ಚಿಕ್ಕಮಗಳೂರು: ಮೂಡಿಗೆರೆಯ ದೇವರಮನೆ ಬೆಟ್ಟಕ್ಕೆ ಬಂದಿದ್ದ ಬೆಂಗಳೂರು ಮೂಲದ ಯುವಕನೊಬ್ಬ ಹೃದಯಾಘಾತದಿಂದಸಾವನ್ನಪ್ಪಿದ್ದಾನೆ. ನರೇಶ್ (26) ಮೃತ ಯುವಕ. ನರೇಶ್ ಮೂಲತಃ ಕಲಬುರುಗಿ ಜಿಲ್ಲೆಯವನು. ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡಿಕೊಂಡಿದ್ದ. ವೀಕ್ ಎಂಡ್ ಆಗಿದ್ದರಿಂದ ಸ್ನೇಹಿತರ ಜೊತೆ ಬೆಂಗಳೂರಿನಿಂದ ಮೂಡಿಗೆರೆ ತಾಲೂಕಿನ ದೇವರಮನೆ ಗುಡ್ಡ ತಾಣಕ್ಕೆ ಬಂದಿದ್ದ. ದೇವರಮನೆ ಬೆಟ್ಟದ ಸೌಂದರ್ಯ ಸವಿದು ಹಿಂದಿರುಗುವಾಗ ರಸ್ತೆ ಮಧ್ಯೆ ತುಂತುರು ಮಳೆಯಲ್ಲಿ ಕೋಟ್ ಹಾಕಿಕೊಳ್ಳಲು ನರೇಶ್ ಬೈಕ್ ನಿಲ್ಲಿಸಿದ್ದ. ಈ ವೇಳೆ …
Read More »15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್
ಬೆಂಗಳೂರು: ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್‌ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ ಎಂದು ಸಾರಿಗೆ ಸಚಿವರೂ ಆಗಿರುವ ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ತಿಳಿಸಿದರು. 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ …
Read More »ಭಾರತ, ಪಾಕ್ ಸೇನೆ ಮೇಲೆ ದಾಳಿಗೆ ಅಸಾಫುಲ್ ಪ್ಲ್ಯಾನ್ – ವಿಚಾರಣೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
ಬೆಂಗಳೂರು: ನಗರದಲ್ಲಿ ಪಶ್ಚಿಮ ಬಂಗಾಳ ಮೂಲದ ಅಸಾಫುಲ್ ಮಲ್ಲಿಕ್ (25) ಎಂಬ ಶಂಕಿತ ಉಗ್ರನನ್ನು ಹೆಬ್ಬಗೋಡಿ ಪೊಲೀಸರು ಬಂಧಿಸಿದ್ದಾರೆ. ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾದ್ದು, ಸ್ಫೋಟಕ ಮಾಹಿತಿಗಳು ಬೆಳಕಿಗೆ ಬಂದಿವೆ. ಶಂಕಿತ ಉಗ್ರ ಟಿಟಿಪಿ (TTP) ಸಂಘಟನೆ ಸದಸ್ಯ ಇಮ್ರಾನ್ ಸೈದರ್ ಜೊತೆಗೆ ನಿರಂತರ ಸಂಪರ್ಕದಲ್ಲಿರುವುದು ತನಿಖೆ ವೇಳೆ ಗೊತ್ತಾಗಿದೆ. ಈತ ಅಫ್ಘಾನಿಸ್ತಾನಕ್ಕೆ ಹೋಗಲು ವೀಸಾ ಕೂಡ ಅಪ್ಲೈ ಮಾಡಿದ್ದ. ಕಾರಾಣಾಂತರದಿಂದ ಅಫ್ಘಾನಿಸ್ತಾನಕ್ಕೆ ಹೋಗಲು ಆಗಿರಲಿಲ್ಲ. ಅಪಘಾನಿಸ್ತಾನಕ್ಕೆ ಹೋಗಿ ತರಬೇತಿ …
Read More »2028ಕ್ಕೂ ಡಿಕೆ ಶಿವಕುಮಾರ್ ಸಿಎಂ – ಸಚಿವ ಶಿವರಾಜ್ ತಂಗಡಗಿ ಭವಿಷ್ಯ
ಕೊಪ್ಪಳ: 2028ಕ್ಕೂ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದ್ದು, ಡಿ.ಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶಿವರಾಜ್ ಎಸ್ ತಂಗಡಗಿ ವಿಶ್ವಾಸ ಭವಿಷ್ಯ ನುಡಿದರು. 2028 ಕ್ಕೆ ಪಕ್ಷದ ಹಿರಿಯ ನಾಯಕರು ಮುಖ್ಯಮಂತ್ರಿ ಹುದ್ದೆಯ ಆಕಾಂಕ್ಷಿಗಳಾಗಿದ್ದೇವೆ ಎನ್ನುತ್ತಿದ್ದರಲ್ಲ ಎಂಬ ಮಾಧ್ಯಮದವರ ಪ್ರಶ್ನೆಗೆ ಕೊಪ್ಪಳದಲ್ಲಿ ಪ್ರತಿಕ್ರಿಯಿಸಿದ ಸಚಿವರು, ಸಹಜವಾಗಿ ಹಿರಿಯರು ತಮ್ಮ ಭಾವನೆ ವ್ಯಕ್ತಪಡಿಸುವುದು ತಪ್ಪಲ್ಲ. ಆದರೆ 2028 …
