Breaking News

ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ದಿವ್ಯ ಪ್ರಭು ಜಿ.ಆರ್.ಜೆ

ಹಿರಿಯ ಐಎಎಸ್ ಅಧಿಕಾರಿ ದಿವ್ಯ ಪ್ರಭು ಜಿ.ಆರ್.ಜೆ ಅವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಬೆಂಗಳೂರಿನ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ನೂತನ ಗ್ರಾಮೀಣಾಭಿವೃದ್ಧಿ ಆಯುಕ್ತರಾಗಿ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು. ಆಯುಕ್ತಾಲಯದಲ್ಲಿ ಅಧಿಕಾರ ಸ್ವೀಕರಿಸಿದ ಕೂಡಲೇ, ನೂತನ ಆಯುಕ್ತರು ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಸಿಬ್ಬಂದಿಯೊಂದಿಗೆ ಪ್ರಾಥಮಿಕ ಸಭೆ ನಡೆಸಿ, ರಾಜ್ಯಾದ್ಯಂತ ನಡೆಯುತ್ತಿರುವ ವಿವಿಧ ಗ್ರಾಮೀಣಾಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಗ್ರಾಮೀಣ ಮಟ್ಟದಲ್ಲಿ ಅಭಿವೃದ್ಧಿ …

Read More »

ಕುಡಿಯುವ ನೀರಿನ ಕೊರತೆ ಆಗದಂತೆ ನಿಗಾವಹಿಸಲು ಅಧಿಕಾರಿಗಳಿಗೆ ಸೂಚನೆ

ಬೆಳಗಾವಿ : ರಾಜ್ಯಾದ್ಯಂತ ಮುಂಗಾರು ವಾಡಿಕೆಗಿಂತ ಕಡೆಮೆಯಾಗಿದ್ದು, ಜಿಲ್ಲೆಗಳಲ್ಲಿ ಕುಡಿಯುವ ನೀರಿನ ಕೊರತೆ ಆಗದಂತೆ ನಿಗಾವಹಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಕೊರತೆ ಉದ್ಬವಿಸಿದಲ್ಲಿ ಟ್ಯಾಂಕರ್ ಹಾಗೂ ಖಾಸಗಿ ಬೋರವೆಲ್‌ಗಳ ಮೂಲಕ ನೀರು ಪೂರೈಕೆಗೆ ಕೂಡಲೆ ಕ್ರಮ ವಹಿಸುವಂತೆ ಉಪ ಮುಖ್ಯಮಂತ್ರಿಗಳಾದ ಡಾ.ಜಿ.ಪರಮೇಶ್ವರ ಅಧಿಕಾರಿಗಳಿಗೆ ಸೂಚಿಸಿದರು. ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಬುಧವಾರ (ಜುಲೈ ೦೧) ಜರುಗಿದ ಕಂದಾಯ ದಿನಾಚರಣೆ-೨೦೨೬ ಹಾಗೂ ಬೆಳಗಾವಿ ವಿಭಾಗದ ಹವಾಮಾನ ಪರಿಸ್ಥಿತಿ ಹಾಗೂ ವಿವಿಧ ಇಲಾಖೆಗಳ …

Read More »

ಜೈತುನಮಾಳ ಗ್ರಾಮದ ಮಹಿಳೆ ನಾಪತ್ತೆ

ಬೆಳಗಾವಿ : ತಾಲೂಕಿನ ಜೈತುನಮಾಳ ಗ್ರಾಮದ ಶಬರಿ ಕಾಲೋನಿಯ ನಿವಾಸಿಯಾದ ನಾಗವ್ವಾ ಕೊಂ. ಚನ್ನಬಸಪ್ಪ ನಾಯಿಕ ಎಂಬ ೨೦ ವರ್ಷದ ಮಹಿಳೆಯು ಜೂನ್ ೨೭ ರಂದು ರಾತ್ರಿ ೧೧ ಗಂಟೆಯ ನಂತರ ಮನೆಯಲ್ಲಿ ಯಾರಿಗೂ ಹೇಳದೆ ಕೇಳದೆ ಮನೆಯಿಂದ ಎಲ್ಲಿಯೋ ಹೋಗಿ ಕಾಣೆಯಾಗಿದ್ದು. ಈ ಕುರಿತು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಕಾಣೆಯಾದ ಮಹಿಳೆಯ ಚಹರೆ: ೫.೨ ಇಂಚ ಎತ್ತರ, ಹೋಳು ಮುಖ, ಗಿಡ್ಡ ಮೂಗು, ಅಗಲ ಹಣೆ, …

