Breaking News

2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ

2A ಮೀಸಲಾತಿ ಬಗ್ಗೆ ಧ್ವನಿ ಎತ್ತದ ಶಾಸಕರ ವಿರುದ್ದ ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಬೆಳಗಾವಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ವಿಚಾರವಾಗಿ ಅಧಿವೇಶನದಲ್ಲಿ ಧ್ವನಿ ಎತ್ತದ ಸಮುದಾಯದ ಶಾಸಕರ ವಿರುದ್ಧ ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಬಸವಜಯ ಮೃತ್ಯುಂಜಯ ಶ್ರೀ ಆಕ್ರೋಶ ಹೊರಹಾಕಿದರು. ಬೆಳಗಾವಿಯಲ್ಲಿಮಾತನಾಡಿದ ಅವರು, ಬೊಮ್ಮಾಯಿ, ಯಡಿಯೂರಪ್ಪ ಸರ್ಕಾರದಲ್ಲಿ ಸದನದ ಬಾವಿಗಿಳಿದು ಹೋರಾಟ ಮಾಡಿದ್ದೀರಿ. ಆದರೆ ಈ ಸರ್ಕಾರದಲ್ಲಿ ಯಾಕೆ ಮಾಡುತ್ತಿಲ್ಲ ಎಂದು ಕಾಂಗ್ರೆಸ್‌ ಶಾಸಕರು ವಿರುದ್ದ …

Read More »

ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿ ಕೊಟ್ಟರೆ ಮನೆಯ ಜತೆಗೆ ದೇಶ ಉದ್ಧಾರ: ಶ್ರೀ ನಿರ್ಮಲಾನಾಥಶ್ರೀ

ಮಂಡ್ಯ, ಆಗಸ್ಟ್‌ 19: ಮನೆಯಲ್ಲಿ ಹೆಣ್ಣು ಮಕ್ಕಳ ಕೈಗೆ ಸಂಪತ್ತಿನ ಕೀಲಿಯನ್ನು ಕೊಟ್ಟದ್ದೇ ಆದರೆ ಮನೆಯೂ ಉದ್ದಾರವಾಗುತ್ತದೆ ದೇಶವೂ ಉದ್ಧಾರವಾಗುತ್ತದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥಶ್ರೀಗಳು ಹೇಳಿದರು. ನಾಗಮಂಗಲ ತಾಲೂಕಿನ ಕಂಚನಹಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟವನ್ನು ಉದ್ಘಾಟಿಸಿ ಮಾತನಾಡಿದ ಶ್ರೀಗಳು, ಮನೆಯಲ್ಲಿರುವ ಹೆಣ್ಣು ಮಕ್ಕಳು ದೇಶಕಟ್ಟುವ ಕಾಯಕಕ್ಕೆ ತಮ್ಮನ್ನು ತಾವು ತೊಡಗಿಸಿಕೊಳ್ಳಲು ಸಾಮಾಜಿಕ ವ್ಯವಸ್ಥೆ ಬಿಡುವುದಿಲ್ಲವೋ ಅಲ್ಲಿಯವರಗೆ ದೇಶದ ಉದ್ದಾರವಾಗದು …

Read More »

ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಫೈಟ್; ಸಿದ್ದು ಪರ ಘಟನಾಘಟಿ ವಕೀಲರು ಕಣಕ್ಕೆ,

ಬೆಂಗಳೂರು: ಬಿಜೆಪಿಗರನ್ನೇ (BJP) ಬಗ್ಗು ಬಡಿದು ಬಲೆ ಹಾಕ್ತೀನಿ ಎಂದಿದ್ದ ಸಿದ್ದರಾಮಯ್ಯ (Siddaramaiah) ಸೈಟ್‌ ಸುಳಿಗೆ ಸಿಲುಕಿ ಪರದಾಡ್ತಿದ್ದಾರೆ. ಪ್ರಾಸಿಕ್ಯೂಷನ್‌ (Prosecution) ಬಲೆಯಿಂದ ಹೊರಬರಲು ಕಾನೂನು ಸಮರ ಸಾರಿದ್ದಾರೆ. ಇಂದು ಸಿಎಂ ಪರ ಕಪಿಲ್ ಸಿಬಲ್ (Kapil Sibal)​, ಕಾಂಗ್ರೆಸ್‌‌ ಪರ ಅಭಿಷೇಕ್ ಮನು ಸಿಂಘ್ವಿ (Abhishek Singhvi) ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸೋದಕ್ಕೆ ಸಜ್ಜಾಗಿದ್ದಾರೆ. ಇದರ ನಡುವೆಯೇ ಸಿದ್ದರಾಮಯ್ಯ ದೆಹಲಿ ದಂಡಯಾತ್ರೆಗೆ ಮುಂದಾಗಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಸಿಎಂ ಕಾನೂನು …

