Breaking News

ಕೆಆರ್​ಎಸ್ ಜಲಾಶಯದ ಒಳಹರಿವು ಮತ್ತೆ ಹೆಚ್ಚಳ; ಮೆಟ್ಟೂರು ಜಲಾಶಯಕ್ಕೂ ಹೆಚ್ಚಾದ ಒಳಹರಿವು

ಕೊಡಗು ಮತ್ತು ಕೇರಳದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಕಾವೇರಿ ನದಿ ಪಾತ್ರದ ಜಲಾಶಯಗಳ ಒಳಹರಿವು ಹೆಚ್ಚಾಗಿದೆ. ಸೋಮವಾರಕ್ಕೆ ಹೋಲಿಕೆ ಮಾಡಿದರೆ ಮಂಗಳವಾರ ಕೆಆರ್ ಎಸ್ ಜಲಾಶಯದ ಒಳಹರಿವು ಮತ್ತೆ ಹೆಚ್ಚಾಗಿದ್ದು, ತಮಿಳುನಾಡಿನ ಮೆಟ್ಟೂರು ಜಲಾಶಯಕ್ಕೂ ಒಳಹರಿವು ಆರಂಭವಾಗಿದೆ. ಮಂಗಳವಾರ ಕೆಆರ್ ಎಸ್ ಜಲಾಶಯದ ಒಳಹರಿವು 12400 ಕ್ಯೂಸೆಕ್ಸ್‌ಗೆ ಏರಿಕೆಯಾಗಿದೆ. ಕಬಿನಿ ಜಲಾಶಯದ ಒಳಹರಿವು 10,400 ಕ್ಯೂಸೆಕ್ಸ್ ಆಗಿದೆ. ಹೇಮಾವತಿ ಜಲಾಶಯಕ್ಕೂ ಉತ್ತಮ ಒಳಹರಿವು ಇದ್ದು, 8500 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದೆ. …

Read More »

ಕಳಸಾ-ಬಂಡೂರಿ ಯೋಜನೆಗೆ ಕೇಂದ್ರದ ಒಪ್ಪಿಗೆ ಸಿಎಂ ಸಿದ್ದರಾಮಯ್ಯ ಮನವಿ; ಗೋವಾ ಆಕ್ರೋಶ!

ಬೆಳಗಾವಿ: ಕಳಸಾ-ಬಂಡೂರಿ ಯೋಜನೆ ಅನುಷ್ಠಾನಕ್ಕೆ ಕೇಂದ್ರದ ಅನುಮೋದನೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಮಾಡಿದ ಮನವಿ ಬಿಜೆಪಿ ಆಡಳಿತವಿರುವ ಗೋವಾದ ವಿರೋಧ ಪಕ್ಷಗಳು ಮತ್ತು ಪರಿಸರವಾದಿಗಳನ್ನು ಕೆರಳಿಸಿದೆ. ಈ ಯೋಜನೆಯು ವನ್ಯಜೀವಿ ಮತ್ತು ಪರಿಸರಕ್ಕೆ ಅಪಾಯವನ್ನುಂಟುಮಾಡುತ್ತದೆ ಎಂದು ಪ್ರತಿಪಾದಿಸುತ್ತಿರುವ ಗೋವಾದ ವಿರೋಧ ಪಕ್ಷಗಳು, ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣ ಇತ್ಯರ್ಥವಾಗುವವರೆಗೆ ಕರ್ನಾಟಕವು ಯೋಜನೆಯನ್ನು ಮುಂದುವರಿಸಲು ಬಿಡದಂತೆ ಪ್ರಧಾನಿ ಮೇಲೆ ಒತ್ತಡ ಹೇರುವಂತೆ ತಮ್ಮ ಸರ್ಕಾರಕ್ಕೆ ಮನವಿ ಮಾಡಿವೆ. ಪ್ರಧಾನಿ …

Read More »

ಖಾಸಗಿ ಕಂಪನಿಯಿಂದ ಬಾರದ ಹಣ; ನಾಲ್ವರು ಕೆಂಪು ಮೆಣಸಿನಕಾಯಿ ಬೆಳೆಗಾರರು ಆತ್ಮಹತ್ಯೆ ಯತ್ನ

ಬಳ್ಳಾರಿ: ತಮ್ಮ ಉತ್ಪನ್ನಗಳನ್ನು ಖರೀದಿಸಿದ ಖಾಸಗಿ ಕಂಪನಿಯು ಕಳೆದ ಒಂದೂವರೆ ವರ್ಷಗಳಿಂದ ಹಣವನ್ನು ಪಾವತಿಸದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ಸೋಮಸಮುದ್ರ ಗ್ರಾಮದ ನಾಲ್ವರು ಮೆಣಸಿನಕಾಯಿ ರೈತರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ರುದ್ರೇಶ್ (55), ಹನುಮಂತ್ (40), ಶೇಖರ್ (45) ಮತ್ತು ಕುನೇಶ್ (50) ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಹಣ ಪಾವತಿ ಮಾಡಲು ವಿಳಂಬ ಮಾಡಿದ್ದನ್ನು ವಿರೋಧಿಸಿ ಇತರ ರೈತರೊಂದಿಗೆ ಪ್ರತಿಭಟನೆ ನಡೆಸುತ್ತಿದ್ದ ವೇಳೆ ವಿಷ ಸೇವಿಸಿದ್ದಾರೆ. ಅವರನ್ನು …

