Breaking News

ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನ

ಬೆಂಗಳೂರು/ ಗ್ರಾಹಕ ನ್ಯಾಯಾಲಯಕ್ಕೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಗೋಕಾಕ್ ಜಾತ್ರೆ ಬಂದೋಬಸ್ತ್​​ಗೆ ಬಂದಿದ್ದ ಹುಬ್ಬಳ್ಳಿ ಎಎಸ್ಐ ಹೃದಯಾಘಾತದಿಂದ ನಿಧನರಾಗಿರುವ ಘಟನೆ ಶನಿವಾರ ನಡೆದಿದೆ. ಕನಕಪುರ ಮೂಲದ ಚಿನ್ನಾರಿ ಗೌಡ (65) ಗ್ರಾಹಕರ ನ್ಯಾಯಾಲಯದಲ್ಲಿ ಮೃತಪಟ್ಟ ವ್ಯಕ್ತಿ. ಶಾಂತಿ ನಗರದ ಬಿಎಂಟಿಸಿ‌ ಸಂಕೀರ್ಣದ ಮೊದಲ ಮಹಡಿಯಲ್ಲಿರುವ ಗ್ರಾಹಕರ ನ್ಯಾಯಾಲಯಕ್ಕೆ ಇಂದು ಮುಂಜಾನೆ ಚಿನ್ನಾರಿ ಗೌಡ ಹಾಜರಾಗಿದ್ದರು. ಬೆಳಗ್ಗೆ 10.30ರ ಸುಮಾರಿಗೆ ಕುಳಿತಿದ್ದಲ್ಲೇ ಅವರು ಕುಸಿದು ಬಿದ್ದಿದ್ದರು. ಅವರನ್ನು ಕೂಡಲೇ ಸ್ಥಳದಲ್ಲಿದ್ದವರ …

Read More »

ಮಹದಾಯಿ ಯೋಜನೆಗೆ ನಿಮ್ಮ ಮಿತ್ರಪಕ್ಷದ ಗೋವಾ ಸರ್ಕಾರದ ಒಪ್ಪಿಗೆ ತನ್ನಿ: ಹೆಚ್​ಡಿಕೆಗೆ ಪಾಟೀಲ್ ಪ್ರತಿಸವಾಲು

ಗದಗ: ”ಗೋವಾದಲ್ಲಿ ನಿಮ್ಮದೇ ಮಿತ್ರಪಕ್ಷದ ಸರ್ಕಾರವಿದೆ. ಮಹದಾಯಿ ಯೋಜನೆಗೆ ಒಪ್ಪಿಗೆ ಕೊಡಿಸಿ. ಗೋವಾದ ಒಪ್ಪಿಗೆ ತೆಗೆದುಕೊಂಡು ಬನ್ನಿ” ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್ ಪ್ರತಿಸವಾಲು ಹಾಕಿದರು. ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರದಿಂದ ಐದೇ ನಿಮಿಷದಲ್ಲಿ ಅನುಮೋದನೆ ಪಡೆಯುವುದಾಗಿ ಹೇಳಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ಗದಗದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿರುವ ಹೆಚ್.ಕೆ.ಪಾಟೀಲ್, ”ಯೋಜನೆಗೆ ತಮಿಳುನಾಡಿನ ಒಪ್ಪಿಗೆ ಪಡೆಯುವ ಅಗತ್ಯವಿಲ್ಲ. ಅಂತಾರಾಜ್ಯ ಜಲ ವಿವಾದ ಕಾಯ್ದೆಯಡಿ …

Read More »

ಹೃದಯಾಘಾತ ಪ್ರಕರಣಗಳಿಗೂ ಕೋವಿಡ್ ಲಸಿಕೆಗೂ ಯಾವುದೇ ಸಂಬಂಧವಿಲ್ಲ: ರಾಜ್ಯ ಸರ್ಕಾರಕ್ಕೆ ತಜ್ಞರ ಸಮಿತಿಯ ವರದಿ ಸಲ್ಲಿಕೆ

ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಯುವಕರು ಸೇರಿದಂತೆ ವಿವಿಧ ವಯೋಮಾನದವರ ಹಠಾತ್ ಹೃದಯಾಘಾತ ಸಾವಿನ ಪ್ರಕರಣಗಳಿಗೂ ಮತ್ತು ಕೋವಿಡ್ ಲಸಿಕೆ ಪಡೆದಿರುವುದಕ್ಕೂ ಯಾವುದೇ ಸಂಬಂಧವಿಲ್ಲ. ಕೋವಿಡ್ ಲಸಿಕೆಯ ವ್ಯತಿರಿಕ್ತ ಪರಿಣಾಮಗಳಿಂದ ‘ಹಾರ್ಟ್ ಅಟ್ಯಾಕ್’ಗಳು ಸಂಭವಿಸಿವೆ ಎನ್ನುವುದು ವೈದ್ಯಕೀಯ ತನಿಖೆಯಲ್ಲಿ ದೃಢಪಟ್ಟಿಲ್ಲ ಎಂದು ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಕೆ.ಎಸ್.ರವೀಂದ್ರನಾಥ್ ನೇತೃತ್ವದ ತಾಂತ್ರಿಕ ಸಮಿತಿಯು ರಾಜ್ಯ ಸರ್ಕಾರಕ್ಕೆ ತನ್ನ ವರದಿ ಸಲ್ಲಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮೂರ್ನಾಲ್ಕು ತಿಂಗಳ ಹಿಂದೆ ರಾಜ್ಯದಲ್ಲಿ ದಿಢೀರ್​ ಹೃದಯಾಘಾತಗಳಿಗೆ ಜನರು …

Read More »

ಗರ್ಭಿಣಿಯಾದಳೆಂದು ಪತ್ನಿಯನ್ನೇ ಕೊಲೆ ಮಾಡಿದ ಪತಿ!

ಚಾಮರಾಜನಗರ : ಗರ್ಭಿಣಿಯೊಬ್ಬರನ್ನು ತಾಳಿ ಕಟ್ಟಿದ ಪತಿಯೇ ಕೊಲೆ ಮಾಡಿರುವ ಘಟನೆ ತಾಲೂಕಿನ ಡೊಳ್ಳಿಪುರದ ತೋಟದ ಮನೆಯಲ್ಲಿ ನಡೆದಿದೆ. ಈ ಕುರಿತು ಎಸ್​ಪಿ ಡಾ. ಬಿ. ಟಿ. ಕವಿತಾ ಅವರು ಮಾತನಾಡಿದ್ದು, ಮಹಿಳೆಯ ಕೊಲೆ ಕುರಿತು ಕಂಟ್ರೋಲ್ ರೂಮ್​​ಗೆ ಕರೆ ಬಂದಿತ್ತು. ನಂತರ ನಮ್ಮ ಠಾಣಾ ವ್ಯಾಪ್ತಿಗೆ ಬಂದಿದ್ದರಿಂದಾಗಿ ನಾವು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದೆವು. ಅಲ್ಲಿ ಶುಭಾ(38) ಎಂಬ ಮಹಿಳೆ ಮನೆ ಮುಂದೆ ಕೊಲೆಯಾಗಿ ಬಿದ್ದಿದ್ದರು ಎಂದು ತಿಳಿಸಿದರು.ಮೃತ ಮಹಿಳೆ …

Read More »

ಜನರಲ್ಲಿ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯದಿದ್ದರೆ, ಕೇವಲ ಮೌಢ್ಯ ನಿಷೇಧ ಕಾನೂನಿನ ಮೂಲಕ ನಿರೀಕ್ಷಿತ ಬದಲಾವಣೆ ಸಾಧ್ಯವಿಲ್ಲ ಎಂದ ಸಿಎಂ

ಬೆಂಗಳೂರು: ”ದ್ವಿಭಾಷಾ ಸೂತ್ರ ನನ್ನ ಅಭಿಪ್ರಾಯವಾಗಿದೆ. ಅದನ್ನು ಸರ್ಕಾರದ ಅಭಿಪ್ರಾಯ ಮಾಡುವ ದಿಕ್ಕಿನಲ್ಲಿ ಪ್ರಯತ್ನಿಸುತ್ತೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಜನ‌ಪ್ರಕಾಶನ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರ ಸಂಪಾದಕತ್ವದ “ಕುವೆಂಪು ವಿಚಾರ ಕ್ರಾಂತಿ” ಕೃತಿಯನ್ನು ಜನಾರ್ಪಣೆಗೊಳಿಸಿ ಅವರು ಮಾತನಾಡಿದರು. ”ಕುವೆಂಪು ಅವರ ಪ್ರಖರ ವೈಚಾರಿಕತೆ ಸಮಾಜದಲ್ಲಿ ಜಾತಿ ಅಸಮಾನತೆ ಇರುವವರೆಗೂ ಪ್ರಸ್ತುತವಾಗಿರುತ್ತದೆ. ವೈಚಾರಿಕತೆ, ವೈಜ್ಞಾನಿಕತೆಯ ಬಗ್ಗೆ ಕುವೆಂಪು ಅವರಿಗೆ ಸ್ಪಷ್ಟ ದೃಷ್ಟಿಕೋನ ಇತ್ತು. ಜಾತಿ ತಾರತಮ್ಯ ಇಲ್ಲದ ಸಮಾಜ ಕುವೆಂಪು …

