಲಾಗಿದೆ. ‘ಕ್ಷೀರಭಾಗ್ಯ ಯೋಜನೆ’ಯಡಿ ಮಕ್ಕಳಿಗೆ ಶಾಲೆಯಲ್ಲಿ ಹಾಲು ನೀಡಲಾಗುತ್ತದೆ. 2024-25ನೇ ಸಾಲಿಗೆ ಅಗತ್ಯವಿರುವ ಹಾಲಿನ ಪುಡಿ ಆಯಾ ತಿಂಗಳ ಬೇಡಿಕೆಗೆ ಅನುಗುಣವಾಗಿ ಜಿಲ್ಲಾ ಶಿಕ್ಷಣಾಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕರು ಸಮಾಲೋಚಿಸಿ ಶಾಲಾವಾರು ಹಾಗೂ ತಾಲ್ಲೂಕುವಾರು …

Read More »

150 ಜಿಲ್ಲಾಧಿಕಾರಿಗಳಿಗೆ ಅಮಿತ್ ಶಾ ಕರೆ

ನವದೆಹಲಿ: ಜೂನ್ 4 ರಂದು ನಡೆಯಲಿರುವ ಲೋಕಸಭೆ ಚುನಾವಣೆಯ ಮತ ಎಣಿಕೆಗೆ ಮುನ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು 150 ಜಿಲ್ಲಾ ಚುನಾವಣಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಮಾತನಾಡಿದ್ದಾರೆ ಎಂಬ ಆರೋಪದ ಕುರಿತು ಚುನಾವಣಾ ಆಯೋಗವು (ಇಸಿ) ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರಿಂದ ಭಾನುವಾರ ಮಾಹಿತಿ ಕೇಳಿದೆ. ಜೈರಾಮ್ ರಮೇಶ್ ಅವರಿಗೆ ಪತ್ರ ಬರೆದಿರುವ ಚುನಾವಣಾ ಆಯೋಗ, ಭಾನುವಾರ ಸಂಜೆ 7 ಗಂಟೆಯೊಳಗೆ ತಮ್ಮ ಆರೋಪಗಳ …

Read More »

ಸಿಎಂ, ಡಿಸಿಎಂ ಗೆ ನಾನು ಹೇಳುತ್ತೇನೆ : ದಿಂಗಾಲೇಶ್ವರಶ್ರೀ,

ಬೆಂಗಳೂರು : ವಿಧಾನಸಭೆಯಿಂದ ವಿಧಾನಪರಿಷತ್​ ಚುನಾವಣೆ ನಡಯಲಿದೆ. ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ಹೀಗಿರುವಾಗ ದಿಂಗಾಲೇಶ್ವರ ಶ್ರೀಗಳು ಪೂರ್ಣ ಪ್ರಮಾಣದ ರಾಜಕೀಯ ಅಖಾಡಕ್ಕಿಳಿದ್ದಾರೆ. ಬಾಗಲಕೋಟೆಯ ಎಸ್‌.ಆರ್.ಪಾಟೀಲ್ ಪರ ಸ್ವಾಮೀಜಿ ಬ್ಯಾಟಿಂಗ್​ ಮಾಡಿದ್ದು, ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿರುವ ಎನ್ನಲಾದ ಸ್ಫೋಟಕ ಆಡಿಯೋ ಒಂದು ವೈರಲ್ ಆಗಿದೆ. ಹೌದು ದಿಂಗಾಲೇಶ್ವರ ಸ್ವಾಮೀಜಿ ಮಾತನಾಡಿರುವ ಎನ್ನಲಾದ ಸ್ಫೋಟಕ ಆಡಿಯೋದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ ಅವರನ್ನು ನಾನು ಒಪ್ಪಿಸುತ್ತೇನೆ …

Read More »

ಮುರುಘಾ ಶ್ರೀ’ ವಿರುದ್ಧ ಪೋಕ್ಸೋ ಕೇಸ್ : ಜೂ. 3 ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್..!