Read More »ಮೂವರು ಬೇಟೆಗಾರರ ಎನ್‌ಕೌಂಟರ್ – ಶಾಗ್ಯ ಅರಣ್ಯದಲ್ಲಿ ಗುಂಡಿನ ಕಾಳಗ, ಸ್ಥಳೀಯರ ಆಕ್ರೋಶ
ಮೈಸೂರು: ಕಾವೇರಿ ವನ್ಯಧಾಮದ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಕಾಳಗ ನಡೆದಿದೆ ಎಂದು ಅರಣ್ಯ ಇಲಾಖೆ ) ತಿಳಿಸಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆಗೆ ತೆರಳಿದ್ದ …
Read More »ಸಿಗಂದೂರು ಸೇತುವೆ ಮೇಲೆ ನಡುರಾತ್ರಿ ಧ್ವಜಾರೋಹಣ – ದೇಶಪ್ರೇಮ ಮೆರೆದ ಗ್ರಾಮಸ್ಥರು
ಶಿವಮೊಗ್ಗ: ಕಳೆದ ವರ್ಷ ಲೋಕಾರ್ಪಣೆಗೊಂಡ ಸಿಗಂದೂರು ಸೇತುವೆ ಮೇಲೆ ಕರೂರು ಗ್ರಾಮಸ್ಥರು ನಡುರಾತ್ರಿ 12 ಗಂಟೆಗೆ ಧ್ವಜಾರೋಹಣ ಮಾಡಿ ದೇಶಪ್ರೇಮ ಮೆರೆದಿದ್ದಾರೆ. ಸೇತುವೆ ಮೇಲೆ ತಿರಂಗಾ ಹಿಡಿದು, ಒಂದೇ ಮಾತರಂ ಘೋಷಣೆ ಕೂಗಿ ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲೂ ದೇವರ ಬಳಿ ಧ್ವಜ ಇಟ್ಟು ಪೂಜೆ ಸಲ್ಲಿಸಲಾಗಿದೆ. ಈ ಮೂಲಕ ಗ್ರಾಮದಲ್ಲಿ ವಿಶೇಷವಾಗಿ ಸ್ವಾತಂತ್ರ್ಯೋತ್ಸವ ಆಚರಿಸಲಾಗಿದೆ. ಸೇತುವೆ ಮೇಲೆ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಸ್ಥಳೀಯ ಮುಖಂಡರು, ಗ್ರಾಮಸ್ಥರು …
Read More »72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ – ಡಿಕೆಶಿ
ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ನೆರವಾಗಲು 72,000 ಸರ್ಕಾರಿ ಹುದ್ದೆಗಳ ಭರ್ತಿಗೆ 6 ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗುವುದು. ಉದ್ಯೋಗ ನಿಧಿ, AI ವಿಶ್ವವಿದ್ಯಾಲಯ ಹಾಗೂ ಭಾರತ್ ಜೋಡೋ ಯುವ ಸಂಘಗಳನ್ನು ಸ್ಥಾಪಿಸುವುದಾಗಿ ಸಿಎಂ ಡಿಕೆ ಶಿವಕುಮಾರ್ ಅವರು ಭರವಸೆ ನೀಡಿದರು. ಇಲ್ಲಿನ ಮಾಣಿಕ್ ಶಾ ಪರೇಡ್ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ, ನಾಡಿನ ಜನತೆಯನ್ನುದ್ದೇಶಿಸಿ ಮಾತನಾಡಿದ 7.5 ಕೋಟಿ ಕನ್ನಡಿಗರು ಹಾಗೂ ಸಮಸ್ತ ಭಾರತೀಯರಿಗೆ 80ನೇ ಸ್ವಾತಂತ್ರ್ಯೋತ್ಸವದ ಹಾರ್ದಿಕ ಶುಭಾಶಯಗಳನ್ನು ತಿಳಿಸಿದರು. …
Read More »ನಾನು ಹಿಂದೂಸ್ತಾನಿ, ನಾನು ಕನ್ನಡಿಗ – ದೇಶದ್ರೋಹಿ ಪಟ್ಟ ಕಟ್ಟಿದ ವಿಪಕ್ಷಗಳಿಗೆ ಸಚಿವ ಜಮೀರ್ ತಿರುಗೇಟು
