ಬೆಂಗಳೂರು : ಅಗತ್ಯ ವಸ್ತುಗಳ ಬೆಲೆಯ ಏರಿಕೆಯ ನಡುವೆ ಇದೀಗ ಮಕ್ಕಳನ್ನು ಖಾಸಗಿ ಶಾಲೆಗಳಿಗೆ ಸೇರಿಸುವ ಪೋಷಕರಿಗೆ ಬಿಗ್ ಶಾಕ್. ಖಾಸಗಿ ಶಾಲೆಗಳ ಶುಲ್ಕ ಈ ಬಾರಿ 30ರಿಂದ 40ರಷ್ಟು ಶುಲ್ಕ ಏರಿಕೆಯಾಗಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪ್ರತಿ ವರ್ಷ ಶುಲ್ಕ ಹೆಚ್ಚಳ ಮಾಡುತ್ತವೆ. ಈ ಬಾರಿ ಶೇ. 30ರಿಂದ 40ರಷ್ಟು ಶುಲ್ಕ ಏರಿಕೆ ಮಾಡಿವೆ. ಖಾಸಗಿ ಶಾಲೆಗಳು 2023-24ನೇ ಸಾಲಿನಿಂದ ಶುಲ್ಕವನ್ನು ಹೆಚ್ಚಳ ಮಾಡುತ್ತಿವೆ. ಹಿಂದಿನ ವರ್ಷಕ್ಕಿಂತ …
Read More »ಯಾವುದೇ ಕಾರಣಕ್ಕೂ ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ; ಸಿಎಂ
ಬೆಂಗಳೂರು : ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ. ರಾಜ್ಯ ಸರ್ಕಾರಕ್ಕೆ 1 ವರ್ಷ ತುಂಬಿದ ಹಿನ್ನೆಲೆ ಪ್ಲೆಸ್ ಕ್ಲಬ್ ನಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸಲ್ಲ, ಗ್ಯಾರಂಟಿ ಯೋಜನೆಗಳು ಸ್ಥಗಿತವಾಗುತ್ತದೆ ಎಂದು ಬಿಜೆಪಿಯವರು ಅಪಪ್ರಚಾರ ಮಾಡುತ್ತಿದ್ದಾರೆ. ನಮ್ಮ ಸರ್ಕಾರದ ಯೋಜನೆಗಳು ಮುಂದುವರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ನಾವು ನುಡಿದಂತೆ …
Read More »ಬೆಂಗಳೂರಲ್ಲಿ ತಡರಾತ್ರಿ ರೇವ್ ಪಾರ್ಟಿ ಮೇಲೆ ಸಿಸಿಬಿ ದಾಳಿ: 25 ಯುವತಿಯರು, ಡ್ರಗ್ಸ್ ಪತ್ತೆ
ಬೆಂಗಳೂರು: ಬೆಂಗಳೂರಿನಲ್ಲಿ ರೇವ್ ಪಾರ್ಟಿ ಮೇಲೆ ಸಿಸಿಬಿ ತಂಡ ದಾಳಿ ನಡೆಸಿದೆ. ಎಲೆಕ್ಟ್ರಾನಿಕ್ ಸಿಟಿ ಸಮೀಪದ ಜಿ.ಆರ್. ಫಾರ್ಮ್ ಹೌಸ್ ಮೇಲೆ ದಾಳಿ ಮಾಡಲಾಗಿದ್ದು, ಎಂಡಿಎಂಎ ಮಾತ್ರೆಗಳು ಮತ್ತು ಕೊಕೇನ್ ಪತ್ತೆಯಾಗಿದೆ. ಪಾರ್ಟಿಯಲ್ಲಿ 25ಕ್ಕೂ ಹೆಚ್ಚು ಯುವತಿಯರು ಇದ್ದರು. ಆಂಧ್ರಪ್ರದೇಶ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನರು ಭಾಗವಹಿಸಿದ್ದರು. ತಡರಾತ್ರಿ ಎರಡು ಗಂಟೆಯಾದರೂ ಪಾರ್ಟಿ ನಡೆಯುತ್ತಿತ್ತು. ಅವಧಿ ಮೀರಿ ಪಾರ್ಟಿ ನಡೆಸಿದ್ದು, ಡ್ರಗ್ಸ್ ಬಳಕೆ ಮಾಡಲಾಗಿದೆ. ಹೈದರಾಬಾದ್ ಮೂಲದ ವಾಸು ಪಾರ್ಟಿ …