Read More »

ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಕ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ

ಯಾದವಾಡದಲ್ಲಿ ಪಿ.ಎಚ್.ಸಿ ನೂತನ ಕಟ್ಟಡದ ಉದ್ಘಾಟನೆ. ಯಾದವಾಡ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಕ್ರಮ- ಶಾಸಕ ಬಾಲಚಂದ್ರ ಜಾರಕಿಹೊಳಿ ಮೂಡಲಗಿ: ಯಾದವಾಡ ಹಾಗೂ ಸುತ್ತಮುತ್ತಲಿನ ಬಡರೋಗಿಗಳಿಗೆ ಅನುಕೂಲವಾಗಲು ಪ್ರಾಥಮಿಕ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಸಾರ್ವಜನಿಕರಿಗೆ ಅರ್ಪಿಸಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಸಾರ್ವಜನಿಕರ ಮನವಿ ಮೇರೆಗೆ ಈ ಆಸ್ಪತ್ರೆಯನ್ನು ಮೇಲ್ದರ್ಜೆಗೆ ಏರಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳುವುದಾಗಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಾಲೂಕಿನ …

Read More »

ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದ ಹೆಚ್.ಡಿ.ರೇವಣ್ಣ

ಮೈಸೂರು: ನಮಗೆ ಸದ್ಯದಮಟ್ಟಿಗೆ ದೇವರೇ ಗತಿ…..ಬಿಟ್ಟರೆ ನ್ಯಾಯಾಂಗವೇ ಕಾಪಾಡಬೇಕು. ನನಗೆ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನನ್ನ ಮೇಲಿನ ಆರೋಪಗಳಿಂದ ಮುಕ್ತನಾಗಿ ಹೊರಬರುತ್ತೇನೆ ಎಂದು ಶಾಸಕ ಹೆಚ್.ಡಿ.ರೇವಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ರೇವಣ್ಣ, ನನಗೆ ದೇವರು ಹಾಗೂ ನ್ಯಾಯಾಂಗ ವ್ಯವಸ್ಥೆ ಮೇಲೆ ನಂಬಿಕೆ ಇದೆ. ನಮಗೆ ನ್ಯಾಯ ಸಿಗಲಿದೆ ಎಂದರು. ಇನ್ನು ಮಗ ಪ್ರಜ್ವಲ್ ನನ್ನು ನೋಡಲು ಜೈಲಿಗೆ ಹೋಗುವುದಿಲ್ಲ. ಒಂದುವೇಳೆ ಹೋದರೆ ಏನೋ ಹೇಳಿಕೊಡಲು ಹೋಗಿದ್ದಾನೆ …

Read More »

ನನಗೆ ಜಾಮೀನು ಕೊಡಿಸಿ: ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ‘ನಟ ದರ್ಶನ್’ ಕರೆ ಮಾಡಿ ದುಂಬಾಲು

ಬೆಂಗಳೂರು: ನನಗೆ ಜೈಲಿನಲ್ಲಿ ಇರೋಕೆ ಆಗ್ತಿಲ್ಲ. ನನಗೆ ಜಾಮೀನು ಕೊಡಿಸುವಂತೆ ಜೈಲಿನಿಂದಲೇ ನಿರ್ಮಾಪಕರು, ನಿರ್ದೇಶಕರಿಗೆ ಕರೆ ಮಾಡುತ್ತಿರುವಂತ ನಟ ದರ್ಶನ್ ದುಂಬಾಲು ಬೀಳುತ್ತಿರುವುದಾಗಿ ತಿಳಿದು ಬಂದಿದೆ. ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವಂತ ಅವರಿಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿರುವಂತ ಟೆಲಿಪೋನ್ ಬೂತ್ ನಿಂದ ವಾರಕ್ಕೆ ಮೂರು ಬಾರಿ ಕರೆ ಮಾಡೋದಕ್ಕೆ ಜೈಲು ಅಧಿಕಾರಿಗಳು ಅವಕಾಶ ಮಾಡಿಕೊಟ್ಟಿದ್ದಾರೆ. ತನ್ನ ಸರದಿಯಲ್ಲದೇ ಜೈಲಿನಲ್ಲಿರುವಂತ …

Read More »

ಕರ್ನಾಟಕದಲ್ಲಿ ಹೂಡಿಕೆ ಮಾಡಲು ದಕ್ಷಿಣ ಕೊರಿಯಾ ಒಲವು, ಹಲವು ಉದ್ಯೋಗ ಸೃಷ್ಟಿ..!