Read More »

ವಿವಿಧ ಪ್ರಶಸ್ತಿಗಳಿಗೆ ಕೃತಿಗಳ ಆಹ್ವಾನ

ಬೆಳಗಾವಿ : ಬೆಳಗಾವಿ ಜಿಲ್ಲಾ ಸಾಹಿತ್ಯ ಪ್ರತಿಷ್ಠಾನವು ಪ್ರತಿ ವರ್ಷದಂತೆ 2025ನೇ ಸಾಲಿನಲ್ಲಿ ಪ್ರಕಟವಾದ ಪುಸ್ತಕಗಳನ್ನು ವಿವಿಧ ದತ್ತಿ ನಿಧಿ ಪ್ರಶಸ್ತಿಗಳಿಗಾಗಿ ಆಹ್ವಾನಿಸಿದೆ. ಸಾಹಿತ್ಯದ ಎಲ್ಲ ಪ್ರಕಾರದ ಪುಸ್ತಕಗಳು ಪ್ರಶಸ್ತಿಗೆ ಅರ್ಹವಾಗಿರುತ್ತವೆ. ಕೃತಿಕಾರರು ಬೆಳಗಾವಿ ಜಿಲ್ಲೆಯವರು ಆಗಿರಬೇಕು. ವಿಳಾಸ ಮತ್ತು ಮೊಬೈಲ್ ನಂಬರ್ ನೊಂದಿಗೆ ಕಡ್ಡಾಯವಾಗಿ ಪ್ರಕಟಿತ ಮೂರು ಪ್ರತಿಗಳನ್ನು ಕಳುಹಿಸಬೇಕು. ಕೃತಿಕಾರರು, ಸಾಹಿತಿಗಳು, ಲೇಖಕರು ತಮ್ಮ ಪುಸ್ತಕಗಳನ್ನು -ನಂಬರ್: 255, ವಿಜಯಾ ರೆಸಿಡೆನ್ಸಿ , ಎಫ್-2, ಗುರುಪ್ರಸಾದ್ ಕಾಲೊನಿ, ಟಿಳಕವಾಡಿ, …

Read More »

ಮಹಾರಾಷ್ಟ್ರ ದಾವೆ ಆರಂಭದಲ್ಲೇ ಕಿತ್ತು ಹಾಕುವಂತೆ ಮಾಡಿ

ಬೆಳಗಾವಿ: ಬುಧವಾರ ದಿನಾಂಕ ೦೧-೦೭-೨೦೨೬ ರಂದು ಮುಂಜಾನೆ ೧೧ ಗಂಟೆಗೆ ಬೆಳಗಾವಿಯ ರಾಣಿ ಕಿತ್ತೂರು ಚನ್ನಮ್ಮ ವೃತ್ತದಲ್ಲಿರುವ ಕನ್ನಡ ಸಾಹಿತ್ಯ ಭವನದಲ್ಲಿ ಬೆಳಗಾವಿಯ ಸಮಾನ ಮನಸ್ಕ ಕನ್ನಡ ಸಂಘಟನೆಗಳ ಸಭೆ ನಡೆಯಿತು. ಗಡಿ ವಿವಾದಕ್ಕೆ ಸಂಬಂಧಿಸಿದಂತೆ ನಡೆದಿರುವ ಬೆಳವಣಿಗೆಗಳ ಬಗ್ಗೆ ಹಾಗೂ ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಕರ್ನಾಟಕ ಪರವಾದ ಗೊತ್ತುವಳಿ ಅಂಗೀಕಾರ ವಿಳಂಬವಾಗುತ್ತಿರುವ ಬಗ್ಗೆ ಸುರ್ದೀಘವಾದ ಚರ್ಚೆ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷ ಮಹಾದೇವ ತಳವಾರ …

Read More »

ಗ್ರಾಮ‌ ಸಹಾಯಕರಿಗೆ ವೇತನ ಹೆಚ್ಚಳ, ಇಡಿಗಂಟು ಯಥಾವತ್ತಾಗಿ ಜಾರಿಗೊಳಿಸುವಂತೆ ಡಿಸಿಎಂಗೆ ಮನವಿ

ಬೆಳಗಾವಿ: ಕಂದಾಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ರಾಜ್ಯದ ಸು.10450 ಗ್ರಾಮ‌ ಸಹಾಯಕರಿಗೆ ಕಳೆದ ಸೆ.25 , 2025 ರಲ್ಲಿ ಜರುಗಿದ ಸಚಿವ ಸಂಪುಟದಲ್ಲಿ ನಿರ್ಣಯಿಸಿದ ಗ್ರಾಮ ಸಹಾಯಕರಿಗೆ  “ಡಿ” ಗ್ರೂಪ್ ಅಥವಾ 27000 ಸಾವಿರ ವೇತನ ಹೆಚ್ಚಳ, ಇಡಿಗಂಟು ಇವುಗಳನ್ನು ಯಥಾವತ್ತಾಗಿ ಜಾರಿಗೊಳಿಸುವಂತೆ ಬೆಳಗಾವಿ ಜಿಲ್ಲಾ ಗ್ರಾಮ‌ ಸಹಾಯಕರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಪ್ಪ ಇಂಗಳಗಿ ನೇತೃತ್ವದಲ್ಲಿ ಬುಧವಾರ ಸುವರ್ಣ ಸೌಧದಲ್ಲಿ ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವ ಡಾ.ಜಿ.ಪರಮೇಶ್ವರ ಅವರಿಗೆ ಮನವಿ …

Read More »

ಕಂದಾಯ ಸೇವೆಗಳು ಸಕಾಲದಲ್ಲಿ ತಲುಪಬೇಕು: ಡಾ.ಜಿ ಪರಮೇಶ್ವರ

ಬೆಳಗಾವಿ : ಕಂದಾಯ ಇಲಾಖೆಯ ಸಾರ್ವಜನಿಕ ಸೇವೆಗಳು ಅರ್ಹ ನಾಗರಿಕರಿಗೆ ಯಾವುದೇ ವಿಳಂಬವಿಲ್ಲದೆ, ಸಕಾಲದಲ್ಲಿ ತಲುಪಬೇಕು. ಕಚೇರಿಯಲ್ಲಿರುವ ಕಡತಗಳನ್ನು ಅನಗತ್ಯವಾಗಿ ಬಾಕಿ ಉಳಿಸಿಕೊಳ್ಳಬಾರದು ಎಂದು ಉಪ ಮುಖ್ಯಮಂತ್ರಿ ಡಾ.ಜಿ ಪರಮೇಶ್ವರ ಅವರು ಹೇಳಿದರು. ಜಿಲ್ಲಾಡಳಿತ ವತಿಯಿಂದ ಬುಧವಾರ (ಜುಲೈ.೦೧) ಬೆಳಗಾವಿ ಸುವರ್ಣ ವಿಧಾನಸೌಧ ಸೆಂಟ್ರಲ್ ಸಭಾಂಗಣದಲ್ಲಿ ನಡೆದ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದಲ್ಲಿ ಪತ್ರಿಕಾ ದಿನಾಚರಣೆ, ಕಂದಾಯ ದಿನಾಚರಣೆ, ವೈದ್ಯರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಸಕ್ತ ಸಾಲಿನಲ್ಲಿ …

Read More »

ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಕನ್ನಡ ಪತ್ರಿಕಾ ದಿನಾಚರಣೆ ಆಚರಣೆ

ಬಾಗಲಕೋಟೆ,: ಪತ್ರಿಕೋದ್ಯಮವೆಂದರೆ ಕೇವಲ ಒಂದು ವೃತ್ತಿಯಲ್ಲ, ಅದು ಸಮಾಜದತ್ತ ಇರುವ ಪವಿತ್ರ ಜವಾಬ್ದಾರಿಯಾಗಿದೆ. ಸತ್ಯವನ್ನು ಹುಡುಕುವ ಧೈರ್ಯ, ಜನರ ಧ್ವನಿಯಾಗುವ ಬದ್ಧತೆ ಹಾಗೂ ಇತಿಹಾಸವನ್ನು ದಾಖಲಿಸುವ ಹೊಣೆಗಾರಿಕೆಯೇ ಪತ್ರಿಕೋದ್ಯಮದ ನಿಜವಾದ ಮೌಲ್ಯಗಳಾಗಿವೆ ಎಂದು ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಜಗನ್ನಾಥ ಚವ್ಹಾಣ ಹೇಳಿದರು. ನಗರದ ಬಿ.ವಿ.ವಿ. ಸಂಘದ ಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದ ಐಕ್ಯೂಎಸಿ ಆಶ್ರಯದಲ್ಲಿ ಕನ್ನಡ ಸಂಘ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ಕನ್ನಡ ಪತ್ರಿಕಾ …

