ಬೆಳಗಾವಿ: ಬಿರು ಬೇಸಿಗೆಯಲ್ಲೂ ಸುಪ್ರಸಿದ್ಧ ಗೋಕಾಕ್ ಫಾಲ್ಸ್‌ನಲ್ಲಿ ಜಲವೈಭವ ಸೃಷ್ಟಿಯಾಗಿದೆ. ಮಳೆಗಾಲದಲ್ಲಿ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುವ ಫಾಲ್ಸ್ ಈಗ ಬೇಸಿಗೆಯಲ್ಲೂ ಧುಮ್ಮಿಕ್ಕುತ್ತಿದೆ. ಘಟಪ್ರಭಾ ಜಲಾಶಯದಿಂದ ನೀರು ಬಿಡುಗಡೆ ಮಾಡಿದ ಪರಿಣಾಮ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದೆ.
Read More »ಹೋರ್ಡಿಂಗ್ ಕುಸಿದು ಬಿದ್ದ ಪ್ರಕರಣ; ಮೃತರ ಸಂಖ್ಯೆ 14ಕ್ಕೆ ಏರಿಕೆ, 74 ಮಂದಿಗೆ ಗಾಯ
ಮುಂಬಯಿ: ಬಿರುಗಾಳಿ ಸಹಿತ ಮಳೆಯ ಅವಾಂತರಕ್ಕೆ ಸೋಮವಾರ ಮುಂಬೈನ ಘಾಟ್ಕೋಪರ್ ಪ್ರದೇಶದಲ್ಲಿ ಪೆಟ್ರೋಲ್ ಬಂಕ್ ಮೇಲೆ ದೈತ್ಯ ಜಾಹೀರಾತು ಫಲಕ ಬಿದ್ದ ಪ್ರಕರಣದಲ್ಲಿ ಮೃತರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಅಲ್ಲದೆ 74 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ನಗರದಲ್ಲಿ ಸೋಮವಾರ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು ಹಲವೆಡೆ ಮರಗಳು ಧರೆಗುರುಳಿವೆ, ಅಲ್ಲದೆ ಜನಜೀವನ ಅಸ್ತವ್ಯಸ್ತಗೊಂಡಿದೆ, ಇದೆ ವೇಳೆ ಪಂತನಗರದ ಈಸ್ಟರ್ನ್ ಎಕ್ಸ್‌ಪ್ರೆಸ್ ಹೆದ್ದಾರಿಯ ಬಳಿ ಇರುವ ಪೆಟ್ರೋಲ್ ಬಂಕ್ …
Read More »ಸಲ್ಮಾನ್ ಖಾನ್ ಮನೆ ಮೇಲೆ ಗುಂಡಿನ ದಾಳಿ ಪ್ರಕರಣ: ಹರ್ಯಾಣದಲ್ಲಿ ಆರನೇ ಆರೋಪಿ ಬಂಧನ
ಮುಂಬಯಿ: ಕಳೆದ ಏಪ್ರಿಲ್‌ನಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆಯ ಬಳಿ ನಡೆದ ಗುಂಡಿನ ದಾಳಿ ಪ್ರಕರಣ ಮುಂಬೈ ಹಾಗೂ ಬಾಲಿವುಡ್ ಅಭಿಮಾನಿಗಳನ್ನು ಬೆಚ್ಚಿ ಬೀಳಿಸಿತ್ತು. ಏಪ್ರಿಲ್ 14 ರಂದು ನಡೆದ ಈ ಘಟನೆಯಿಂದ ಮುಂಬೈ ಪೊಲೀಸ್ ಕ್ರೈಂ ಬ್ರಾಂಚ್ ಈ ಪ್ರಕರಣವನ್ನು ನಿರಂತರವಾಗಿ ತನಿಖೆ ನಡೆಸುತ್ತಿದೆ, ಇದೀಗ ಈ ಪ್ರಕರಣದಲ್ಲಿ ಪೊಲೀಸರಿಗೆ ಮತ್ತೊಂದು ಯಶಸ್ಸು ಸಿಕ್ಕಿದೆ. ಮುಂಬೈ ಪೊಲೀಸರು ಸಲ್ಮಾನ್ ಖಾನ್ ಮನೆಯ ಹೊರಗೆ ಗುಂಡು ಹಾರಿಸಿದ ಪ್ರಕರಣದ …
Read More »ಇಂದು ಮಧ್ಯಾಹ್ನದ ವೇಳೆಗೆ ರೇವಣ್ಣ ರಿಲೀಸ್; ಜೈಲಿನ ಬಳಿ ಪೊಲೀಸ್ ಬಿಗಿ ಭದ್ರತೆ
ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ, ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ (Former Minister HD Revanna) ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು (Bail) ನೀಡಿದೆ. ಇಂದು ಪರಪ್ಪನ ಅಗ್ರಹಾರ ಜೈಲಿನಿಂದ (Parappana Agrahara Prison) ರೇವಣ್ಣ ರಿಲೀಸ್ ಆಗಲಿದ್ದಾರೆ.
