ಗದಗ: ತುಂಗಭದ್ರಾ ನದಿ ಸಮೀಪದಲ್ಲಿರುವ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ವಿಠಲಾಪುರ ಗ್ರಾಮದಲ್ಲಿ ಮೊಸಳೆ ಹಾಗೂ ಮೊಸಳೆ ಮರಿಗಳು ಪದೇಪದೆ ಕಾಣಿಸಿಕೊಳ್ಳುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಗ್ರಾಮದ ದುರಗಪ್ಪ ಸ್ವಾಮಿ ಎಂಬುವರ ಮನೆಯ ಹಿತ್ತಲಿನ ಬಳಿ ಇಂದು ಮೊಸಳೆ ಕಾಣಿಸಿಕೊಂಡಿದೆ. ಇದನ್ನು ನೋಡಿದ ಸ್ಥಳೀಯರು ಕೂಗಾಡುತ್ತಿದ್ದಂತೆ ದೊಡ್ಡ ಮೊಸಳೆ ಅಲ್ಲಿಂದ ತಪ್ಪಿಸಿಕೊಂಡಿದೆ. ಆದರೆ, ಒಂದು ಮೊಸಳೆ ಮರಿಯನ್ನು ಸ್ಥಳೀಯರು ಸೆರೆಹಿಡಿದಿದ್ದಾರೆ. ಗ್ರಾಮದ ಸುತ್ತಮುತ್ತ ಪದೇಪದೆ ಮೊಸಳೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಜನರು ಭಯದಲ್ಲಿದ್ದಾರೆ. …
Read More »ಗಂಡ ಅಂತ್ಯಸಂಸ್ಕಾರಕ್ಕೆ ಬರಬಾರದು – ಡೆತ್‌ನೋಟ್ ಬರೆದಿಟ್ಟು ಗೃಹಿಣಿ ಆತ್ಮಹತ್ಯೆ
ಚಿಕ್ಕಬಳ್ಳಾಪುರ: ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹದಿಂದ ಮನನೊಂದ ಗೃಹಿಣಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ನಡೆದಿದೆ. ಮಮತಾಶ್ರೀ (26) ಮೃತ ದುರ್ದೈವಿ. ಕಳೆದ 5 ವರ್ಷಗಳ ಹಿಂದೆ ಮೋಹನ್ ರೆಡ್ಡಿ ಹಾಗೂ ಮಮತಾಶ್ರೀ ವಿವಾಹವಾಗಿದ್ದರು. ದಂಪತಿಗೆ ನಾಲ್ಕು ವರ್ಷದ ಗಂಡು ಮಗುವಿದ್ದು, ಸೊಣ್ಣಶೆಟ್ಟಿಹಳ್ಳಿ ಬಡಾವಣೆಯಲ್ಲಿ ವಾಸವಾಗಿದ್ದರು. ಕಳೆದ ಕೆಲ ದಿನಗಳಿಂದ ಪತಿ-ಪತ್ನಿ ನಡುವೆ ವೈಮನಸ್ಸು ಹಾಗೂ ಕೌಟುಂಬಿಕ ಕಲಹದಿಂದ …
Read More »2 ಕೋಟಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ – ಐವರು ಅರೆಸ್ಟ್
