Breaking News

ಆಯುಕ್ತರ ಕಚೇರಿಗೆ ಪೌರಕಾರ್ಮಿಕರ ಮುತ್ತಿಗೆ

ಹುಬ್ಬಳ್ಳಿ: ಸೇವೆ ಕಾಯಂಗೊಳಿಸುವುದು, ನೇರ ವೇತನ ಪಾವತಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪೌರಕಾರ್ಮಿಕರು, ಮಂಗಳವಾರ ಇಲ್ಲಿನ ಮಹಾನಗರ ಪಾಲಿಕೆ ಆಯುಕ್ತರ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಪೌರಕಾರ್ಮಿಕರ ಸಂಘದ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಾರಾಯಣ ಅವರ ನೇತೃತ್ವದಲ್ಲಿ ಆಯುಕ್ತರ ಕಚೇರಿ ಎದುರು ಕುಳಿತ ‍ಪೌರಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದರು. ನಾರಾಯಣ ಮಾನತಾಡಿ, ‘ಮಹಾನಗರ ಪಾಲಿಕೆ ಆಯುಕ್ತ, ಮೇಯರ್ ಅವರು ಬೇಡಿಕೆಗಳ ಈಡೇರಿಕೆಗೆ …

Read More »

ಹುಬ್ಬಳ್ಳಿ: ₹173 ಕೋಟಿ ನೀರಿನ ಕರ ಬಾಕಿ

ಹುಬ್ಬಳ್ಳಿ: ಅವಳಿ ನಗರದಲ್ಲಿ ಎಲ್‌ ಆಯಂಡ್ ಟಿ ಕಂಪನಿಯಿಂದ 24X7 ಕುಡಿಯುವ ನೀರಿನ ಕಾಮಗಾರಿ ಕುಂಟುತ್ತಾ ಸಾಗಿದ್ದು, ನೀರಿನ ಕರ ಬಾಕಿ ವಸೂಲಿ ಸವಾಲಾಗಿದೆ. ಈ ನಡುವೆ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆಯು ನೀರಿನ ಕರ ಸಂಗ್ರದಲ್ಲಿ ಶೇ 94ರಷ್ಟು ಪ್ರಗತಿ ಸಾಧಿಸಿದೆ. ಏಪ್ರಿಲ್‌, ಮೇ, ಜೂನ್‌ ತಿಂಗಳಲ್ಲಿ ₹13.1 ಕೋಟಿ ನೀರನ ಕರ ಸಂಗ್ರಹಿಸುವ ಗುರಿ ಇತ್ತು. ಅದರಲ್ಲಿ ಈಗಾಗಲೇ ₹12.18 ಕೋಟಿ ಸಂಗ್ರಹಿಸಲಾಗಿದೆ. ಅವಳಿ …

Read More »

1500 ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

ಚಿಕ್ಕೋಡಿ: ‘ಚಿಕ್ಕೋಡಿ-ಸದಲಗಾ ಶಾಸಕ ಗಣೇಶ ಹುಕ್ಕೇರಿ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಅವರು ಚಿಕ್ಕೋಡಿ ಕ್ಷೇತ್ರದಲ್ಲಿ ಸದಾ ಕಾಲವೂ ಜನರ ಸಮಸ್ಯೆಗೆ ಸ್ಪಂದಿಸುತ್ತ ಜನರ ಹೃದಯದಲ್ಲಿ ನೆಲೆ ನಿಂತಿದ್ದಾರೆ. ಕ್ಷೇತ್ರದಲ್ಲಿ ಶಿಕ್ಷಣ, ನೀರಾವರಿ, ಆರೋಗ್ಯ, ಮೂಲಸೌಕರ್ಯ ಒದಗಿಸಲು ಆದ್ಯತೆ ನೀಡಿದ್ದು ಕ್ಷೇತ್ರದ ಜನರ ಹೆಮ್ಮೆಯಾಗಿದೆ’ ಎಂದು ಕಾಂಗ್ರೆಸ್ ಮುಖಂಡ ರಾಮಾ ಮಾನೆ ಹೇಳಿದರು. ಪಟ್ಟಣದ ಪರಟಿ ನಾಗಲಿಂಗೇಶ್ವರ ಸಭಾಭವನದಲ್ಲಿ ಬುಧವಾರ ದು ಶಾಸಕ ಗಣೇಶ ಹುಕ್ಕೇರಿ ಅವರ 46ನೇ …

Read More »