Read More »

ಹಸು, ಕರುಗಳ ವಧೆ ನಿಷೇಧಿಸಿ ಹೈಕೋರ್ಟ್ ಆದೇಶ – ಸುಪ್ರೀಂಗೆ ಮೇಲ್ಮನವಿ ಸಲ್ಲಿಸಿದ ತ.ನಾಡು ಸರ್ಕಾರ

ನವದೆಹಲಿ: ಬಕ್ರೀದ್  ಸೇರಿದಂತೆ ಇತರೆ ಬೇರೆ ಯಾವುದೇ ದಿನ ಹಸು ಮತ್ತು ಕರುಗಳ ವಧೆಯನ್ನು ಮಾಡಬಾರದು ಎಂದು ಮದ್ರಾಸ್ ಹೈಕೋರ್ಟ್‌ನ ನೀಡಿದ ಆದೇಶ ಪ್ರಶ್ನಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ  ಮೇಲ್ಮನವಿ ಅರ್ಜಿ ಸಲ್ಲಿಸಿದೆ. ತಮಿಳುನಾಡು ಸರ್ಕಾರದ ಪಶುಸಂಗೋಪನೆ, ಹಾಲು ಉತ್ಪಾದನೆ, ಮೀನುಗಾರಿಕೆ ಮತ್ತು ಮೀನುಗಾರರ ಕಲ್ಯಾಣ ಇಲಾಖೆ ಕಾರ್ಯದರ್ಶಿ ಮೂಲಕ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯಲ್ಲಿ ತಮಿಳುನಾಡು ಸರ್ಕಾರವು ಹೈಕೋರ್ಟ್ ತನ್ನ ಮೂಲ ಅರ್ಜಿಯ ವ್ಯಾಪ್ತಿಯನ್ನು ಮೀರಿ ಆದೇಶ ಹೊರಡಿಸಿದೆ …

Read More »

ಆಟೋ ಚಾಲಕರಿಗೆ ಸಿಹಿ ಸುದ್ದಿ: ಎಲ್‌ಪಿಜಿ ದರ ಬರೋಬ್ಬರಿ 10 ರೂ. ಇಳಿಕೆ

ಬೆಂಗಳೂರು: ನಿರಂತರ ಎಲ್‌ಪಿಜಿ (LPG) ದರ ಏರಿಕೆಯಿಂದ ಕಂಗಾಲಾಗಿದ್ದ ಆಟೋ ಚಾಲಕರಿಗೆ ಕೊನೆಗೂ ದೊಡ್ಡ ನಿರಾಳ ಸಿಕ್ಕಿದೆ. ಪ್ರಮುಖ ಇಂಧನ ವಿತರಕ ಸಂಸ್ಥೆಯಾದ ಟೋಟಲ್ ಗ್ಯಾಸ್ತನ್ನ ಬಂಕ್‌ಗಳಲ್ಲಿ ಆಟೋ ಎಲ್‌ಪಿಜಿ ದರವನ್ನು (Auto LPG Price) ಪ್ರತಿ ಲೀಟರ್‌ಗೆ ಭರ್ಜರಿ 10 ರೂಪಾಯಿಗಳಷ್ಟು ಕಡಿತಗೊಳಿಸಿದೆ. ಕಳೆದ ಕೆಲವು ತಿಂಗಳುಗಳ ಹಿಂದೆ ನಡೆದ ಅಮೆರಿಕ, ಇಸ್ರೇಲ್‌ ಮತ್ತು ಇರಾನ್‌ ನಡುವಿನ ಭೀಕರ ಸಂಘರ್ಷದಿಂದಾಗಿ ಜಾಗತಿಕ ಮಾರುಕಟ್ಟೆಯಲ್ಲಿ ಇಂಧನ ಪೂರೈಕೆ ಏರುಪೇರಾಗಿತ್ತು. ಇದರ …

Read More »