Breaking News

ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು

ಸಿಐಡಿ ಕಚೇರಿಯಲ್ಲಿ ಒಂದೇ ಬಾರಿ ವಿಚಾರಣೆಗೆ ಹಾಜರಾದ ಮೂವರು ರಾಜಕೀಯ ನಾಯಕರು ಬೆಂಗಳೂರು: ರಾಜ್ಯದ ಘಟಾನುಘಟಿ ರಾಜಕೀಯ ನಾಯಕರು ಇಂದು ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಒಂದೇ ಬಾರಿಗೆ ವಿಚಾರಣೆಗೆ ಹಾಜರಾಗಿರುವ ಘಟನೆ ನಡೆದಿದೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಇದೇ ವೇಳೆ ಮೈಸೂರಿನ ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣ ಕೂಡ ಸಿಐಡಿ ವಿಚಾರಣೆಗೆ ಹಾಜರಾಗಿದ್ದಾರೆ. …

Read More »

ಜಮೀನಿಗೆ ಹೋದಾಗಲೇ ಘೋರ ದುರಂತ: ವಿದ್ಯುತ್ ತಂತಿ ತಗುಲಿ ರೈತ, ಎತ್ತು ಸಾವು

ಕೊಪ್ಪಳ: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ತಂತಿ ತಗುಲಿ ರೈತ ಹಾಗೂ ಎತ್ತು ಮೃತಪಟ್ಟ ಘಟನೆ ತಾವರಗೇರಾ ಸಮೀಪದ ಚಿಕ್ಕತೆಮ್ಮಿನಾಳ ಗ್ರಾಮದಲ್ಲಿ ನಡೆದಿದೆ. ಬಸವರಾಜ(38) ಮೃತಪಟ್ಟ ರೈತ ಎಂದು ಹೇಳಲಾಗಿದೆ. ಜಮೀನಿನಲ್ಲಿ ಉಳುಮೆ ಮಾಡುವ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿದ್ದು, ವಿದ್ಯುತ್ ಪ್ರವಹಿಸಿ ಎತ್ತು ಹಾಗೂ ರೈತ ಬಸವರಾಜ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶಾಸಕ ದೊಡ್ಡನಗೌಡ ಪಾಟೀಲ ಕೂಡ ಭೇಟಿ ನೀಡಿ …

Read More »

ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲಿಗೆ ಅಪ್ಪಳಿಸಿದ ಗೂಡ್ಸ್ ರೈಲು, 5 ಸಾವು, ಹಲವರಿಗೆ ಗಾಯ

ಡಾರ್ಜಿಲಿಂಗ್‌,ಜೂ.17- ಪಶ್ಚಿಮ ಬಂಗಾಳದ ಡಾರ್ಜಿಲಿಂಗ್‌ ಜಿಲ್ಲೆಯಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಐದು ಮಂದಿ ಸಾವನ್ನಪ್ಪಿ ಇತರ 25ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್ ಪ್ರೆಸ್‌‍ ರೈಲಿಗೆ ನ್ಯೂ ಜಲ್ಪೈಗುರಿ ಸಮೀಪದ ರಂಗಪಾಣಿ ನಿಲ್ದಾಣದ ಬಳಿ ಗೂಡ್ಸ್ ರೈಲು ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ.

Read More »

ರೇಣುಕಾಸ್ವಾಮಿ ಕೊಲೆ ಕೇಸ್ : ದರ್ಶನ್ ಜೊತೆ ಪಾರ್ಟಿ ಮಾಡಿದ್ದ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯನಟ ಚಿಕ್ಕಣ್ಣಗೆ ಸಂಕಷ್ಟ ಎದುರಾಗಿದ್ದು, ನೋಟಿಸ್ ನೀಡಲು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಹೌದು. ನಟ ದರ್ಶನ್ ಶೆಡ್ ಗೆ ಹೋಗುವ ಮೊದಲು ( ರೇಣುಕಾಸ್ವಾಮಿ ಕೊಲೆ ನಡೆದ ಸ್ಥಳ) ದರ್ಶನ್ ಚಿಕ್ಕಣ್ಣ ಜೊತೆ ಪಾರ್ಟಿಯಲ್ಲಿ ಭಾಗಿಯಾಗಿದ್ದರು ಎನ್ನಲಾಗಿದೆ. ಕೊಲೆ ನಡೆಯುವದಕ್ಕೂ ಮುನ್ನ ಪಾರ್ಟಿ ಒಂದು ನಡೆದಿದ್ದು, ಈ ಪಾರ್ಟಿಯಲ್ಲಿ ದರ್ಶನ್ ಜೊತೆ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಚಿಕ್ಕಣ್ಣಗೂ ಈ …

Read More »

