ಹುಬ್ಬಳ್ಳಿ: ಇಲ್ಲಿನ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಹಂತಕ ಗಿರೀಶ ಉರುಫ್ ವಿಶ್ವ ಸಾವಂತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ. ಆರು ತಿಂಗಳ ಹಿಂದೆಯೇ ವಿಶ್ವ ಎಂಬಾತ ಬಾಲಕಿ ಬೆನ್ನುಬಿದ್ದು, ಕಿರುಕುಳ ಕೊಟ್ಟು 55 ಗ್ರಾಂ ಚಿನ್ನಾಭರಣ, 8 ಸಾವಿರ ರೂ. ಇಸಿದುಕೊಂಡು ವಂಚಿಸಿದ್ದಾನೆ ಎಂದು ಆರೋಪಿಸಿ ಬಾಲಕಿಯ ತಂದೆ-ತಾಯಿಯು ಠಾಣೆಯಲ್ಲಿ ದೂರು ಕೊಟ್ಟಿದ್ದಾರೆ. ಆತನ ವಿರುದ್ಧ ಬೆಂಡಿಗೇರಿ ಠಾಣೆಯಲ್ಲಿ ಸೆಕ್ಷನ್ 420, 504, 506 ಅಡಿಯಲ್ಲಿ …
Read More »ಬೆಂಗಳೂರಿನಲ್ಲಿ ಧಾರಾಕಾರ ಮಳೆ: ಐಪಿಎಲ್ ಖುಷಿ ಕಿತ್ತುಕೊಂಡ ವರುಣ
ಬೆಂಗಳೂರು ಮೇ 18: ಬೆಂಗಳೂರಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬೆಳಿಗ್ಗೆಯಿಂದಲೂ ಮೋಡ ಕವಿದ ವಾತಾವರಣವಿದ್ದು ಮಧ್ಯಾಹ್ನ ವರುಣನ ಅರ್ಭಟ ಶುರುವಾಗಿದೆ. ಮುಂದಿನ ಕೆಲ ದಿನಗಳವರೆಗೆ ಮಳೆ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ನಗರದ ವಿಜಯನಗರ, ರಾಜಾಜಿನಗರ, ಮಾಗಡಿ ರಸ್ತೆ, ಮೈಸೂರು ರಸ್ತೆ, ಕೆಆರ್ ಮಾರುಕಟ್ಟೆ, ಗಾಂಧಿ ಬಜಾರ್ ಸೇರಿದಂತೆ ಹಲವೆಡೆ ಮಳೆ ತೀವ್ರಗೊಂಡಿದೆ. ಏಕಾಏಕಿ ಮಳೆ ಜೋರಾಗಿ ಸುರಿಯುತ್ತಿದ್ದು ಸಂಜೆವರೆಗೂ ಮಳೆಯಾಗುವ ಸಾಧ್ಯತೆ ಇದೆ. ಇಂದು ಬೆಳಗ್ಗೆ …
Read More »ಯಾವ ನೋಟಿಸ್ ಗು ಬಗ್ಗದ ಪ್ರಜ್ವಲ್ : ಇದೀಗ ಕೋರ್ಟ್ ಮೂಲಕ ‘ವಾರೆಂಟ್’ ಜಾರಿಗೆ ‘SIT’ ಸಿದ್ಧತೆ
ಬೆಂಗಳೂರು : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ದೇಶದಿಂದ ದೇಶಕ್ಕೆ ಜಿಗಿಯುತ್ತ ತಲೆಮರಿಸಿಕೊಂಡಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಈಗ ಎಸ್‌ಐಟಿ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾಗಿದ್ದು, ಕೋರ್ಟ್ ಮೂಲಕ ವಾರೆಂಟ್ ಜಾರಿ ಮಾಡುವ ಮುಖಾಂತರ ಪ್ರಜ್ವಲ್ ರೇವಣ್ಣನನ್ನು ಬಂಧಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ. ಹೌದು ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್ ಗೆ ವಿಚಾರಣೆಗೆ ಹಾಜರಾಗುವಂತೆ ಹಲವಾರು ಬಾರಿ ನೋಟಿಸ್ ನೀಡಿದ್ದರು. ಅಲ್ಲದೆ …