ಬೆಂಗಳೂರು : ಕರ್ನಾಟಕದಲ್ಲಿ ಹೂಡಿಕೆ ಮಾಡಲು ದಕ್ಷಿಣ ಕೊರಿಯಾ ಒಲವು ತೋರಿಸಿದ್ದು, ಹಲವು ಉದ್ಯೋಗ ಸೃಷ್ಟಿಯಾಗುವ ಸಾಧ್ಯತೆಯಿದೆ. ದಕ್ಷಿಣ ಕೊರಿಯಾಕ್ಕೆ ಭೇಟಿ ನೀಡಿರುವ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ನೇತೃತ್ವದ ರಾಜ್ಯದ ಉನ್ನತ ಮಟ್ಟದ ನಿಯೋಗ ಸೋಮವಾರ ಸಿಯೊಲ್ನಲ್ಲಿ ಹೊಯ್ಸಂಗ್ ಅಡ್ವಾನ್ಸ್ಡ್ ಮೆಟಿರಿಯಲ್ಸ್, ಎಚ್‌ಎಲ್ ಮಾಂಡೋ ಕಾರ್ಪೊರೇಷನ್, ನಿಫ್ಕೊ, ಹುಂಡೈ ಮೋಟಾರ್ಸ್ ಮತ್ತಿತರ ಕಂಪನಿಗಳ ಮುಖ್ಯಸ್ಥರನ್ನು ಭೇಟಿಯಾಗಿ ರಾಜ್ಯದಲ್ಲಿ ಬಂಡವಾಳ ಹೂಡಿಕೆ ಮಾಡುವ ಬಗ್ಗೆ ಸಮಾಲೋಚನೆ ನಡೆಸಿದರು. ಈ ಬಗ್ಗೆ ಮಾಹಿತಿ …

Read More »

ಸಿಎಂ ಪತ್ನಿಗೆ ಮೂಡಾ ನಿವೇಶನ ಹಂಚಿಕೆ:

ಬೆಂಗಳೂರು, ಜುಲೈ 02: ಮುಖ್ಯಮಂತ್ರಿಗಳ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.   ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, ಮೂಡಾ ನಿವೇಶನ ಹಂಚಿಕೆ ಬಗ್ಗೆ ವಿವರವಾಗಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ …

Read More »

ಚನ್ನಪಟ್ಟಣ ಉಪಚುನಾವಣೆ : ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ಮತ ಹಾಕಿ : ಡಿಸಿಎಂ

ಚನ್ನಪಟ್ಟಣ ಉಪಚುನಾವಣೆ : ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ಮತ ಹಾಕಿ : ಡಿಸಿಎಂ ರಾಮನಗರ : ಚನ್ನಪಟ್ಟಣದ ಉಪಚುನಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇದೀಗ ಹೇಳಿಕೆ ಒಂದನ್ನು ನೀಡಿದ್ದು, ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಯಾರೇ ಅಭ್ಯರ್ಥಿಯಾದರೂ ನನ್ನ ಮುಖ ನೋಡಿ ವೋಟ್ ಹಾಕಿ ಎಂದು ಜನರಲ್ಲಿ ಮನವಿ ಮಾಡಿದರು. ಇಂದು ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನಲ್ಲಿ ನಡೆದ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ …

Read More »

ಸರೋಜಿನಿ ಮಹಿಷಿ ಪರಿಷ್ಕೃತ ವರದಿ ಜಾರಿಗೆ ಆಗ್ರಹ: ಕರವೇಯಿಂದ ಧರಣಿ

ಬೆಳಗಾವಿ: ‘ಕರ್ನಾಟಕದ ಸರ್ಕಾರಿ, ಖಾಸಗಿ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಹೆಚ್ಚಿನ ಉದ್ಯೋಗವಕಾಶ ಕಲ್ಪಿಸಲು ಸರೋಜಿನಿ ಮಹಿಷಿ ಪರಿಷ್ಕೃತ ವರದಿಯನ್ನು ರಾಜ್ಯ ಸರ್ಕಾರ ಕೂಡಲೇ ಜಾರಿಗೊಳಿಸಬೇಕು’ ಎಂದು ಆಗ್ರಹಿಸಿ ನಮ್ಮ ಕರ್ನಾಟಕ ರಕ್ಷಣಾ ವೇದಿಕೆ (ಟಿ.ಎ.ನಾರಾಯಣಗೌಡ ಬಣ) ಜಿಲ್ಲಾ ಘಟಕದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಧರಣಿ ಆರಂಭಿಸಿದ್ದಾರೆ.   ರಾಣಿ ಚನ್ನಮ್ಮನ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ‘ರಾಜ್ಯದಲ್ಲಿರುವ ಸರ್ಕಾರಿ, ಖಾಸಗಿ …

Read More »