ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮತ್ತೆ ಮುಂಡೂಡಿದೆ. ರಾಜ್ಯಪಾಲರ ನಡೆ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಏಕಸದಸ್ಯಪೀಠ, ಉಭಯ ವಕೀಲರ ಸುದೀರ್ಘ ವಾದ-ಪ್ರತಿವಾದವನ್ನು ಆಲಿಸಿತು. ಸಿಎಂ ಸಿದ್ದರಾಮಯ್ಯ ಪರ ಹಿರಿಯ ವಕೀಲರಾದ ಅಭಿಷೇಕ್ ಮನುಸಿಂಘ್ವಿ ಹಾಗೂ ರವಿವರ್ಮ ಕುಮಾರ್ ವಾದ …
Read More »ಉಡುಪಿ ಶ್ರೀ ಕೃಷ್ಣ ಮಠಕ್ಕೆ ಸ್ಟಾರ್ ನಟರ ಭೇಟಿ
ಉಡುಪಿ: ಇಂದು ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡುವ ಸಲುವಾಗಿ ತಮ್ಮ ಕುಟುಂಬದೊಂದಿಗೆ ಆಗಮಿಸಿದ ತೆಲುಗು ಚಿತ್ರನಟ ಜೂ. ಎನ್ಟಿಆರ್ರನ್ನು ‘ಕಾಂತಾರ’ ಖ್ಯಾತಿಯ ನಟ ರಿಷಭ್ ಶೆಟ್ಟಿ ಸ್ವಾಗತಿಸಿದ್ದು, ಎನ್ಟಿಆರ್ ಅಮ್ಮನ ಕಾಲಿಗೆ ನಮಸ್ಕರಿಸಿ ಆರ್ಶಿವಾದ ಪಡೆದಿದ್ದಾರೆ. ಕೃಷ್ಣ, ಮುಖ್ಯ ಪ್ರಾಣ ದೇವರ ದರ್ಶನ ಕೈಗೊಂಡ ಜೂ. ಎನ್ಟಿಆರ್ ಕುಟುಂಬವನ್ನು ರಿಷಬ್ ಸ್ವಾಗತಿಸಿದ್ದಾರೆ. ಈ ವೇಳೆ ಕೆಜಿಎಫ್ ನಿರ್ದೇಶಕ ಪ್ರಶಾಂತ್ ನೀಲ್ ಕೂಡ ಉಪಸ್ಥಿತರಿದ್ದರು. ಕೃಷ್ಣ, ಮುಖ್ಯಪ್ರಾಣ, ಗರುಡ ದೇವರ …
Read More »ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ:CM&DCM
ಬೆಂಗಳೂರು, ಆಗಸ್ಟ್ 31: ರಾಜ್ಯಪಾಲರ ಕಚೇರಿ ಬಳಸಿಕೊಂಡು, ಬಹುಮತದಿಂದ ಆಯ್ಕೆಯಾದ ಕಾಂಗ್ರೆಸ್ ಸರ್ಕಾರವನ್ನು ಬೀಳಿಸಲು ಹುನ್ನಾರ ಮಾಡಲಾಗುತ್ತಿದೆ. ಕರ್ನಾಟಕ ತಾನು ಬೆಳೆದು ಅನೇಕ ರಾಜ್ಯಗಳ ಬೆಳವಣಿಗೆಗೂ ಸಹಾಯ ಮಾಡುತ್ತಿದೆ. ಇಂತಹ ಸರ್ಕಾರವನ್ನು ಅಸ್ಥಿರಗೊಳಿಸುವ ಪ್ರಯತ್ನ ರಾಜ್ಯಪಾಲರ ಕಚೇರಿಯಿಂದ ಆಗಬಾರದು ಎಂಬುದಷ್ಟೇ ನಮ್ಮ ಕಾಳಜಿ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದರು. ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ …
Read More »ರಾಜ್ಯ ಸರ್ಕಾರದಿಂದ ಬಾರದ ಅನುದಾನ: ತಿಂಗಳಿಗೆ ₹2.09 ಕೋಟಿ ನಷ್ಟ
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ನಡುವೆ ಓಡಾಡುವ ಪ್ರಯಾಣಿಕರಿಗಾಗಿ ರಾಜ್ಯದಲ್ಲಿ ಮೊದಲ ಬಾರಿ ಪರಿಚಯಿಸಲಾದ ತ್ವರಿತ ಬಸ್ ಸಾರಿಗೆ ವ್ಯವಸ್ಥೆಯು (ಬಿಆರ್‌ಟಿಎಸ್) ಪ್ರತಿ ತಿಂಗಳು ₹2.09 ಕೋಟಿ ನಷ್ಟ ಎದುರಿಸುತ್ತಿದೆ. 2018ರಲ್ಲಿ ಆರಂಭಿಸಲಾದ ಈ ಯೋಜನೆಯಡಿ ಅತಿ ಕಡಿಮೆ ಖರ್ಚಿನಲ್ಲಿ, ಹವಾನಿಯಂತ್ರಿತ ಬಸ್‌ಗಳಲ್ಲಿ ಸಾರ್ವಜನಿಕರು ಪ್ರಯಾಣಿಸಲು ಅವಕಾಶ ಕಲ್ಪಿಸಲಾಯಿತು. ಪ್ರತಿ ದಿನ ಅವಳಿ ನಗರದ ನಡುವೆ 82 ಸಾವಿರ ಮಂದಿ ಪ್ರಯಾಣಿಸುತ್ತಾರೆ. 22 ಕಿ.ಮೀ ಉದ್ದದ ಕಾರಿಡಾರ್‌ನಲ್ಲಿ ವಿಶೇಷ ವಿನ್ಯಾಸದ 32 ನಿಲ್ದಾಣಗಳಿದ್ದು, 100 …