Read More »

ವರ್ಷದ 2 ನೇ ಸೂರ್ಯಗ್ರಹಣ

ನವದೆಹಲಿ : ಹಿಂದೂ ಧರ್ಮದಲ್ಲಿ ಜ್ಯೋತಿಷ್ಯದ ಪ್ರಕಾರ, ಸೂರ್ಯಗ್ರಹಣಕ್ಕೆ ವಿಶೇಷ ಮಹತ್ವವಿದೆ. ಸೂರ್ಯಗ್ರಹಣವು ಖಗೋಳ ವಿದ್ಯಮಾನವಾಗಿದೆ. ಚಂದ್ರನು ಭೂಮಿ ಮತ್ತು ಸೂರ್ಯನ ನಡುವೆ ಹಾದುಹೋದಾಗ ಸೂರ್ಯ ಗ್ರಹಣ ಸಂಭವಿಸುತ್ತದೆ. ಈ ಸಮಯದಲ್ಲಿ ಭೂಮಿಯ ಮೇಲಿನ ಸೂರ್ಯನ ಬೆಳಕು ಕಡಿಮೆಯಾಗುತ್ತದೆ ಅಥವಾ ಸಂಪೂರ್ಣವಾಗಿ ಕಣ್ಮರೆಯಾಗುತ್ತದೆ. ಈ ವಿದ್ಯಮಾನವನ್ನು ಸೂರ್ಯ ಗ್ರಹಣ ಎಂದು ಕರೆಯಲಾಗುತ್ತದೆ. ಸಾಮಾನ್ಯವಾಗಿ, ಸೂರ್ಯಗ್ರಹಣವು ಅಮಾವಾಸ್ಯೆಯ ದಿನದಂದು ಸಂಭವಿಸುತ್ತದೆ. 2024 ರಲ್ಲಿ ಎರಡು ಸೂರ್ಯ ಗ್ರಹಣಗಳು ಮತ್ತು ಎರಡು ಚಂದ್ರ …

Read More »

ಏಕಾಂಗಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸಿಎಂ‌ ಸಿದ್ದರಾಮಯ್ಯನವರ ಅಭಿಮಾನಿ‌

ಯಾದಗಿರಿ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್‌ ಗೆ ಅನುಮತಿ ನೀಡಿದ ಕಾರಣಕ್ಕೆ ಯಾದಗಿರಿ ನಗರದಲ್ಲಿ‌ ಸಿದ್ದರಾಮಯ್ಯನವರ ಅಭಿಮಾನಿಯೊಬ್ಬ‌ ಏಕಾಂಗಿ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾನೆ ನಗರದ ಸುಭಾಷ್ಚಂದ್ರ ಬೋಸ್ ವೃತ್ತದ ಬಳಿ ಸಿದ್ದರಾಮಯ್ಯನವರ ಅಭಿಮಾನಿ‌ ರಾಜಕುಮಾರ ಎಂಬಾತ ಏಕಾಂಗಿ ಉಪವಾಸ ಸತ್ಯಾಗ್ರಹ ಕುಳಿತಿದ್ದಾನೆ.   ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ನಡೆಯನ್ನು ಖಂಡಿಸಿ ಸತ್ಯಾಗ್ರಹ ಕೈಗೊಂಡಿದ್ದು, ಬಿಜೆಪಿ ಹಾಗೂ‌ ಜೆಡಿಎಸ್ ನಾಯಕರು ರಾಜಭವನವನ್ನು ದುರುಪಯೋಗಿಸಿಕೊಂಡು ರಾಜ್ಯ ಮುಖ್ಯಮಂತ್ರಿಗಳ …

Read More »

ಜೈಲಿನಿಂದ ತಪ್ಪಿಸಿಕೊಂಡಿದ್ದ ಖೈದಿ 14 ವರ್ಷದ ಬಳಿಕ ಮತ್ತೆ ಬಂಧನ !