Read More »ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ಕಣಬರ್ಗಿ ರಸ್ತೆ ಪೂರ್ಣ ಆಗೋದು ಯಾವಾಗ?
ಬೆಳಗಾವಿ: ನಗರದ ಹೊರ ವಲಯದ ಕಣಬರ್ಗಿಯಲ್ಲಿ ಒಂದೂವರೆ ವರ್ಷದಿಂದ ನಿರ್ಮಾಣವಾಗುತ್ತಿರುವ ರಸ್ತೆ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಕಾಮಗಾರಿ ವಿಳಂಬಕ್ಕೆ ಸ್ಥಳೀಯ ನಿವಾಸಿಗಳು ಸಂಬಂಧಿಸಿದ ಅಧಿಕಾರಿಗಳು ಹಾಗೂ ಗುತ್ತಿಗೆದಾರರ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ. ಕಣಬರ್ಗಿ ಬಸ್ ನಿಲ್ದಾಣದಿಂದ ಶ್ರೀ ಸಿದ್ದೇಶ್ವರ ದೇವಸ್ಥಾನದವರೆಗೆ ರಸ್ತೆ ನಿರ್ಮಾಣ ಕಾಮಗಾರಿ ಆರಂಭಗೊಂಡಿದೆ. ಆದರೆ ರಸ್ತೆ ನಿರ್ಮಾಣ ಕೊನೆಯ ಹಂತಕ್ಕೆ ತಲುಪಿದ್ದರೂ ಮುಗಿಸಲು ಗುತ್ತಿಗೆದಾರರು ಹಿಂದೇಟು ಹಾಕುತ್ತಿದ್ದಾರೆ. ಕಾಮಗಾರಿ ಅರ್ಧಕ್ಕೆ ನಿಂತಿದ್ದರಿಂದ ಸಾರ್ವಜನಿಕರು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಕಣಬರ್ಗಿಯ …
Read More »ಅಗ್ನಿ ದೇವರು ಎನ್ನುವವರು ಅದರ ಜತೆ ಮಲಗುತ್ತಿರಾ ಎಂದಿದ್ದ ಬಸವಣ್ಣ : ನಿಜಗುಣಾನಂದ ಶ್ರೀ
ಧಾರವಾಡ: ಅಗ್ನಿಯನ್ನು ದೇವರ ಸ್ವರೂಪವಾಗಿ ಕಾಣುವವರೇ ಅದರ ಮೇಲೆ ಬರಿಗಾಲಿನಲ್ಲಿ ಓಡಾಡುತ್ತಾ ತುಳಿಯುತ್ತಾರೆ. ಅದರ ಬದಲು ಸ್ವಲ್ಪ ಹೊತ್ತು ಅದರ ಮೇಲೆ ಮಲಗತ್ತೀರಾ ಎಂದು ತೋಂಟದ ಶ್ರೀ ನಿಜಗುಣಾನಂದ ಸ್ವಾಮೀಜಿ ಪ್ರಶ್ನಿಸಿದ್ದಾರೆ. ಕವಿವಿಯಲ್ಲಿ ನಡೆದ ‘ಬಸವಣ್ಣ-ಸಾಂಸ್ಕೃತಿಕ ನಾಯಕ’ ಕುರಿತಾದ ವಿಚಾರ ಸಂಕಿರಣ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, ಅಗ್ನಿಯನ್ನು ದೇವರ ಮಾಡಿ, ಅದರ ಮೇಲೆಯೇ ಓಡುತ್ತಾರೆ. ಇದಕ್ಕೇನು ಅನ್ನಬೇಕು. ಅದರ ಬದಲು ಸ್ವಲ್ಪ ಹೊತ್ತು ಮಲಗಿಬಿಟ್ಟರೆ ಅಗ್ನಿಯ ನಿಜಸ್ವರೂಪ ಕೂಡ ತಿಳಿಯುತ್ತದೆ ಎಂದರು. …
Read More »ಗೋಕರ್ಣದಲ್ಲಿ ಪೂಜೆಗೆ ತಡೆ: 11 ಜನರ ವಿರುದ್ಧ ದೂರು ದಾಖಲು
ಗೋಕರ್ಣ: ಶ್ರೀ ಮಹಾಬಲೇಶ್ವರ ದೇವಸ್ಥಾನದಲ್ಲಿ ಅನಾದಿ ಕಾಲದಿಂದ ಪೂಜೆ ಮಾಡುತ್ತ ಬಂದಿರುವ ಕುಟುಂಬವೊಂದಕ್ಕೆ ಜೀವ ಬೆದರಿಕೆಯೊಡ್ಡಿರುವ ಬಗ್ಗೆ ಪೊಲೀಸ್ ದೂರು ದಾಖಲಿಸಲಾಗಿದೆ. ಮೇ 9ರಂದು ಬೆಳಗ್ಗೆ ರವಿ ಮಹಾದೇವ ಅಡಿ ಹಾಗೂ ಕುಟುಂಬಸ್ಥರು ದೇವಸ್ಥಾನಕ್ಕೆ ಬಂದಾಗ 11 ಮಂದಿ ಅಡ್ಡಗಟ್ಟಿ ನಿಂದಿಸಿ ದರು. ನಿಮಗೆ ಪೂಜೆಯ ಯಾವುದೇ ಹಕ್ಕಿಲ್ಲ ಎಂದು ಹೇಳಿ ಗರ್ಭಗುಡಿಯಿಂದ ಹೊರಹಾಕಿ, ಮತ್ತೆ ದೇವಸ್ಥಾನದ ಕಡೆಗೆ ಬಾರದಂತೆ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದೆ. ಬಾಲಕೃಷ್ಣ ಗಣಪತಿ ಜಂಬೆ, …