Read More »55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಪೋಸ್ಟರ್ ಅನಾವರಣ
ಪಣಜಿ: ನವೆಂಬರ್ ತಿಂಗಳಲ್ಲಿ ನಡೆಯಲಿರುವ 55ನೇ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ (ಐಎಫ್‍ಎಫ್‍ಐ) ಪೋಸ್ಟರ್ ಪ್ರಸ್ತುತ ನಡೆಯುತ್ತಿರುವ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಅನಾವರಣಗೊಳಿಸಲಾಗಿದೆ. ಪ್ರತಿ ವರ್ಷದಂತೆ ಈ ಬಾರಿಯೂ ನವೆಂಬರ್ 20-28 ರವರೆಗೆ ಪಣಜಿಯಲ್ಲಿ ಅಂತರಾಷ್ಟ್ರೀಯ ಚಲನಚಿತ್ರೋತ್ಸವ ನಡೆಯಲಿದೆ. ಭಾರತವು ಪ್ರತಿ ವರ್ಷ ಕೇನ್ಸ್ ಚಲನಚಿತ್ರೋತ್ಸವದಲ್ಲಿ ಭಾಗವಹಿಸುತ್ತದೆ. ಈ ವರ್ಷ, ಕೇನ್ಸ್ ನಲ್ಲಿ ನಡೆದ ಈ ಉತ್ಸವದಲ್ಲಿ ‘ಇಂಡಿಯಾ ಪೆವಿಲಿಯನ್’ ಅನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರ ಸರ್ಕಾರದ ಮಾಹಿತಿ ಮತ್ತು ಪ್ರಸಾರ ಇಲಾಖೆಯ …
Read More »ಹೆಂಡ್ತಿಯನ್ನು ‘ಡುಮ್ಮಿ’ ಎನ್ನುತ್ತಿದ್ದ ಗಂಡ: ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣು!
ಬೆಂಗಳೂರು: ದಪ್ಪ ಇರುವುದಕ್ಕೆ ಪತಿಯ ನಿಂದನೆಗೆ ಬೇಸತ್ತು ಬೆಂಗಳೂರಿನಲ್ಲಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತ ಮಹಿಳೆಯನ್ನು ಮಂಜುನಾಥನಗರ ನಿವಾಸಿ ಸಂಧ್ಯಾ (31) ಅಂತ ತಿಳಿದು ಬಂದಿದೆ. ಮೃತ ಸಂಧ್ಯಾ ದಪ್ಪ ಇರುವುದಕ್ಕೆ ಪತಿಯ ನಿಂದನೆ ಹಾಗೂ ಅನಾರೋಗ್ಯದಿಂದ ಬಳಲುತ್ತಿದ್ದ ಮಗುವಿನ ವಿಚಾರಕ್ಕೆ ದಾಂಪತ್ಯ ಕಲಹ ಉಂಟಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಮಗಳು ಸಂಧ್ಯಾ ಆತ್ಮಹತ್ಯೆಗೆ ಅಳಿಯ ಜಯಪ್ರಕಾಶ್ ಹಾಗೂ ಕುಟುಂಬಸ್ಥರ ದೈಹಿಕ, ಮಾನಸಿಕ ಕಿರುಕುಳವೇ ಕಾರಣ ಎಂದು …
Read More »ಲೋಕಸಭಾ ಚುನಾವಣೆ 2024: ಮನೆಯಲ್ಲೇ ಮತದಾನ ಮಾಡಿದ ಅನ್ಸಾರಿ, ಮನಮೋಹನ್ ಸಿಂಗ್, ಜೋಶಿ | ಫೋಟೋ ನೋಡಿ
