Breaking News

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ನಡೆಯುತ್ತಿದ್ದು, ಕರ್ನಾಟಕದಲ್ಲೂ ಇದರ ಬಿಸಿ ಏರುತ್ತಿದೆ. ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ಆರಂಭವಾಗಿದ್ದು, ಬಹುಭಾಷಾ ನಟ ಪ್ರಕಾಶ್‌ ರೈ ತಮ್ಮ ಅತ್ಯ ಅಮೂಲ್ಯ ಮತವನ್ನು ಚಲಾಯಿಸಿದರು. ಮತವನ್ನು ಚಲಾಯಿಸಿದ ಪ್ರಕಾಶ್ ರೈ ಎಲ್ಲರೂ ಮತವನ್ನು ಚಲಾಯಿಸುವಂತೆ ಮನವಿ ಮಾಡಿದ್ದಾರೆ. ಈ ಕುರಿತಾದ ವಿಡಿಯೋವನ್ನು ಪ್ರಕಾಶ್‌ ತಮ್ಮ …

Read More »

ಮತಗಟ್ಟೆಯಲ್ಲಿ ಮಹಿಳೆಗೆ ಹೃದಯ ಸ್ತಂಭನ; ಜೀವ ಉಳಿಸಿ ದೇವರಾದ ವೋಟ್ ಮಾಡಲು ಬಂದ ಡಾಕ್ಟರ್

ಬೆಂಗಳೂರು: ಮತದಾನ ಮಾಡಲು ಬಂದಿದ್ದ ಮತದಾರರೊಬ್ಬರಿಗೆ ಹೃದಯಾಘಾತವಾಗಿದ್ದು (Cardiac arrest), ಈ ವೇಳೆ ಅಲ್ಲಿಯೇ ಇದ್ದ ವೈದ್ಯರು (Doctor) ಮಹಿಳೆಯ ಪ್ರಾಣ ಉಳಿಸಿದ್ದಾರೆ. ಜೆಪಿ ನಗರ 8ನೇ ಹಂತದ ಜಂಬೂ ಸವಾರಿ ದಿಣ್ಣೆ ಬಳಿ ಘಟನೆ ನಡೆದಿದೆ. ನಾರಾಯಣ ಆರೋಗ್ಯ ಕೇಂದ್ರದ ಮೂತ್ರಪಿಂಡ ತಜ್ಞ ಡಾ.ಗಣೇಶ್ ಶ್ರೀನಿವಾಸ ಪ್ರಸಾದ್ (Dr Ganesh Srinivas Prasad) ಅವರು ಸ್ಥಳದಲ್ಲಿ ಮಹಿಳೆಗೆ ಪ್ರಥಮ ಚಿಕಿತ್ಸೆ (CPR) ನೀಡಿ ಜೀವ ಉಳಿಸಿದ್ದಾರೆ. ನಂತರ ಮಹಿಳೆಯನ್ನು …

Read More »

ಉತ್ತರ ಪತ್ರಿಕೆಗಳಲ್ಲಿ ‘ಜೈ ಶ್ರೀ ರಾಮ್’ ಎಂದು ಬರೆದಿದ್ದ ವಿದ್ಯಾರ್ಥಿಗಳನ್ನು ಪಾಸ್‌ ಮಾಡಿದ ಇಬ್ಬರು ಶಿಕ್ಷಕರ ಅಮಾನತು

ನವದೆಹಲಿ: ಪರೀಕ್ಷಾರ್ಥಿಗಳಿಗೆ ಅವರ ಉತ್ತರಗಳ ಗುಣಮಟ್ಟದ ಆಧಾರದ ಮೇಲೆ ಅಂಕಗಳನ್ನು ನೀಡಲಾಗುತ್ತದೆ. ಆದಾಗ್ಯೂ, ಉತ್ತರ ಪ್ರದೇಶದ ಜೌನ್ಪುರ ಪಟ್ಟಣದ ರಾಜ್ಯ ವಿಶ್ವವಿದ್ಯಾಲಯವಾದ ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದಲ್ಲಿ, ಪರೀಕ್ಷಕರು ತಮ್ಮ ಉತ್ತರ ಪುಸ್ತಕಗಳಲ್ಲಿ ‘ಜೈ ಶ್ರೀ ರಾಮ್’ ಮತ್ತು ಅನೇಕ ಭಾರತೀಯ ಕ್ರಿಕೆಟಿಗರ ಹೆಸರುಗಳನ್ನು ಬರೆದಿದ್ದಾರೆ ಎಂದು ಹೇಳಲಾದ ಹಲವಾರು ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿದ್ದು ಪಾಸ್‌ ಕೂಡ ಮಾಡಿದ್ದಾರೆ. ವೀರ್ ಬಹದ್ದೂರ್ ಸಿಂಗ್ ಪೂರ್ವಾಂಚಲ್ ವಿಶ್ವವಿದ್ಯಾಲಯದ ಮಾಜಿ ವಿದ್ಯಾರ್ಥಿ …

Read More »

ಮತದಾನ ಮಾಡಿದವ್ರಿಗೆ ಫ್ರೀ ಮಸಾಲೆ ದೋಸೆ ,

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಶುಕ್ರವಾರ 13 ರಾಜ್ಯಗಳ 88 ಸ್ಥಾನಗಳಿಗೆ ಮತದಾನ ಬಿರುಸಿನದ ಸಾಗಿದೆ. ಎರಡನೇ ಹಂತದಲ್ಲಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರವೂ ಸೇರಿದ್ದು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸತತ ಎರಡನೇ ಬಾರಿಗೆ ಸ್ಪರ್ಧಿಸುತ್ತಿದ್ದಾರೆ.ಕೇರಳದ ಎಲ್ಲಾ 20 ಸ್ಥಾನಗಳ ಹೊರತಾಗಿ, ಕರ್ನಾಟಕದ 28 ಸ್ಥಾನಗಳಲ್ಲಿ 14, ರಾಜಸ್ಥಾನದ 13 ಸ್ಥಾನಗಳು, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದ ತಲಾ ಎಂಟು ಸ್ಥಾನಗಳು, ಮಧ್ಯಪ್ರದೇಶದ ಆರು ಸ್ಥಾನಗಳು, ಅಸ್ಸಾಂ …