Read More »ಚಿಕ್ಕೋಡಿ: ಹಾವು ಕಚ್ಚಿ ಬಾಲಕಿ ಸಾವು
ಚಿಕ್ಕೋಡಿ: ತಾಲ್ಲೂಕಿನ ಕೇರೂರವಾಡಿಯಲ್ಲಿ ಶುಕ್ರವಾರ ರಾತ್ರಿ ಹಾವು ಕಚ್ಚಿ 4 ವರ್ಷದ ಬಾಲಕಿ ಶಿವಾನಿ ತುಳಸಿಗೇರಿ ಮೃತಪಟ್ಟ ಘಟನೆ ನಡೆದಿದೆ. ಮೂಲತಃ ರಾಯಬಾಗ ತಾಲ್ಲೂಕಿನ ಚಿಂಚಲಿ ಪಟ್ಟಣದ ನಿವಾಸಿಗಳಾದ ಭುಜೇಂದ್ರ ಹಾಗೂ ದೀಪಾ ದಂಪತಿಯ ಪುತ್ರಿ ಶಿವಾನಿ ಅಜ್ಜಿಯ ಮನೆಗೆ ಬಂದಿದ್ದಳು. ಶುಕ್ರವಾರ ರಾತ್ರಿ ತೋಟದ ಮನೆಯ ಮುಂದೆ ಆಟ ಆಡುವಾಗ ಬಾಲಕಿಯ ಕಾಲಿಗೆ ಹಾವು ಕಚ್ಚಿದೆ. ಕೂಡಲೇ ಚಿಕ್ಕೋಡಿ ತಾಲ್ಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಯಿತು. ಹೆಚ್ಚಿನ ಚಿಕಿತ್ಸೆಗೆ …
Read More »ಪ್ರಭಾಕರ ಕೋರೆ: ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರ್ಣ
ಬೆಳಗಾವಿ: ‘ದಾನ ಪಡೆಯುವ ಕೈಗಳು ಶುದ್ಧವಾಗಿದ್ದರೆ ಮಾತ್ರ ದಾನ ನೀಡುವ ಕೈಗಳು ಮುಂದೆ ಬರುತ್ತವೆ. ಕರ್ನಾಟಕ ಲಿಂಗಾಯತ ಶಿಕ್ಷಣ (ಕೆಎಲ್‌ಇ) ಸಂಸ್ಥೆ ವಿಶ್ವಮಟ್ಟಕ್ಕೆ ಬೆಳೆಯಲು ಇಂಥ ಶುದ್ಧ ಕೈಗಳೇ ಕಾರಣ’ ಎಂದು ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು. ಪ್ರಭಾಕರ ಕೋರೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿ 40 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಂಸ್ಥೆಯ ಪರಿವಾರದವರು ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಅವರು ಮಾತನಾಡಿದರು. ‘ಬ್ರಿಟಿಷ್ ಆಡಳಿತದಲ್ಲಿ ಉನ್ನತ ಶಿಕ್ಷಣ ಪಡೆದಿದ್ದ …
Read More »ಮೊಸಳೆಗಳಿವೆ ಎಚ್ಚರಿಕೆ!
ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮನುಷ್ಯ ಮತ್ತು ಮೊಸಳೆಗಳ ಸಂಘರ್ಷ ಬೇಸಿಗೆಯಲ್ಲಿ ಅಧಿಕ. ಕೃಷ್ಣಾ ನದಿಯಲ್ಲಿ ನೀರು ಕಡಿಮೆ ಆದ ಕೂಡಲೇ ಆಹಾರ ಅರಸಿ ದಡಕ್ಕೆ ಬರುವ ಮೊಸಳೆಗಳನ್ನು ಅಲ್ಲಿಯ ಜನರು ಏನು ಮಾಡುತ್ತಾರೆ? ನದಿಯಿಂದ ದಡಕ್ಕೆ ಮೊಸಳೆ ಬಂದಿದೆ ಎನ್ನುವ ಸುದ್ದಿ ಹರಡುತ್ತಿದ್ದಂತೆ ದೊಡ್ಡ ಗುಂಪೇ ಸೇರುತ್ತದೆ. ಹೊರ ಬಂದ ಮೊಸಳೆಯನ್ನು ಭಯದಿಂದಾಗಿ ಕಲ್ಲು, ಬಡಿಗೆಗಳಿಂದ ಹೊಡೆದು ಇಲ್ಲವೆ ಟ್ರ್ಯಾಕ್ಟರ್ ಹಾಯಿಸಿ ಕೊಂದ ಉದಾಹರಣೆಗಳು ಇವೆ. ಆದರೆ, ಈಗ ಪರಿಸ್ಥಿತಿ …
Read More »ಖಾನಾಪುರ: ಪ್ರವಾಸಿ ತಾಣವಾಗಲಿ ಸಣ್ಣಹೊಸೂರಿನ ದೊಡ್ಡ ಕೆರೆ, ಬರಗಾಲದಲ್ಲೂ ಜಲಪೂರಣ
ಖಾನಾಪುರ: ತಾಲ್ಲೂಕಿನ ಹಲವೆಡೆ ಮಳೆಯ ಕೊರತೆಯ ಪರಿಣಾಮ ಈ ಸಲದ ಬೇಸಿಗೆಯಲ್ಲಿ ಎಲ್ಲೆಡೆ ಜಲಕ್ಷಾಮ ತಲೆದೋರಿದೆ. ಪ್ರಾಣಿ- ಪಕ್ಷಿಗಳು, ಜಲಚರಗಳಿಗೂ ಕುಡಿಯುವ ನೀರಿನ ತೊಂದರೆ ಉದ್ಭವಿಸಿದೆ. ಆದರೆ ಪಟ್ಟಣದಿಂದ 8 ಕಿ.ಮೀ ದೂರದಲ್ಲಿರುವ ಸಣ್ಣ ಹೊಸೂರು ಗ್ರಾಮದ ವಿಶಾಲವಾದ ಕೆರೆ ನೀರಿನಿಂದ ತುಂಬಿ ಕಂಗೊಳಿಸುತ್ತಿದೆ. ಇದನ್ನು ಅಭಿವೃದ್ಧಿ ಪಡಿಸಿ ಪ್ರವಾಸಿ ತಾಣ ಮಾಡಬೇಕಾದ ಅವಶ್ಯಕತೆ ಇದೆ. ಈ ಕೆರೆಯಲ್ಲಿ ನೀರಿನ ಸಂಗ್ರಹದ ಪರಿಣಾಮ ಅಂಚಿನಲ್ಲಿ ನೂರಾರು ಬಿಳಿ ಕೊಕ್ಕರೆ, ರಾಜಹಂಸ, ಪಾರಿವಾಳ, …
Read More »ಹಿಂದೂಗಳನ್ನು ರಕ್ಷಿಸುವ ಪಕ್ಷಗಳನ್ನು ಆಯ್ಕೆ ಮಾಡಿ: ದಿಲೀಪ ಪರಾಂಡೆ
ಬೆಳಗಾವಿ: ‘ಕರ್ನಾಟಕ, ಪಶ್ಚಿಮ ಬಂಗಾಳ ಸೇರಿದಂತೆ ದೇಶದ ವಿವಿಧೆಡೆ ಅಧಿಕಾರದಲ್ಲಿರುವ ಬಿಜೆಪಿ ಹೊರತಾದ ಪಕ್ಷಗಳು, ಮುಸ್ಲಿಂ ತುಷ್ಟೀಕರಣ ಮಾಡುತ್ತಿವೆ. ಹಾಗಾಗಿ ಎಲ್ಲ ರಾಜ್ಯಗಳಲ್ಲೂ ಹಿಂದೂಗಳ ರಕ್ಷಣೆ ಮಾಡುವ ಮತ್ತು ಹಿಂದುತ್ವ ಪ್ರತಿಪಾದಿಸುವ ಪಕ್ಷಗಳನ್ನು ಆಯ್ಕೆ ಮಾಡಬೇಕು’ ಎಂದು ವಿಶ್ವ ಹಿಂದೂ ಪರಿಷತ್ ಅಖಿಲ ಭಾರತೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ದಿಲೀಪ ಪರಾಂಡೆ ಹೇಳಿದರು. ಇಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್‌ನವರು ಮಾಡುತ್ತಿರುವ ಮುಸ್ಲಿಂ ತುಷ್ಟೀಕರಣದಿಂದ ಹಿಂದೂಗಳಿಗೆ ಅಪಾಯವಿದೆ. …
Read More »ನೀರು ಬಿಡುಗಡೆಗೆ ಮಹಾರಾಷ್ಟ್ರ ಡಿಸಿಎಂ ಫಡ್ನವಿಸ್‌ಗೆ ಜೊಲ್ಲೆ ಮನವಿ
ಚಿಕ್ಕೋಡಿ: ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮುಂತಾದವರು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರನ್ನು ಮುಂಬೈನಲ್ಲಿ ಭೇಟಿ ಮಾಡಿ ಕೃಷ್ಣಾ, ವೇದಗಂಗಾ, ಘಟಪ್ರಭಾ ನದಿಗಳಿಗೆ ನೀರು ಬಿಡುಗಡೆ ಮಾಡುವಂತೆ ಶನಿವಾರ ಮನವಿ ಮಾಡಿದರು. ರಾಜ್ಯದಲ್ಲಿ ಮಳೆ ಇಲ್ಲದದ್ದರಿಂದ ಕೂಡಲೇ ಕೃಷ್ಣಾ ಹಾಗೂ ಉಪನದಿಗಳಿಗೆ ಮಹಾರಾಷ್ಟ್ರದ ವಿವಿಧ ಜಲಾಶಯಗಳಿಂದ ನೀರು ಬಿಡುಗಡೆ ಮಾಡಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆ ಮಾಡಬೇಕು ಎಂದು ವಿನಂತಿಸಿಕೊಂಡರು. …
Read More »ಬೆಳಗಾವಿ: ಶತಮಾನೋತ್ಸವ ಕಾರ್ಯಕ್ರಮ ಸಂಪನ್ನ
ಬೆಳಗಾವಿ: ಇಲ್ಲಿನ ಖಾಸಬಾಗದ ಉಪ್ಪಾರ ಗಲ್ಲಿಯಲ್ಲಿ ನಾಲ್ಕು ದಿನ ವೈಭವದಿಂದ ನಡೆದ ಬನಶಂಕರಿ ದೇವಸ್ಥಾನದ ಶತಮಾನೋತ್ಸವ ಕಾರ್ಯಕ್ರಮ ಭಾನುವಾರ ಸಂಪನ್ನಗೊಂಡಿತು. ಜಾತ್ರೆಯ ಕೊನೆಯ ದಿನ ಬೆಳಿಗ್ಗೆ ಮಹಾಕುಂಭಾಭಿಷೇಕ, ದೀಪಾರಾಧನೆ, ಮಹಾಮಂಗಳಾರತಿ ಧಾರ್ಮಿಕ ಕಾರ್ಯಕ್ರಮ ನೆರವೇರಿದವು. ಸಾವಿರಾರು ಭಕ್ತರಿಗೆ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಜಿಲ್ಲೆಯ ವಿವಿಧೆಡೆಯಿಂದ ಅಪಾರ ಸಂಖ್ಯೆಯಲ್ಲಿ ಬಂದಿದ್ದ ಭಕ್ತರು ಸರದಿ ಸಾಲಿನಲ್ಲಿ ನಿಂತು, ಬನಶಂಕರಿ ದೇವಿ ದರ್ಶನಾಶೀರ್ವಾದ ಪಡೆದುಕೊಂಡರು. ತಮ್ಮ ಇಷ್ಟಾರ್ಥ ಈಡೇರಿದ್ದರಿಂದ ಕೆಲವರು ದೇವಿಗೆ ಸೀರೆ, ಚಿನ್ನಾಭರಣ …
Read More »