Read More »ಅನಾರೋಗ್ಯದಿಂದ ಬಳಲುತ್ತಿರುವ ಹುಲಿಯನ್ನು ದತ್ತು ಪಡೆದ ನಟಿ ಸಂಯುಕ್ತ ಹೊರನಾಡು
ಬೆಂಗಳೂರು: ಸ್ಯಾಂಡಲ್ವುಡ್ ನಟಿ ಸಂಯುಕ್ತ ಹೊರನಾಡು ಅವರು ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಹುಲಿಯನ್ನು ದತ್ತು ಪಡೆದಿದ್ದಾರೆ. ಈ ಸುದ್ದಿಯನ್ನು ಸೋಶಿಯಲ್ ಮೀಡಿಯಾ ಮೂಲಕವಾಗಿ ಹಂಚಿಕೊಂಡಿದ್ದಾರೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿರುವ 28 ತಿಂಗಳ ಸಿಂಚನ ಎಂಬ ಹೆಣ್ಣು ಹುಲಿ ಮರಿಯನ್ನು ನಟಿ ಸಂಯುಕ್ತಾ ಹೊರನಾಡ್ ದತ್ತು ಪಡೆದಿದ್ದಾರೆ. ಈ ಹುಲಿ ನರದೌರ್ಬಲ್ಯ ಸಮಸ್ಯೆ ಎದುರಿಸುತ್ತಿರುವುದರಿಂದ ಕಾಡಿನಲ್ಲಿ ವಾಸಿಸಲು ಆಗದ ಹಿನ್ನೆಲೆಯಲ್ಲಿ ಬನ್ನೇರುಘಟ್ಟ ಜೈವಿಕ ಉದ್ಯಾನವನದ ಸಂರಕ್ಷಣಾ ಕೇಂದ್ರದಲ್ಲಿ ಆರೈಕೆ ಮಾಡಲಾಗುತ್ತಿದೆ. ಪ್ರಾಣ …
Read More »ರಾಜ್ಯದ ರೈತರಿಗೆ ಮತ್ತೊಂದು ಗುಡ್ ನ್ಯೂಸ್: ಉದ್ದು, ಸೋಯಾಬೀನ್ ಗೂ ಬೆಂಬಲ ಬೆಲೆ ಘೋಷಣೆ
ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಬೆಳೆಗಳಿಗೆ ಬೆಂಬಲ ಬೆಲೆ ಘೋಷಿಸಲಾಗಿದೆ. ಬೆಂಬಲ ಬೆಲೆ ಯೋಜನೆ ಅಡಿ ಉದ್ದು, ಸೋಯಾಬೀನ್ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜೊತೆಗೆ ಉದ್ದು ಮತ್ತು ಸೋಯಾಬೀನ್ ಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶನ ನೀಡಿದೆ. ರಾಜ್ಯದಲ್ಲಿ 2024 -25ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆ ಅಡಿ 19,760 ಮೆಟ್ರಿಕ್ …
Read More »ಮಮತಾ ಬ್ಯಾನರ್ಜಿ ಪತ್ರ ಸತ್ಯಕ್ಕೆ ದೂರ: ಕೇಂದ್ರ ಸಚಿವೆ ಅನ್ನಪೂರ್ಣ ದೇವಿ
ನವದೆಹಲಿ:ಕೋಲ್ಕತಾದ ಆರ್ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ತರಬೇತಿ ವೈದ್ಯೆಯ ಅತ್ಯಾಚಾರ ಮತ್ತು ಕೊಲೆಯ ನಂತರ ಅತ್ಯಾಚಾರ ಮತ್ತು ಕೊಲೆಯಂತಹ ಘೋರ ಅಪರಾಧಗಳಿಗೆ ಅನುಕರಣೀಯ ಶಿಕ್ಷೆ ವಿಧಿಸುವಂತೆ ಒತ್ತಾಯಿಸಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರಿಗೆ ಎರಡನೇ ಪತ್ರ ಬರೆದ ನಂತರ, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಅನ್ನಪೂರ್ಣ ದೇವಿ ಟಿಎಂಸಿ ಮುಖ್ಯಸ್ಥರಿಗೆ ತಿರುಗೇಟು ನೀಡಿದ್ದಾರೆ. ಮಹಿಳೆಯರ ವಿರುದ್ಧದ ಹಿಂಸಾಚಾರ …