ಬೆಂಗಳೂರು: ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ ಕಲಿಯಬೇಕಿಲ್ಲ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ವಿಪಕ್ಷಗಳಿಗೆ ತಿರುಗೇಟು ನೀಡಿದರು. ಸ್ವಕ್ಷೇತ್ರ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಸಚಿವ ಜಮೀರ್ ಪಾಲ್ಗೊಂಡಿದ್ದರು. ಬೆಂಗಳೂರು ದಕ್ಷಿಣ ಎಸಿ ವಿಶ್ವನಾಥ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ʻವಿಜಯನಗರ ಜಿಲ್ಲೆಯಲ್ಲಿ ಧ್ವಜಾರೋಹಣಕ್ಕೆ ವಿನಾಯ್ತಿ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದ ವಿಚಾರʼಕ್ಕೆ ಪ್ರತಿಕ್ರಿಯಿಸಿದರು. ಧ್ವಜಾರೋಹಣ ಮಾಡೋದು ಸೌಭಾಗ್ಯ, …
Read More »80ನೇ ಸ್ವಾತಂತ್ರ್ಯ ದಿನಾಚರಣೆ – ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಬೆಳಕಿನ ಅಲಂಕಾರ
ವಿಜಯಪುರ: 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ವಿಜಯಪುರದ ಆಲಮಟ್ಟಿ ಜಲಾಶಯಕ್ಕೆ ಬೆಳಕಿನ ಅಲಂಕಾರ ಮಾಡಲಾಗಿದೆ. 80ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ವಿಜಯಪುರದ ನಿಡಗುಂಡಿ ತಾಲೂಕಿನ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲಾಶಯಕ್ಕೆ ಕೇಸರಿ, ಬಳಿ ಹಾಗೂ ಹಸಿರು ಬಣ್ಣಗಳ ಬೆಳಕಿನ ಅಲಂಕಾರ ಮಾಡಲಾಗಿದೆ. ಜೊತೆಗೆ ಬೇರೆ ಬೇರೆ ಬಣ್ಣದ ಲೈಟಿಂಗ್‌ನಿಂದಲೂ ಅಲಂಕರಿಸಲಾಗಿದೆ. ಆಲಮಟ್ಟಿ ಜಲಾಶಯದಿಂದ ನಾರಾಯಣಪುರ ಜಲಾಶಯಕ್ಕೆ ಹರಿದು ಹೋಗುತ್ತಿರುವ ನೀರಿಗೆ ಲೈಟಿಂಗ್ ವ್ಯವಸ್ಥೆ ಮಾಡಲಾಗಿದ್ದು, ಸುಂದರ ದೃಶ್ಯ ಮೈನವಿರೇಳಿಸುವಂತಿದೆ.
Read More »ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿಯಲ್ಲಿ ಹೊಸ ವ್ಯವಸ್ಥೆಗೆ ಚಾಲನೆ
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಇಂದಿನ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಮತ್ತಷ್ಟು ಪಾರದರ್ಶಕ, ತಂತ್ರಜ್ಞಾನಾಧಾರಿತ ಹಾಗೂ ತ್ವರಿತಗೊಳಿಸುವ ಕುರಿತು ಮಹತ್ವದ ಚರ್ಚೆ ನಡೆಯಿತು. ಈ ಸಂದರ್ಭದಲ್ಲಿ ನೂತನ ಪರೀಕ್ಷಾ ನಿಯಂತ್ರಕರಾಗಿ ಅಧಿಕಾರ ವಹಿಸಿಕೊಂಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಾದ ಹೆಚ್. ಪ್ರಸನ್ನ ಅವರನ್ನು ಆಯೋಗದ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಲಾಯಿತು. ಮುಂದಿನ ದಿನಗಳಲ್ಲಿ ನೇಮಕಾತಿ ಪ್ರಕ್ರಿಯೆಗಳನ್ನು ಕೇಂದ್ರ ಲೋಕಸೇವಾ ಆಯೋಗ ಮಾದರಿಯಲ್ಲಿ ನಡೆಸುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಪರೀಕ್ಷಾ ಪದ್ಧತಿಗಳಲ್ಲಿ …
Read More »
Laxmi News 24×7