Read More »ರಾಜ್ಯದ 5 ಜಿಲ್ಲೆಗಳಲ್ಲಿ ಕೃತ್ತಿಕಾ ಮಳೆ ಅಬ್ಬರ
ಹುಬ್ಬಳ್ಳಿ: ಮಲೆನಾಡು ಹಾಗೂ ಉತ್ತರ ಕರ್ನಾಟಕದ 5 ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಮುಂದುವರಿದಿದ್ದು, ಸಿಡಿಲಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. 7 ಕುರಿಗಳು ಮೃತಪಟ್ಟಿವೆ. ರಭಸದ ಗಾಳಿಗೆ ಬಾಳೆ, ಮೆಕ್ಕೆಜೋಳ ಸಹಿತ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ವಿಭೂತಿಹಳ್ಳಿ ಗ್ರಾಮದ ಕುರಿಗಾಹಿ ಗೋವಿಂದಪ್ಪ (22) ಸಿಡಿಲು ಬಡಿದು ಮೃತಪಟ್ಟಿದ್ದಾರೆ. 7 ಕುರಿಗಳು ಕೂಡ ಅಸುನೀಗಿವೆ. ರಾಯಚೂರು, ಮಸ್ಕಿಯಲ್ಲಿ ಭಾರೀ ಮಳೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನಜೀವನ …
Read More »ಶೀಘ್ರ ರಾಜ್ಯ ಬಿಜೆಪಿ ಕೋರ್ ಕಮಿಟಿ ಪುನರ್‌ರಚನೆ
ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯನ್ನು ಸದ್ಯದಲ್ಲೇ ಪರಿಷ್ಕರಿಸುವ ಬಗ್ಗೆ ವರಿಷ್ಠರು ಚಿಂತನೆ ನಡೆಸಿದ್ದು, ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜ್ಯ ಘಟಕಕ್ಕೆ ಮತ್ತೊಂದು ಸುತ್ತಿನ ಕಾಯಕಲ್ಪ ನಿಶ್ಚಿತವಾಗಿದೆ. ರಾಜ್ಯ ಬಿಜೆಪಿಗೆ ಹೊಸ ರಾಜ್ಯಾಧ್ಯಕ್ಷರು ಹಾಗೂ ಪದಾಧಿಕಾರಿಗಳ ನೇಮಕದ ಬೆನ್ನಲ್ಲೇ ಕೋರ್ ಕಮಿಟಿ ಪರಿಷ್ಕರಣೆ ಸಾಧ್ಯತೆ ಬಗ್ಗೆ ಚರ್ಚೆಗಳು ನಡೆದಿದ್ದವು. ಆದರೆ ಒಮ್ಮಿಂದೊಮ್ಮೆಲೇ ಹಿರಿಯರನ್ನು ನೇಪಥ್ಯಕ್ಕೆ ಸರಿಸಿದರೆ ಪ್ರತಿಕೂಲ ಪರಿಣಾಮ ಉಂಟಾಗಬಹು ದೆಂಬ ಕಾರಣಕ್ಕೆ ಈ ವಿಚಾರಕ್ಕೆ ಚಾಲನೆ ಕೊಟ್ಟಿರಲಿಲ್ಲ. ಈಗ …
Read More »ಒಂದೂವರೆ ಲಕ್ಷ ಜನರ ಮೊಬೈಲ್‌ನಲ್ಲಿ ವೀಡಿಯೋ ಇದೆ: ಪ್ರೀತಂ
ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಇದೇ ಮೊದಲ ಬಾರಿಗೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಮಾತನಾಡಿದ್ದು, ಈ ಪ್ರಕರಣದಲ್ಲಿ ನಾನು ಅಂಫೈರ್ ಅಲ್ಲ, ಪ್ರತಿಕ್ರಿಯೆ ಕೊಡುವುದಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾ ಡಿದ ಅವರು, ಎಸ್‌ಐಟಿ ತನಿಖೆ ನಡೆಯುತ್ತಿರುವಾಗ ಅದರ ಬಗ್ಗೆ ಮಾತನಾಡುವುದು ಸಮಂಜಸ ಅಲ್ಲ. ತನಿಖೆ ಯಾವ ದಿಕ್ಕಿನಲ್ಲಿ ನಡೆಯುತ್ತಿದೆ ಎಂದು ಕಾದು ನೋಡೋಣ. ನಾನು ಯಾವುದರ …
Read More »