ನವದೆಹಲಿ: ಮಾಜಿ ಉಪರಾಷ್ಟ್ರಪತಿ ಮೊಹಮ್ಮದ್ ಹಮೀದ್ ಅನ್ಸಾರಿ, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್, ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಮತ್ತು ಮಾಜಿ ಕೇಂದ್ರ ಸಚಿವ ಡಾ.ಮುರಳಿ ಮನೋಹರ್ ಜೋಶಿ ಅವರು ಮನೆ ಮತದಾನ ಸೌಲಭ್ಯವನ್ನು ಬಳಸಿಕೊಂಡು ಮತ ಚಲಾಯಿಸಿದ್ದಾರೆ ಎಂದು ದೆಹಲಿ ಚುನಾವಣಾ ಆಯೋಗ ತಿಳಿಸಿದೆ. ದೆಹಲಿಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಕಚೇರಿ ಗುರುವಾರ ಹಿರಿಯ ಮತದಾರರು ಮತ್ತು ಅಂಗವಿಕಲರಿಗೆ (ಪಿಡಬ್ಲ್ಯೂಡಿ) ಮನೆ ಮತದಾನ ಸೌಲಭ್ಯವನ್ನು ಪ್ರಾರಂಭಿಸಿದೆ ಮತ್ತು …
Read More »ತೆರಬಂಡಿ ಸ್ಪರ್ಧೆಯ ಹೋರಿ ದಾಖಲೆಯ 10.10 ಲಕ್ಷಕ್ಕೆ ಖರೀದಿಸಿದ ರೈತ
ಮಹಾಲಿಂಗಪುರ: ರೈತ ದೇಶದ ಬೆನ್ನೆಲುಬಾದರೆ, ರೈತನ ಬೆನ್ನಲುಬು ಎತ್ತು. ಆದರೆ ಇತ್ತಿಚಿಗೆ ಯಾಂತ್ರಿಕ ಉಪಕರಣಗಳು ಹೆಚ್ಚಾಗಿದ್ದರಿಂದ ರೈತರು ಕೃಷಿ ಚಟುವಟಿಕೆಗಳಿಗೆ ಎತ್ತುಗಳನ್ನು ಬಳಸುವುದು ಕಡಿಮೆಯಾಗಿದೆ. ಗ್ರಾಮೀಣ ಭಾಗದ ರೈತರು ಎತ್ತು ಮತ್ತು ಹೋರಿಗಳನ್ನು ಇಂದಿಗೂ ಸಾಕುತ್ತಿದ್ದಾರೆ. ಪಟ್ಟಣದ ಪುರಸಭೆಯ ಹಿರಿಯ ಸದಸ್ಯರು, ಪ್ರಗತಿಪರ ರೈತ ಯಲ್ಲನಗೌಡ ಪಾಟೀಲ ಅವರು ಇಂದಿಗೂ ತಮ್ಮ ಮನೆಯಲ್ಲಿ ಎತ್ತು ಮತ್ತು ಹೋರಿಗಳನ್ನು ಸಾಕುತ್ತಾ, ಗ್ರಾಮೀಣ ಭಾಗದಲ್ಲಿ ನಡೆಯುವ ಪ್ರತಿಯೊಂದು ಜಾತ್ರೆ ಉತ್ಸವಗಳಲ್ಲಿ ನಡೆಯುವ ತೆರಬಂಡಿ, ಕಲ್ಲು …
Read More »ತ್ಯಾಜ್ಯನೀರಿನ ಸಂಸ್ಕರಣಾಘಟಕ ದುರಂತ; ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ತಂಡ ಭೇಟಿ
ವಿಜಯಪುರ: ಚರಂಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದಲ್ಲಿ ಬಿದ್ದು ಮೂವರು ಮಕ್ಕಳ ದುರಂತ ಘಟನೆ ಹಿನ್ನೆಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರ ತಂಡ ನಗರಕ್ಕೆ ಭೇಟಿ ನೀಡಿದೆ. ಶುಕ್ರವಾರ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶಶಿಧರ ಕೋಸುಂಬೆ, ಶೇಖರಗೌಡ ರಾಮತ್ನಾಳ ಅವರ ತಂಡ ವಿಜಯಪುರ ನಗರಕ್ಕೆ ಭೇಟಿ ನೀಡಿದ್ದು, ಮೇ 13 ರಂದು ದುರಂತದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಕ್ಕಳ ಪೋಷಕರನ್ನು ಭೇಟಿ ಮಾಡಿ …
Read More »ಕನ್ನಡದ ಖ್ಯಾತ ನಿರ್ಮಾಪಕನ ಜೊತೆ ಅನುಷ್ಕಾ ಶೆಟ್ಟಿ ಮದುವೆ?