ಹೊಲಗಳತ್ತ ಮುಖ ಮಾಡಿದ ಅನ್ನದಾತ: ಬಿತ್ತನೆ ಕಾರ್ಯ ಚುರುಕು

ಮುದ್ದೇಬಿಹಾಳ: ತಾಲ್ಲೂಕಿನ ಮೂರು ಹೋಬಳಿಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಳೆಯಾಗಿದ್ದು, ರೈತರು ಬಿತ್ತನೆಗೆ ಸಿದ್ಧ ಮಾಡಿಕೊಂಡ ಕೃಷಿಪರಿಕರಗಳೊಂದಿಗೆ ಹೊಲಗಳತ್ತ ಮುಖ ಮಾಡಿದ್ದು, ಕೃಷಿ ಚಟುವಟಿಕೆಗಳು ಬಿರುಸುಗೊಂಡಿವೆ. ಮುಂಗಾರು ಹಂಗಾಮಿನಲ್ಲಿ ತಾಲ್ಲೂಕಿನಲ್ಲಿ ತೊಗರಿ, ಹೆಸರು, ಸಜ್ಜೆ,ಹ ತ್ತಿ ಬೆಳೆಗಳ ಬಿತ್ತನೆ ಕಾರ್ಯದಲ್ಲಿ ನಿರತರಾಗಿದ್ದಾರೆ. ಕೃಷಿ ಇಲಾಖೆಯಿಂದ ಈಗಾಗಲೇ ಮುದ್ದೇಬಿಹಾಳ, ಢವಳಗಿ, ನಾಲತವಾಡ ಹೋಬಳಿ ವ್ಯಾಪ್ತಿಯ ರೈತರಿಗೆ ತೊಗರಿ, ಹೆಸರು ಬೀಜಗಳನ್ನು ವಿತರಣೆ ಮಾಡಿದೆ. ಅದರಲ್ಲಿ ಮುಸುಕಿನ ಜೋಳ, ಬಿಜಿಎಸ್-9 ಹೆಸರು, ಟಿಎಸ್‌ಆರ್3ಆರ್ ತೊಗರಿ …

Read More »

ಅಕಾಲಿಕ ಮಳೆ, ಅತಿವೃಷ್ಟಿಯಿಂದ ತೇವಾಂಶ ಹೆಚ್ಚಳ, ಬೆಳೆ ನಿರ್ವಹಣೆಗೆ ಹೇಗೆ?

ಧಾರವಾಡ, ಜೂನ್ 17: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ನೈಋತ್ಯ ಮುಂಗಾರು ಮಳೆ ಆರಂಭವಾಗಿದೆ. ಕೃಷಿ ಚಟುವಟಿಕೆಗಳು ಸಹ ಬಿರುಸುಗೊಂಡಿವೆ. ಧಾರವಾಡದ ಕೃಷಿ ಇಲಾಖೆ ಅಕಾಲಿಕ ಮಳೆ ಮತ್ತು ಅತಿವೃಷ್ಟಿಯಿಂದ ತೇವಾಂಶ ಹೆಚ್ಚಾದ ಅಥವಾ ನೀರು ನಿಂತ ಹೊಲದಲ್ಲಿ ಬೆಳೆಗಳ ನಿರ್ವಹಣೆ ಕುರಿತು ರೈತರಿಗೆ ಸಲಹೆಗಳನ್ನು ನೀಡಿದೆ. ಮೆಕ್ಕೆಜೋಳ, ಸೋಯಾಅವರೆ, ಹೆಸರು, ಶೇಂಗಾ, ಭತ್ತ ಮತ್ತು ಹತ್ತಿ ಬೆಳೆಗಳ ಬಿತ್ತನೆ ಕೈಗೊಂಡ ಹೊಲಗಳಲ್ಲಿ ಮುಂಜಾಗೃತ ಕ್ರಮವಾಗಿ ಇಳಿಜಾರಿಗೆ ಅಡ್ಡವಾಗಿ ಬೇಸಾಯ ಕ್ರಮಗಳನ್ನು …

Read More »

ಪೋಕ್ಸೋ ಕೇಸ್ : ‘CID’ ವಿಚಾರಣೆಗೆ ಹಾಜರಾದ B. S. Y.

ಬೆಂಗಳೂರು: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೋ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಿದ್ದಾರೆ. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂ. 12 ರಂದು ವಿಚಾರಣೆಗೆ ಹಾಜರಾಗುವಂತೆ ಯಡಿಯೂರಪ್ಪ ಅವರಿಗೆ ಸಿಐಡಿಯಿಂದ ನೋಟಿಸ್ ನೀಡಲಾಗಿತ್ತು. ಆದರೆ, ಯಡಿಯೂರಪ್ಪ ವಿಚಾರಣೆಗೆ ಗೈರು ಹಾಜರಾಗಿದ್ದರು. ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮ ಹಿನ್ನೆಲೆಯಲ್ಲಿ ದೆಹಲಿಗೆ ತೆರಳಿರುವುದರಿಂದ ಜೂ. 17ರಂದು ವಿಚಾರಣೆಗೆ ಹಾಜರಾಗುವುದಾಗಿ ಕೋರಿದ್ದರು.ಇಂದು .ಎಸ್. ಯಡಿಯೂರಪ್ಪ ಸೋಮವಾರ …