ಬೆಂಗಳೂರು : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ.3 ಕ್ಕೆ ವಿಚಾರಣೆ ಮುಂದೂಡಿಕೆಯಾಗಿದೆ. ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದ ವಿಚಾರಣೆಯನ್ನು ಜೂನ್ 3 ಕ್ಕೆ ಮುಂದೂಡಿ 2 ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ. ಸಾಕ್ಷಿ ವಿಚಾರಣೆಗೆ ಆರೋಪಿ ಪರ ವಕೀಲ ಕೆ.ಬಿ.ಕೆ ಸ್ವಾಮಿ 2 ದಿನಗಳ ಕಾಲಾವಕಾಶ ಕೇಳಿದ ಹಿನ್ನೆಲೆ ವಿಚಾರಣೆಯನ್ನು ಮುಂದೂಡಲಾಗಿದೆ. ಚಿತ್ರದುರ್ಗ ಮುರುಘಾ ಮಠದ ಶಿವಮೂರ್ತಿ ಶರಣರ …

Read More »

ಪ್ರಜ್ವಲ್ ರೇವಣ್ಣ 6 ದಿನ ಪೊಲೀಸ್ ಕಸ್ಟಡಿಗೆ

ಬೆಂಗಳೂರು ಮೇ 31: ಅಶ್ಲೀಲ ವಿಡಿಯೋ ಪ್ರಕರಣದ ಆರೋಪಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಕೋರ್ಟ್ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ಬೆಂಗಳೂರು ನ್ಯಾಯಾಲಯಕ್ಕೆ ಇಂದು ಪ್ರಜ್ವಲ್ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು. ವಾದ ಪ್ರತಿವಾದಗಳ ನಂತರ ಅವರನ್ನು ಕೋರ್ಟ್ ಆರು ದಿನ ಪೊಲೀಸ್ ಕಸ್ಟಡಿಗೆ ನೀಡಿದೆ. ಲೈಂಗಿಕ ಕಿರುಕುಳ ಆರೋಪದ ವಿಚಾರಣೆಗಾಗಿ ಎಸ್‌ಐಟಿ ಪ್ರಜ್ವಲ್ ರೇವಣ್ಣ ಅವರನ್ನು ಕಸ್ಟಡಿಗೆ ನೀಡುವಂತೆ ಕೋರಿತ್ತು. ಇದೇ ವೇಳೆ ವಕೀಲರ …

Read More »

8ನೇ ತರಗತಿ ವಿದ್ಯಾರ್ಥಿಗಳಿಗೆ ಶಿಕ್ಷಕಿಯಾಗಿ ಪಾಠ ಮಾಡಿದ ಜಿಲ್ಲಾಧಿಕಾರಿ

ಧಾರವಾಡ: ಪ್ರಸಕ್ತ ಸಾಲಿನ ಶೈಕ್ಷಣಿಕ ವರ್ಷದ ಘೋಷವಾಕ್ಯ ‘ಶೈಕ್ಷಣಿಕ ಬಲವರ್ಧನೆ ವರ್ಷ’ ಇದಕ್ಕೆ ಅನುಗುಣವಾಗಿ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸರಕಾರಿ ಶಾಲೆಯ 7 ಮತ್ತು 8 ನೇ ವರ್ಗದ ಮಕ್ಕಳಿಗೆ ಇಂಗ್ಲೀಷ್ ವಿಷಯದ ಪಾಠ ಬೋಧನೆ ಮಾಡಿದರು. ನಗರದ ಮಹಿಳಾ ಶಿಕ್ಷಣ ಮಹಾವಿದ್ಯಾಲಯದ ಸರಕಾರಿ ಉರ್ದು ಮತ್ತು ಕನ್ನಡ ಪ್ರಾಥಮಿಕ, ಪ್ರೌಢ ಶಾಲೆ ವಿದ್ಯಾರ್ಥಿಗಳಿಗೆ 8 ನೇ ತರಗತಿ ಇಂಗ್ಲೀಷ್ ಭಾಷಾ ವಿಷಯ ಪಾಠ ಬೋಧಿಸುವ ಮೂಲಕ …