ಬೆಂಗಳೂರು: ಸೌತ್ ಸಿನಿಮಾ ರಂಗದ ಖ್ಯಾತ ನಟಿ ಅನುಷ್ಕಾ ಶೆಟ್ಟಿ ಸದ್ಯ ಚಿತ್ರರಂಗದಲ್ಲಿ ಅಷ್ಟಾಗಿ ಸಕ್ರಿಯರಾಗಿಲ್ಲ. ಒಂದು ಕಾಲದಲ್ಲಿ ಬ್ಯಾಕ್ ಟು ಬ್ಯಾಕ್ ಹಿಟ್ ಕೊಟ್ಟ ಕರಾವಳಿ ಚೆಲುವೆ ಮಾಲಿವುಡ್ ಗೆ ಎಂಟ್ರಿ ಕೊಟ್ಟಿದ್ದು, ಆ ಮೂಲಕ ಮತ್ತೆ ಸಿನಿಮಾರಂಗಕ್ಕೆ ಕಂಬ್ಯಾಕ್ ಮಾಡುವ ತಯಾರಿಯಲ್ಲಿದ್ದಾರೆ. ಚಿತ್ರರಂಗದಲ್ಲಿ ಅನುಷ್ಕಾ ಎಷ್ಟರಮಟ್ಟಿಗೆ ಸುದ್ದಿಯಾಗಿದ್ದರೋ, ಅವರ ವೈಯಕ್ತಿಕ ಜೀವನದ ಬಗ್ಗೆ ಆಗಾಗ ಸುದ್ದಿಗಳು ಹರಿದಾಡುತ್ತಲೇ ಇರುತ್ತವೆ. ʼಬಾಹುಬಲಿʼ ಬೆಡಗಿಗೆ ವಯಸ್ಸು 42 ದಾಟಿದರೂ ಇನ್ನು ಮದುವೆ …
Read More »ಕರ್ನಾಟಕವು ಗೂಂಡಾ ರಾಜ್ಯವಾಗುತ್ತಿದೆ: ಜಗದೀಶ ಶೆಟ್ಟರ್
ಹುಬ್ಬಳ್ಳಿ: ಕರ್ನಾಟಕ ರಾಜ್ಯ ಉತ್ತರ ಪ್ರದೇಶ ಮಾದರಿಯಲ್ಲಿ ಗೂಂಡಾ ರಾಜ್ಯವಾಗುತ್ತಿದ್ದು, ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ಆರೋಪಿಸಿದರು. ನಗರದ ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಹತ್ಯೆಯಾದ ಅಂಜಲಿ ಅಂಬಿಗೇರ ನಿವಾಸಕ್ಕೆ ಶುಕ್ರವಾರ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಉತ್ತರ ಪ್ರದೇಶ ಮೊದಲು ಗೂಂಡಾ ರಾಜ್ಯವಾಗಿತ್ತು. ಅಲ್ಲಿ ಯೋಗಿ ಆದಿತ್ಯನಾಥ ಸಿಎಂ ಆದ …
Read More »