Read More »

ಸರ್ಕಾರಿ ನೌಕರರಿಗೆ ಹೊಸ ಭರಸೆ ಕೊಟ್ಟ ಡಿಸಿಎಂ

ಬೆಂಗಳೂರು, ಜೂನ್‌ 17: ಕರ್ನಾಟಕದ ಸರ್ಕಾರಿ ನೌಕರರು, ನಿವೃತ್ತ ನೌಕರರು ಕೆ. ಸುಧಾಕರ್‌ ರಾವ್ ನೇತೃತ್ವದ ರಾಜ್ಯ 7ನೇ ವೇತನ ಆಯೋಗದ ವರದಿಯನ್ನು ಸರ್ಕಾರ ಯಾವಾಗ ಜಾರಿಗೊಳಿಸುತ್ತದೆ? ಎಂದು ಕಾಯುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲಿ ನೌಕರರಿಗೆ ಹಲವು ಭರವಸೆಗಳನ್ನು ನೀಡುತ್ತಲೇ ಇದೆ. ಲೋಕಸಭೆ ಚುನಾವಣೆ 2024, ವಿಧಾನ ಪರಿಷತ್ ಚುನಾವಣೆ ನೀತಿ ಸಂಹಿತೆ ಮುಕ್ತಾಯಗೊಂಡಿದೆ. ನೀತಿ ಸಂಹಿತೆ ತೆರವಾದ ಬಳಿಕ ಕರ್ನಾಟಕ ಸರ್ಕಾರದ ಮೊದಲ ಸಚಿವ ಸಂಪುಟ ಸಭೆಯನ್ನು ಸಹ …

Read More »

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ : ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ಮಹತ್ವದ ಸುದ್ದಿಗೋಷ್ಟಿ..!

ಬೆಂಗಳೂರು : ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಬಿಜೆಪಿ ರಾಜ್ಯಾದ್ಯಂತ ಇಂದು ಪ್ರತಿಭಟನೆಗೆ ಕರೆ ನೀಡಿದೆ. ಈ ಬೆನ್ನಲ್ಲೇ ಇಂದು ಮಧ್ಯಾಹ್ನ 12:30 ಕ್ಕೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸುದ್ದಿಗೋಷ್ಟಿ ನಡೆಯಲಿದೆ. ರಾಜ್ಯದಲ್ಲಿ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆ ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮಧ್ಯಾಹ್ನ 12:30 ಕ್ಕೆ ಸುದ್ದಿಗೋಷ್ಟಿ ಕರೆದಿರುವ ಸಿಎಂ ಸಿದ್ದರಾಮಯ್ಯ ತೈಲ ಬೆಲೆ ಏರಿಕೆ ಬಗ್ಗೆ ಸ್ಪಷ್ಟನೆ ನೀಡುವ ಸಾಧ್ಯತೆಯಿದೆ

Read More »

ಹುಬ್ಬಳ್ಳಿಯ ಮೂರುಸಾವಿರ ಮಠದ ಸಮೀಪದ ರಸ್ತೆ

ಹುಬ್ಬಳ್ಳಿ: ‘ಇದು ಸ್ಮಾರ್ಟ್‌ಸಿಟಿ ಅಂತೆ. ಇಲ್ಲಿನ ರಸ್ತೆಗಳಲ್ಲಿ ಓಡಾಡಿದ್ರೆ ಗೊತ್ತಾಗುತ್ತೆ, ಎಷ್ಟು ಸ್ಮಾರ್ಟ್‌ ಅಂತಾ…’ ಸ್ಟೇಷನ್‌ ರಸ್ತೆಯಲ್ಲಿ ಬೈಕ್‌ನಲ್ಲಿ ಹೋಗುತ್ತಿದ್ದ ವಿಜಯಕುಮಾರ್‌ ಎಂಬುವರು ಆಕ್ರೋಶ ವ್ಯಕ್ತಪಡಿಸಿದ ಪರಿ ಇದು. ಇಲ್ಲಿನ ರಸ್ತೆಗಳ ಬಗೆಗಿರುವ ಅತೀವ ಬೇಸರ ಅವರ ಪ್ರತಿ ಮಾತಿನಲ್ಲೂ ಕಂಡುಬರುತ್ತಿತ್ತು. ‘ಹೊಸ ರಸ್ತೆ ಮಾಡ್ತೀವಿ ಅಂತಾರೆ. ಇರೋ ರಸ್ತೆ ಹಾಳು ಮಾಡ್ತಾರೆ. ಅದಕ್ಕೆ ವರ್ಷಗಟ್ಟಲೆ ಸಮಯ ತೆಗೆದುಕೊಳ್ತಾರೆ. ನಡುವೆ ಮತ್ಯಾವುದೋ ಕಾಮಗಾರಿಗಾಗಿ ರಸ್ತೆ ಅಗೀತಾರೆ. ಅದನ್ನು ಹಾಗೇ ಬಿಟ್ಟು ಹೋಗ್ತಾರೆ. …

Read More »