ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡಿದ್ದು, ನೌಕರರಿಗೆ ಏಳನೇ ವೇತನ ಆಯೋಗದ ಶಿಫಾರಸುಗಳ ಆಗಸ್ಟ್‌ನಲ್ಲಿ ಜಾರಿಗೆ ಬರುವುದು ಖಚಿತವಾಗಿದೆ. ಏಳನೇ ವೇತನ ಆಯೋಗದ ಶಿಫಾರಸುಗಳ ಹಣಕಾಸು ಹೊಂದಾಣಿಕೆ ಕುರಿತಂತೆ ಪರಿಶೀಲನೆ ನಡೆಸಿ ಮಾಹಿತಿ ಕೊಡುವಂತೆ ಸಿಎಂ ಸಿದ್ದರಾಮಯ್ಯ ನೀಡಿದ್ದ ಸೂಚನೆಗೆ ಆರ್ಥಿಕ ಇಲಾಖೆಗೆ ಒಪ್ಪಿಗೆ ನೀಡಿದ್ದು, ಆಗಸ್ಟ್ ನಲ್ಲಿ ಏಳನೇ ವೇತನ ಆಯೋಗ ಜಾರಿಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಏಳನೇ ವೇತನ ಆಯೋಗ ಶೇ.27.5 …
Read More »ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; ತಪ್ಪಿದ ಭಾರಿ ಅನಾಹುತ
ವಿಜಯಪುರ: ಕಳೆದ ವರ್ಷ ಬಾಯ್ಲರ್ ಸ್ಪೋಟಗೊಂಡು ಕಾರ್ಮಿಕನ ಜೀವ ಪಡೆದ ದುರಂತ ಘಟನೆ ಮಾಸುವ ಮುನ್ನವೇ ಜಿಲ್ಲೆಯ ಕೃಷ್ಣಾನಗರದ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ಬಾಯ್ಲರ್ ಸ್ಫೋಟಗೊಂಡಿದೆ. ಸುದೈವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ. ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಕೃಷ್ಣಾನಗರದಲ್ಲಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಭಾನುವಾರ ನಸುಕಿನಲ್ಲಿ ಬಾಯ್ಲರ್ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲವೇ ಸಮಯಕ್ಕೆ ಮುನ್ನ ಕರ್ತವ್ಯದಲ್ಲಿದ್ದ ಸುಮಾರು 15 ಕಾರ್ಮಿಕರು ಚಹಾ ಕುಡಿಯಲೆಂದು ಹೊರ …
Read More »ರೈತರೇ ಗಮನಿಸಿ : ಈ ತಿಂಗಳೊಳಗೆ ತಪ್ಪದೇ ʻRTC-ಆಧಾರ್‌ಕಾರ್ಡ್ʼ ಲಿಂಕ್ ಮಾಡಿ
ಮೈಸೂರು : ಅಕ್ರಮ ಜಮೀನು ಮಾರಾಟಕ್ಕೆ ರಾಜ್ಯ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದ್ದು, ಆರ್ ಟಿಸಿಗಳನ್ನು ಆಧಾರ್ ಗೆ ಲಿಂಕ್ ಮಾಡುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಾದ್ಯಂತ ಸುಮಾರು 4 ಕೋಟಿ ಆರ್‌ಟಿಸಿ ಮಾಲೀಕರಿದ್ದಾರೆ. ಈ ಪೈಕಿ 1.92 ಕೋಟಿ ಆರ್‌ಟಿಸಿದಾರರನ್ನು ಸಂಪರ್ಕಿಸಿ ಆ ಪೈಕಿ 1.20 ಕೋಟಿ ಆರ್‌ಟಿಸಿಗಳ್ನು ಒಟಿಪಿ (One Time Password) ಮೂಲಕ ಇಕೆವೈಸಿ ಮಾಡಲಾಗಿದೆ. ಇನ್ನೂ ಮೈಸೂರು ವಿಭಾಗದಲ್ಲಿ …
Read More »ಬೆಸ್ಕಾಂ ಬೊಕ್ಕಸ ತುಂಬಿಸಿದ ಗೃಹ ಜ್ಯೋತಿ ಯೋಜನೆ; 10 ವರ್ಷಗಳಲ್ಲಿ ಆದಾಯ 3 ಪಟ್ಟು ಏರಿಕೆ