Read More »

ಹುಲಿ ಸಾವು ಪ್ರಕರಣ – ಇಬ್ಬರು ಅಧಿಕಾರಿಗಳ ಅಮಾನತು

ಕಲಬುರಗಿ : ಹುಲಿಗೆ ವಿಷಪ್ರಾಶನ ಮಾಡಿರುವುದು ವರದಿಗಳಲ್ಲಿ ದೃಢಪಟ್ಟಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದ ಮೇಲೆ ಇಬ್ಬರು ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದರು. ಈ ಕುರಿತು ಶನಿವಾರ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೊಬ್ಬ ಅಧಿಕಾರಿಯ ಅಮಾನತಿಗಾಗಿ DPAR (ಡಿಪಿಎಆರ್)ಗೆ ಮುಖ್ಯಮಂತ್ರಿಗಳಿಗೆ ಶಿಫಾರಸು ಮಾಡಲಾಗಿದ್ದು, ಕ್ರಮದ ಪ್ರಕ್ರಿಯೆ ಮುಂದುವರೆದಿದೆ ಎಂದು ಹೇಳಿದರು. ಹುಲಿ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು …

Read More »

ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ!

ಶಾಲೆಗೆ ಹೋಗದ ಶಿಕ್ಷಕರು – ಅಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾತಿ! ಅಥಣಿ, ಜುಲೈ 2:ತಾಲೂಕಿನ ಹಲವು ಸರಕಾರಿ ಶಾಲೆಗಳಲ್ಲಿ ಹಾಜರಾತಿ ತಪ್ಪಿಸುತ್ತಿರುವ ಹಾಗೂ ಕರ್ತವ್ಯ ಮರೆತ ಶಿಕ್ಷಕರು, ಈ ಬಾರಿ ತರಗತಿ ಕೊಠಡಿಗೆ ಅಲ್ಲ, ಬದಲಿಗೆ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸನ್ಮಾನಕ್ಕೆ ದಂಡಾಗಿ ಹಾಜರಾಗಿ ಗಮನಸೆಳೆದಿದ್ದಾರೆ. ಅಥಣಿ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಹೊಸ ಬಿಇಒ ಎಂ. ಆರ್. ಮುಂಜೆ ಅವರು ಅಧಿಕಾರ ಸ್ವೀಕರಿಸಿದರು. ಅವರನ್ನು ಅಭಿನಂದಿಸಲು ಹಲವಾರು ಶಾಲೆಗಳ …

Read More »

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,.

ಡಿಸೆಂಬರ 31 ಒಳಗಾಗಿ ಬೆಳಗಾವಿ ಜಿಲ್ಲೆ ವಿಭಜಿಸಿ,. ಚಿಕ್ಕೋಡಿ: ಆಡಳಿತಾತ್ಮಕ ಮತ್ತು ಅಭಿವೃದ್ಧಿ ದೃಷ್ಟಿಯಿಂದ ಡಿಸೆಂಬ‌ರ್ 31 ರೊಳಗೆ ಬೆಳಗಾವಿ ಜಿಲ್ಲೆಯ ವಿಭಜನೆ ಮಾಡಿ ಹೊಸ ಜಿಲ್ಲೆಗಳ ಘೋಷಣೆ ಮಾಡಬೇಕು ಎಂದು ಚಿಕ್ಕೋಡಿ ಜಿಲ್ಲಾ ಹೋರಾಟ ಸಮಿತಿಯ ಅಧ್ಯಕ್ಷ ಸಂಜು ಬಡಿಗೇರ ಒತ್ತಾಯ ಮಾಡಿದ್ದಾರೆ. ಚಿಕ್ಕೋಡಿ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು ಮುಂದಿನ ವರ್ಷ ಏಪ್ರಿಲ್ ದಿಂದ ಜನಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಮೊದಲ ಹಂತದಲ್ಲಿ ಮನೆಗಳ ಮತ್ತು …