ಮನೆಗಳಿಗೆ ನುಗ್ಗಿದ ನೀರು; ಆಕ್ರೋಶ

ಬೆಳಗಾವಿ: ನಗರವೂ ಸೇರಿದಂತೆ ತಾಲ್ಲೂಕಿನಾದ್ಯಂತ ಸುರಿಯುತ್ತಿರುವ ಮಳೆ ಹಲವು ಅವಾಂತರ ಸೃಷ್ಟಿಸಿದೆ. ಸತತ ಮಳೆಯಿಂದಾಗಿ ನಗರದ ಹೊರವಲಯದ ಬಸವನ ಕುಡಚಿಯ ಹಲವು ಮನೆಗಳು, ಅಂಗಡಿಗಳಿಗೆ ನೀರು ನುಗ್ಗಿ, ಜನರು ಪರದಾಡುವಂತಾಯಿತು. ಕೆಎಲ್‌ಇ ಸಂಕಲ್ಪ ವೆಲ್‌ನೆಸ್‌ ಸೆಂಟರ್‌ಗೆ ಸಹ ನೀರು ನುಗ್ಗಿದ ಪರಿಣಾಮ ಔಷಧಗಳು ಮತ್ತು ವೈದ್ಯಕೀಯ ಪರಿಕರಗಳಿಗೆ ಹಾನಿಯಾಯಿತು. ಈ ನೀರು ಹೊರಹಾಕಲು ಮಹಾನಗರ ಪಾಲಿಕೆಯವರು ಬುಧವಾರ ಬೆಳಿಗ್ಗೆಯಿಂದ ದುರಸ್ತಿ ಕಾರ್ಯ ಕೈಗೊಳ್ಳುತ್ತಿರುವುದು ಕಂಡುಬಂತು. ‘ವಾರದಿಂದ ನಮ್ಮಲ್ಲಿ ಸತತ ಮಳೆಯಾಗುತ್ತಿದೆ. …

Read More »

ಹರಗಾಪುರ: ಗುಡ್ಡ ಕುಸಿತ, ಪ್ರಾಣಾಪಾಯ ಇಲ್ಲ

ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ ಕುಸಿತದ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ‘ಕಲ್ಲುಗಳು ಉರುಳಿ ಬಿದ್ದು, ವಸತಿ ಪ್ರದೇಶದ ಸಮೀಪ ಬಂದು ನಿಂತಿವೆ. ಯಾವುದೇ ಪ್ರಾಣಹಾನಿ ಅಥವಾ ಮನೆಗೆ ತೊಂದರೆ ಆಗಿಲ್ಲ. ಆದರೆ ಕಲ್ಲು ಬಿದ್ದ ಹೊಡೆತಕ್ಕೆ ಚರಂಡಿ ರಿಪೇರಿಗೆ ಬಂದಿವೆ’ ಎಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ …

Read More »

ಮೈದುಂಬಿ ಹರಿಯುತ್ತಿರುವ ಮಲಪ್ರಭೆ

ಎಂ.ಕೆ.ಹುಬ್ಬಳ್ಳಿ: ನಿರಂತವಾಗಿ ಸುರಿಯುತ್ತಿರುವ ಧಾರಾಕಾರ ಮಳೆಗೆ ಮಲಪ್ರಭೆ ಮೈದುಂಬಿ ಹರಿಯುತ್ತಿದ್ದಾಳೆ. ಖಾನಾಪುರದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಮಲಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಎಂ.ಕೆ.ಹುಬ್ಬಳ್ಳಿ ಪಟ್ಟಣದ ಬಳಿಯ ರಾಷ್ಟ್ರೀಯ ಹೆದ್ದಾರಿ-4ರ ಪಕ್ಕದಲ್ಲಿ ಮಲಪ್ರಭಾ ನದಿ ಮಧ್ಯದಲ್ಲಿರುವ ಶರಣೆ ಗಂಗಾಂಬಿಕಾ ಐಕ್ಯಮಂಟಪದ ಸುತ್ತ ಮಲಪ್ರಭೆಯ ಮೈದುಂಬಿ ಹರಿಯುತ್ತಿದ್ದು, ನೋಡುಗರನ್ನು ಆಕರ್ಷಿಸುತ್ತಿದೆ. ಮಳೆಯ ಆರ್ಭಟ ಮುಂದುವರಿದಿದ್ದು, ದಿನದಿಂದ ದಿನಕ್ಕೆ ನದಿಯ ನೀರಿನ ಮಟ್ಟ ಹೆಚ್ಚುತ್ತಿದೆ. ಸದ್ಯ ಎಂ.ಕೆ‌.ಹುಬ್ಬಳ್ಳಿ ಬಳಿಯ …

Read More »

ಜಿಲ್ಲೆಯಲ್ಲಿ ಮುಂದುವರೆದ ಮಳೆ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಎಲ್ಲಾ ಸಿದ್ದತೆ ಮಾಡಿಕೊಳ್ಳಲು ಸೂಚನೆ: ಸತೀಶ ಜಾರಕಿಹೊಳಿ

ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರೆದಿರುವ ಕಾರಣ ಮಾನ್ಯ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಶ್ರೀ ಸತೀಶ ಜಾರಕಿಹೊಳಿ ರವರು ರಾಯಬಾಗ ತಾಲೂಕಿನ ಕುಡಚಿ ಸೇತುವೆ, ಹಳೆ-ದಿಗ್ಗೇವಾಡಿ ಮತ್ತಿತರ ಪ್ರವಾಹ ಪ್ರದೇಶಗಳ ವೀಕ್ಷಣೆಯಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್‌ ರವರು ಜಿಲ್ಲಾ ಪೋಲೀಸ್‌ ಅಧೀಕ್ಷಕರು ಹಾಗೂ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಪರೀಕ್ಷಾರ್ಥ ಐ.ಎ.ಎಸ್.‌ ಅಧಿಕಾರಿ ಹಾಗೂ ಇತರೆ ಇಲಾಖಾ ಅಧಿಕಾರಿಗಳ ಜೊತೆಯಲ್ಲಿ ಹಾಜರಿದ್ದರು. ಜಿಲ್ಲಾ ಉಸ್ತುವಾರಿ ಮಂತ್ರಿಗಳ ಸೂಚನೆಯಂತೆ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು …

Read More »

ನಡುಗಡ್ಡೆಯಾದ ಜನವಸತಿ

ಅಥಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಹುಲಗಬಾಳಿ ಗ್ರಾಮದ ವ್ಯಾಪ್ತಿಯ ಮಾಂಗ ಜನವಸತಿ ಪ್ರದೇಶವನ್ನು ಕೃಷ್ಣಾ ನದಿ ನೀರು ಸುತ್ತುವರಿದಿದ್ದು, 50 ಕುಟುಂಬಗಳು ನಡುಗಡ್ಡೆಯಲ್ಲಿ ಸಿಲುಕಿವೆ. ಅಲ್ಲಿನ ಜನ ಮತ್ತು ಜಾನುವಾರುಗಳನ್ನು ಬುಧವಾರ ಸಂಜೆ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಯಿತು. ಸಂತ್ರಸ್ತರಿಗೆ ಹುಲುಗಬಾಳಿ ಗ್ರಾಮದ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾತ್ಕಾಲಿಕ ಪುನರ್ವಸತಿ ಕೇಂದ್ರ ಸ್ಥಾಪಿಸಲಾಗಿದೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ವೇಳೆ ಆಕ್ರೋಶಗೊಂಡ ಜನ, ‘ನಮಗೆ ಶಾಶ್ವತ ನೆಲೆ ಕಲ್ಪಿಸಬೇಕು. ಪ್ರತಿ …

Read More »

ಗಡ್ಕರಿ,ಕೋರೆ ಭೇಟಿ: ಚರ್ಚೆ

ಬೆಳಗಾವಿ: ನವದೆಹಲಿಯಲ್ಲಿ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಭೇಟಿಯಾಗಿ, ವಿವಿಧ ಕಾಮಗಾರಿಗಳ ಕುರಿತು ಚರ್ಚಿಸಿದರು. ‘ಅಥಣಿ ತಾಲ್ಲೂಕಿನ ಮುರಗುಂಡಿಯಿಂದ ಕಾಗವಾಡ, ಚಿಕ್ಕೋಡಿ ಮಾರ್ಗವಾಗಿ ಗೋಟೂರವರೆಗೆ (87 ಕಿ.ಮೀ) ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ, ಶಿರಗುಪ್ಪಿಯಿಂದ ಅಂಕಲಿಯವರೆಗೆ ಮೇಲ್ಸೇತುವೆ ನಿರ್ಮಾಣ ಕಾಮಗಾರಿ ಮಂಜೂರುಗೊಳಿಸಿರುವುದು ಸ್ವಾಗತಾರ್ಹ. ಈ ಕಾಮಗಾರಿ ಬೇಗ ಆರಂಭಿಸಬೇಕು’ ಎಂದು ಕೋರಿದರು. ‘ನವೀಕರಿಸಬಹುದಾದ ಎಥೆನಾಲ್ ಬಳಕೆಯಿಂದ ರೈತರಿಗೆ …

Read More »

ಮದುವೆ ಆಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ

ಆನಂದಪುರ: ಮದುವೆ ಆಗುವಂತೆ ಕೇಳಿದ್ದಕ್ಕೆ ಪ್ರೇಯಸಿಯ ಕತ್ತು ಹಿಸುಕಿ ಕೊಲೆ ಮಾಡಿ ಸಮೀಪದ ಮುಂಬಾಳು ಗ್ರಾಮದ ರೈಲ್ವೆ ಹಳಿ ಪಕ್ಕ ಶವ ಹೂತು ಹಾಕಿದ್ದ ಪ್ರಕರಣವನ್ನು ಚಿಕ್ಕಮಗಳೂರು ಜಿಲ್ಲೆ ಕೊಪ್ಪ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ. ಕೊಪ್ಪ ತಾಲ್ಲೂಕಿನ ಗುಣವಂತೆಯ ನರ್ಸಿಂಗ್ ವಿದ್ಯಾರ್ಥಿನಿ ಸೌಮ್ಯಾ (27) ಕೊಲೆಯಾದವರು. ಸಾಗರ ತಾಲ್ಲೂಕಿನ ತಾಳಗುಪ್ಪದ ಸೃಜನ್ ಆರೋಪಿ ಯುವಕ. ತೀರ್ಥಹಳ್ಳಿಯ ಫೈನಾನ್ಸ್ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಸೃಜನ್‌, ಪರಿಶಿಷ್ಟ ಸಮುದಾಯಕ್ಕೆ ಸೇರಿದ ಸೌಮ್ಯಾರನ್ನು ಪ್ರೀತಿಸಿದ್ದ. …

Read More »