ಕೊಪ್ಪಳ: ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದರಲ್ಲಿ ಕೊಪ್ಪಳ ಜಿಲ್ಲಾ ಕಾರಾಗೃಹದ ಬಂಧಿಯಾಗಿ 2010 ರಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ ಇಲಕಲ್ ಮೂಲದ ನಿವಾಸಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಎಂಬ ಖೈದಿಯನ್ನು ಜಿಲ್ಲಾ ಪೊಲೀಸರು ಬರೊಬ್ಬರಿ 14 ವರ್ಷಗಳ ಬಳಿಕ ಬಂಧಿಸಿ ಮತ್ತೆ ಜೈಲಿಗಟ್ಟಿದ್ದಾರೆ.   ವಿಚಾರಣಾ ಖೈದಿ ಮಾರ್ಕಂಡಯ್ಯ ತಿಮ್ಮಣ್ಣ ಪಲಮಾರಿ ಇಲಕಲ್ ನಿವಾಸಿಯಾಗಿದ್ದ. ಗಂಗಾವತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನ ವಿರುದ್ದ 2009ರಲ್ಲಿ ಕೇಸ್ ದಾಖಲಾಗಿತ್ತು. ಈತನನ್ನು ಕೊಪ್ಪಳ …

Read More »

ಕೆರಾಡಿ ಸರ್ಕಾರಿ ಪ್ರಾಥಮಿಕ ಶಾಲೆಗೆ “ಕಾಂತಾರ’ ಕಳೆ!

ಕುಂದಾಪುರ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಕನ್ನಡ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿಯ ಸಂಚಲನ ಸೃಷ್ಟಿಸಿದ ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಟ, ನಿರ್ದೇಶಕ ರಿಷಬ್‌ ಶೆಟ್ಟಿ ಅವರು ತಾನು ಕಲಿತ ಕೆರಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನೇ ದತ್ತು ಪಡೆದು ಅದಕ್ಕೆ ಹೊಸ ಕಳೆ ನೀಡಿದ್ದಾರೆ.   ಕಾಂತಾರ ಚಿತ್ರದ ನಟನೆಗಾಗಿ ಶ್ರೇಷ್ಠ ನಟ ಪ್ರಶಸ್ತಿ ಪಡೆದಿರುವ ಅವರು ಕಳೆದ ಸ್ವಾತಂತ್ರ್ಯೋತ್ಸವ ದಿನದಂದೂ ಶಾಲೆಗೆ ಭೇಟಿ ನೀಡಿದ್ದರು. …

Read More »