ಬೆಂಗಳೂರು, ಜುಲೈ 6: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಬೆಸ್ಕಾಂ ನಗರಕ್ಕೆ ಮಾತ್ರವಲ್ಲದೆ ದಕ್ಷಿಣದ ಸುಮಾರು 8 ಜಿಲ್ಲೆಗಳಿಗೆ ವಿದ್ಯುತ್ ಪೂರೈಕೆ ಸೇವೆ ನೀಡುತ್ತಿದೆ. ವಿದ್ಯುತ್ ಸಂಗ್ರಹಣೆ ವ್ಯತ್ಯಯ ಆದಾಗಲೂ ಗ್ರಾಹಕರ ಬೇಡಿಕೆಗೆ ಅನುಗುಣವಾಗಿ ಸೇವೆ ನೀಡಲು ಶ್ರಮಿಸಿದೆ. ಕಳೆದ 10 ವರ್ಷದ ಬೆಸ್ಕಾಂ ಆದಾಯದ ಅಂಕಿ ಅಂಶ ಬಿಡುಗಡೆ ಆಗಿದ್ದು, ಆದಾಯ ಗಮನಾರ್ಹ ರೀತಿಯಲ್ಲಿ ಹೆಚ್ಚಾಗಿರುವುದು ದೃಢವಾಗಿದೆ. ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಗೃಹ ಜ್ಯೋತಿ ಯೋಜನೆಯಿಂದ ಎಸ್ಕಾಂಗಳು ನಷ್ಟಕ್ಕೆ …
Read More »ಮೈದುಂಬಿ ಹರಿಯುತ್ತಿರುವ ಶರಾವತಿ,
ಶಿವಮೊಗ್ಗ: ಜೋಗದ ಸಿರಿ ಬೆಳಕಿನಲ್ಲಿ ತುಂಗೆಯ ತೆನೆ ಬಳುಕಿನಲ್ಲಿ, ಸಹ್ಯಾದ್ರಿಯ ಲೋಹದದಿರ ಉತ್ತುಂಗದ ನಿಲುಕಿನಲ್ಲಿ, ನಿತ್ಯ ಹರಿದ್ವರ್ಣವನದ ತೇಗ ಗಂಧ ತರುಗಳಲ್ಲಿ ನಿತ್ಯೋತ್ಸವ, ತಾಯಿ, ನಿತ್ಯೋತ್ಸವ ನಿನಗೆ….. ಜೋಗ ಜಲಪಾತವನ್ನು ನೋಡುವಾಗಲೆಲ್ಲ ಕನ್ನಡದ ಖ್ಯಾತ ಕವಿ ನಿಸಾರ್ ಅಹ್ಮದ್ ಅವರ ನಿತ್ಯೋತ್ಸವ ಕವನದ ಸಾಲುಗಳು ಕನ್ನಡಿಗರಿಗೆ ನೆನಪಾಗುತ್ತವೆ. ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿರುವ ಜೊಗ ಜಲಪಾತ ಈಗ ರುದ್ರ ರಮಣೀಯವಾಗಿ ಪ್ರವಾಸಿಗರಿಗೆ ಕಾಣಿಸುತ್ತಿದೆ. ನಿಸರ್ಗದ ಈ ದೃಶ್ಯ ವೈಭವ ನೋಡಲು ಎರಡು ಕಣ್ಣು …
Read More »ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ
ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ …
Read More »ಪಡಿತರ ಚೀಟಿದಾರ’ರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ: ಮತ್ತೆ ‘ಆಧಾರ್ ಸಂಖ್ಯೆ’ ಜೋಡಣೆಗೆ ದಿನಾಂಕ ವಿಸ್ತರಣೆ |
ಬೆಂಗಳೂರು: ರೇಷನ್ ಕಾರ್ಡ್ ಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದನ್ನು ರಾಜ್ಯ ಸರ್ಕಾರ ಕಡ್ಡಾಯಗೊಳಿಸಿದೆ. ಆದ್ರೇ ಇನ್ನೂ ಕೆಲವರು ರೇಷನ್ ಕಾರ್ಡ್ ಗೆ ಆಧಾರ್ ಲಿಂಕ್ ಮಾಡಿಲ್ಲ. ಈ ಹಿನ್ನಲೆಯಲ್ಲಿ ಪಡಿತರ ಚೀಟಿದಾರರಿಗೆ ಸಿಹಿಸುದ್ದಿ ಎನ್ನುವಂತೆ ರಾಜ್ಯ ಸರ್ಕಾರವು ಮತ್ತೆ ಡೆಡ್ ಲೈನ್ ವಿಸ್ತರಣೆ ಮಾಡಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, …
Read More »ಟೆಟ್ರಾಪ್ಯಾಕ್ನಲ್ಲಿ ಅಗ್ಗದ ಬೆಲೆಗೆ ಮದ್ಯ ಮಾರಾಟ.. ತಮಿಳುನಾಡು ಸರ್ಕಾರ ಚಿಂತನೆ!