Read More »

ಕಣಬರ್ಗಿ ಕೆರೆಯಲ್ಲಿ ಬಳಕೆಯಾಗದ ಸೌಕರ್ಯ

ಬೆಳಗಾವಿ: ನಗರ ಹೊರವಲಯದ ಕಣಬರ್ಗಿಯಲ್ಲಿರುವ ಕೆರೆಯನ್ನು ಸ್ಮಾರ್ಟ್‌ಸಿಟಿ ಯೋಜನೆಯಡಿ ಮಾದರಿಯಾಗಿ ಅಭಿವೃದ್ಧಿಪಡಿಸಲಾಗಿದೆ. ಪಕ್ಷಿಗಳ ಪರಿವೀಕ್ಷಣಾ ಗ್ಯಾಲರಿ, ಬಯಲು ರಂಗಮಂದಿರ, ವ್ಯಾಯಾಮ ಶಾಲೆ, ತಿನಿಸುಗಳ ಅಂಗಡಿ ಮತ್ತಿತರ ಸೌಕರ್ಯ ಇಲ್ಲಿವೆ. ಆದರೆ, ಮಹಾನಗರ ಪಾಲಿಕೆ ನಿರ್ಲಕ್ಷ್ಯದಿಂದ ಹಲವು ಸೌಕರ್ಯ ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಒಂದು ಕಾಲಕ್ಕೆ ಕನಿಷ್ಠ ಮೂಲಸೌಕರ್ಯವೂ ಇಲ್ಲದೆ ಕಳೆಗುಂದಿದ್ದ ಕಣಬರ್ಗಿ ಕೆರೆಯಂಗಳ ಇಂದು ಕಣ್ಮನ ಸೆಳೆಯುತ್ತಿದೆ. ಆದರೆ, ಬೆಳಗಾವಿ-ಗೋಕಾಕ ಮಾರ್ಗದಲ್ಲಿ ಸಂಚರಿಸುವ ಹಲವರು ಇಲ್ಲಿಯೇ ತ್ಯಾಜ್ಯ ಪದಾರ್ಥ ಎಸೆದು ಹೋಗುತ್ತಿರುವುದರಿಂದ …

Read More »

ಕೋಳಿ ಫಾರ್ಮ್‌: ನೋಣಗಳ ಹಾವಳಿಯಿಂದ ಬೇಸತ್ತ ಜನ

ಯಮಕನಮರಡಿ: ಹುಕ್ಕೇರಿ ತಾಲ್ಲೂಕಿನ ನಾಗನೂರ ಕೆ.ಎಂ ಮತ್ತು ಕೆ.ಡಿ ಗ್ರಾಮಗಳಲ್ಲಿ ಸಾವಿರಾರು ಸಂಖ್ಯೆಯಲ್ಲಿ ನೋಣಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು, ಜನರು ಬೇಸತ್ತಿದ್ದಾರೆ. ಗ್ರಾಮದ ಹೊರವಲಯದಲ್ಲಿ 300 ಮೀಟರ್ ಅಂತರದಲ್ಲಿ 10 ಕೋಳಿ ಫಾರ್ಮ್‌ ಇವೆ. ಇಲ್ಲಿಂದಲೇ ಗ್ರಾಮಕ್ಕೆ ನೋಣಗಳು ಬಂದಿವೆ. ಗ್ರಾಮದ ಮನೆಗಳಲ್ಲಿ ಊಟ ಮಾಡುವಾಗಲೆಲ್ಲ ತಟ್ಟೆಯಲ್ಲಿ ನೋಣಗಳ ಬೀಳುತ್ತಿವೆ ಎಂದು ಗ್ರಾಮಸ್ಥರು ತಿಳಿಸಿದರು. ನಾಗನೂರ ಕೆ.ಎಂ.ಗ್ರಾಮದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಮೇ 29ರಿಂದ ಆರಂಭವಾಗಿದೆ. ನೂರಾರು …

Read More »