ಹುಬ್ಬಳ್ಳಿ | ರಕ್ಷಾಬಂಧನ: ರಂಗಿನ ರಾಖಿ ಮೆರುಗು

ಹುಬ್ಬಳ್ಳಿ: ಅಯೋಧ್ಯೆಯ ಶ್ರೀರಾಮ ಮಂದಿರ, ಕೊಳಲು ಉದುವ ಕೃಷ್ಣ, ಗಣಪ, ಕಣ್ಣು ಕುಕ್ಕುವ ಸ್ಟೋನ್‌ಗಳು, ರುದ್ರಾಕ್ಷಿ, ನವಿಲುಗರಿ, ಮುತ್ತಿನಲ್ಲಿ ಪೋಣಿಸಿದ ರಾಖಿಗಳು ಮಾರುಕಟ್ಟೆಯಲ್ಲಿ ಅಂದ ಹೆಚ್ಚಿಸಿಕೊಂಡಿವೆ. ಸರಳ, ಸುಂದರ ಹಾಗೂ ಸಾಮಾಜಿಕ ಜಾಲತಾಣಗಳಾದ ಇನ್‌ಸ್ಟ್ರಾಗ್ರಾಮ, ವಾಟ್ಸ್‌ಆಯಪ್‌, ಫೇಸ್ಬುಕ್‌ ಚಿಹ್ನೆ ಇರುವ ರಾಖಿಗಳು ಆಕರ್ಷಿಸುತ್ತಿವೆ.   ಹುಬ್ಬಳ್ಳಿಯ ದುರ್ಗದಬೈಲ್‌, ಜನತಾ ಬಜಾರ್‌ ಮತ್ತು ಹಳೇಹುಬ್ಬಳ್ಳಿ ಮಾರುಕಟ್ಟೆಗಳಲ್ಲಿ ತರಹೇವಾರಿ ರಾಖಿಗಳು ಮಾರಾಟಕ್ಕಿದ್ದು, ಮಹಿಳೆಯರು, ಸಹೋದರಿಯರು ತಮ್ಮ ನೆಚ್ಚಿನ ಸಹೋದರರಿಗೆ ರಾಖಿ ಖರೀದಿಸುವ ದೃಶ್ಯ ಕಂಡಿತು. …

Read More »

ರಾಜ್ಯ ಸರ್ಕಾರದಿಂದ ರೈತರಿಗೆ `ಬೋರ್ವೆಲ್’ ಕೊರೆಸಲು 4 ಲಕ್ಷ ಸಬ್ಸಿಡಿ : ಅರ್ಜಿ ಸಲ್ಲಿಸಲು ಆಗಸ್ಟ್ 31 ಲಾಸ್ಟ್ ಡೇಟ್

ಬೆಂಗಳೂರು : ರಾಜ್ಯ ಸರ್ಕಾರವು ರೈತ ಸಮುದಾಯಕ್ಕೆ ಸಿಹಿಸುದ್ದಿ ನೀಡಿದ್ದು, ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಗಂಗಾಕಲ್ಯಾಣ ನೀರಾವರಿ ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮ ಹಾಗೂ ಕರ್ನಾಟಕ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮಗಳ ವ್ಯಾಪ್ತಿಗೆ ಒಳಪಡುವ ಹಿಂದುಳಿದ ವರ್ಗಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ …

Read More »

ಕಾರವಾರ: ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಸಿದ್ಧತೆ

ಕಾರವಾರ: ಸರ್ಕಾರಿ ಭೂಮಿ ಇದ್ದರೂ ಒತ್ತುವರಿಯಾಗುತ್ತಿರುವ ಪರಿಣಾಮ ಸರ್ಕಾರದ ಯೋಜನೆಗಳಿಗೆ ಜಾಗ ಸಿಗುವುದು ಕಷ್ಟವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಒತ್ತುವರಿ ತೆರವಿಗೆ ವೇಗ ನೀಡಲು ಕಂದಾಯ ಇಲಾಖೆ ಮುಂದಾಗಿದ್ದು, ಜಿಲ್ಲೆಯಲ್ಲಿ ಸರ್ವೆ ಕಾರ್ಯ ಚುರುಕುಗೊಂಡಿದೆ. ಒತ್ತುವರಿಯಾಗಿರುವ ಸರ್ಕಾರಿ ಭೂಮಿಯ ಮಾಹಿತಿ ಕ್ರೂಢೀಕರಣಕ್ಕೆ ‘ಲ್ಯಾಂಡ್ ಬೀಟ್’ ಎಂಬ ಮೊಬೈಲ್ ಆಯಪ್‍ನ್ನು ಆರು ತಿಂಗಳ ಹಿಂದಷ್ಟೆ ಇಲಾಖೆ ಪರಿಚಯಿಸಿದೆ. ಅದರ ಮೂಲಕ ಒತ್ತುವರಿಯಾಗಿರುವ ಸರ್ಕಾರಿ ಭೂಮಿಯ ಸಮೀಕ್ಷೆ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿರುವ 36,926 ಎಕರೆ ಸರ್ಕಾರಿ ಭೂಮಿ …

Read More »