Read More »

ನೇಹಾ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ : ಸಿಎಂ

ಬೀದರ್ : ಹುಬ್ಬಳಿಯ ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣದ ಆರೋಪಿಗೆ ಘೋರ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೇಹಾ ಹತ್ಯೆ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ.ಪ್ರಕರಣದ ತನಿಖೆಯನ್ನು ಸಿಐಡಿಗೆ ನೀಡಲಾಗಿದೆ. ಈಗ ಬಿಜೆಪಿ ನಾಯಕರು ಸಿಬಿಐ ತನಿಖೆಗೆ ನೀಡಬೇಕು ಅಂತ ಹೇಳುತ್ತಿದ್ದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾವುದೇ ಪ್ರಕರಣವನ್ನು ಸಿಬಿಐಗೆ ವಹಿಸಿದ್ದರಾ? ನೇಹಾ ಹತ್ಯೆ ಪ್ರಕರಣದಲ್ಲಿ ಬಿಜೆಪಿಯವರು ಅನಗತ್ಯ …

Read More »

ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ರಣದೀಪ್ ಸುರ್ಜೆವಾಲಾ ಭೇಟಿ

ಬೆಳಗಾವಿ : ಲಕ್ಷಣ ಸವದಿ ಅವರ ಬೆಳಗಾವಿ ನಿವಾಸಕ್ಕೆ ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲಾ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದ್ದಾರೆ. ಗುರುವಾರ ಬೆಳಗಾವಿಯ ಸದಾಶಿವನಗರದಲ್ಲಿರುವ ಸವದಿ ಮನೆಗೆ ಭೇಟಿ ನೀಡಿದ ಸುರ್ಜೆವಾಲಾ ನಾಯಕರೊಂದಿಗೆ ಮಾತುಕತೆ ನಡೆಸಿದ್ದಾರೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಚುನಾವಣೆ ಕುರಿತು ಮಹತ್ವದ ಮಾತುಕತೆ ನಡೆಸಿರುವ ಉಭಯ …

Read More »

ಯುವತಿಯನ್ನು ಅಪಹರಿಸಿ, ಸಾಮೂಹಿಕ ಅತ್ಯಾಚಾರ!

ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯವೊಂದು ನಡೆದಿದ್ದು, ಯುವತಿಯನ್ನ ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ನಡೆದಿದೆ. 23 ವರ್ಷದ ಯುವತಿಯನ್ನು ಕಿಡ್ನ್ಯಾಪ್ ಮಾಡಿ ಅತ್ಯಾಚಾರ ಎಸಗಿರುವ ಘಟನೆ ಹೈಗ್ರೌಂಡ್ಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More »

ನಾಡಗೀತೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಅಲ್ಲದೆ, ರಾಜ್ಯ ಸರ್ಕಾರಕ್ಕೆ ನಾಡಗೀತೆಯನ್ನು ಇಂತಹುದೇ ಧಾಟಿಯಲ್ಲಿ ಹಾಡುವಂತೆ ಕಡ್ಡಾಯಗೊಳಿಸುವ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಿದೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು. ಶಿಕ್ಷಣ ಕಾಯಿದೆಯಡಿ ಅವಕಾಶ: ನಾಡಗೀತೆಗೆ ಮೈಸೂರು …

Read More »

ಬೆಂಗಳೂರು: ಹೊತ್ತಿ ಉರಿದ ಯಾರ್ಡ್, ಗಾರ್ಮೆಂಟ್ಸ್ ಕಾರ್ಖಾನೆ

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಕಂಟ್ರಿ ರಸ್ತೆಯಲ್ಲಿ ಮಂಗಳವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದ್ದು, ಸೆಂಟ್ರಿಂಗ್ ಮರಗಳ ಯಾರ್ಡ್ ಹಾಗೂ ಗಾರ್ಮೆಂಟ್ಸ್ ಕಾರ್ಖಾನೆ ಬೆಂಕಿಯಿಂದ ಹೊತ್ತಿ ಉರಿಯಿತು. ಅವಘಡದಿಂದಾಗಿ ₹ 2 ಕೋಟಿ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ. ಸೆಂಟ್ರಿಂಗ್ ಮರಗಳ ಯಾರ್ಡ್‌ನಲ್ಲಿ ಕಾಣಿಸಿಕೊಂಡ ಬೆಂಕಿ, ಕೆಲವೇ ನಿಮಿಷಗಳಲ್ಲಿ ಹೆಚ್ಚಾಗಿತ್ತು. ಸೆಂಟ್ರಿಂಗ್ ಮರಗಳಿಗೆ ಬೆಂಕಿ ತಗುಲಿದ್ದರಿಂದ, ಧಗ ಧಗ ಉರಿಯಲಾರಂಭಿಸಿತ್ತು. ಇದೇ ಜಾಗಕ್ಕೆ ಹೊಂದಿಕೊಂಡಿದ್ದ ಗ್ಯಾರೇಜ್‌ ಹಾಗೂ ಸಮೀಪದಲ್ಲಿದ್ದ …

Read More »

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ …

Read More »