Read More »

ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ

ಕೃಷ್ಣಾ ನದಿ ನೀರು ವಿನಿಮಯ ಒಪ್ಪಂದಕ್ಕೆ ನಿರ್ಲಕ್ಷ್ಯ ಕರ್ನಾಟಕ ಮಹಾರಾಷ್ಟ್ರ ಎರಡು ರಾಜ್ಯಗಳ‌ ಮಧ್ಯೆ ಬೇಕಿದೆ ನೀರು ವಿನಿಮಯ ಒಪ್ಪಂದ ದಶಕಗಳಿಂದ ನೀರು ವಿನಿಮಯ ಒಪ್ಪಂದ ಯೋಜನೆ ನೆನೆಗುದ್ದಿಗೆ ಬೇಸಿಗೆಯಲ್ಲಿ ಪರಸ್ಪರ ನೀರು ವಿನಿಮಯದಿಂದ ಅನುಕೂಲ ಮಳೆಗಾಲದಲ್ಲಿ ಪ್ರವಾಹ ನಿರ್ವಹಣೆಗೂ ಅನುಕೂಲ ಕೃಷ್ಣಾ ನದಿಗೆ ಪ್ರವಾಹ ಬಂದ್ರೆ ಉತ್ತರ ಕರ್ನಾಟಕ ನೂರಾರು ಹಳ್ಳಿಗಳಿಗೆ ಎಫೆಕ್ಟ್ ಕರ್ನಾಟಕ ‌ಮಹಾರಾಷ್ಟ್ರ ರಾಜ್ಯದಲ್ಲೂ ಕೃಷ್ಣಾ ನದಿ ಎಫೆಕ್ಟ್ ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ನೀರು ಬಿಟ್ಟರೆ …

Read More »

ಶಾರ್ಟ್ ಸರ್ಕೀಟ್’ನಿಂದ ಸುಟ್ಟು ಕರಕಲಾದ ಹೊಟೇಲ್…!!!

ಶಾರ್ಟ್ ಸರ್ಕೀಟ್’ನಿಂದ ಸುಟ್ಟು ಕರಕಲಾದ ಹೊಟೇಲ್…!!! ಬೆಳಗಾವಿಯ ಗೋವಾವೇಸ್’ನಲ್ಲಿ ಶಾರ್ಟ್ ಸರ್ಕೀಟ್’ನಿಂದ “ಹೋಟೆಲ್ ಒಂದು ಅಗ್ನಿಗಾಹುತಿಯಾಗಿ ಲಕ್ಷಾಂತರ ರೂಪಾಯಿಗಳ ನಷ್ಟವಾಗಿದೆ. ಬೆಳಗಾವಿಯ ಗೋವಾವೇಸ್‌ನಲ್ಲಿ ಇರುವ “ಹೋಟೆಲ್ ಅನುಗ್ರಹ”ನಲ್ಲಿ ಕಳೆದ ರಾತ್ರಿ 2 ಗಂಟೆ ಸುಮಾರಿಗೆ ಶಾರ್ಟ್ ಸರ್ಕಿಟ್‌ನಿಂದಾಗಿ ಬೆಂಕಿ ಹೊತ್ತಿಕೊಂಡಿದೆ. ಹೋಟೆಲ್‌ನ ಫರ್ನಿಚರ್ ಸುಡುತ್ತಿರುವ ಶಬ್ದದಿಂದ ಎಚ್ಚರಗೊಂಡ ಸ್ಥಳೀಯ ನಿವಾಸಿಗಳು ತಕ್ಷಣ ಹೋಟೆಲ್ ಮಾಲೀಕರಾದ ಸುಧಾಕರ್ ಪುಜಾರಿ ಅವರಿಗೆ ಮಾಹಿತಿ ನೀಡಿದರು. ಅಲ್ಲದೇ, ಅಗ್ನಿಶಾಮಕ ದಳವನ್ನು ಸಂಪರ್ಕಿಸಿದರು. ಅಗ್ನಿಶಾಮಕ ದಳಕ್ಕೆ …

Read More »