ಚಿಕ್ಕಬಳ್ಳಾಪುರ: ಖಾಸಗಿ ಕಂಪನಿಗೆ ಸೇರಿದ ಸುಮಾರು 2 ಕೋಟಿ ರೂಪಾಯಿ ಮೌಲ್ಯದ ಕಟ್ಟಿಂಗ್ ಟೂಲ್ಸ್ ಕಳ್ಳತನ ಪ್ರಕರಣವನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಭೇದಿಸಿದ್ದು, ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಸೋಮಶೇಖರ್, ಚಂದ್ರಶೇಖರ್, ಧನುಷ್, ನಾಗಭೂಷಣ್ ಹಾಗೂ ಹರೀಶ್ ಬಂಧಿತ ಆರೋಪಿಗಳು. ಆರೋಪಿಗಳಿಂದ ಸುಮಾರು 80 ಲಕ್ಷ ರೂ. ಮೌಲ್ಯದ ಕಟ್ಟಿಂಗ್ ಟೂಲ್ಸ್‌ಗಳನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. 2025ನೇ ಸಾಲಿನ ಆಡಿಟ್ ವೇಳೆ ಕಂಪನಿಯ ಸ್ಟಾಕ್‌ನಲ್ಲಿ ವ್ಯತ್ಯಾಸ ಕಂಡುಬಂದಿದ್ದು, …
Read More »ಹೂಳಿನಲ್ಲಿ ಸಿಲುಕಿ ಬೋಟ್ ಮುಳುಗಡೆ; ನಾಲ್ವರು ಮೀನುಗಾರರ ರಕ್ಷಣೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಅಳಿವೆಯಲ್ಲಿ ಮೀನುಗಾರಿಕೆಗೆ ತೆರಳುತ್ತಿದ್ದ ಬೋಟ್‌ವೊಂದು ಹೂಳಿನಲ್ಲಿ ಸಿಲುಕಿ ಮುಳುಗಡೆಯಾಗಿದೆ. ಅದೃಷ್ಟವಶಾತ್ ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರನ್ನು ರಕ್ಷಿಸಲಾಗಿದೆ. ತದಡಿ ಬಂದರಿನಿಂದ ಮೋಹನ್ ಕಿಮಾನಿ ಎಂಬುವರಿಗೆ ಸೇರಿದ ‘ಶ್ರೀದೇವಿ’ ಹೆಸರಿನ ಬೋಟ್ ಮೀನುಗಾರಿಕೆಗೆ ತೆರಳುತ್ತಿದ್ದ ವೇಳೆ ತದಡಿ ಅಳಿವೆಯಲ್ಲಿನ ಹೂಳಿನಲ್ಲಿ ಸಿಲುಕಿಕೊಂಡಿದೆ. ಇದರಿಂದ ಬೋಟ್‌ನ ತಳಭಾಗಕ್ಕೆ ಹಾನಿಯಾಗಿದ್ದು, ಬಳಿಕ ಅಳಿವೆಯಲ್ಲೇ ಬೋಟ್ ಮುಳುಗಡೆಯಾಗಿದೆ. ಬೋಟ್‌ನಲ್ಲಿದ್ದ ನಾಲ್ವರು ಮೀನುಗಾರರು ಅಪಾಯಕ್ಕೆ ಸಿಲುಕಿದ್ದರು. ಕೂಡಲೇ ಸ್ಥಳೀಯ …
Read More »ಕಾನೂನು ಹೇಳಿದಂತೆ ನಡೆಯುತ್ತೇವೆ – ನೈಸ್ ಯೋಜನೆ ಬಗ್ಗೆ ಹೆಚ್‌ಡಿಕೆ ಪತ್ರಕ್ಕೆ ಡಿಕೆಶಿ ಪ್ರತಿಕ್ರಿಯೆ
ಬೆಂಗಳೂರು: ‘ನೈಸ್ ಯೋಜನೆಗೆ ಸಂಬಂಧಿಸಿದಂತೆ ಕಾನೂನು ಏನು ಹೇಳುತ್ತದೆಯೋ ಹಾಗೆ ನಾವು ನಡೆದುಕೊಳ್ಳುತ್ತೇವೆ’ ಎಂದು ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ನೈಸ್ ಯೋಜನೆಗೆ ಸಂಬಂಧಿಸಿದಂತೆ ಬರೆದ ಪತ್ರದ ಬಗ್ಗೆ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರು ಪತ್ರ ಬರೆದಿರುವುದು ನಿಜ. ಪತ್ರ ಇನ್ನು ಓದಿಲ್ಲ. ಓದಿ, ವಿಚಾರ ತಿಳಿದು ಕಾನೂನಿನ ಚೌಕಟ್ಟಿನಲ್ಲಿ ಮಾಡಬಹುದಾದ ಕೆಲಸಗಳ ಬಗ್ಗೆ …