Read More »ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ : ಇಂದು ಹೈಕೋರ್ಟ್ ನಲ್ಲಿ ‘ಸಿಎಂ ಸಿದ್ದರಾಮಯ್ಯ’ ಭವಿಷ್ಯ ನಿರ್ಧಾರ..!
ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದ ರಾಜ್ಯಪಾಲರ ನಡೆ ಪ್ರಶ್ನಿಸಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಇಂದು ನಡೆಸಲಿದ್ದು, ಸಿಎಂ ಸಿದ್ದರಾಮಯ್ಯ ಭವಿಷ್ಯ ನಿರ್ಧಾರವಾಗಲಿದೆ . ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ಆಗಸ್ಟ್ 29 ರಂದು ನಡೆದಿದ್ದು, ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಸುದೀರ್ಘ ವಾದ ಮಂಡನೆ ಮಾಡಿದರು. ಈ ವೇಳೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ …
Read More »ಪೋಷಕರೇ ಇತ್ತ ಗಮನಿಸಿ : ʻಅಂಚೆ ಇಲಾಖೆʼಯ ಈ ಯೋಜನೆಯಲ್ಲಿ ಹೂಡಿಕೆ ಮಾಡಿದ್ರೆ ಸಿಗಲಿದೆ 3 ಲಕ್ಷ ರೂ.!
ನವದೆಹಲಿ: ಇಂದಿನ ಬದಲಾಗುತ್ತಿರುವ ವಾತಾವರಣದಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳ ಭವಿಷ್ಯವನ್ನು ಆರ್ಥಿಕವಾಗಿ ಸುಭದ್ರಗೊಳಿಸಲು ಬಯಸುತ್ತಾರೆ. ಸರಿಯಾದ ಸಮಯದಲ್ಲಿ ಯೋಜನೆ ಸರಿಯಾಗಿ ಮಾಡದಿದ್ದರೆ ಮತ್ತು ಮಕ್ಕಳ ಉನ್ನತ ವ್ಯಾಸಂಗ ಮತ್ತು ಮದುವೆಗೆ ಹಣವನ್ನು ಹೇಗೆ ವ್ಯವಸ್ಥೆ ಮಾಡುವುದು? ಆಗ ನೀವು ತೊಂದರೆಗೆ ಬಲಿಯಾಗಬಹುದು. ನಿಮ್ಮ ಮಗುವಿನ ಆರ್ಥಿಕ ಭವಿಷ್ಯದ ಬಗ್ಗೆ ನೀವು ಚಿಂತೆ ಮಾಡುತ್ತಿದ್ದರೆ, ನಾವು ನಿಮಗೆ ಇಲ್ಲಿ ಸಹಾಯ ಮಾಡಲಿದ್ದೇವೆ. ಮಕ್ಕಳಿಗಾಗಿ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಎಫ್‌ಡಿ, ಪಿಪಿಎಫ್, …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!
ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..! ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲ್ಲೂಕಿನ ಡುಮ್ಮ – ಉರಬಿಹಟ್ಟಿ ಗ್ರಾಮದ ಶ್ರೀ ಬಸವೇಶ್ವರ ದೇವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. …
Read More »
Laxmi News 24×7