ಚೆನ್ನೈ: ನಕಲಿ ತಡೆ, ಬೆಲೆ, ಪರಿಸರ ಮತ್ತು ಶುಚಿತ್ವದ ದೃಷ್ಟಿಯಿಂದ ಟೆಟ್ರಾ ಪ್ಯಾಕ್ ಅಥವಾ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಮದ್ಯ ಮಾರಾಟ ಮಾಡುವ ಬಗ್ಗೆ ತಮಿಳುನಾಡು ಸರ್ಕಾರ ಚಿಂತನೆ ನಡೆಸಿದೆ. ಕಲ್ಲಕುರಿಚಿಯಲ್ಲಿ ನಕಲಿ ಮದ್ಯದಿಂದ ನಡೆದ ಅನಾಹುತದ ಬಳಿಕ ಎಚ್ಚೆತ್ತುಕೊಂಡಿರುವ ಸ್ಟಾಲಿನ್ ಸರ್ಕಾರ, ಬಡವರ ಕೈಗೆಟಕುವಂತೆ 50ರೂ.ನಿಂದ 80ರೂ.ಒಳಗೆ 100ಎಂಎಲ್ನ ಕ್ವಾರ್ಟರ್ ಪ್ಲಾಸ್ಟಿಕ್ ಬಾಟಲಿಗಳು ಅಥವಾ ಟೆಟ್ರಾಪ್ಯಾಕ್ಗಳಲ್ಲಿ ಮದ್ಯ ಮಾರಾಟ ಮಾಡಲು ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ. ಕಡಿಮೆ ಬೆಲೆಗೆ ನಕಲಿ ಮಾಡದಂತೆ …
Read More »ಮಲೆನಾಡಲ್ಲಿ ಮಳೆಯ ಅಬ್ಬರ; ಕೈ ಬೀಸಿ ಕರೆಯುತ್ತಿದೆ ಜೋಗ ಜಲಪಾತ
ಶಿವಮೊಗ್ಗ, ಜುಲೈ 06: ಶಿವಮೊಗ್ಗ ಜಿಲ್ಲೆಯಲ್ಲಿ ನೈಋತ್ಯ ಮುಂಗಾರು ಮಳೆ ಅಬ್ಬರಿಸುತ್ತಿದೆ. ಹಳ್ಳಕೊಳ್ಳಗಳು ಭರ್ತಿಯಾಗಿದ್ದು, ತುಂಗಾ, ಶರಾವತಿ ನದಿಗಳ ನೀರಿನ ಮಟ್ಟದಲ್ಲಿ ಏರಿಕೆ ಕಂಡುಬಂದಿದೆ. ಮಳೆಯಲ್ಲಿ ಮಲೆನಾಡಿನ ಅಂದವನ್ನು ಸವಿಯಲು ನೂರಾರು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಎರಡು ವಾರಗಳಿಂದ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಇದರಿಂದಾಗಿ ವಿಶ್ವವಿಖ್ಯಾತ ಜೋಗ ಜಲಪಾತ ಜೀವಕಳೆ ಪಡೆದುಕೊಂಡಿದೆ. ಧುಮ್ಮಿಕ್ಕುತ್ತಿರುವ ಜೋಗ ಜಲಪಾತದ ಸೌಂದರ್ಯ ಇಮ್ಮಡಿಯಾಗಿದೆ. ಜೋಗ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಮಳೆಗಾಲದಲ್ಲಿ ಶಿವಮೊಗ್ಗಕ್ಕೆ ಭೇಟಿ …
Read More »ಎರಡು ಕಾರುಗಳ ಮಧ್ಯ ಭೀಕರ ಅಪಘಾತ : ಸ್ಥಳದಲ್ಲೆ 3 ಸಾವು ಮೂವರು ಗಂಭೀರ
ಶಿವಮೊಗ್ಗ : ಇಂದು ಶಿವಮೊಗ್ಗದ ಲಯನ್ ಸಫಾರಿ ಬಳಿ ಭೀಕರ ಅಪಘಾತ ಸಂಭವಿಸಿದ್ದು, ಎರಡು ಕಾರುಗಳ ನಡುವೆ ಭೀಕರ ಅಪಘಾತವಾಗಿದ್ದು, ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೆ ಮೂವರು ಸಾವನ್ನಪ್ಪಿದ್ದರೆ.ಮೂವರ ಸ್ಥಿತಿ ಗಂಭೀರವಾಗಿದೆ. ಅಪಘಾತದಲ್ಲಿ ಮೂವರು ದಾರುಣವಾಗಿ ಸಾವನಪ್ಪಿದ್ದು ಮೂವರ ಸ್ಥಿತಿ ಗಂಭೀರವಾಗಿದೆ. ಗಯಾಳುಗಳನ್ನು ಶಿವಮೊಗ್ಗದ ಮೆಗನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಶಿವಮೊಗ್ಗದ ಸಂಚಾರಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ
Read More »
Laxmi News 24×7