Read More »ಕೊಲೆ ಆರೋಪಿ ಪವಿತ್ರಾಗೌಡ ಜೈಲಲ್ಲಿ ಬೇರೆ ಸೆಲ್‌ಗೆ ಶಿಫ್ಟ್
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಆರೋಪಿ ಪವಿತ್ರಾಗೌಡ ರನ್ನ ಬ್ಯಾರಕ್ ಶಿಫ್ಟ್ ಮಾಡಲಾಗಿದೆ. ಇಬ್ಬರ ಬ್ಯಾರಕ್‌ನಲ್ಲಿದ್ದ ಆರೋಪಿಯನ್ನ 16 ಕೈದಿಗಳಿರುವ ಬ್ಯಾರಕ್‌ಗೆ ಶಿಫ್ಟ್ ಮಾಡಲಾಗಿದೆ. ಮೂಲಕ ಪವಿತ್ರಗೌಡಗೆ ಪರಪ್ಪನ ಅಗ್ರಹಾರ ಜೈಲು ಅಧಿಕಾರಿಗಳು ಶಾಕ್ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಕೋರ್ಟ್‌ನಲ್ಲಿದೆ. ಟ್ರಯಲ್ ನಡೆಯುವಾಗ ಎಲ್ಲಾ ಆರೋಪಿಗಳು ವಿಸಿ ಮೂಲಕ ನ್ಯಾಯಾಧೀಶರ ಮುಂದೆ ಹಾಜರಾಗಬೇಕು. ಕಳೆದ ಮೂರು ದಿನಗಳ ಹಿಂದೆ ಎಲ್ಲಾ ಆರೋಪಿಗಳು ಹಾಜರಾದ ಬಳಿಕ …
Read More »ಐದಕ್ಕೆ 15,000 ಲಾಭ, ಖುಷಿಯಲ್ಲಿ 75 ಲಕ್ಷ ಹೂಡಿಕೆ ಮಾಡಿ ಕೈಸುಟ್ಟುಕೊಂಡ ಯುವಕ!
ದಾವಣಗೆರೆ: ಸೈಬರ್ ವಂಚಕರು ಹಾಕಿದ ಗಾಳಕ್ಕೆ ಜಗಳೂರ ತಾಲೂಕಿನ ಗೌರಿಪುರ ಗ್ರಾಮದ ಯುವಕನೊಬ್ಬ 75 ಲಕ್ಷ ರೂ. ಹಣ ಕಳೆದುಕೊಂಡಿದ್ದಾನೆ. ಸೈಬರ್ ವಂಚಕರು ಯವುವಕನ ಬಳಿ ಹಣ ಹೂಡಿಕೆ ಮಾಡಿದರೆ ಅಧಿಕ ಬಡ್ಡಿ ನೀಡುವುದಾಗಿ ನಂಬಿಸಿದ್ದಾರೆ. ಅದರಂತೆ 5,000 ರೂ. ಹಣ ಹೂಡಿಕೆ ಮಾಡಿಸಿಕೊಂಡಿದ್ದಾರೆ. ಬಳಿಕ 15,000 ರೂ. ಲಾಭ ನೀಡಿದ್ದಾರೆ. ಇದರಿಂದ ಖುಷಿಯಾದ ಯುವಕ 75 ಲಕ್ಷ ರೂ. ಹಣ ಹೂಡಿಕೆ ಮಾಡಿದ್ದಾನೆ. ಆದರೆ ಯಾವುದೇ ಲಾಭ ಬಂದಿಲ್ಲ. …
Read More »ಲಾಲ್‌ಬಾಗ್ ಉಳಿಸಿ – ಬಂಡೆ ತಬ್ಬಿಕೊಂಡು ವಾಕರ್ಸ್ ಪ್ರತಿಭಟನೆ
ಬೆಂಗಳೂರು: ಸುರಂಗ ರಸ್ತೆ ಯೋಜನೆ ವಿರುದ್ಧ ವಾಕರ್ಸ್ ಅಸೋಷಿಯೇಷನ್ ವಿಭಿನ್ನವಾಗಿ ಪ್ರತಿಭಟನೆ ನಡೆಸಿದೆ. ಲಾಲ್‌ಬಾಗ್‌ನಲ್ಲಿರುವ ಬಂಡೆಯನ್ನು ತಬ್ಬಿಕೊಂಡು ಲಾಲ್‌ಬಾಗ್ ಉಳಿಸಿ ಎಂದು ವಾಕಾರ್ಸ್ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ʻಬಂಡೆಯನ್ನು ತಬ್ಬಿಕೊಳ್ಳಿʼ ಹೆಸರಿನಲ್ಲಿ ಪ್ರತಿಭಟನೆ ನಡೆದಿದೆ. ಸುರಂಗ ರಸ್ತೆ ಯೋಜನೆಯಿಂದ ಲಾಲ್‌ಬಾಗ್‌ಗೆ ಸಮಸ್ಯೆಯಾಗಲಿದೆ. ಯಾವುದೇ ಕಾರಣಕ್ಕೂ ಲಾಲ್‌ಬಾಗ್‌ಗೆ ಧಕ್ಕೆ ಆಗಬಾರದು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಅನುಮತಿ ಇಲ್ಲದೇ ಪ್ರತಿಭಟನೆ ಮಾಡೋ ಹಾಗಿಲ್ಲ ಎಂದು ಪೊಲೀಸರು ಪ್ರತಿಭಟನಾಕಾರರಿಗೆ ಮಾಹಿತಿ ನೀಡಿ ಕಳುಹಿಸಿದ್ದಾರೆ. …
Read More »4ನೇ ಮಹಡಿಯಿಂದ ಬಿದ್ದ ಮಗು – ತಂದೆ-ತಾಯಿ ನಿರ್ಲಕ್ಷ್ಯ; ಪುಟ್ಟ ಕಂದ ಜೀವನ್ಮರಣ ಹೋರಾಟ
ಬೆಂಗಳೂರು: ತಂದೆ-ತಾಯಿ ಮನೆಯ ಮುಂದೆ ಆಟವಾಡಲು ಬಿಟ್ಟಿದ್ದ ಪುಟ್ಟ ಕಂದನೊಬ್ಬ 4ನೇ ಮಹಡಿಯಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಮಡಿವಾಳ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕ ಆಡುಗೋಡಿಯಲ್ಲಿ ನಡೆದಿದೆ. ಆಗಸ್ಟ್ 15ರಂದು ಬೆಳಗ್ಗೆ 10.50ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಮನೆಯ ಮುಂದೆ ಆಟವಾಡುತ್ತಿದ್ದ ಮಗು ಗ್ರಿಲ್ ಮೇಲೆ ಹತ್ತಿದ್ದು, ಆಯತಪ್ಪಿ 4ನೇ ಮಹಡಿಯಿಂದ ಕೆಳಗೆ ಬಿದ್ದಿದೆ. ಕೆಳಗೆ ಬಿದ್ದ ಬಳಿಕ ಮಗು ಬೌನ್ಸ್ ಆಗಿ ಮತ್ತೆ …
Read More »ಇಬ್ಬರಿಗೂ ಅತಿಯಾದ ಕೋಪ – ಟೆಕ್ಕಿ ದಂಪತಿ ದುರಂತ ಅಂತ್ಯಕ್ಕೆ ಕಾರಣ ರಿವೀಲ್
ಬೆಂಗಳೂರು: ಕೋಪ ಸೆರಗಲ್ಲಿ ಬೆಂಕಿ ಕಟ್ಟಿಕೊಂಡ ಹಾಗೆ ಎಂಬ ಮಾತು ಅದೆಷ್ಟು ಸತ್ಯ ಅಲ್ವಾ? ಈ ಮಾತಿಗೆ ಪೂರಕವಾಗಿದೆ ಬೆಂಗಳೂರಿನ ಈ ಟೆಕ್ಕಿ ದಂಪತಿಯ ದುರಂತ ಅಂತ್ಯ ಪ್ರಕರಣ. ಇತ್ತೀಚೆಗೆ ರಾಜಗೋಪಾಲ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿದ್ದರ ಹಿಂದಿನ ಕಾರಣ ರಿವೀಲ್ ಆಗಿದೆ. ಇಬ್ಬರಿಗೂ ಅತಿಯಾದ ಕೋಪವೇ ಈ ದುರಂತಕ್ಕೆ ಕಾರಣ ಎಂಬುದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ಟೆಕ್ಕಿ ಸುಮಂತ್ ಜೈನ್ …
Read More »
Laxmi News 24×7